ಇವಿಎಂಗಳನ್ನೇ ತರಿಸಿಕೊಂಡು ಮತಗಳ ಮರು ಎಣಿಕೆ ನಡೆಸಿದ ಸುಪ್ರೀಂ ಕೋರ್ಟ್‌!

Date:

ಹರಿಯಾಣದ ಗ್ರಾಮ ಪಂಚಾಯತ್ ಒಂದರ ಚುನಾವಣೆಯ ಎಲೆಕ್ಟ್ರಾನಿಕ್ ಮತ ಯಂತ್ರಗಳು (ಇವಿಎಂಗಳು) ಮತ್ತು ಇತರ ದಾಖಲೆಗಳನ್ನು ತರಿಸಿ ಸುಪ್ರೀಂ ಕೋರ್ಟ್ ಮರು ಎಣಿಕೆ ನಡೆಸಿದೆ. ಹರಿಯಾಣದ ಪಾಣಿಪತ್ ಜಿಲ್ಲೆಯ ಬುವಾನಾ ಲಖು ಗ್ರಾಮದ ಗ್ರಾಮ ಪಂಚಾಯತ್‌ನ ಅಧ್ಯಕ್ಷರ ಆಯ್ಕೆಯ ಬಗ್ಗೆ ವಿವಾದ ಉದ್ಭವಿಸಿದ ನಂತರ ನ್ಯಾಯಮೂರ್ತಿಗಳಾದ ಸೂರ್ಯ ಕಾಂತ್, ದೀಪಂಕರ್ ದತ್ತ ಮತ್ತು ಎನ್ ಕೋಟೀಶ್ವರ್ ಸಿಂಗ್ ಅವರ ಪೀಠವು ಈ ನಿರ್ಧಾರವನ್ನು ತೆಗೆದುಕೊಂಡಿದ್ದಾರೆ.

- Advertisement -

ಸುಪ್ರೀಂ ಕೋರ್ಟ್‌ನ ರಿಜಿಸ್ಟ್ರಾರ್ ಅವರು ಎರಡೂ ಪಕ್ಷಗಳ ಸಮ್ಮುಖದಲ್ಲಿ ಮರುಎಣಿಕೆಯನ್ನು ನಡೆಸಿದ್ದು, ಸಂಪೂರ್ಣ ಪ್ರಕ್ರಿಯೆಯನ್ನು ವೀಡಿಯೊಗ್ರಾಫ್ ಮಾಡಲಾಗಿದೆ. 2022ರ ನವೆಂಬರ್ 2ರಂದು ಬುವಾನಾ ಲಖು ಗ್ರಾಮದ ಅಧ್ಯಕ್ಷರ ಹುದ್ದೆಗೆ ಚುನಾವಣೆ ನಡೆಸಲಾಗಿದ್ದು ಕುಲದೀಪ್ ಸಿಂಗ್ ಅವರನ್ನು ಅಧ್ಯಕ್ಷ ಎಂದು ಘೋಷಿಸಲಾಗಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಮೋದಿ ಆಡಳಿತದಲ್ಲಿ ಮಾಹಿತಿ ಹಕ್ಕು ಕಾಯ್ದೆಯ ‘ಸ್ಥಿತಿ’ ಹೇಗಿದೆ?...

ಯಾವುದೇ ಸರ್ಕಾರ ಆಡಳಿತದಲ್ಲಿರಲಿ ಪ್ರಜಾಸತ್ತಾತ್ಮಕ ವ್ಯವಸ್ಥೆಯನ್ನು ಕಾಪಾಡಬೇಕಾದ ಸಂಸ್ಥೆಗಳ ಸ್ವಾಯತ್ತತೆ ಉಳಿಯಬೇಕು. ಅವು ಪಾರದರ್ಶಕವಾಗಿರಬೇಕು. ಪ್ರಜಾಸತ್ತೆಯ ಕಾರ್ಯವೈಖರಿಯನ್ನು ಕುರಿತಂತೆ ಮುಕ್ತ ಚರ್ಚೆ ನಡೆಯುತ್ತಿರಬೇಕು. ಇದು ಸಕ್ರಿಯ, ಅರ್ಥಪೂರ್ಣ ಪ್ರಜಾಸತ್ತೆಯ ಕನಿಷ್ಠ ಅವಶ್ಯಕತೆ. ಹಾಗಾಗಿ...

ಬಂಗಾಳ ವಿಭಜನೆ | ವಿಭಜನೆಯ ವಿಷಬೀಜದಿಂದ ಒಗ್ಗಟ್ಟಿನ ಜ್ಯೋತಿ...

