ಗುರುದ್ವಾರ ಪ್ರವೇಶಿಸಲು ಸೇನಾ ಅಧಿಕಾರಿ ನಕಾರ; ವಜಾ ಆದೇಶ ಎತ್ತಿಹಿಡಿದ ಸುಪ್ರೀಂ ಕೋರ್ಟ್‌

Date:

ಗುರುದ್ವಾರಕ್ಕೆ ಪ್ರವೇಶಿಸಲು ನಿರಾಕರಿಸಿದ್ದಕ್ಕಾಗಿ ವಜಾಗೊಂಡಿದ್ದ ಕ್ರಿಶ್ಚಿಯನ್ ಸೇನಾ ಅಧಿಕಾರಿಯನ್ನು ಸುಪ್ರೀಂ ಕೋರ್ಟ್ ಮಂಗಳವಾರ ಟೀಕಿಸಿದೆ. ಸೇನೆಯು ಜಾತ್ಯತೀತ ಸಂಸ್ಥೆಯಾಗಿದೆ ಮತ್ತು ಅದರ ಶಿಸ್ತಿನಲ್ಲಿ ರಾಜಿ ಮಾಡಿಕೊಳ್ಳಲು ಸಾಧ್ಯವಿಲ್ಲ ಎಂದಿರುವ ನ್ಯಾಯಾಲಯವು, ‘ತನ್ನ ಸಹ (ಸಿಖ್) ಸೈನಿಕರ ನಂಬಿಕೆಯನ್ನು ಗೌರವಿಸಲು ವಿಫಲವಾದ ಕಾರಣ ಅವರನ್ನು ವಜಾಗೊಳಿಸಿರುವ ಸಶಸ್ತ್ರ ಪಡೆಗಳ ನಿರ್ಧಾರವು ಸರಿಯಾಗಿದೆ’ ಎಂದಿದೆ. ಅಧಿಕಾರಿಯ ವಜಾಗೊಳಿಸುವಿಕೆಯನ್ನು ಎತ್ತಿಹಿಡಿದಿದೆ.

- Advertisement -

ಈ ಹಿಂದೆ, 3ನೇ ​​ಕ್ಯಾವಲ್ರಿ ರೆಜಿಮೆಂಟ್‌ನಲ್ಲಿ ಲೆಫ್ಟಿನೆಂಟ್ ಆಗಿದ್ದ ಕಮಲೇಶನ್ ಅವರು ಗುರುದ್ವಾರ ಪ್ರವೇಶಿಸಲು ನಿರಾಕರಿಸಿದ್ದರು. ಅದಕ್ಕಾಗಿ, ಅವರನ್ನು ಸೇನೆಯಿಂದ ವಜಾಗೊಳಿಸಲಾಗಿತ್ತು. ‘ಗುರುದ್ವಾರ ಪ್ರವೇಶಿಸಲು ಒತ್ತಾಯಿಸುವುದು ತಮ್ಮ ಧಾರ್ಮಿಕ ಸ್ವಾತಂತ್ರ್ಯವನ್ನು ಉಲ್ಲಂಘಿಸುತ್ತದೆ’ ಎಂದು ವಾದಿಸಿದ್ದ ಸೇನಾ ಅಧಿಕಾರಿ, ತಮ್ಮ ವಜಾವನ್ನು ಪ್ರಶ್ನಿಸಿ ಸುಪ್ರೀಂ ಕೋರ್ಟ್‌ನಲ್ಲಿ ಅರ್ಜಿ ಸಲ್ಲಿಸಿದ್ದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಶಿವಮೊಗ್ಗ | ಜಿ.ಪಂ., ತಾ.ಪಂ. ಚುನಾವಣೆ: ಗ್ರಾಮೀಣ ರಾಜಕೀಯದಲ್ಲಿ...

ಶಿವಮೊಗ್ಗ ಜಿಲ್ಲೆಯ ಗ್ರಾಮೀಣ ಪ್ರದೇಶಗಳಲ್ಲಿ ಜಿಲ್ಲಾ ಪಂಚಾಯತಿ (ಜಿ.ಪಂ.) ಹಾಗೂ ತಾಲೂಕು ಪಂಚಾಯತಿ (ತಾ.ಪಂ.) ಚುನಾವಣೆಗಳ ಕುರಿತು ರಾಜಕೀಯ ಚರ್ಚೆಗಳು ಮತ್ತು ನಿರೀಕ್ಷೆಗಳು ಹೆಚ್ಚುತ್ತಿವೆ. ದೀರ್ಘಕಾಲದಿಂದ ಚುನಾಯಿತ ಪ್ರತಿನಿಧಿಗಳಿಲ್ಲದೆ ಆಡಳಿತ ನಡೆಯುತ್ತಿರುವ ಹಿನ್ನೆಲೆಯಲ್ಲಿ,...

