ಪೌರತ್ವ ನಿರ್ಧಾರಕ್ಕೆ ನ್ಯಾಯಸಮ್ಮತ ಪ್ರಕ್ರಿಯೆ ಅಗತ್ಯ: ಅಸ್ಸಾಂನ 27 ಜನರ ‘ವಿದೇಶಿಗ’ ಹಣೆಪಟ್ಟಿ ರದ್ದುಗೊಳಿಸಿದ ಸುಪ್ರೀಂ

Date:

ಪೌರತ್ವ ಮತ್ತು ವಿದೇಶಿ ಪ್ರಜೆ ಎಂಬ ಹಣೆಪಟ್ಟಿ ನಿರ್ಧರಿಸುವ ಪ್ರಕ್ರಿಯೆಯು ಅತ್ಯಂತ ಉನ್ನತ ಸಂವಿಧಾನಿಕ ಮತ್ತು ಕಾನೂನು ಪ್ರಾಮುಖ್ಯತೆಯನ್ನು ಹೊಂದಿದೆ. ಹಾಗಾಗಿ ಈ ಪ್ರಕ್ರಿಯೆಯು ಸಂಪೂರ್ಣವಾಗಿ ನ್ಯಾಯಸಮ್ಮತ, ಕಾನೂನುಬದ್ಧ ಹಾಗೂ ತರ್ಕಬದ್ಧವಾಗಿರಬೇಕು ಎಂದು ಸೋಮವಾರ ಸುಪ್ರೀಂ ಕೋರ್ಟ್ ತಿಳಿಸಿದೆ. ಹಾಗೆಯೇ ಅಸ್ಸಾಂನ 27 ಜನರ ‘ವಿದೇಶಿಗ’ ಹಣೆಪಟ್ಟಿ ರದ್ದುಗೊಳಿಸಿದೆ.

- Advertisement -

ನ್ಯಾಯಮೂರ್ತಿಗಳಾದ ವಿಕ್ರಮ್ ನಾಥ್ ಮತ್ತು ಸಂದೀಪ್ ಮೆಹ್ತಾ ಅವರನ್ನೊಳಗೊಂಡ ಪೀಠವು ಈ ಆದೇಶ ಹೊರಡಿಸಿದೆ. ಅಸ್ಸಾಂನಲ್ಲಿ 27 ಜನರನ್ನು ‘ವಿದೇಶಿಗರು’ ಎಂದು ಘೋಷಿಸಿದ್ದ ವಿದೇಶಿಗರ ನ್ಯಾಯಾಧಿಕರಣದ ಆದೇಶ ಹಾಗೂ ಅದನ್ನು ಎತ್ತಿಹಿಡಿದಿದ್ದ ಗೌಹಾತಿ ಹೈಕೋರ್ಟ್‌ನ ತೀರ್ಪುಗಳನ್ನು ಸುಪ್ರೀಂ ಕೋರ್ಟ್ ರದ್ದುಗೊಳಿಸಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ರ‍್ಯಾಂಕ್ ಸಾಮರ್ಥ್ಯದ ಮಾನದಂಡವಲ್ಲ: ಮಕ್ಕಳ ವಿಕಾಸಕ್ಕೆ ಒತ್ತಡ ರಹಿತ...

ಶಿಕ್ಷಣವೆಂದರೆ ಕೇವಲ ಅಂಕ ಗಳಿಸುವುದು, ರ‍್ಯಾಂಕ್ ಪಡೆಯುವುದು ಅಥವಾ ಪರೀಕ್ಷೆಯಲ್ಲಿ ಶೇ.90ಕ್ಕಿಂತ ಹೆಚ್ಚು ಅಂಕ ಗಳಿಸುವುದಷ್ಟೇ ಅಲ್ಲ. ಶಿಕ್ಷಣದ ನಿಜವಾದ ಉದ್ದೇಶ ಮಗುವಿನ ಜ್ಞಾನ, ಚಿಂತನಾ ಶಕ್ತಿ, ಸೃಜನಶೀಲತೆ, ಆತ್ಮವಿಶ್ವಾಸ, ಸಾಮಾಜಿಕ ಪ್ರಜ್ಞೆ...

