ಮುಸ್ಲಿಂ ವ್ಯಾಪಾರಿ ಪರ ನಿಂತಿದ್ದ ‘ಮೊಹಮ್ಮದ್ ದೀಪಕ್’ಗೆ ಸುಪ್ರೀಂ ಕೋರ್ಟ್‌ನಿಂದ ರಿಲೀಫ್: ಎಫ್‌ಐಆರ್‌ಗೆ ತಡೆ

Date:

ಮುಸ್ಲಿಂ ವ್ಯಾಪಾರಿಯೊಬ್ಬರ ರಕ್ಷಣೆಗೆ ನಿಂತು ಸಾಮಾಜಿಕ ಜಾಲತಾಣಗಳಲ್ಲಿ ‘ಮೊಹಮ್ಮದ್ ದೀಪಕ್’ ಎಂದೇ ಜನಪ್ರಿಯತೆ ಪಡೆದಿದ್ದ ಉತ್ತರಾಖಂಡದ ಜಿಮ್ ಮಾಲೀಕ ದೀಪಕ್ ಕುಮಾರ್ ವಿರುದ್ಧ ದಾಖಲಾಗಿದ್ದ ಎಫ್‌ಐಆರ್ (FIR) ಸಂಬಂಧಿತ ಮುಂದಿನ ಎಲ್ಲಾ ಪ್ರಕ್ರಿಯೆಗಳಿಗೆ ಸುಪ್ರೀಂ ಕೋರ್ಟ್ ಸೋಮವಾರ (ಆಗಸ್ಟ್ 31) ಮಧ್ಯಂತರ ತಡೆಯಾಜ್ಞೆ ನೀಡಿದೆ. ನ್ಯಾಯಮೂರ್ತಿಗಳಾದ ವಿಕ್ರಮ್ ನಾಥ್ ಹಾಗೂ ಸಂದೀಪ್ ಮೆಹ್ತಾ ಅವರನ್ನೊಳಗೊಂಡ ಪೀಠವು ಈ ಆದೇಶ ಹೊರಡಿಸಿದ್ದು, ದೀಪಕ್ ಅವರಿಗೆ ದೊಡ್ಡ ರಿಲೀಫ್ ಒದಗಿಸಿದೆ.

- Advertisement -

ಇದರೊಂದಿಗೆ, ಪ್ರಕರಣ ಹಾಗೂ ಘಟನೆಗೆ ಸಂಬಂಧಿಸಿದಂತೆ ಸಾಮಾಜಿಕ ಜಾಲತಾಣಗಳಲ್ಲಿ ಯಾವುದೇ ಪೋಸ್ಟ್‌ಗಳನ್ನು ಹಾಕದಂತೆ ಮತ್ತು ಸಾರ್ವಜನಿಕ ಹೇಳಿಕೆಗಳನ್ನು ನೀಡದಂತೆ ದೀಪಕ್ ಅವರಿಗೆ ಉತ್ತರಾಖಂಡ ಹೈಕೋರ್ಟ್ ವಿಧಿಸಿದ್ದ ನಿರ್ಬಂಧದ ಆದೇಶಕ್ಕೂ ಸುಪ್ರೀಂ ಕೋರ್ಟ್ ತಡೆ ನೀಡಿದೆ. ತಮ್ಮ ವಿರುದ್ಧದ ಎಫ್‌ಐಆರ್ ರದ್ದುಗೊಳಿಸಲು ನಿರಾಕರಿಸಿದ ಹೈಕೋರ್ಟ್ ಆದೇಶವನ್ನು ಪ್ರಶ್ನಿಸಿ ದೀಪಕ್ ಸಲ್ಲಿಸಿದ್ದ ಅರ್ಜಿಯ ವಿಚಾರಣೆ ನಡೆಸಿದ ಸುಪ್ರೀಂ ಕೋರ್ಟ್, ಉತ್ತರಾಖಂಡ ಸರ್ಕಾರ ಹಾಗೂ ಇತರ ಪ್ರತಿವಾದಿಗಳಿಗೆ ನೋಟಿಸ್ ಜಾರಿ ಮಾಡಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಮೋದಿ ಆಡಳಿತದಲ್ಲಿ ಮಾಹಿತಿ ಹಕ್ಕು ಕಾಯ್ದೆಯ ‘ಸ್ಥಿತಿ’ ಹೇಗಿದೆ?...

