ಮರಳುಗಳ್ಳರ ವಿರುದ್ಧ ಸುಪ್ರೀಂ ಕಠಿಣ ಹೆಜ್ಜೆ; ಕಾನೂನು ಕ್ರಮ ಕೈಗೊಳ್ಳುವ ಅರಣ್ಯ ರಕ್ಷಕರಿಗೆ ಅಭಯ

Date:

ಚಂಬಲ್ ನದಿ ಪರಿಸರ ವ್ಯವಸ್ಥೆಯನ್ನು ಸಂಪೂರ್ಣವಾಗಿ ಧ್ವಂಸಗೊಳಿಸುತ್ತಿರುವ ಅಕ್ರಮ ಮರಳು ಗಣಿಗಾರಿಕೆ ಮಾಫಿಯಾದ ವಿರುದ್ಧ ಸದುದ್ದೇಶದಿಂದ ಕಠಿಣ ಕ್ರಮ ಕೈಗೊಳ್ಳುವ ಅರಣ್ಯ ರಕ್ಷಕರಿಗೆ ಕಾನೂನು ಕ್ರಮಗಳಿಂದ ವಿನಾಯಿತಿ ನೀಡುವುದನ್ನು ಗಂಭೀರವಾಗಿ ಪರಿಗಣಿಸುವಂತೆ ಸುಪ್ರೀಂ ಕೋರ್ಟ್ ಮಹತ್ವದ ನಿರ್ದೇಶನ ನೀಡಿದೆ. ಈ ಕುರಿತು ಉತ್ತರ ಪ್ರದೇಶ, ಮಧ್ಯಪ್ರದೇಶ ಹಾಗೂ ರಾಜಸ್ಥಾನ ಸರ್ಕಾರಗಳಿಗೆ ನ್ಯಾಯಾಲಯ ಸೂಚನೆ ರವಾನಿಸಿದೆ. ಸುಪ್ರೀಂ ಕೋರ್ಟ್‌ನ ಈ ಆದೇಶ ದೇಶಾದ್ಯಂತ ನಡೆಯುತ್ತಿರುವ ಮರಳುಗಳ್ಳರಿಗೆ ಚಾಟಿ ಬೀಸಿದಂತಾಗಿದೆ.

- Advertisement -

ಚಂಬಲ್ ನದಿ ಕಣಿವೆಯು ಅಳಿವಿನಂಚಿನಲ್ಲಿರುವ ಘರಿಯಾಲ್ (ಮೊಸಳೆ ಪ್ರಭೇದ), ಗಂಗಾ ನದಿ ಡಾಲ್ಫಿನ್ ಹಾಗೂ ಅಪರೂಪದ ಆಮೆಗಳನ್ನು ಒಳಗೊಂಡ ಅತ್ಯಂತ ಸೂಕ್ಷ್ಮ ಹಾಗೂ ವಿಶಿಷ್ಟ ಜೀವವೈವಿಧ್ಯ ತಾಣವಾಗಿದೆ. ಆದರೆ, ಇತ್ತೀಚಿನ ವರ್ಷಗಳಲ್ಲಿ ಈ ಮೂರೂ ರಾಜ್ಯಗಳ ವ್ಯಾಪ್ತಿಯಲ್ಲಿ ಎಗ್ಗಿಲ್ಲದೆ ನಡೆಯುತ್ತಿರುವ ಅಕ್ರಮ ಮರಳು ಗಣಿಗಾರಿಕೆಯಿಂದಾಗಿ ಈ ಪರಿಸರ ವ್ಯವಸ್ಥೆ ತೀವ್ರವಾಗಿ ಹದಗೆಡುತ್ತಿದೆ. ಈ ಪ್ರಭಾವಿ ಗಣಿಗಾರಿಕೆ ಮಾಫಿಯಾವನ್ನು ಹತ್ತಿಕ್ಕಲು ಅರಣ್ಯ ಇಲಾಖೆಯ ತಳಮಟ್ಟದ ಸಿಬ್ಬಂದಿ ಹಾಗೂ ಅರಣ್ಯ ರಕ್ಷಕರು ತಮ್ಮ ಪ್ರಾಣವನ್ನೇ ಪಣಕ್ಕಿಟ್ಟು ಕಾರ್ಯಾಚರಣೆ ನಡೆಸುತ್ತಿದ್ದಾರೆ. ಅನೇಕ ಬಾರಿ ಕರ್ತವ್ಯನಿರತ ಸಿಬ್ಬಂದಿಯ ಮೇಲೆ ಮಾರಣಾಂತಿಕ ಹಲ್ಲೆಗಳಾದ ಮತ್ತು ಅವರ ವಿರುದ್ಧವೇ ಪ್ರತೀಕಾರದ ಸುಳ್ಳು ಕ್ರಿಮಿನಲ್ ಪ್ರಕರಣಗಳನ್ನು ದಾಖಲಿಸಿ ಕಾನೂನು ಕುಣಿಕೆಗೆ ಸಿಲುಕಿಸುವ ನಿದರ್ಶನಗಳಿವೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಅಧಿಕೃತ ಕೆಲಸಕ್ಕೆ WHATSAPP ವೆಬ್ ಅಪಾಯಕಾರಿ ಏಕೆ? ಗೃಹ...