ಸಂವಿಧಾನದಲ್ಲಿ ಇಂಪೀಚ್‌ಮೆಂಟ್‌ ಮೂಲಕ ಮುಖ್ಯ ಚುನಾವಣಾ ಆಯುಕ್ತರನ್ನು ಪದಚ್ಯುತಿಗೊಳಿಸಲು...

ಮುಖ್ಯ ಚುನಾವಣಾ ಆಯುಕ್ತರಾದ ಗ್ಯಾನೇಶ್ ಕುಮಾರ್ ಅವರಿಗೆ 2023ರ ಕಾಯ್ದೆಯ ಮೂಲಕ ಸರ್ಕಾರ ಕಾನೂನು ರಕ್ಷಣೆ ಕೊಟ್ಟಿರಬಹುದು, ಆದರೆ ಅವರಿಗೆ ಯಾವುದೇ ರೀತಿಯ ಸಾಂವಿಧಾನಿಕ ರಕ್ಷಣೆ ಇಲ್ಲ. ಹಾಗಾಗಿ ಅವರು ತಾವಾಗಿಯೇ ರಾಜೀನಾಮೆ...

ದಿಕ್ಕು ತೋಚದೆ ತಬ್ಬಿಬ್ಬಾಗಿರುವ ಚುನಾವಣಾ ಆಯೋಗ: ದಿನೇ ದಿನೆ...

ಸೆಪ್ಟೆಂಬರ್ 23ರ 'ದಿ ಇಂಡಿಯನ್ ಎಕ್ಸ್‌ಪ್ರೆಸ್' ಪತ್ರಿಕೆಯ ವರದಿಯ ನಂತರ ಆಯೋಗ ಹಲವು ಸ್ಪಷ್ಟನೆಗಳನ್ನು ನೀಡಿದ್ದರೂ, ಒಂದು ಮುಖ್ಯ ಪ್ರಶ್ನೆಗೆ ಇನ್ನೂ ಉತ್ತರವಿಲ್ಲ: ಕಾನೂನುಬದ್ಧವಾಗಿ ಮತದಾರರ ಪಟ್ಟಿಯಲ್ಲಿದ್ದ 16 ಲಕ್ಷಕ್ಕೂ ಹೆಚ್ಚು ಜನರ...

ಇದನ್ನೂ ಓದಿ: ಎಸ್‌ಐಆರ್ ಪ್ರಕ್ರಿಯೆ ಪ್ರಜಾಪ್ರಭುತ್ವಕ್ಕೆ ಸವಾಲು: ಲಕ್ಷಾಂತರ ಮತದಾರರ ಹಕ್ಕು ಕಸಿಯುವ ಹುನ್ನಾರ

ಈ ಹಿಂದೆ ಅಸ್ಸಾಂನ ವಿದೇಶಿಗರ ನ್ಯಾಯಾಧಿಕರಣವು ಈ 27 ಜನರನ್ನು ವಿದೇಶಿ ಪ್ರಜೆಗಳೆಂದು ಘೋಷಿಸಿ ಆದೇಶ ಹೊರಡಿಸಿತ್ತು. ಇದರ ವಿರುದ್ಧ ಮೇಲ್ಮನವಿ ಸಲ್ಲಿಸಲಾಗಿದ್ದರೂ, ಗೌಹಾತಿ ಹೈಕೋರ್ಟ್ ನ್ಯಾಯಾಧಿಕರಣದ ನಿರ್ಧಾರವನ್ನೇ ಎತ್ತಿಹಿಡಿದಿತ್ತು.

