ಬಿಹಾರ ಮತದಾರರ ಪಟ್ಟಿ ಪರಿಷ್ಕರಣೆ: ಆ. 12ರಿಂದ ಅರ್ಜಿಗಳ ವಿಚಾರಣೆ ಕೈಗೆತ್ತಿಕೊಳ್ಳಲಿರುವ ಸುಪ್ರೀಂ

Date:

ಚುನಾವಣಾ ಆಯೋಗವು ಬಿಹಾರದಲ್ಲಿ ವಿಶೇಷ ತೀವ್ರ ಪರಿಷ್ಕರಣೆ(SIR) ನಡೆಸಿದ್ದು ಪ್ರಕ್ರಿಯೆ ಬಳಿಕ ಮತದಾರರ ಪಟ್ಟಿಯಿಂದ 65 ಲಕ್ಷ ಮತದಾರರನ್ನು ಹೊರಗಿಡಲಾಗುವುದು ಎಂದು ಹೇಳಿದೆ. ಈ ಕುರಿತು ಸಾರ್ವಜನಿಕವಾಗಿ ಆತಂಕ ವ್ಯಕ್ತವಾಗುತ್ತಿರುವ ಬಗ್ಗೆ ಪ್ರತಿಕ್ರಿಯಿಸಿದ ಸುಪ್ರೀಂ ಕೋರ್ಟ್, ಈ ವಿಷಯದಲ್ಲಿ ನ್ಯಾಯಾಲಯವು ಮಧ್ಯಪ್ರವೇಶಿಸುತ್ತದೆ ಎಂದು ಮಂಗಳವಾರ ಮೌಖಿಕವಾಗಿ ಹೇಳಿದೆ. ಹಾಗೆಯೇ ಆಗಸ್ಟ್ 12ರಿಂದ ಸಂಬಂಧಿತ ಅರ್ಜಿಗಳ ವಿಚಾರಣೆಯನ್ನು ಸುಪ್ರೀಂ ಕೋರ್ಟ್‌ ಕೈಗೆತ್ತಿಕೊಳ್ಳಲಿದೆ.

- Advertisement -

ನ್ಯಾಯಮೂರ್ತಿ ಸೂರ್ಯ ಕಾಂತ್ ಮತ್ತು ನ್ಯಾಯಮೂರ್ತಿ ಜೋಯ್‌ಮಲ್ಯ ಬಾಗ್ಚಿ ಅವರನ್ನೊಳಗೊಂಡ ಪೀಠವು ಬಿಹಾರ ಎಸ್‌ಐಆರ್ ಅನ್ನು ಪ್ರಶ್ನಿಸುವ ಅರ್ಜಿಗಳನ್ನು ಆಗಸ್ಟ್ 12 ಮತ್ತು 13ರಂದು ವಿಚಾರಣೆಗೆ ಲೀಸ್ಟ್ ಮಾಡಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಭದ್ರಾವತಿ | ಕಲುಷಿತ ಕುಡಿಯುವ ನೀರು ಸರಬರಾಜು; ರೋಗಭೀತಿಯಲ್ಲಿ...

ಭದ್ರಾವತಿ ತಾಲೂಕಿನ ಶಿವರಾಮನಗರ ಗ್ರಾಮದಲ್ಲಿ ನಗರಸಭೆ ಕಲುಷಿತ ಕುಡಿಯುವ ನೀರನ್ನು ಸರಬರಾಜು ಮಾಡುತ್ತಿರುವುದು ಗ್ರಾಮಸ್ಥರಲ್ಲಿ ತೀವ್ರ ಅಸಮಾಧಾನಕ್ಕೆ ಕಾರಣವಾಗಿದೆ. ಈ ವಿಷಯದಲ್ಲಿ ನಗರಸಭೆ ಆಡಳಿತ ಮತ್ತು ಆರೋಗ್ಯ ಇಲಾಖೆ ಕಣ್ಮುಚ್ಚಿ ಕುಳಿತಿರುವುದಾಗಿ ಸ್ಥಳೀಯರು...

15 ವರ್ಷಗಳಿಂದ ಪ್ಲಾಸ್ಟಿಕ್‌ ದೂರವಿಟ್ಟ ಗ್ರಾಮ; ನಮ್ಮೂರಿಗೂ ಇದು...

