BREAKING NEWS | SIR ನಡೆಸುವ ಚುನಾವಣಾ ಆಯೋಗದ ಅಧಿಕಾರವನ್ನು ಎತ್ತಿಹಿಡಿದ ಸುಪ್ರೀಂ ಕೋರ್ಟ್

Date:

ಮತದಾರರ ಪಟ್ಟಿ ವಿಶೇಷ ತೀವ್ರ ಪರಿಷ್ಕರಣೆ (SIR) ನಡೆಸುವ ಚುನಾವಣಾ ಆಯೋಗದ ಅಧಿಕಾರವನ್ನು ಸುಪ್ರೀಂ ಕೋರ್ಟ್ ಬುಧವಾರ ಎತ್ತಿಹಿಡಿದಿದೆ. ಬಿಹಾರದಲ್ಲಿ ಮತದಾರರ ಪಟ್ಟಿಗಳ ವಿಶೇಷ ತೀವ್ರ ಪರಿಷ್ಕರಣೆಯನ್ನು ಪ್ರಶ್ನಿಸಿ ಸಲ್ಲಿಸಲಾದ ಅರ್ಜಿಗಳ ತೀರ್ಪನ್ನು ಇಂದು ಸುಪ್ರೀಂ ಕೋರ್ಟ್ ಪ್ರಕಟಿಸಿದೆ.

- Advertisement -

ಮುಖ್ಯ ನ್ಯಾಯಮೂರ್ತಿ ಸೂರ್ಯ ಕಾಂತ್ ನೇತೃತ್ವದ ಪೀಠವು ಜನವರಿ 19ರಂದು NGO ಅಸೋಸಿಯೇಷನ್ ​​ಫಾರ್ ಡೆಮಾಕ್ರಟಿಕ್ ರಿಫಾರ್ಮ್ಸ್ (ADR) ಸಲ್ಲಿಸಿದ ಅರ್ಜಿ ಸೇರಿದಂತೆ ಹಲವು ಅರ್ಜಿಗಳ ವಿಚಾರಣೆ ನಡೆಸಿ ತೀರ್ಪನ್ನು ಕಾಯ್ದಿರಿಸಿತ್ತು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ವಿಜಯಪುರ | ಹೆಚ್ಚುತ್ತಿರುವ ಬೀದಿ ನಾಯಿಗಳ ಹಾವಳಿ: 9...

ಬೀದಿ ನಾಯಿ ನಿಯಂತ್ರಣಕ್ಕೆ ನಗರಸಭೆ, ಪುರಸಭೆ, ಪಟ್ಟಣ ಪಂಚಾಯಿತಿ ಹಾಗೂ ಗ್ರಾಮ ಪಂಚಾಯಿತಿಗಳು ಪರಸ್ಪರ ಸಮನ್ವಯದಿಂದ ಕಾರ್ಯನಿರ್ವಹಿಸಿ, ಬೀದಿ ನಾಯಿಗಳ ಹಾವಳಿ ಹೆಚ್ಚಿರುವ ಪ್ರದೇಶಗಳನ್ನು ಗುರುತಿಸಿ ನಿಯಂತ್ರಣ ಕ್ರಮ ಕೈಗೊಳ್ಳಬೇಕು. ಶಾಲೆ, ಆಸ್ಪತ್ರೆ,...

ದಿವಾಳಿ ಕಂಪನಿಗಳ ಬಿಡ್‌ನಲ್ಲಿ ಅದಾನಿಯದ್ದೇ ಮೇಲುಗೈ; ಸಾಲಗಾರರಿಗೆ ₹97,700...

ಭಾರತದ ದಿವಾಳಿ ಹಂತದಲ್ಲಿದ್ದ ಕಂಪನಿಗಳ ಬಿಡ್‌ ಪ್ರಕ್ರಿಯೆಗಳಲ್ಲಿ ಅದಾನಿ ಗ್ರೂಪ್‌ನ ಅಸಾಧಾರಣ ಯಶಸ್ಸಿನ ಹಿಂದೆ ರಹಸ್ಯವೊಂದಿದೆ! ಪ್ರತಿ ಐದರಲ್ಲಿ ಮೂರು ಬಿಡ್‌ಗಳನ್ನು ಗೆದ್ದು, ದೇಶದ ಅತಿ ದೊಡ್ಡ ಕಾರ್ಪೊರೇಟ್ ಸ್ವಾಧೀನದಾರನಾಗಿ ಹೊರಹೊಮ್ಮಿರುವ ಅದಾನಿ...