ಅರ್ಜಿದಾರರು ನೋಟಿಸ್ ನೀಡಿದರೂ ನ್ಯಾಯಾಧಿಕರಣದ ಮುಂದೆ ಹಾಜರಾಗಿರಲಿಲ್ಲ ಮತ್ತು ಸುಮಾರು 23 ವರ್ಷಗಳ ಸುದೀರ್ಘ ವಿಳಂಬದ ನಂತರ ಹೈಕೋರ್ಟ್ ಮೆಟ್ಟಿಲೇರಿದ್ದಾರೆ ಎಂಬ ಕಾರಣ ನೀಡಿ ಹೈಕೋರ್ಟ್ ಈ ಹಿಂದೆ ಇವರ ಅರ್ಜಿಗಳನ್ನು ವಜಾಗೊಳಿಸಿತ್ತು. ಇದನ್ನು ಪ್ರಶ್ನಿಸಿ ಸಂತ್ರಸ್ತರು ಸುಪ್ರೀಂ ಕೋರ್ಟ್ ಮೊರೆ ಹೋಗಿದ್ದರು.

ಪ್ರಕರಣದ ವಿಚಾರಣೆ ನಡೆಸಿದ ಸುಪ್ರೀಂ ಕೋರ್ಟ್ ಪೀಠವು, “ಅಕ್ರಮ ವಲಸಿಗರನ್ನು ಪತ್ತೆ ಹಚ್ಚುವ ಹಾಗೂ ನಕಲಿ ದಾಖಲೆಗಳ ಮೂಲಕ ಪೌರತ್ವ ಪಡೆಯುವುದನ್ನು ತಡೆಯುವ ಸರ್ಕಾರದ ಉದ್ದೇಶ ಸಮರ್ಥನೀಯ. ಆದರೆ ಯಾವುದೇ ಒಬ್ಬ ವ್ಯಕ್ತಿಯನ್ನು ವಿದೇಶಿಗ ಎಂದು ಘೋಷಿಸುವಾಗ ಅನುಸರಿಸಬೇಕಾದ ನ್ಯಾಯಸಮ್ಮತ ಮತ್ತು ಕಾನೂನಾತ್ಮಕ ಪ್ರಕ್ರಿಯೆಗಳನ್ನು ಗಾಳಿಗೆ ತೂರಿ ಈ ಕ್ರಮ ಕೈಗೊಳ್ಳಲು ಸಾಧ್ಯವಿಲ್ಲ” ಎಂದು ಸ್ಪಷ್ಟಪಡಿಸಿದೆ.

ಇದನ್ನೂ ಓದಿ: ಪಾಸ್‌ಪೋರ್ಟ್ ಪೌರತ್ವದ ಪುರಾವೆಯಲ್ಲ ಎಂದ ಕೇಂದ್ರಕ್ಕೆ ನೆಟ್ಟಿಗರಿಂದ ವಾಗ್ದಾಳಿ

ಒಬ್ಬ ವ್ಯಕ್ತಿಯನ್ನು ವಿದೇಶಿ ಪ್ರಜೆ ಎಂದು ಘೋಷಿಸಿದರೆ ಅದರಿಂದ ಆತನ ಮೂಲಭೂತ ಹಕ್ಕುಗಳು ಹಾಗೂ ಕಾನೂನಾತ್ಮಕ ಸ್ಥಾನಮಾನದ ಮೇಲೆ ಗಂಭೀರ ಪರಿಣಾಮ ಬೀರುತ್ತದೆ. ಆದ್ದರಿಂದ ಪ್ರಕ್ರಿಯೆಯಲ್ಲಿ ಸಂಪೂರ್ಣ ಪಾರದರ್ಶಕತೆ ಇರಬೇಕು ಎಂದು ನ್ಯಾಯಾಲಯ ಹೇಳಿದೆ.

ಸುಪ್ರೀಂ ಕೋರ್ಟ್ ಈ 27 ಅರ್ಜಿದಾರರನ್ನು ಭಾರತೀಯ ನಾಗರಿಕರು ಎಂದು ನೇರವಾಗಿ ಘೋಷಿಸಿಲ್ಲ. ಬದಲಿಗೆ, ಹೈಕೋರ್ಟ್ ಮತ್ತು ವಿದೇಶಿಗರ ನ್ಯಾಯಾಧಿಕರಣ ನೀಡಿದ್ದ ಹಳೆಯ ಆದೇಶಗಳನ್ನು ಸಂಪೂರ್ಣವಾಗಿ ಬದಿಗೆ ಸರಿಸಿದೆ. ಈ ಎಲ್ಲಾ 27 ಪ್ರಕರಣಗಳನ್ನು ಸಂಬಂಧಪಟ್ಟ ವಿದೇಶಿಗರ ನ್ಯಾಯಾಧಿಕರಣಕ್ಕೆ ಮರುವಿಚಾರಣೆಗಾಗಿ ಒಪ್ಪಿಸಿದೆ.

