ಅಕ್ಟೋಬರ್ 8ರೊಳಗೆ ಪಶ್ಚಿಮ ಬಂಗಾಳ ಶಾಸಕರ ಅನರ್ಹತೆ ಅರ್ಜಿಗಳ ವಿಲೇವಾರಿಗೆ ಸ್ಪೀಕರ್​ಗೆ ಸುಪ್ರೀಂ ಸೂಚನೆ

Date:

ಪಕ್ಷಾಂತರ ನಿಷೇಧ ಕಾಯ್ದೆ ಹಾಗೂ ಸಂವಿಧಾನದ ಹತ್ತನೇ ಶೆಡ್ಯೂಲ್‌ನ ಅಡಿಯಲ್ಲಿ, ರಿತಬ್ರತಾ ಬ್ಯಾನರ್ಜಿ ಬಣದ ಬಂಡಾಯ ಶಾಸಕರ ವಿರುದ್ಧ ಮಾಜಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರ ತೃಣಮೂಲ ಕಾಂಗ್ರೆಸ್ (TMC) ಬಣ ಸಲ್ಲಿಸಿರುವ ಅನರ್ಹತೆ ಅರ್ಜಿಗಳನ್ನು ಅಕ್ಟೋಬರ್ 8ರೊಳಗೆ ವಿಲೇವಾರಿ ಮಾಡುವಂತೆ ಸುಪ್ರೀಂ ಕೋರ್ಟ್ ಪಶ್ಚಿಮ ಬಂಗಾಳ ವಿಧಾನಸಭೆಯ ಸ್ಪೀಕರ್‌ಗೆ ನಿರ್ದೇಶನ ನೀಡಿದೆ.

- Advertisement -

​ಮುಖ್ಯ ನ್ಯಾಯಮೂರ್ತಿ ಸೂರ್ಯ ಕಾಂತ್ ಅವರ ನೇತೃತ್ವದ ಪೀಠದ ಮುಂದೆ ಹಾಜರಾದ ಮಮತಾ ಬಣದ ಪರ ಹಿರಿಯ ವಕೀಲರಾದ ಕಪಿಲ್ ಸಿಬಲ್ ಅವರು ತಮ್ಮ ವಾದ ಮಂಡಿಸಿದರು. ನ್ಯಾಯಮಂಡಳಿಯಾಗಿ ಕಾರ್ಯನಿರ್ವಹಿಸುವ ಸ್ಪೀಕರ್, ಅನರ್ಹತೆ ಅರ್ಜಿಗಳನ್ನು ಮೂರು ತಿಂಗಳ “ಸಮಂಜಸವಾದ ಸಮಯ”ದೊಳಗೆ ನಿರ್ಧರಿಸಬೇಕು ಎಂದು ಸುಪ್ರೀಂ ಕೋರ್ಟ್ ಈ ಹಿಂದೆ ‘ಕೀಶಮ್ ಮೇಘಚಂದ್ರ ಸಿಂಗ್’ ಪ್ರಕರಣದಲ್ಲಿ ಸ್ಪಷ್ಟಪಡಿಸಿದೆ ಎಂಬುದನ್ನು ಅವರು ನ್ಯಾಯಾಲಯದ ಗಮನಕ್ಕೆ ತಂದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ವಿರಾಟ್ ಕೊಹ್ಲಿ: ದಂತಕಥೆಯ ಪಯಣದ ಮತ್ತೊಂದು ಸುವರ್ಣ ಅಧ್ಯಾಯ

ಕ್ರಿಕೆಟ್ ಕೇವಲ ಒಂದು ಆಟವಲ್ಲ, ಅದೊಂದು ಜೀವಂತ ಭಾವನೆ ಎಂದು ನಂಬಿರುವ ಕೋಟ್ಯಂತರ ಭಾರತೀಯರಿಗೆ ವಿರಾಟ್ ಕೊಹ್ಲಿ ಕೇವಲ ಒಬ್ಬ ಆಟಗಾರನಲ್ಲ; ಬದಲಾಗಿ ಅದ್ಭುತ ಕಾವ್ಯದಂತಿರುವ ಒಂದು ಸುವರ್ಣ ಶಕೆ. ನವೆಂಬರ್ 5,...