ಯಾವುದೇ ಸರ್ಕಾರ ಆಡಳಿತದಲ್ಲಿರಲಿ ಪ್ರಜಾಸತ್ತಾತ್ಮಕ ವ್ಯವಸ್ಥೆಯನ್ನು ಕಾಪಾಡಬೇಕಾದ ಸಂಸ್ಥೆಗಳ ಸ್ವಾಯತ್ತತೆ ಉಳಿಯಬೇಕು. ಅವು ಪಾರದರ್ಶಕವಾಗಿರಬೇಕು. ಪ್ರಜಾಸತ್ತೆಯ ಕಾರ್ಯವೈಖರಿಯನ್ನು ಕುರಿತಂತೆ ಮುಕ್ತ ಚರ್ಚೆ ನಡೆಯುತ್ತಿರಬೇಕು. ಇದು ಸಕ್ರಿಯ, ಅರ್ಥಪೂರ್ಣ ಪ್ರಜಾಸತ್ತೆಯ ಕನಿಷ್ಠ ಅವಶ್ಯಕತೆ. ಹಾಗಾಗಿ...

ಬಂಗಾಳ ವಿಭಜನೆ | ವಿಭಜನೆಯ ವಿಷಬೀಜದಿಂದ ಒಗ್ಗಟ್ಟಿನ ಜ್ಯೋತಿ...

ಬ್ರಿಟಿಷರ 'ಒಡೆದು ಆಳುವ ನೀತಿ'ಯ ಭಾಗವಾಗಿ 1905ರ ಅಕ್ಟೋಬರ್‌ನಲ್ಲಿ ಜಾರಿಗೆ ಬಂದ ಬಂಗಾಳ ವಿಭಜನೆಯು ಭಾರತೀಯರ ರಾಷ್ಟ್ರೀಯತೆಯನ್ನು ಒಡೆಯುವ ಕುತಂತ್ರವಾಗಿತ್ತು. ಇದಕ್ಕೆ ಪ್ರತಿಯಾಗಿ ಭಾರತೀಯರು 'ರಾಷ್ಟ್ರೀಯ ಶೋಕ ದಿನ' ಆಚರಿಸಿ, ಪರಸ್ಪರ ರಾಖಿ...

ನಟ ಇಮ್ರಾನ್ ಖಾನ್ ಪ್ರತಿಭಟಿಸಿದರೆ ಗಡಿಪಾರು; ಟ್ರಂಪ್ ಪರ...

ಕಾನೂನು ಮತ್ತು ರಾಜತಾಂತ್ರಿಕ ನಿಯಮಗಳು ಎಲ್ಲರಿಗೂ ಒಂದೇ ಆಗಿರಬೇಕು ಹೊರತು ಪ್ರಧಾನಿ ಮೋದಿಯವರ ರಾಜಕೀಯ ಅನುಕೂಲಕ್ಕೆ ತಕ್ಕಂತೆ ಬದಲಾಗಬಾರದು. ವಿದೇಶಿ ಪ್ರಜೆಯೊಬ್ಬ ಭಾರತದ ನೆಲದಲ್ಲಿ ಪ್ರತಿಭಟನೆಯಲ್ಲಿ ಪಾಲ್ಗೊಳ್ಳುವುದು ತಪ್ಪು ಎನ್ನುವುದಾದರೆ, ಭಾರತದ ಪ್ರಧಾನಿಯೊಬ್ಬರು...