ಹೈಕೋರ್ಟ್ ಅಥವಾ ನ್ಯಾಯಾಧಿಕರಣದ ಹಿಂದಿನ ಯಾವುದೇ ಅಭಿಪ್ರಾಯಗಳಿಗೆ ಒಳಗಾಗದೆ, ಅರ್ಜಿದಾರರು ಸಲ್ಲಿಸುವ ದಾಖಲೆಗಳು ಹಾಗೂ ಸಾಕ್ಷ್ಯಗಳನ್ನು ಸ್ವತಂತ್ರವಾಗಿ ಪರಿಶೀಲಿಸಿ, ನ್ಯಾಯಸಮ್ಮತವಾಗಿ ಹೊಸದಾಗಿ ತೀರ್ಪು ನೀಡುವಂತೆ ಸುಪ್ರೀಂ ಕೋರ್ಟ್ ಕಟ್ಟುನಿಟ್ಟಿನ ನಿರ್ದೇಶನ ನೀಡಿದೆ.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಬೀಳಗಿ | ಅ.18ರಂದು ‘ಬಸವ-ಭೀಮ ಸಂಗಮ’ ಸಮಾವೇಶ

ಜಾತ್ಯತೀತ ಹಾಗೂ ಬಹುತ್ವದ ಕರ್ನಾಟಕದ ಸಂಕಲ್ಪದೊಂದಿಗೆ ಸರ್ವಜಾತಿ-ಸರ್ವಧರ್ಮ ಸಹೋದರತ್ವ ಸಾರುವ ‘ಬಸವ-ಭೀಮ...

ಒಡಿಶಾ | ಎರಡು ತಲೆ ಇರುವ ಮಗು ಜನನ!

ಒಡಿಶಾದ ಕಂಧಮಾಲ್ ಜಿಲ್ಲೆಯಲ್ಲಿ ಅತ್ಯಂತ ಅಪರೂಪದ ವೈದ್ಯಕೀಯ ವಿಸ್ಮಯ ನಡೆದಿದೆ. ಮಹಿಳೆಯೊಬ್ಬರು...

ಹುಮನಾಬಾದ್‌ | ಪಶು ಇಲಾಖೆ ವಾಹನ ನಿರ್ವಹಣೆ ವೆಚ್ಚದಲ್ಲಿ ಅಕ್ರಮ ಆರೋಪ: ತನಿಖೆಗೆ ಭೀಮರೆಡ್ಡಿ ಆಗ್ರಹ

ಹುಮನಾಬಾದ್ ತಾಲ್ಲೂಕಿನ ಪಶುಸಂಗೋಪನೆ ಮತ್ತು ಪಶುವೈದ್ಯಕೀಯ ಸೇವಾ ಇಲಾಖೆಗೆ ಸರ್ಕಾರದಿಂದ ಒದಗಿಸಿರುವ...

ಬಿಜೆಪಿ ರಾಜ್ಯ ಕಾರ್ಯದರ್ಶಿಯಾಗಿ ನೇಮಕಗೊಂಡ ಕೆಲವೇ ಗಂಟೆಗಳಲ್ಲಿ ದರೋಡೆ; ರಮೇಶ್‌ ಯಾದವ್‌ ಕೈಕಾಲು ಕಟ್ಟಿ ₹50 ಲಕ್ಷ ಲೂಟಿ

ಬಿಜೆಪಿಯ ಹಿಂದುಳಿದ ವರ್ಗಗಳ ಮೋರ್ಚಾದ ರಾಜ್ಯ ಕಾರ್ಯದರ್ಶಿಯಾಗಿ ನೇಮಕಗೊಂಡ ಸಂಭ್ರಮದಲ್ಲಿದ್ದ ರಮೇಶ್...