ಇಂಟರ್ನೆಟ್‌ನಿಂದ AIವರೆಗೆ.. ದಶಕಗಳ ಹಿಂದೆಯೇ ಜಗತ್ತಿನ ಭವಿಷ್ಯ ಕಂಡಿದ್ದ...

ತಂತ್ರಜ್ಞಾನ ನಮ್ಮ ಕೈಸೇರುವ, ದೈನಂದಿನ ಬದುಕಿನ ಅವಿಭಾಜ್ಯ ಅಂಗವಾಗುವ ದಶಕಗಳ ಹಿಂದೆಯೇ, ಅಂದಿನ ಕಾಲದ ಕಲಾವಿದರು ತಮ್ಮ ಗೀತೆಗಳ ಸಾಲುಗಳ ಮೂಲಕ ಮುಂದಿನ ಜಗತ್ತು ಹೀಗೇ ಇದ್ದೀತೆಂದು ಖಚಿತವಾಗಿ ಹೇಳಿದ್ದರು. ಮಾನವಕುಲವು ಮುಂದೆ...

ಕೊಪ್ಪಳ | ದಸರಾ ಪುರಾಣ ಪ್ರವಚನಕ್ಕೆ ಮುಸ್ಲಿಂ ಕಲಾವಿದನ...

ಧರ್ಮಗಳು ಬೇರೆ ಬೇರೆಯಾದರೂ ಕಲೆ, ಸಂಸ್ಕೃತಿ ಮತ್ತು ಮಾನವೀಯತೆಯ ಮುಂದೆ ಧರ್ಮದ ಗಡಿಗಳು ಅಡ್ಡಿಯಾಗುವುದಿಲ್ಲ ಎಂಬುದಕ್ಕೆ ಕೊಪ್ಪಳ ತಾಲೂಕಿನ ಅಳವಂಡಿ ಗ್ರಾಮ ಸಾಕ್ಷಿ. ಇಲ್ಲಿನ ಕಂಪ್ಲಿಯಲ್ಲಿರುವ ಬನಶಂಕರಿ ದೇವಸ್ಥಾನದಲ್ಲಿ ನಡೆಯುವ ದಸರಾ ಪುರಾಣ...

ಅವರ ಅರ್ಜಿಯ ವಿಚಾರಣೆ ನಡೆಸಿರುವ ಹೊಸ ಮುಖ್ಯ ನ್ಯಾಯಮೂರ್ತಿ (ಸಿಜೆಐ) ಸೂರ್ಯ ಕಾಂತ್ ನೇತೃತ್ವದ ಪೀಠವು, ವಜಾ ಆದೇಶವನ್ನು ಎತ್ತಿ ಹಿಡಿದಿದೆ. “ಅವರು (ಸೇನಾ ಅಧಿಕಾರಿ) ಯಾವ ರೀತಿಯ ಸಂದೇಶ ನೀಡುತ್ತಿದ್ದಾರೆ? ಇದು ಸೇನಾ ಅಧಿಕಾರಿಯೊಬ್ಬರ ಅಸಭ್ಯತೆ ಮತ್ತು ಅಶಿಸ್ತಿನಿಂದ ಕೂಡಿದೆ. ಅವರನ್ನು ವಜಾಗೊಳಿಸಿರುವುದು ಸರಿಯಾಗಿದೆ. ಈ ರೀತಿಯ ಜಾತಿವಾದಿ ಮನಸ್ಥಿತಿ ಇರುವ ವ್ಯಕ್ತಿಗಳು ಮಿಲಿಟರಿಯಲ್ಲಿರಲು ಅರ್ಹರೇ? ಅವರ ನಡವಳಿಕೆಯು ಕಾನೂನುಬದ್ಧ ಆದೇಶದ ಉಲ್ಲಂಘನೆಗೆ ಸಮನಾಗಿದೆ” ಎಂದು ಹೇಳಿದೆ.