​ಈ ಹಿಂದೆ ಉತ್ತರಾಖಂಡ ಹೈಕೋರ್ಟ್, ದೀಪಕ್ ವಿರುದ್ಧದ ಎಫ್‌ಐಆರ್ ರದ್ದುಗೊಳಿಸಲು ನಿರಾಕರಿಸಿ, ತನಿಖೆಗೆ ಸಹಕರಿಸುವಂತೆ ಸೂಚಿಸಿತ್ತು. ಅಲ್ಲದೆ, ಸಾರ್ವಜನಿಕ ಭಾವನೆಗಳನ್ನು ಕೆರಳಿಸದಂತೆ ಯಾವುದೇ ವೀಡಿಯೊ ಅಥವಾ ಹೇಳಿಕೆಗಳನ್ನು ಹಂಚಿಕೊಳ್ಳಬಾರದು ಎಂದು ನಿರ್ಬಂಧ ವಿಧಿಸಿತ್ತು. ಇದನ್ನು ಪ್ರಶ್ನಿಸಿ ದೀಪಕ್ ಪರವಾಗಿ ಸುಪ್ರೀಂ ಕೋರ್ಟ್‌ನಲ್ಲಿ ವಾದ ಮಂಡಿಸಿದ ಹಿರಿಯ ವಕೀಲ ಅಭಿಷೇಕ್ ಮನು ಸಿಂಘ್ವಿ, “ಈ ಘಟನೆಗೆ ಸಂಬಂಧಿಸಿದಂತೆ ದೀಪಕ್ ಅವರೇ ಮೊದಲು ದೂರು ದಾಖಲಿಸಿದ್ದರು. ಆದರೆ ಅವರ ದೂರಿನ ಮೇಲೆ ಯಾವುದೇ ಕ್ರಮ ಕೈಗೊಳ್ಳದೆ, ಸಂಕಷ್ಟದಲ್ಲಿದ್ದವರಿಗೆ ನೆರವಾದ ಒಬ್ಬ ಸತ್ಪ್ರಜೆಯ (ಗುಡ್ ಸಮರಿಟನ್) ವಿರುದ್ಧವೇ ಎಫ್‌ಐಆರ್ ದಾಖಲಿಸಲಾಗಿದೆ” ಎಂದು ನ್ಯಾಯಾಲಯದ ಗಮನಕ್ಕೆ ತಂದರು.

ಉತ್ತರಾಖಂಡದ ಕೋಟ್‌ದ್ವಾರದಲ್ಲಿ 71 ವರ್ಷದ ಮುಸ್ಲಿಂ ವ್ಯಾಪಾರಿಯೊಬ್ಬರು ತಮ್ಮ ಅಂಗಡಿಯ ಹೆಸರಿನಲ್ಲಿ “ಬಾಬಾ” ಎಂಬ ಪದವನ್ನು ಬಳಸಿದ್ದಕ್ಕೆ ಬಜರಂಗ ದಳದ ಕಾರ್ಯಕರ್ತರು ಆಕ್ಷೇಪ ವ್ಯಕ್ತಪಡಿಸಿ ಗಲಾಟೆ ನಡೆಸಿದ್ದರು. ಆ ಸಂದರ್ಭದಲ್ಲಿ ಮಧ್ಯಪ್ರವೇಶಿಸಿದ ಜಿಮ್ ಮಾಲೀಕ ದೀಪಕ್ ಕುಮಾರ್, ಆ ಮುಸ್ಲಿಂ ವ್ಯಾಪಾರಿಯ ಪರವಾಗಿ ನಿಂತು ಗುಂಪಿಗೆ ಪ್ರತಿರೋಧ ವ್ಯಕ್ತಪಡಿಸಿದ್ದರು. ಈ ವೇಳೆ ನಡೆದ ಮಾತಿನ ಚಕಮಕಿಯಲ್ಲಿ ನಿಮ್ಮ ಹೆಸರೇನು ಎಂದು ಗುಂಪು ಕೇಳಿದಾಗ, ದೀಪಕ್ ಧೈರ್ಯವಾಗಿ “ನನ್ನ ಹೆಸರು ಮೊಹಮ್ಮದ್ ದೀಪಕ್” ಎಂದು ಹೇಳಿದ್ದರು.