‘ವಿಬಿ-ಜಿ ರಾಮ್‌ ಜಿ’ ಅನುಷ್ಠಾನದಲ್ಲಿ ಎಡವಟ್ಟು! ಕೂಲಿ ಸಿಗದೆ...

ಗ್ರಾಮೀಣ ಬಡ ಕುಟುಂಬಗಳಿಗೆ ಆಸರೆಯಾಗಬೇಕಿದ್ದ ‘ವಿಬಿ-ಜಿ ರಾಮ್ ಜಿ’ (VB-G RAM G) ಯೋಜನೆ, ಅನುಷ್ಠಾನದ ಎಡವಟ್ಟುಗಳಿಂದಾಗಿ ಗೊಂದಲದ ಗೂಡಾಗಿದೆ. ಕೆಲಸ ಮಾಡಿದರೂ ತಿಂಗಳುಗಟ್ಟಲೆ ಕೂಲಿ ಸಿಗದೆ ಬಡ ಕಾರ್ಮಿಕರು ಆರ್ಥಿಕ ಸಂಕಷ್ಟಕ್ಕೆ...

ಖಾಲಿಯಾಗುತ್ತಿವೆ ಉತ್ತರ ಕನ್ನಡದ ಹಳ್ಳಿಗಳು: 40ಕ್ಕೂ ಹೆಚ್ಚು ಗ್ರಾಮಗಳಲ್ಲಿ...

ಮಕ್ಕಳ ಗದ್ದಲ, ಕೃಷಿ ಚಟುವಟಿಕೆಯ ಹಿಗ್ಗು, ಹಬ್ಬ-ಹರಿದಿನಗಳ ಸಂಭ್ರಮದಿಂದ ಕಂಗೊಳಿಸುತ್ತಿದ್ದ ಹಳ್ಳಿಗಳು ಇವತ್ತು ನಿಶ್ಶಬ್ದವಾಗಿ ನಿಂತಿವೆ. ಪ್ರಕೃತಿಯ ಮಡಿಲಲ್ಲಿ ಕಟ್ಟಿಕೊಂಡಿದ್ದ ಬದುಕು ನಿಧಾನವಾಗಿ ಕರಗಿ ಹೋಗುತ್ತಿದೆ. ಊರು ತೊರೆದು ಪಟ್ಟಣ ಸೇರವುದು ಅನಿವಾರ್ಯವ...

​”ಅರ್ಜಿ ವಿಲೇವಾರಿಯ ಮೂರು ತಿಂಗಳ ಗಡುವು ಅಕ್ಟೋಬರ್ 8ಕ್ಕೆ ಮುಕ್ತಾಯಗೊಳ್ಳುತ್ತದೆ. ಸ್ಪೀಕರ್ ಉದ್ದೇಶಪೂರ್ವಕವಾಗಿ ಅನರ್ಹತೆ ಅರ್ಜಿಗಳನ್ನು ತ್ವರಿತವಾಗಿ ವಿಲೇವಾರಿ ಮಾಡದೆ ವಿಳಂಬ ಮಾಡುತ್ತಿದ್ದಾರೆ. ಈ ವಿಳಂಬದ ಲಾಭ ಪಡೆದು ಬಂಡಾಯ ಶಾಸಕರು ಚುನಾವಣಾ ಆಯೋಗದ ಮೊರೆ ಹೋಗಿದ್ದಾರೆ. ಈ ಕಾರಣದಿಂದಲೇ ಟಿಎಂಸಿ ಪಕ್ಷದ ಚಿಹ್ನೆ ಮತ್ತು ಹೆಸರನ್ನು ಮುಟ್ಟುಗೋಲು ಹಾಕಿಕೊಂಡು ಆಯೋಗವು ಸೆಪ್ಟೆಂಬರ್ 17ರಂದು ಮಧ್ಯಂತರ ಆದೇಶ ನೀಡಿದೆ,” ಎಂದು ಸಿಬಲ್ ಆತಂಕ ವ್ಯಕ್ತಪಡಿಸಿದರು.