ಒಂದು ಗ್ರಾಮವೆಂದರೆ, ಇಂದಿಗೂ ಮಣ್ಣಿನ ರಸ್ತೆಗಳು, ಕಚ್ಚಾ ಮನೆಗಳು, ಹೊಲ-ಗದ್ದೆಗಳು ಮಾತ್ರ ನೆನಪಾಗುತ್ತವೆ. ಅಲ್ಲಿನ ಜನರ ಬದುಕಿನ ಶಿಸ್ತು, ಸಾರ್ವಜನಿಕ ಸ್ಥಳಗಳ ಮೇಲಿನ ಅವರ ಹೊಣೆಗಾರಿಕೆ ಮತ್ತು ಮುಂದಿನ ಪೀಳಿಗೆಯ ಬಗ್ಗೆ ಇರುವ...

ʼಹಿಂದೆ ಸರಿಯುವ ಮಾತೇ ಇಲ್ಲʼ; ದೆಹಲಿ ಬೀದಿಗಳಲ್ಲಿ ಅಬ್ಬರಿಸುತ್ತಿರುವ...

ಚುನಾವಣಾ ಆಯೋಗದ (ECI) ವಿಶೇಷ ತೀವ್ರ ಪರಿಷ್ಕರಣೆ (SIR) ವಿರುದ್ಧ ಮತ್ತು CEC ಗ್ಯಾನೇಶ್ ಕುಮಾರ್ ರಾಜೀನಾಮೆಗೆ ಆಗ್ರಹಿಸಿ INDIA ಬ್ಲಾಕ್ ಸಂಸತ್ ಸದಸ್ಯರು ದೆಹಲಿ ಬೀದಿಗಳಲ್ಲಿ ಬೃಹತ್‌ ಪ್ರತಿಭಟನೆ ನಡೆಸುತ್ತಿದ್ದಾರೆ. ಯುವಕರು...

ಇದನ್ನು ಓದಿದ್ದೀರಾ? ಬಿಹಾರ ಮತದಾರರ ಪಟ್ಟಿ ಪರಿಷ್ಕರಣೆ: 64 ಲಕ್ಷಕ್ಕೂ ಅಧಿಕ ಮತದಾರರ ಹೆಸರು ‘ಡಿಲೀಟ್’

ಇನ್ನು ಅಸೋಸಿಯೇಷನ್ ಫಾರ್ ಡೆಮಾಕ್ರಟಿಕ್ ರಿಫಾರ್ಮ್ಸ್ ಪರವಾಗಿ ಹಾಜರಾದ ವಕೀಲ ಪ್ರಶಾಂತ್ ಭೂಷಣ್, “ಎಸ್‌ಐಆರ್ ಪ್ರಕ್ರಿಯೆಯ ಸಮಯದಲ್ಲಿ 65 ಲಕ್ಷ ಜನರು ಗಣತಿ ನಮೂನೆಗಳನ್ನು ಸಲ್ಲಿಸಿಲ್ಲ. ಇಷ್ಟು ಜನರು ಮೃತಪಟ್ಟಿದ್ದಾರೆ ಅಥವಾ ಶಾಶ್ವತವಾಗಿ ಬೇರೆಡೆಗೆ ವಲಸೆ ಹೋಗಿದ್ದಾರೆ ಎಂದು ಚುನಾವಣಾ ಆಯೋಗ ಹೇಳಿಕೊಂಡಿದೆ. ಇವರುಗಳು ಪಟ್ಟಿಯಲ್ಲಿ ಸೇರ್ಪಡೆಗೊಳ್ಳಲು ಹೊಸದಾಗಿ ಅರ್ಜಿ ಸಲ್ಲಿಸಬೇಕಾಗುತ್ತದೆ” ಎಂದು ಪೀಠಕ್ಕೆ ತಿಳಿಸಿದರು.

ಭಾರತದ ಚುನಾವಣಾ ಆಯೋಗವು ಸಾಂವಿಧಾನಿಕ ಪ್ರಾಧಿಕಾರವಾಗಿರುವುದರಿಂದ, ಕಾನೂನಿಗೆ ಅನುಸಾರವಾಗಿ ಕಾರ್ಯನಿರ್ವಹಿಸುತ್ತದೆಯೇ ಎಂದು ಪರಿಗಣಿಸಲಾಗುವುದು. ಆದ್ದರಿಂದ ಈ ಸಂಬಂಧಿತ ಅರ್ಜಿಯನ್ನು ಆಲಿಸಲಾಗುವುದು. “ನಾವು ಇಲ್ಲಿದ್ದೇವೆ, ನಾವು ನಿಮ್ಮ ಮಾತನ್ನು ಆಲಿಸುತ್ತೇವೆ” ಎಂದು ನ್ಯಾಯಮೂರ್ತಿ ಸೂರ್ಯ ಕಾಂತ್ ಭರವಸೆ ನೀಡಿದರು.