ಈ ಮುಖಾಮುಖಿಯ ವೀಡಿಯೊ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿ, ಸೌಹಾರ್ದತೆಯ ಸಂಕೇತವಾಗಿ ರಾಷ್ಟ್ರಮಟ್ಟದಲ್ಲಿ ಭಾರಿ ಚರ್ಚೆಗೆ ಗ್ರಾಸವಾಗಿತ್ತು. ದೆಹಲಿಯ ಪ್ರತಿಭಟನೆಗಳಲ್ಲೂ ಹಲವರು ದೀಪಕ್ ಬೆಂಬಲಕ್ಕೆ ನಿಂತಿದ್ದರು. ಇದೀಗ ಸುಪ್ರೀಂ ಕೋರ್ಟ್ ನೀಡಿರುವ ತಡೆಯಾಜ್ಞೆಯಿಂದಾಗಿ ದೀಪಕ್ ಕುಮಾರ್ ವಿರುದ್ಧದ ಕಾನೂನು ಪ್ರಕ್ರಿಯೆಗಳು ಸದ್ಯಕ್ಕೆ ಸ್ಥಗಿತಗೊಂಡಿವೆ. 

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಹವಾಮಾನ ವರದಿ | ಬೆಂಗಳೂರು ಸೇರಿ ಕರ್ನಾಟಕದ ಹಲವೆಡೆ ಅ.22ರವರೆಗೆ ಮಳೆ

ಕರ್ನಾಟಕದ ವಿವಿಧ ಜಿಲ್ಲೆಗಳಲ್ಲಿ ಮುಂದಿನ ಕೆಲವು ದಿನಗಳ ಕಾಲ ಮಳೆ ಮುಂದುವರಿಯುವ...

ಬೀಳಗಿ | ಬೆಳೆ ಉಳಿಸಲು ಘಟಪ್ರಭಾ ಎಡದಂಡೆ ಕಾಲುವೆಯ ಕೊನೆಯವರೆಗೆ ನೀರು ಹರಿಸಿ: ಭಾರತೀಯ ಕಿಸಾನ್‌ ಸಂಘ ಆಗ್ರಹ

ಘಟಪ್ರಭಾ ಮತ್ತು ಕೃಷ್ಣಾ ನದಿಗಳಲ್ಲಿ ಸಾಕಷ್ಟು ನೀರಿದ್ದರೂ ಘಟಪ್ರಭಾ ಎಡದಂಡೆ ಕಾಲುವೆಯ...

ಈ ದಿನ ಸಂಪಾದಕೀಯ | ಅಂಕಿತಾ ಹತ್ಯೆ ಶಂಕಿತರಿಗೆ ಸಾಂವಿಧಾನಿಕ ಹುದ್ದೆ ಸರಿಯೇ?

ಅಂಕಿತಾ ಭಂಡಾರಿ ಕೊಲೆ ಪ್ರಕರಣದಲ್ಲಿದ್ದ ವಿಐಪಿ ದುಶ್ಯಂತ್‌ ಅವರ ಮೇಲಿನ...

‘ಮೋದಿಯನ್ನು ದೇವರನ್ನಾಗಿಸುವ ಯತ್ನ’: ಬಿಹಾರ ಸಿಎಂ ಹೇಳಿಕೆಗೆ ಪ್ರಶಾಂತ್ ಕಿಶೋರ್ ಕಿಡಿ

ಪ್ರಧಾನಿ ನರೇಂದ್ರ ಮೋದಿ ಅವರು ಶ್ರೀರಾಮನಿಗೂ ಮನೆ ಒದಗಿಸಿದರು ಎಂಬ ಬಿಹಾರ...