​ಈ ಪ್ರಕರಣದಲ್ಲಿ ನೇರವಾಗಿ ಮಧ್ಯಪ್ರವೇಶಿಸಲು ಹಿಂದೇಟು ಹಾಕಿದ ಮುಖ್ಯ ನ್ಯಾಯಮೂರ್ತಿಗಳು, ಸ್ಪೀಕರ್ ಅವರು ಕಾನೂನು ಪಾಲಿಸುತ್ತಾರೆಂಬ ವಿಶ್ವಾಸ ವ್ಯಕ್ತಪಡಿಸಿದರು. ಈ ವೇಳೆ ನ್ಯಾಯಪೀಠದಲ್ಲಿದ್ದ ನ್ಯಾಯಮೂರ್ತಿ ಜಾಯ್‌ಮಾಲ್ಯ ಬಾಗ್ಚಿ ಅವರು, “ನ್ಯಾಯಾಂಗವೇ ನಿಗದಿತ ಕಾಲಮಿತಿಯೊಳಗೆ ಪ್ರಕರಣಗಳನ್ನು ಪೂರ್ಣಗೊಳಿಸುವ ನಿಯಮಗಳನ್ನು ಉಲ್ಲಂಘಿಸುತ್ತಿರುವಾಗ, ಸ್ಪೀಕರ್‌ಗೆ ಕಾಲಮಿತಿ ವಿಧಿಸಿ ಹೇಗೆ ಹೇಳಲು ಸಾಧ್ಯ?” ಎಂದು ಲಘು ದಾಟಿಯಲ್ಲಿ ಪ್ರಶ್ನಿಸಿ, ಸ್ಪೀಕರ್ ನಿರ್ಧಾರವನ್ನು ಸಾಂವಿಧಾನಿಕ ನ್ಯಾಯಾಲಯದಲ್ಲಿ ಪ್ರಶ್ನಿಸಲು ಅವಕಾಶವಿದೆ ಎಂಬುದನ್ನು ನೆನಪಿಸಿದರು.

​ಮಮತಾ ಬ್ಯಾನರ್ಜಿ ಬಣದ ಪ್ರಮುಖ ನಾಯಕ ಸೋಹನ್‌ದೇಬ್ ಚಟ್ಟೋಪಾಧ್ಯಾಯ ಅವರು, ಜುಲೈ 8ರಂದು 10 ಪ್ರತಿಸ್ಪರ್ಧಿ ಶಾಸಕರ ವಿರುದ್ಧ ಸಲ್ಲಿಸಲಾದ ಅನರ್ಹತೆ ಅರ್ಜಿಗಳ ಮೇಲೆ ತ್ವರಿತ ನಿರ್ಧಾರ ತೆಗೆದುಕೊಳ್ಳಲು ಸ್ಪೀಕರ್‌ಗೆ ನಿರ್ದೇಶನ ನೀಡುವಂತೆ ಕೋರಿದ್ದರು. 2026ರ ವಿಧಾನಸಭಾ ಚುನಾವಣೆಯಲ್ಲಿ ಟಿಎಂಸಿ ಸೋಲು ಕಂಡ ನಂತರ, ಜೂನ್ 27ರಂದು ನಡೆದ ವಿಶೇಷ ಅಧಿವೇಶನದಲ್ಲಿ ಬಂಡಾಯ ಶಾಸಕರು ರಿತಬ್ರತಾ ಬ್ಯಾನರ್ಜಿ ನೇತೃತ್ವದಲ್ಲಿ ಪ್ರತ್ಯೇಕ ಬಣವನ್ನು ರಚಿಸಿಕೊಂಡಿದ್ದರು.

