ಉನ್ನಾಂವ್ ಅತ್ಯಾಚಾರ ಪ್ರಕರಣ: ಬಿಜೆಪಿ ನಾಯಕ ಕುಲದೀಪ್‌ ಜೀವಾವಧಿ ಶಿಕ್ಷೆ ಅಮಾನತು ಆದೇಶಕ್ಕೆ ಸುಪ್ರೀಂ ತಡೆ

Date:

ದೇಶವನ್ನೇ ಬೆಚ್ಚಿಬೀಳಿಸಿದ್ದ ಉನ್ನಾಂವ್ ಅತ್ಯಾಚಾರ ಪ್ರಕರಣದಲ್ಲಿ ಬಿಜೆಪಿ ನಾಯಕ ಕುಲದೀಪ್‌ ಸೆಂಗರ್‌ಗೆ ನೀಡಲಾಗಿದ್ದ ಜೀವಾವಧಿ ಶಿಕ್ಷೆ ಅಮಾನತುಗೊಳಿಸಿದ್ದ ದೆಹಲಿ ಹೈಕೋರ್ಟ್ ಆದೇಶಕ್ಕೆ ಸುಪ್ರೀಂ ಕೋರ್ಟ್ ತಡೆ ನೀಡಿದೆ.

- Advertisement -

2017ರ ಉನ್ನಾಂವ್ ಅತ್ಯಾಚಾರ ಪ್ರಕರಣದಲ್ಲಿ ಅಪರಾಧಿಯಾಗಿರುವ ಮಾಜಿ ಬಿಜೆಪಿ ಶಾಸಕ ಕುಲದೀಪ್ ಸಿಂಗ್ ಸೆಂಗರ್‌ಗೆ ದೆಹಲಿ ಹೈಕೋರ್ಟ್ ಡಿಸೆಂಬರ್ 23ರಂದು ಜಾಮೀನು ನೀಡಿದೆ. ಹಾಗೆಯೇ ನ್ಯಾಯಮೂರ್ತಿಗಳಾದ ಸುಬ್ರಮೋನಿಯಂ ಪ್ರಸಾದ್ ಮತ್ತು ಹರೀಶ್ ವೈದ್ಯನಾಥನ್ ಶಂಕರ್ ಅವರ ಪೀಠವು, ಕುಲದೀಪ್ ಶಿಕ್ಷೆಯ ವಿರುದ್ಧ ಸಲ್ಲಿಸಿರುವ ಮೇಲ್ಮನವಿ ವಿಚಾರಣೆಯ ಸಮಯದಲ್ಲಿ ಆತನಿಗೆ ವಿಧಿಸಿದ್ದ ಜೀವಾವಧಿ ಶಿಕ್ಷೆಯನ್ನೂ ಅಮಾನತುಗೊಳಿಸಿತ್ತು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಗಡುಸಾದ ದನಿಯೊಳಗಿನ ಮೃದು ಮನಸ್ಸು: ʼನಾನಾ ಪಾಟೇಕರ್ʼ ಎಂಬ...

ಅವರ ಗಡುಸಾದ ದನಿಯಲ್ಲಿ ಸಾಮಾನ್ಯ ಮನುಷ್ಯನ ಆಕ್ರೋಶವಿತ್ತು; ಅವರ ತೀಕ್ಷ್ಣ ನೋಟದಲ್ಲಿ ಬದುಕಿನ ಕಹಿ ಸತ್ಯಗಳಿದ್ದವು. ‘ಕ್ರಾಂತಿವೀರ್’ನಲ್ಲಿ ಅನ್ಯಾಯದ ವಿರುದ್ಧ ಸಿಡಿದವರು, ‘ಖಾಮೋಶಿ’ಯಲ್ಲಿ ಮಾತಿಲ್ಲದೆ ಮನಸ್ಸು ತಟ್ಟಿದವರು, ‘ವೆಲ್‌ಕಮ್’ನಲ್ಲಿ ನಗುವಿನ ಹೊಳೆ ಹರಿಸಿದವರು...

ಕೂಲಿಕಾರ್ಮಿಕರ ಮೊಮ್ಮಗಳ ವಿಶ್ವ ವಿಜಯ: ಭಾರತೀಯ ಮೂಲದ ನವಿ...