ಬ್ರಿಟಿಷರ 'ಒಡೆದು ಆಳುವ ನೀತಿ'ಯ ಭಾಗವಾಗಿ 1905ರ ಅಕ್ಟೋಬರ್‌ನಲ್ಲಿ ಜಾರಿಗೆ ಬಂದ ಬಂಗಾಳ ವಿಭಜನೆಯು ಭಾರತೀಯರ ರಾಷ್ಟ್ರೀಯತೆಯನ್ನು ಒಡೆಯುವ ಕುತಂತ್ರವಾಗಿತ್ತು. ಇದಕ್ಕೆ ಪ್ರತಿಯಾಗಿ ಭಾರತೀಯರು 'ರಾಷ್ಟ್ರೀಯ ಶೋಕ ದಿನ' ಆಚರಿಸಿ, ಪರಸ್ಪರ ರಾಖಿ...

ನಟ ಇಮ್ರಾನ್ ಖಾನ್ ಪ್ರತಿಭಟಿಸಿದರೆ ಗಡಿಪಾರು; ಟ್ರಂಪ್ ಪರ...

ಕಾನೂನು ಮತ್ತು ರಾಜತಾಂತ್ರಿಕ ನಿಯಮಗಳು ಎಲ್ಲರಿಗೂ ಒಂದೇ ಆಗಿರಬೇಕು ಹೊರತು ಪ್ರಧಾನಿ ಮೋದಿಯವರ ರಾಜಕೀಯ ಅನುಕೂಲಕ್ಕೆ ತಕ್ಕಂತೆ ಬದಲಾಗಬಾರದು. ವಿದೇಶಿ ಪ್ರಜೆಯೊಬ್ಬ ಭಾರತದ ನೆಲದಲ್ಲಿ ಪ್ರತಿಭಟನೆಯಲ್ಲಿ ಪಾಲ್ಗೊಳ್ಳುವುದು ತಪ್ಪು ಎನ್ನುವುದಾದರೆ, ಭಾರತದ ಪ್ರಧಾನಿಯೊಬ್ಬರು...

ಇದನ್ನು ಓದಿದ್ದೀರಾ? ಸುಪ್ರೀಂ ಕೋರ್ಟ್‌ | ಬ್ಯಾಲೆಟ್‌ ಪೇಪರ್‌ ಮತದಾನ ಮರುಜಾರಿ ಕೋರಿದ್ದ ಅರ್ಜಿ ವಜಾ

ಆದರೆ ಫಲಿತಾಂಶಗಳನ್ನು ಪ್ರಶ್ನಿಸಿ ಕುಲದೀಪ್ ಅವರ ಪ್ರತಿಸ್ಪರ್ಧಿ ಮೋಹಿತ್ ಕುಮಾರ್ ಮೇಲ್ಮನವಿ ಸಲ್ಲಿಸಿದ್ದಾರೆ. ಏಪ್ರಿಲ್ 22ರಂದು ಚುನಾವಣಾ ನ್ಯಾಯಮಂಡಳಿಯು ಮತಗಟ್ಟೆ ಸಂಖ್ಯೆ 69 ರ ಮತಗಳ ಮರು ಎಣಿಕೆಗೆ ಆದೇಶಿಸಿತ್ತು. ಈ ಹಿನ್ನೆಲೆ ಮೇ 7ರಂದು ಮತಗಳ ಮರು ಎಣಿಕೆ ಮಾಡಲು ನಿರ್ದೆಶಿಸಲಾಗಿದೆ.

ಆದರೆ ಚುನಾವಣಾ ನ್ಯಾಯಮಂಡಳಿಯ ಈ ಆದೇಶವನ್ನು ಪಂಜಾಬ್ ಮತ್ತು ಹರಿಯಾಣ ಹೈಕೋರ್ಟ್ ರದ್ದುಗೊಳಿಸಿತು. ಅದಾದ ಬಳಿಕ ಮೋಹಿತ್ ಕುಮಾರ್ ಸುಪ್ರೀಂ ಕೋರ್ಟ್ ಮೆಟ್ಟಿಲೇರಿದ್ದಾರೆ. ಈ ಅರ್ಜಿ ವಿಚಾರಣೆ ನಡೆಸಿದ ಸುಪ್ರೀಂ ಕೋರ್ಟ್ ವಿಎಂಗಳು ಮತ್ತು ಇತರ ದಾಖಲೆಗಳನ್ನು ಹಾಜರುಪಡಿಸುವಂತೆ ನಿರ್ದೇಶಿಸಿತು. ಹಾಗೆಯೇ ಕೇವಲ ಒಂದು ಮತಗಟ್ಟೆಯ ಬದಲು ಎಲ್ಲಾ ಮತಗಟ್ಟೆಗಳ ಮತಗಳ ಮರು ಎಣಿಕೆಗೆ ಆದೇಶಿಸಿತು.

