ಮಾನಹಾನಿ ಪ್ರಕರಣ | ಮೇಧಾ ಪಾಟ್ಕರ್‌ಗೆ ವಿಧಿಸಿದ್ದ ಶಿಕ್ಷೆಯನ್ನು ಎತ್ತಿ ಹಿಡಿದ ಸುಪ್ರೀಂ ಕೋರ್ಟ್‌

Date:

Advertisements

ದೆಹಲಿ ಲೆಫ್ಟಿನೆಂಟ್ ಗವರ್ನರ್ ವಿ.ಕೆ. ಸಕ್ಸೇನಾ ಅವರು ಸಲ್ಲಿಸಿದ್ದ ಮಾನನಷ್ಟ ಮೊಕದ್ದಮೆಯಲ್ಲಿ ಸಾಮಾಜಿಕ ಕಾರ್ಯಕರ್ತೆ, ಹೋರಾಟಗಾರ್ತಿ ಮೇಧಾ ಪಾಟ್ಕರ್ ಅವರ ಶಿಕ್ಷೆಯನ್ನು ಸುಪ್ರೀಂ ಕೋರ್ಟ್ ಸೋಮವಾರ ಎತ್ತಿಹಿಡಿದಿದೆ. ಆದರೆ ಈ ಪ್ರಕರಣದಲ್ಲಿ ಮೇಧಾ ಪಾಟ್ಕರ್ ಅವರಿಗೆ ವಿಧಿಸಲಾದ 1 ಲಕ್ಷ ರೂ.ಗಳ ದಂಡವನ್ನು ರದ್ದುಗೊಳಿಸಿದೆ.

ಈ ವರ್ಷದ ಏಪ್ರಿಲ್ 23ರಂದು ಸುಮಾರು 24 ವರ್ಷ ಹಳೆಯ ಮಾನನಷ್ಟ ಪ್ರಕರಣದಲ್ಲಿ ಹೋರಾಟಗಾರ್ತಿ, ಸಾಮಾಜಿಕ ಕಾರ್ಯಕರ್ತೆ ಮೇಧಾ ಪಾಟ್ಕರ್‌ ಅವರನ್ನು ಬಂಧಿಸಲಾಗಿದೆ. 2010ರಲ್ಲಿ ದಾಖಲಾದ ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಮೇಧಾ ಪಾಟ್ಕರ್ ವಿರುದ್ಧ ದೆಹಲಿ ನ್ಯಾಯಾಲಯವು ಜಾಮೀನು ರಹಿತ ವಾರಂಟ್ ಹೊರಡಿಸಿದ ಬಳಿಕ ಬಂಧನ ಮಾಡಲಾಗಿತ್ತು.

ಇದನ್ನು ಓದಿದ್ದೀರಾ? BREAKING NEWS | 24 ವರ್ಷ ಹಳೆಯ ಮಾನನಷ್ಟ ಪ್ರಕರಣ: ಹೋರಾಟಗಾರ್ತಿ ಮೇಧಾ ಪಾಟ್ಕರ್‌ ಬಂಧನ

Advertisements

ಈ ಪ್ರಕರಣದಲ್ಲಿ ಮೇಧಾ ಅವರನ್ನು ದೋಷಿ ಎಂದು ದೆಹಲಿ ನ್ಯಾಯಾಲಯ ಕಳೆದ ವರ್ಷ ಮೇ ತಿಂಗಳಲ್ಲಿ ಹೇಳಿದೆ. ಅದಾದ ಬಳಿಕ ಶಿಕ್ಷೆ ಘೋಷಿಸಿದ ನ್ಯಾಯಾಲಯ, 5 ತಿಂಗಳ ಸರಳ ಜೈಲು ಶಿಕ್ಷೆ ವಿಧಿಸಿದೆ ಹಾಗೂ 10 ಲಕ್ಷ ರೂ ಮೊತ್ತವನ್ನು ಪಾವತಿಸುವಂತೆ ತಿಳಿಸಿದೆ.

ಬಳಿಕ ಮೇಧಾ ಅವರಿಗೆ ವಿಧಿಸಿದ್ದ ಶಿಕ್ಷೆ ಮಾರ್ಪಾಡುಗೊಳಿಸಿದ್ದು ಜೈಲು ಶಿಕ್ಷೆಯನ್ನು ತೆರವುಗೊಳಿಸಲಾಗಿದೆ. ಹಾಗೆಯೇ ದಂಡದ ಮೊತ್ತವನ್ನೂ ಕಡಿಮೆಗೊಳಿಸಲಾಗಿದೆ. ಈ ಆದೇಶವನ್ನು ಏಪ್ರಿಲ್ 8ರಂದು ನ್ಯಾಯಾಲಯ ಹೊರಡಿಸಿದೆ. ಇದೀಗ ದಂಡವನ್ನೂ ಕೈಬಿಡಲಾಗಿದೆ. ಆದರೆ ಜೈಲು ಶಿಕ್ಷೆ ಕೈಬಿಡಲಾಗಿಲ್ಲ.

ಈದಿನ 1
ಈ ದಿನ ಡೆಸ್ಕ್
+ posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಗುಜರಾತ್‌ನ ಗ್ರಾಮವೊಂದರಲ್ಲಿ ಕೊನೆಗೂ ದಲಿತರಿಗೆ ಕ್ಷೌರದಂಗಡಿಗೆ ಮುಕ್ತ ಪ್ರವೇಶ: ಶತಮಾನಗಳ ಅನಿಷ್ಟ ಪದ್ದತಿಗೆ ತೆರೆ

ಗುಜರಾತ್‌ನ ಜುನಾಗಡ್‌ ಜಿಲ್ಲೆಯಲ್ಲಿ ಗಡ್ಡ ಮೀಸೆ ಬೆಳೆಸಿದ್ದಕ್ಕೆ ದಲಿತ ಯುವಕರಿಬ್ಬರ ಜಾತಿ...

ರಾಜಸ್ಥಾನ | ರಸ್ತೆ ಅಪಘಾತ: ಮಹಿಳೆ ಸೇರಿ ನಾಲ್ವರು ಕಾರ್ಮಿಕರ ಸಾವು, ಐವರಿಗೆ ಗಾಯ

ಕಾರ್ಮಿಕರನ್ನು ಕರೆದೊಯ್ಯುತ್ತಿದ್ದ ವ್ಯಾನ್‌ಗೆ ವಾಹನವೊಂದು ಡಿಕ್ಕಿ ಹೊಡೆದು ಮಹಿಳೆ ಸೇರಿ ನಾಲ್ವರು...

2029ರ ಚುನಾವಣೆಯಲ್ಲಿ ರಾಹುಲ್ ಗಾಂಧಿ ಇಂಡಿಯಾ ಒಕ್ಕೂಟದ ಪ್ರಧಾನಿ ಅಭ್ಯರ್ಥಿ: ತೇಜಸ್ವಿ ಯಾದವ್

2029ರ ಲೋಕಸಭೆ ಚುನಾವಣೆಯಲ್ಲಿ ಸದ್ಯ ಲೋಕಸಭೆ ವಿಪಕ್ಷ ನಾಯಕರಾಗಿರುವ ರಾಹುಲ್ ಗಾಂಧಿ...

Download Eedina App Android / iOS

X