ವಿಶ್ವಸಂಸ್ಥೆಯ ಮಾನವ ಹಕ್ಕುಗಳ ವಿಭಾಗದ ಮಾಜಿ ಮುಖ್ಯಸ್ಥೆ ಹಾಗೂ ಪ್ರಸ್ತುತ ಅಂತಾರಾಷ್ಟ್ರೀಯ ನ್ಯಾಯಾಲಯದ (ICJ) ನ್ಯಾಯಾಧೀಶರಾಗಿರುವ ದಕ್ಷಿಣ ಆಫ್ರಿಕಾ ಮತ್ತು ಭಾರತೀಯ ಮೂಲದ ನವನೀತಮ್ 'ನವಿ' ಪಿಳ್ಳೈ (85) ಅವರಿಗೆ 2026ನೇ ಸಾಲಿನ...

ಉತ್ತರ ಕನ್ನಡ | ಗ್ರಾಮೀಣ ಮಹಿಳೆಯರ ಸಬಲೀಕರಣಕ್ಕೆ ‘ಅಕ್ಕ...

ಉತ್ತರ ಕನ್ನಡ ಜಿಲ್ಲೆಯಲ್ಲಿ 'ಅಕ್ಕ ಕೆಫೆ' ಯೋಜನೆ ಯಶಸ್ವಿಯಾಗಿ ಮುನ್ನಡೆಯುತ್ತಿದ್ದು, ಗ್ರಾಮೀಣ ಮಹಿಳೆಯರು ಸ್ವಂತ ಉದ್ಯಮ ನಡೆಸಿ ಆರ್ಥಿಕ ಸ್ವಾವಲಂಬನೆ ಸಾಧಿಸಲು ಮತ್ತು ಉದ್ಯಮಿಗಳಾಗಿ ಹೊರಹೊಮ್ಮಲು ಇದು ದಾರಿಮಾಡಿಕೊಟ್ಟಿದೆ. ಸಂಜೀವಿನಿ ಎನ್‌ಆರ್‌ಎಲ್‌ಎಂ ಯೋಜನೆಯಡಿ...

ಇದನ್ನು ಓದಿದ್ದೀರಾ? ಬೆಚ್ಚಿ ಬೀಳಿಸಿದ್ದ ಉನ್ನಾಂವ್ ಅತ್ಯಾಚಾರ: ಯುಪಿಯ ಬಿಜೆಪಿ ನಾಯಕ ಕುಲದೀಪ್‌ ಜೀವಾವಧಿ ಶಿಕ್ಷೆ ಅಮಾನತು!

ಅಪರಾಧ ಸಾಬೀತಾಗಿ ಶಿಕ್ಷೆಗೆ ಗುರಿಯಾಗಿರುವ ಪ್ರಭಾವಶಾಲಿ ವ್ಯಕ್ತಿಗೆ ಜಾಮೀನು ನೀಡಿರುವುದು ಮಾತ್ರವಲ್ಲದೆ ಜೀವಾವಧಿ ಶಿಕ್ಷೆ ಅಮಾನತುಗೊಳಿಸಿರುವುದು ತೀವ್ರ ವಿವಾದಕ್ಕೆ ಕಾರಣವಾಗಿತ್ತು. ಅಷ್ಟು ಮಾತ್ರವಲ್ಲದೆ ಸಂತ್ರಸ್ತೆಯ ತಂದೆಯ ಪೊಲೀಸ್ ಕಸ್ಟಡಿ ಪ್ರಕರಣದಲ್ಲಿ ಅಪರಾಧಿಯೂ ಸೆಂಗರ್. ಹಾಗಾಗಿ ಸಂತ್ರಸ್ತೆ ಮತ್ತು ಆಕೆಯ ಕುಟುಂಬದ ರಕ್ಷಣೆಯ ಪ್ರಶ್ನೆ ಹುಟ್ಟಿತ್ತು. ಉನ್ನಾಂವ್ ಸಂತ್ರಸ್ತೆ ಕುಟುಂಬ ಮತ್ತು ಮಹಿಳಾಪರ ಹೋರಾಟಗಾರರು, ಸಾಮಾಜಿಕ ಕಾರ್ಯಕರ್ತರೂ ಬೀದಿಗಿಳಿದು ಪ್ರತಿಭಟನೆ ನಡೆಸಿದ್ದರು.

