ಏರ್ ಇಂಡಿಯಾ ದುರಂತ: ಶೀಘ್ರ ವಿಚಾರಣೆಗೆ ಸುಪ್ರೀಂ ಸಮ್ಮತಿ

Date:

ಕಳೆದ ವರ್ಷ ಅಹಮದಾಬಾದ್ ವಿಮಾನ ನಿಲ್ದಾಣದಲ್ಲಿ 241 ಜನರ ಸಾವಿಗೆ ಕಾರಣವಾದ ಏರ್ ಇಂಡಿಯಾ ಫ್ಲೈಟ್ 171ರ ದುರಂತದ ಕುರಿತು, ನ್ಯಾಯಾಂಗದ ಮೇಲ್ವಿಚಾರಣೆಯಲ್ಲಿ ತನಿಖೆ ನಡೆಸುವಂತೆ ಕೋರಿ ಸಲ್ಲಿಸಲಾದ ಅರ್ಜಿಗಳ ಶೀಘ್ರ ವಿಚಾರಣೆಗೆ ಸುಪ್ರೀಂ ಕೋರ್ಟ್ ಬುಧವಾರ ಒಪ್ಪಿಗೆ ಸೂಚಿಸಿದೆ.

- Advertisement -

​ಮುಖ್ಯ ನ್ಯಾಯಮೂರ್ತಿ ಸೂರ್ಯಕಾಂತ್‌ ಅವರ ನೇತೃತ್ವದ ಪೀಠದ ಮುಂದೆ ವಾದ ಮಂಡಿಸಿದ ಹಿರಿಯ ವಕೀಲರಾದ ಪ್ರಶಾಂತ್ ಭೂಷಣ್, ಕೇಂದ್ರ ಸರ್ಕಾರ ಹಾಗೂ ವಿಮಾನ ಅಪಘಾತ ತನಿಖಾ ದಳ (AAIB) ನೋಟಿಸ್‌ಗೆ ಯಾವುದೇ ಪ್ರತಿಕ್ರಿಯೆ ನೀಡಿಲ್ಲ ಎಂದು ದೂರಿದರು. “ಪೈಲಟ್‌ಗಳ ಪ್ರಕಾರ ಬೋಯಿಂಗ್ 787-8 ವಿಮಾನಗಳು ಎಲೆಕ್ಟ್ರಾನಿಕ್ ದೋಷ ಹೊಂದಿದ್ದು, ಅಸುರಕ್ಷಿತವಾಗಿವೆ. ಹೀಗಾಗಿ ಸತ್ಯಾಸತ್ಯತೆ ತಿಳಿಯಲು ‘ತನಿಖಾ ಸಮಿತಿ’ ನಡೆಸಲೇಬೇಕು,” ಎಂದು ಅವರು ಪ್ರತಿಪಾದಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಚುನಾವಣಾ ಆಯೋಗದ ಸಭೆ: ಪರಿಹಾರವಲ್ಲ, ತೇಪೆ ಹಚ್ಚುವ ಕಾರ್ಯಕ್ರಮ

ದೇಶದ ಇತಿಹಾಸದಲ್ಲೇ ಮೊದಲ ಬಾರಿಗೆ ಜನರು ಚುನಾವಣಾ ಆಯುಕ್ತರೊಬ್ಬರ ರಾಜೀನಾಮೆಗೆ ಒತ್ತಾಯಿಸುತ್ತಿರುವ ಕೂಗು ಕೇಳಿಬರುತ್ತಿದೆ. ದೇಶವ್ಯಾಪಿ ಪ್ರತಿಭಟನೆಗಳು ನಡೆಯುತ್ತಿವೆ. ಅವೈಜ್ಞಾನಿಕ SIR ವಿರೋಧಿಸಿ ದೇಶದಲ್ಲಿ ಕೂಗು ಇದ್ದೇಯಿದೆ. ‘ದಿ ಇಂಡಿಯನ್‌ ಎಕ್ಸ್‌ಪ್ರೆಸ್‌’ನ ರಿತಿಕಾ...

ಹೊರಟ್ಟಿ ಅವರ ಹೋರಾಟದ ಬದುಕು ಮತ್ತು ಅವರ ಭಕ್ತ...

ಗ್ಯಾರಂಟಿ ಯೋಜನೆಗಳಿಂದ ಕೂಲಿ ಕಾರ್ಮಿಕರು ಸಿಗುತ್ತಿಲ್ಲವೆಂಬ ಬಸವರಾಜ ಹೊರಟ್ಟಿ ಅವರ ಹೇಳಿಕೆ ಮತ್ತು ಅದಕ್ಕೆ ಸಿಕ್ಕ ಸಾರ್ವಜನಿಕ ಚಪ್ಪಾಳೆಗಳು, ಕೇವಲ ಹಸಿವನ್ನೇ ಶ್ರಮದ ಇಂಧನವನ್ನಾಗಿ ನೋಡುವ ಸಮಾಜದ ಕ್ರೂರ ಮನಸ್ಥಿತಿಯನ್ನು ಅನಾವರಣಗೊಳಿಸುತ್ತವೆ. ಬಸವರಾಜ ಹೊರಟ್ಟಿ...

History Repeats | ರೋಮ್‌ ಉರಿಯುತ್ತಿದ್ದಾಗ ಪಿಟೀಲು ನುಡಿಸಿದ...