​ಅರೂಪ್ ರಾಯ್, ರಿತಬ್ರತಾ ಬ್ಯಾನರ್ಜಿ, ಫಿರ್ಹಾದ್ ಹಕೀಮ್, ಸಂದೀಪನ್ ಸಹಾ, ಸೆಯುಲಿ ಸಹಾ ಸೇರಿದಂತೆ ಒಟ್ಟು 10 ಶಾಸಕರ ವಿರುದ್ಧ ಅನರ್ಹತೆ ಅರ್ಜಿಗಳನ್ನು ಸಲ್ಲಿಸಲಾಗಿತ್ತು. “ಸುಪ್ರೀಂ ಕೋರ್ಟ್ ನಿಗದಿಪಡಿಸಿರುವ ತತ್ವಗಳನ್ನು ಸ್ಪೀಕರ್ ಸಂಪೂರ್ಣವಾಗಿ ಅರಿತಿದ್ದಾರೆ. ಹೀಗಾಗಿ, ನಿಗದಿತ ಚೌಕಟ್ಟಿನೊಳಗೆ ಅವರು ಆದಷ್ಟು ಬೇಗ ಸೂಕ್ತ ನಿರ್ಧಾರ ತೆಗೆದುಕೊಳ್ಳಲು ಎಲ್ಲ ಪ್ರಯತ್ನಗಳನ್ನು ಮಾಡುತ್ತಾರೆ” ಎಂದು ವಿಶ್ವಾಸ ವ್ಯಕ್ತಪಡಿಸಿದ ನ್ಯಾಯಾಲಯವು ಈ ಅರ್ಜಿಯನ್ನು ವಿಲೇವಾರಿ ಮಾಡಿತು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಅಮೆರಿಕದಲ್ಲಿ ಡೀಸೆಲ್ ರಫ್ತು ನಿಷೇಧದ ಚರ್ಚೆ; ಭಾರತದ ಮೇಲಾಗುವ ಪರಿಣಾಮವೇನು?

ಪಶ್ಚಿಮ ಏಷ್ಯಾದಲ್ಲಿನ ಯುದ್ಧದ ಪರಿಸ್ಥಿತಿ ಮತ್ತು ರಷ್ಯಾ-ಉಕ್ರೇನ್ ನಡುವಿನ ಸಂಘರ್ಷದಿಂದಾಗಿ ಜಾಗತಿಕ...

4 ವರ್ಷದಲ್ಲಿ BJP, NPFಗೆ ಹಾರಿದ 111 ಜನಪ್ರತಿನಿಧಿಗಳು; ಎಡಿಆರ್‌ ವರದಿ

2022ರಿಂದ 2026ರ ಅವಧಿಯಲ್ಲಿ ಚುನಾವಣೆ ಗೆದ್ದ ಬಳಿಕ ಒಟ್ಟು 111 ಹಾಲಿ...

ನಕಲಿ ಔಷಧ ಜಾಲ ಭೇದಿಸಿದ ಎಸ್‌ಐಟಿ: ಅಜರ್‌ಬೈಜಾನ್‌ಗೆ ಪರಾರಿಯಾಗಿದ್ದ ಕಿಂಗ್‌ಪಿನ್‌ ಪ್ರಶಾಂತ್‌ ಸೆರೆ

ರಾಜ್ಯಾದ್ಯಂತ ಭಾರಿ ಸಂಚಲನ ಮೂಡಿಸಿದ್ದ ಕೋಟ್ಯಂತರ ರೂಪಾಯಿ ಮೌಲ್ಯದ ನಕಲಿ ಔಷಧ...

ಉದ್ಯೋಗ ಮಾಹಿತಿ | ರೈಲ್ವೆಯಲ್ಲಿ 590 ಹುದ್ದೆಗಳ ನೇಮಕಾತಿಗೆ ಅರ್ಜಿ ಆಹ್ವಾನ

ಭಾರತೀಯ ರೈಲ್ವೆ ಇಲಾಖೆಯ ವಿವಿಧ ವಲಯಗಳಲ್ಲಿ ಖಾಲಿ ಇರುವ ಪ್ಯಾರಾಮೆಡಿಕಲ್ ವಿಭಾಗದ...