ಈ ನಡುವೆಯೇ ಸಿಬಿಐ ದೆಹಲಿ ಹೈಕೋರ್ಟ್ ತೀರ್ಪನ್ನು ಪ್ರಶ್ನಿಸಿ ಸುಪ್ರೀಂ ಕೋರ್ಟ್ ಮೆಟ್ಟಿಲೇರಿದ್ದು, ಸುಪ್ರೀಂ ಸಿಬಿಐ ಅರ್ಜಿಯನ್ನು ಪುರಸ್ಕರಿಸಿ, ಹೈಕೋರ್ಟ್ ತೀರ್ಪಿಗೆ ತಡೆ ನೀಡಿದೆ.

ಮಹಿಳಾಪರ ಹೋರಾಟಗಾರ್ತಿ ಯೋಗಿತಾ ಭಯಾನ ಆದೇಶವನ್ನು ಸ್ವಾಗತಿಸಿದ್ದು, ಸುಪ್ರೀಂ ಕೋರ್ಟ್ ಮತ್ತು ಮಾಧ್ಯಮಗಳಿಗೆ ಧನ್ಯವಾದ ಅರ್ಪಿಸಿದ್ದಾರೆ. “ಸತ್ಯಮೇವ ಜಯತೇ. ಈ ಆದೇಶಕ್ಕಾಗಿ ನಾವು ಕಾಯುತ್ತಿದ್ದೆವು. ಸುಪ್ರೀಂ ಕೋರ್ಟ್ ಮತ್ತು ಎಲ್ಲಾ ಮಾಧ್ಯಮಗಳಿಗೆ ನಾವು ಧನ್ಯವಾದ ಹೇಳುತ್ತೇವೆ” ಎಂದಿದ್ದಾರೆ.

“ಸುಪ್ರೀಂ ಕೋರ್ಟ್ ಈ ಪ್ರಕರಣದ ಬಗ್ಗೆ ಸೂಕ್ಷ್ಮವಾಗಿ ಅವಲೋಕಿಸಿ ತೀರ್ಪು ನೀಡಿದೆ. ಇದು ನ್ಯಾಯದ ಮೂಲ. ಈ ತೀರ್ಪು ಅನ್ಯಾಯವನ್ನು ದೃಢತೆಯಿಂದ ಎದುರಿಸಿದರೆ ನ್ಯಾಯ ಸಿಗುತ್ತದೆ ಎಂಬ ಸಂದೇಶವನ್ನು ದೇಶದ ಹೆಣ್ಣುಮಕ್ಕಳಿಗೆ ರವಾನಿಸುತ್ತದೆ” ಎಂದು ಹೇಳಿದರು.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಅ. 10ರ ಜಂತರ್ ಮಂತರ್ ಪ್ರತಿಭಟನೆಗೆ ಅನುಮತಿ ನಿರಾಕರಿಸಿದ ದೆಹಲಿ ಪೊಲೀಸ್; ಕಠಿಣ ಕ್ರಮದ ಎಚ್ಚರಿಕೆ

ಮುಖ್ಯ ಚುನಾವಣಾ ಆಯುಕ್ತರ (CEC) ಹೊಣೆಗಾರಿಕೆ ಪ್ರಶ್ನಿಸಿ 'ಕಾಕ್ರೋಚ್ ಜನತಾ ಪಾರ್ಟಿ'...

ಪಂಜಾಬ್ ಸಿಎಂ ಕಚೇರಿ ಭ್ರಷ್ಟಾಚಾರದ ಸಿಬಿಐ ತನಿಖೆ ವಿಚಾರಣೆಯಿಂದ ಹಿಂದೆ ಸರಿದ ಸುಪ್ರೀಂ ಕೋರ್ಟ್ ನ್ಯಾಯಮೂರ್ತಿ

ಪಂಜಾಬ್ ಮುಖ್ಯಮಂತ್ರಿ ಭಗವಂತ್ ಮಾನ್ ಅವರ ಕಚೇರಿಗೆ ಸಂಬಂಧಿಸಿದ ಭ್ರಷ್ಟಾಚಾರದ ಆರೋಪಗಳ...

ಪಶ್ಚಿಮ ಬಂಗಾಳ ಉಪಚುನಾವಣೆ ವೇಳೆ ಅಕ್ರಮದ ಆರೋಪ; ಮರುಮತದಾನಕ್ಕೆ ವಿಪಕ್ಷಗಳ ಆಗ್ರಹ

ಪಶ್ಚಿಮ ಬಂಗಾಳದ ನಂದಿಗ್ರಾಮ ಮತ್ತು ರೇಜಿನಗರ ವಿಧಾನಸಭಾ ಕ್ಷೇತ್ರಗಳ ಉಪಚುನಾವಣೆಯ ಮತ...