“ಎಸ್‌ಐಆರ್‌ ಇಲ್ಲದಿದ್ದರೆ ಜನವರಿ 2025 ಪಟ್ಟಿಯು ಆರಂಭಿಕ ಹಂತ. ಕರಡು ಪಟ್ಟಿಯನ್ನು ಚುನಾವಣಾ ಆಯೋಗ ಪ್ರಕಟಿಸುತ್ತದೆ. ನಿಮ್ಮ ಆತಂಕವೆಂದರೆ 65 ಲಕ್ಷ ಮತದಾರರು ಪಟ್ಟಿಯಲ್ಲಿ ಕಾಣಿಸಿಕೊಳ್ಳುವುದಿಲ್ಲ ಎಂಬುದು. ಚುನಾವಣಾ ಆಯೋಗದವರು ತಿದ್ದುಪಡಿಯನ್ನು ಬಯಸುತ್ತಿದ್ದಾರೆ. ನಾವು ನ್ಯಾಯಾಂಗ ಪ್ರಾಧಿಕಾರವಾಗಿ ವಿಷಯವನ್ನು ಪರಿಶೀಲಿಸುತ್ತಿದ್ದೇವೆ. ಸಾಮೂಹಿಕ ಹೊರಗಿಡುವಿಕೆ ಇದ್ದರೆ, ನಾವು ತಕ್ಷಣ ಮಧ್ಯಪ್ರವೇಶಿಸುತ್ತೇವೆ. ಜೀವಂತವಾಗಿದ್ದಾರೆ ಆದರೆ ಅವರನ್ನು ಪಟ್ಟಿಯಿಂದ ಹೊರಗಿಡಲಾಗಿದೆ ಎಂಬ 15 ಜನರನ್ನು ಕೋರ್ಟ್‌ಗೆ ಕರೆತನ್ನಿ” ಎಂದು ಕೋರ್ಟ್ ಹೇಳಿದೆ.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಎಐ ದುರ್ಬಳಕೆ; ಅಶ್ಲೀಲ ವಿಡಿಯೋ, ಫೋಟೋ ವೈರಲ್: ದೆಹಲಿ ಹೈಕೋರ್ಟ್ ಮೆಟ್ಟಿಲೇರಿದ ಕಂಗನಾ

ಸಾಮಾಜಿಕ ಜಾಲತಾಣಗಳಲ್ಲಿ ಎಐ ತಂತ್ರಜ್ಞಾನ ಬಳಸಿ ರಚಿಸಲಾದ ಅಶ್ಲೀಲ ಮತ್ತು ನಕಲಿ...

ಬಡತನದ ಸರಪಳಿ ಮುರಿಯಲು ಸೀರೆಯಲ್ಲೇ ಓಟ: ಹೋಮ್ ಗಾರ್ಡ್ ಉದ್ಯೋಗಾಕಾಂಕ್ಷಿಯ ಸಾಹಸಕ್ಕೆ ಪ್ರಶಂಸೆ

ಹೋಮ್ ಗಾರ್ಡ್ (ಗೃಹ ರಕ್ಷಕ ಸಿಬ್ಬಂದಿ) ನೇಮಕಾತಿಯ ದೈಹಿಕ ದಾರ್ಢ್ಯ ಪರೀಕ್ಷೆಯ...

CEC ನೇಮಕ ಬಲು ದೊಡ್ಡ ತಲೆನೋವು ಎಂದಿದ್ದ ಸಂವಿಧಾನ ರಚನಾ ಸಭೆ; ಯಾಕೆ ಗೊತ್ತೇ?

ಚುನಾವಣಾ ಆಯುಕ್ತರ ನೇಮಕಾತಿ ಮತ್ತು ಸ್ವಾಯತ್ತತೆಯ ವಿವಾದ ಇಂದು ನಿನ್ನೆಯದಲ್ಲ. ಇದು...