ಈ ಲೇಖನ ಓದಿದ್ದೀರಾ?: ಕಬ್ಬಿನ ನಂತರ ಮೆಕ್ಕೆಜೋಳ, ಬೀದಿಗೆ ಬಂದ ರೈತರ ಬದುಕು

“ಅವರು ಅತ್ಯುತ್ತಮ ಅಧಿಕಾರಿಯೇ ಆಗಿರಬಹುದು. ಆದರೆ, ಅವರು ಭಾರತೀಯ ಸೈನ್ಯದಲ್ಲಿರಲು ಸೂಕ್ತವಲ್ಲ. ಈ ಸಮಯದಲ್ಲಿ ನಮ್ಮ ಪಡೆಗಳು ಹೊಂದಿರುವ ಜವಾಬ್ದಾರಿಗಳ ಪ್ರಮಾಣ… ಇದು ನಾವು ನಿರ್ವಹಿಸಲು ಬಯಸುವುದಿಲ್ಲ ಎಂದು ತರಾಟೆಗೆ ತೆಗೆದುಕೊಂಡಿತು.

ಕಮಲೇಶನ್ ಅವರು ಪೂಜೆ ನಡೆಸುವಾಗ ದೇವಾಲಯದ ಗರ್ಭಗುಡಿ ಪ್ರವೇಶಿಸುವಂತೆ ಅವರ ಉನ್ನತ ಅಧಿಕಾರಿ ನೀಡಿದ್ದ ಆದೇಶವನ್ನು ನಿರಾಕರಿಸಿದ್ದರು. ಇದು ಅವರ ಏಕದೇವತಾವಾದಿ ಕ್ರಿಶ್ಚಿಯನ್ ನಂಬಿಕೆಯ ಮೇಲೆ ಪರಿಣಾಮ ಬೀರುತ್ತದೆ ಎಂದು ಅವರು ವಾದಿಸಿದ್ದರು.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

RSSಗೆ ಮಹಿಳೆಯರು ಎಂದರೆ ಪುರುಷರ ಸ್ವತ್ತು: ಸಂಘಪರಿವಾರದ ವಿರುದ್ಧ ರಾಹುಲ್ ಗಾಂಧಿ ವಾಗ್ದಾಳಿ

ರಾಷ್ಟ್ರೀಯ ಸ್ವಯಂಸೇವಕ ಸಂಘ (RSS) ಎಂದರೆ ಮಹಿಳಾ ವಿರೋಧಿ, ಸಂವಿಧಾನ ವಿರೋಧಿ...

ದೇವಾ: ಸಂಗೀತ ಲೋಕದ ‘ತೇನಿಸೈ ತೆಂಡ್ರಲ್’

ಅಪಾರ ಶ್ರಮ, ನಿರಂತರ ಅಧ್ಯಯನ ಹಾಗೂ ಸತತ ಪ್ರಯತ್ನಗಳಿಂದ ಸಂಗೀತ ಕ್ಷೇತ್ರಕ್ಕೆ...

SIR ವಿರೋಧಿ ಪ್ರತಿಭಟನಾಕಾರರ ವಿರುದ್ಧ ಕ್ರಮ; ಸರ್ಕಾರದ ಧೋರಣೆ ವಿರುದ್ಧ 20 ದೇಶಗಳಲ್ಲಿ ಪ್ರತಿಭಟನೆ

ಭಾರತದಲ್ಲಿ ಮತದಾರರ ಪಟ್ಟಿಯಿಂದ ಕೋಟ್ಯಂತರ ಜನರ ಹೆಸರುಗಳನ್ನು ಕೈಬಿಟ್ಟಿರುವುದು ಹಾಗೂ ಮುಖ್ಯ...

ದೆಹಲಿ ಏರ್‌ಪೋರ್ಟ್‌ನಲ್ಲಿ ಪಂಜಾಬ್ ಸಿಎಂ ಭಗವಂತ್ ಮಾನ್ 3 ಗಂಟೆ ವಶಕ್ಕೆ, 50 ಸಾವಿರ ರೂ.ದಂಡ!

ಪ್ಯಾರಿಸ್‌ನಿಂದ ಹಿಂದಿರುಗುತ್ತಿದ್ದ ಪಂಜಾಬ್ ಮುಖ್ಯಮಂತ್ರಿ ಭಗವಂತ್ ಮಾನ್ ಅವರನ್ನು ಭಾನುವಾರ ದೆಹಲಿ...