ಕಚೇರಿ, ಸಾರ್ವಜನಿಕ ಅಥವಾ ಹಲವರು ಹಂಚಿಕೊಂಡು ಬಳಸುವ ಕಂಪ್ಯೂಟರ್‌ಗಳಲ್ಲಿ WHATSAPP ವೆಬ್ ಬಳಸುವವರಿಗೆ ಕೇಂದ್ರ ಗೃಹ ಸಚಿವಾಲಯ ಮಹತ್ವದ ಭದ್ರತಾ ಎಚ್ಚರಿಕೆ ನೀಡಿದೆ. ಸಚಿವಾಲಯದ ಅಧೀನದ ಭಾರತೀಯ ಸೈಬರ್ ಅಪರಾಧ ಸಮನ್ವಯ ಕೇಂದ್ರದ...

ಆನೆ ಓಡಿಸಲು ಜೇನುನೊಣ ಸಾಕು! ಏನಿದು ತಂತ್ರ?

ದಕ್ಷಿಣ ಕನ್ನಡ ಜಿಲ್ಲೆಯ ಸುಳ್ಯದ ಕೃಷಿಕರು ಆನೆ ಹಾವಳಿ ತಡೆಗೆ ಸರಳ ಮತ್ತು ವಿನೂತನ ಪ್ರಯೋಗಕ್ಕೆ ಮುಂದಾಗಿದ್ದಾರೆ. ಆನೆ ಬರುವ ದಾರಿಯಲ್ಲಿ ಜೇನು ಪೆಟ್ಟಿಗೆಗಳನ್ನಿಟ್ಟು ಗಜಪಡೆಯನ್ನು ಹಿಮ್ಮೆಟ್ಟಿಸುವ ಮಾರ್ಗವಿದು. ಆನೆಗಳ ಸೊಂಡಿಲಿನ ಒಳಭಾಗ...

ವೈದ್ಯರಿಲ್ಲ, ಔಷಧವೂ ಇಲ್ಲ! ದಶಕ ಕಳೆದರೂ ಚೇತರಿಸದ ಗಜೇಂದ್ರಗಡ...

ಗಜೇಂದ್ರಗಡ ತಾಲೂಕು ಘೋಷಣೆಯಾಗಿ ದಶಕ ಕಳೆದರೂ ಇಂದಿಗೂ ಸಮುದಾಯ ಆರೋಗ್ಯ ಕೇಂದ್ರವನ್ನು ಮೇಲ್ದರ್ಜೆಗೆ ಏರಿಸಿಲ್ಲ. ವೈದ್ಯರ ಕೊರತೆ, ಅಗತ್ಯ ಔಷಧಿಗಳ ಕೊರತೆ, ಸಿಬ್ಬಂದಿಗಳ ಕೊರತೆ ಇರುವುದರಿಂದ, ಇಲ್ಲಿಗೆ ಬರುವ ರೋಗಿಗಳಿಗೆ ಸರಿಯಾದ ಚಿಕತ್ಸೆ,...

ಇದನ್ನು ಓದಿದ್ದೀರಾ? ಪೆಟ್ರೋಲ್‌ -ಡೀಸೆಲ್‌ ಎಥೆನಾಲ್ ಮಿಶ್ರಣ ಶೇ. 20ಕ್ಕೆ ಹೆಚ್ಚಳ; ಆರ್ಥಿಕ ಲಾಭವೋ, ಪರೋಕ್ಷ ನಷ್ಟವೋ?

ಈ ಗಂಭೀರ ವಿಷಯವನ್ನು ಆಲಿಸಿದ ಸುಪ್ರೀಂ ಕೋರ್ಟ್, ಕರ್ತವ್ಯನಿರತ ಅರಣ್ಯ ಸಿಬ್ಬಂದಿಗೆ ಆತ್ಮಸ್ಥೈರ್ಯ ತುಂಬುವ ಅಗತ್ಯವನ್ನು ಪ್ರತಿಪಾದಿಸಿದೆ. ಪರಿಸರ ನಾಶವನ್ನು ತಡೆಯುವ ನಿಟ್ಟಿನಲ್ಲಿ ಮರಳು ಮಾಫಿಯಾದಂತಹ ಪ್ರಭಾವಿ ಜಾಲಗಳ ವಿರುದ್ಧ ನಿರ್ಭೀತಿಯಿಂದ, ಪ್ರಾಮಾಣಿಕವಾಗಿ ಹಾಗೂ ಸದುದ್ದೇಶದಿಂದ ಕ್ರಮ ಜರುಗಿಸುವ ಅಧಿಕಾರಿಗಳಿಗೆ ಕಾನೂನಿನ ರಕ್ಷಣೆ ಅತ್ಯಗತ್ಯ ಎಂದು ಪೀಠ ಅಭಿಪ್ರಾಯಪಟ್ಟಿದೆ.