ಆದೇಶದ ಪ್ರಕಾರವಾಗಿ ಆಗಸ್ಟ್ 6ರಂದು ಪ್ರತಿನಿಧಿಗಳು ಮತ್ತು ಸಹಾಯಕ ವಕೀಲರ ಸಮ್ಮುಖದಲ್ಲಿ ಮರು ಎಣಿಕೆ ನಡೆದಿದೆ. 65ರಿಂದ 70 ಮತಗಟ್ಟೆಗಳನ್ನು ಮರುಎಣಿಕೆ ಮಾಡಲಾಗಿದ್ದು, ಮೇಲ್ಮನವಿದಾರ ಮೋಹಿತ್ ಕುಮಾರ್ 1,051 ಮತಗಳನ್ನು ಪಡೆದಿದ್ದಾರೆ ಮತ್ತು ಪ್ರತಿವಾದಿ ಕುಲದೀಪ್ ಸಿಂಗ್ 1,000 ಮತ ಪಡೆದಿದ್ದಾರೆ ಎಂಬುದು ಖಚಿತವಾಗಿದೆ. ಆ ಕುರಿತು ರಿಜಿಸ್ಟ್ರಾರ್ ಅವರು ನ್ಯಾಯಾಲಯಕ್ಕೆ ವರದಿಯನ್ನು ಸಲ್ಲಿಸಿದ್ದಾರೆ.

ಇದಾದ ಬಳಿಕ ನ್ಯಾಯಪೀಠವು ಪಂಜಾಬ್ ಮತ್ತು ಹರಿಯಾಣ ಹೈಕೋರ್ಟ್‌ನ ಆದೇಶವನ್ನು ರದ್ದುಗೊಳಿಸಿತು ಮತ್ತು ಮೋಹಿತ್ ಕುಮಾರ್ ಅವರು ಅಧ್ಯಕ್ಷರಾಗಿ ಆಯ್ಕೆಯಾಗಲು ಅರ್ಹರು ಎಂದು ಘೋಷಿಸಿತು.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ನ್ಯಾಯಾಂಗದ ಮೇಲೆ ಗೌರವವಿದೆ, ತಪ್ಪಾಗಿದ್ದರೆ ಕ್ಷಮೆಯಾಚಿಸುವೆ: ಸಂಜಯ್ ರಾವತ್

ಸುಪ್ರೀಂ ಕೋರ್ಟ್ ಕುರಿತು ತಾವು ನೀಡಿರುವ ಹೇಳಿಕೆಗಳು ಸೂಕ್ತವಲ್ಲ ಅಥವಾ ಅನುಚಿತ...

ವಿರಳಾತಿ ವಿರಳ ಪ್ರಕರಣ: ಮಾಲೆಗಾಂವ್ ಅಪ್ರಾಪ್ತೆಯ ಅತ್ಯಾಚಾರ, ಕೊಲೆ ಅಪರಾಧಿಗೆ ಮರಣದಂಡನೆ ಶಿಕ್ಷೆ

ಮಹಾರಾಷ್ಟ್ರದ ನಾಸಿಕ್ ಜಿಲ್ಲೆಯ ಮಾಲೆಗಾಂವ್ ತಾಲೂಕಿನ ಡೋಂಗರಾಳೆ ಗ್ರಾಮದಲ್ಲಿ ಸಾಡೇನಾಲ್ಕು ವರ್ಷದ...

ತಿರಂಗಾ ಮಾರ್ಚ್ ನಡೆಸದಂತೆ ಅಭಿಜೀತ್ ದೀಪ್ಕೆಗೆ ದೆಹಲಿ ಪೊಲೀಸರಿಂದ ನೋಟಿಸ್: ಮನೆಯ ಬಳಿ ಬಿಗಿ ಭದ್ರತೆ

ಕಾಕ್ರೋಚ್ ಜನತಾ ಪಾರ್ಟಿ (ಸಿಜೆಪಿ) ಸಂಸ್ಥಾಪಕ ಅಭಿಜೀತ್ ದೀಪ್ಕೆ ಅವರು ದೆಹಲಿಯ...

​ಪ್ರತಿಭಟನೆಗಳ ವರದಿಗಾರಿಕೆಗೆ ಭಾರತೀಯ ಪ್ರೆಸ್ ಕೌನ್ಸಿಲ್‌ನಿಂದ ನೂತನ ಮಾರ್ಗದರ್ಶಿ ಸೂತ್ರಗಳ ಬಿಡುಗಡೆ

ಪ್ರತಿಭಟನೆಗಳು ಮತ್ತು ಧರಣಿ ಸತ್ಯಾಗ್ರಹಗಳ ಸಂದರ್ಭದಲ್ಲಿ ಪತ್ರಕರ್ತರ ಸುರಕ್ಷತೆಯನ್ನು ಕಾಯ್ದುಕೊಳ್ಳಲು, ಜವಾಬ್ದಾರಿಯುತ...