ದೇಶದ ಪ್ರಜಾಪ್ರಭುತ್ವದ ಆಧಾರಸ್ತಂಭಗಳು ಒಂದೊಂದಾಗಿ ಕುಸಿಯುತ್ತಾ, ಚುನಾವಣಾ ವ್ಯವಸ್ಥೆಯೇ ಅಕ್ರಮ ಎಸಗುತ್ತಿರುವಾಗ, ನಿರುದ್ಯೋಗ-ಬೆಲೆ ಏರಿಕೆಯ ಭಾರದಿಂದ ಜನ ಹೈರಾಣಾಗಿರುವಾಗ ಭಾರತದ ಪ್ರಧಾನಿ ಭಜನೆ ಮಾಡುತ್ತಿದ್ದಾರೆ. ರೋಂ ಹೊತ್ತಿ ಉರಿಯುತ್ತಿದ್ದಾಗ ನೀರೋ ಪಿಟೀಲು...

ಇದನ್ನು ಓದಿದ್ದೀರಾ? ಈ ದಿನ ಸಂಪಾದಕೀಯ | ರಾಜ್ಯ ಪೊಲೀಸ್ ವ್ಯವಸ್ಥೆ ಕೆಡಲು ಕಾರಣರಾರು?

​ಅಪಘಾತದಲ್ಲಿ ಮೃತಪಟ್ಟ ಪೈಲಟ್ ಸುಮೀತ್ ಸಭರ್ವಾಲ್ ಅವರ ತಂದೆ ಪುಷ್ಕರ್ ರಾಜ್ (91) ಕೂಡ ನ್ಯಾಯಾಲಯದ ಮೊರೆ ಹೋಗಿದ್ದಾರೆ. ಇಂಧನ ಖಾಲಿ ಆಗಿದ್ದರಿಂದ ಅಪಘಾತ ಸಂಭವಿಸಿದೆ ಮತ್ತು ಇದರಲ್ಲಿ ಪೈಲಟ್ ದೋಷವಿದೆ ಎಂಬ ಮಾಧ್ಯಮ ವರದಿಗಳು ಸುಳ್ಳು ಎಂದು ಅವರು ವಾದಿಸಿದ್ದಾರೆ. ಕಪ್ಪು ಪೆಟ್ಟಿಗೆಯ ಮಾಹಿತಿಯ ನೆಪದಲ್ಲಿ ತಮ್ಮ ಮಗನ ಮೇಲೆ ಸುಖಾಸುಮ್ಮನೆ ಆರೋಪ ಹೊರಿಸಲಾಗುತ್ತಿದೆ ಎಂದು ಅವರು ಆಕ್ರೋಶ ವ್ಯಕ್ತಪಡಿಸಿದ್ದಾರೆ.

​ಆದರೆ, ಸರ್ಕಾರದ ಪರ ವಾದಿಸಿದ ಸಾಲಿಸಿಟರ್ ಜನರಲ್ ತುಷಾರ್ ಮೆಹ್ತಾ, “ತನಿಖೆಯು ಅಂತಾರಾಷ್ಟ್ರೀಯ ನಾಗರಿಕ ವಿಮಾನಯಾನ ಸಂಸ್ಥೆಯ (ICAO) ನಿಯಮಗಳಿಗೆ ಅನುಗುಣವಾಗಿಯೇ ನಡೆಯುತ್ತಿದೆ. ವಿದೇಶಿ ಪ್ರಜೆಗಳು ಮೃತಪಟ್ಟಿರುವ ಈ ಘಟನೆಯಲ್ಲಿ ಅಂತಾರಾಷ್ಟ್ರೀಯ ಮಾನದಂಡಗಳನ್ನು ಪಾಲಿಸುವುದು ಕಡ್ಡಾಯ” ಎಂದು ಸಮರ್ಥಿಸಿಕೊಂಡರು.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಕುಟುಂಬ ನ್ಯಾಯಾಲಯಗಳ ಮೇಲಿನ ಹೊರೆ ತಗ್ಗಿಸಲು ಮಧ್ಯಸ್ಥಿಕೆಗೆ ಆದ್ಯತೆ ನೀಡಿ: ಸುಪ್ರೀಂ ನ್ಯಾಯಮೂರ್ತಿ ನಾಗರತ್ನ

ದೇಶದ ಕೌಟುಂಬಿಕ ನ್ಯಾಯಾಲಯಗಳಲ್ಲಿ ದಿನದಿಂದ ದಿನಕ್ಕೆ ಹೆಚ್ಚುತ್ತಿರುವ ಪ್ರಕರಣಗಳ ಹೊರೆಯನ್ನು ಕಡಿಮೆ...

ಯುದ್ಧದ ಕರಾಳ ನೆರಳು: ರಷ್ಯಾ ಕನಸು ನಚ್ಚುನೂರಾಗಿ ಉಕ್ರೇನ್‌ನಲ್ಲಿ ಬಂಧಿಯಾದ ಭಾರತೀಯ ಯುವಕ!

ಉತ್ತಮ ಜೀವನ ರೂಪಿಸಿಕೊಳ್ಳಬೇಕು, ದೇಶ ವಿದೇಶ ಸುತ್ತಿ ಆರ್ಥಿಕವಾಗಿ ಕುಟುಂಬವನ್ನು ಬೆಂಬಲಿಸಬೇಕು...

ಮಮತಾ ಬ್ಯಾನರ್ಜಿ ರ‍್ಯಾಲಿಗೆ ತೆರಳುತ್ತಿದ್ದ TMC ಶಾಸಕನ ಕಾರಿಗೆ ಮೊಟ್ಟೆ, ಕಲ್ಲು ತೂರಾಟ

ಪಶ್ಚಿಮ ಬಂಗಾಳ ಮಾಜಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ನೇತೃತ್ವದ ಸಾರ್ವಜನಿಕ ಸಭೆಯಲ್ಲಿ...