ಆದ್ದರಿಂದ, ಅಕ್ರಮ ಮರಳು ಗಣಿಗಾರಿಕೆ ವಿರುದ್ಧ ಕಾರ್ಯಾಚರಣೆ ನಡೆಸುವ ಅರಣ್ಯ ರಕ್ಷಕರು ಎದುರಿಸಬೇಕಾಗುವ ಆಧಾರರಹಿತ ಕಾನೂನು ಪ್ರಕ್ರಿಯೆಗಳಿಂದ ಅವರಿಗೆ ವಿನಾಯಿತಿ ಒದಗಿಸಲು, ಪ್ರಸ್ತುತ ಇರುವ ಕಾನೂನು ಚೌಕಟ್ಟಿನಲ್ಲಿ ಅಗತ್ಯ ಮಾರ್ಪಾಡುಗಳನ್ನು ತರುವ ಬಗ್ಗೆ ಅಥವಾ ವಿಶೇಷ ರಕ್ಷಣೆಯನ್ನು ಒದಗಿಸುವ ಸಾಧ್ಯತೆಗಳನ್ನು ಪರಿಶೀಲಿಸುವಂತೆ ಚಂಬಲ್ ನದಿ ಹರಿಯುವ ಉತ್ತರ ಪ್ರದೇಶ, ಮಧ್ಯಪ್ರದೇಶ, ಮತ್ತು ರಾಜಸ್ಥಾನ ಸರ್ಕಾರಗಳಿಗೆ ನ್ಯಾಯಪೀಠ ಕಟ್ಟುನಿಟ್ಟಿನ ನಿರ್ದೇಶನ ನೀಡಿದೆ. ಪರಿಸರ ಸಂರಕ್ಷಣೆ ಮತ್ತು ಕರ್ತವ್ಯನಿಷ್ಠ ಅಧಿಕಾರಿಗಳ ರಕ್ಷಣೆಯ ದೃಷ್ಟಿಯಿಂದ ಸುಪ್ರೀಂ ಕೋರ್ಟ್‌ನ ಈ ಸೂಚನೆಯು ಅತ್ಯಂತ ಮಹತ್ವದ ಹೆಜ್ಜೆಯಾಗಿದೆ.

eedina
ಈ ದಿನ ಡೆಸ್ಕ್‌
Website | + posts

<p><iframe src="https://www.youtube.com/embed/8qwx4L0lKFQ?autoplay=1&mute=1&loop=1&playlist=8qwx4L0lKFQ&controls=0&modestbranding=1&showinfo=0" width="560" height="315" frameborder="0" allowfullscreen="allowfullscreen"></iframe></p>

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಮಂಗಳೂರು | ವಾಣಿಜ್ಯ ಮಳಿಗೆಗಳಿಗೆ ರಾತ್ರಿ 11.45ರಿಂದ ಬೆಳಗ್ಗೆ 5.30ರವರೆಗೆ ನಿರ್ಬಂಧ!

ನಗರದಲ್ಲಿ ಕಾನೂನು ಸುವ್ಯವಸ್ಥೆ ಕಾಪಾಡುವುದು ಹಾಗೂ ತಡರಾತ್ರಿ ನಡೆಯುವ ಅಹಿತಕರ ಘಟನೆಗಳನ್ನು...

ಮಂಗಳೂರು | ಪ್ರತಿಭಟನಾಕಾರರ ಅಹವಾಲು ಆಲಿಸಲು ಸಚಿವರ ನಿಯೋಜನೆ: ಸಲೀಂ ಅಹ್ಮದ್

ಡಿಸೆಂಬರ್ 2ರಿಂದ 11ರವರೆಗೆ ಬೆಳಗಾವಿಯ ಸುವರ್ಣ ವಿಧಾನಸೌಧದಲ್ಲಿ ನಡೆಯಲಿರುವ ವಿಧಾನಮಂಡಲದ ಚಳಿಗಾಲದ...

ಅಧಿಕೃತ ಕೆಲಸಕ್ಕೆ WHATSAPP ವೆಬ್ ಅಪಾಯಕಾರಿ ಏಕೆ? ಗೃಹ ಸಚಿವಾಲಯದ ಎಚ್ಚರಿಕೆಯ ಹಿಂದಿನ ವಾಸ್ತವ

ಕಚೇರಿ, ಸಾರ್ವಜನಿಕ ಅಥವಾ ಹಲವರು ಹಂಚಿಕೊಂಡು ಬಳಸುವ ಕಂಪ್ಯೂಟರ್‌ಗಳಲ್ಲಿ WHATSAPP ವೆಬ್...