ಇದು ಕೇವಲ ಒಂದು ಪಕ್ಷದ ಹೋರಾಟವಲ್ಲ, ವ್ಯವಸ್ಥೆಯ ಮೇಲಿನ...

ಜೆಪಿಯ ಟೀಕೆಗಳು ತೀಕ್ಷ್ಣವಾಗಿದ್ದರೂ, ಅದು ಅಹಿಂಸಾತ್ಮಕವಾಗಿದೆ. ಹೆದ್ದಾರಿ ತಡೆಗಳಿಲ್ಲ, ಬಲವಂತದ ಬಂದ್‌ಗಳಿಲ್ಲ. ವಾಸ್ತವವಾಗಿ, ಶಾಂತಿಯುತ ಸಭೆಗೆ ಜಾಗ ನೀಡದೆ ಸರ್ಕಾರವೇ ಅಡೆತಡೆಗಳನ್ನು ಸೃಷ್ಟಿಸುತ್ತಿದೆ. ಈ ಉದ್ದೇಶವನ್ನು ಬೆಂಬಲಿಸುವ ಜನರು ಹೆಚ್ಚಿನ ಸಂಖ್ಯೆಯಲ್ಲಿ ಬೀದಿಗೆ...

ಇದನ್ನು ಓದಿದ್ದೀರಾ? ಬಂಗಾಳದ ಮತುವಾಗಳು ಯಾರು?ಎಸ್‌ಐಆರ್‌ಗೆ ಇವರೇಕೆ ಬಲಿಪಶುಗಳು!

ಈ ಪ್ರಕ್ರಿಯೆಯು “ಮುಕ್ತ ಮತ್ತು ನ್ಯಾಯಯುತ ಚುನಾವಣೆಗಳಿಗೆ ಸಾಂವಿಧಾನಿಕ ಆದೇಶಕ್ಕೆ ಅನುಗುಣವಾಗಿದೆ. ಚುನಾವಣಾ ಆಯೋಗವು ಸಂವಿಧಾನದ ವಿಧಿ 324 ಮತ್ತು ಜನಪ್ರತಿನಿಧಿ ಕಾಯ್ದೆಯಡಿ ಇಂತಹ ವಿಶೇಷ ತೀವ್ರ ಪರಿಷ್ಕರಣೆ (SIR) ನಡೆಸಲು ಸಂಪೂರ್ಣ ಕಾನೂನಾತ್ಮಕ ಮತ್ತು ಶಾಸನಬದ್ಧ ಅಧಿಕಾರವನ್ನು ಹೊಂದಿದೆ” ಎಂದು ಸುಪ್ರೀಂ ಕೋರ್ಟ್ ಹೇಳಿದೆ.

“ಈ ವಿಶೇಷ ಪರಿಷ್ಕರಣೆಯು ಕೇವಲ ಒಂದು ಆಡಳಿತಾತ್ಮಕ ಪ್ರಕ್ರಿಯೆಯಲ್ಲ, ಬದಲಿಗೆ ಇದು ಮತದಾರರ ಪಟ್ಟಿಯನ್ನು ನಿಖರ ಹಾಗೂ ಒಳಗೊಳ್ಳುವಂತೆ ಮಾಡುವ ಮೂಲಕ ಸಂವಿಧಾನಕ್ಕೆ ಜೀವ ತುಂಬುವ ಕೆಲಸ ಮಾಡುತ್ತದೆ” ಎಂದೂ ಉನ್ನತ ನ್ಯಾಯಾಲಯ ಬಣ್ಣಿಸಿದೆ.

ಬಿಹಾರ, ಪಶ್ಚಿಮ ಬಂಗಾಳ ಮೊದಲಾದ ರಾಜ್ಯಗಳಲ್ಲಿ ಈಗಾಗಲೇ ಎಸ್‌ಐಆರ್ ನಡೆದು ಲಕ್ಷಾಂತರ ಮಂದಿ ತಮ್ಮ ಮತದಾನದ ಹಕ್ಕನ್ನು ಕಳೆದುಕೊಂಡಿದ್ದಾರೆ. ಈ ಚುನಾವಣೆಯ ವೇಳೆ ಮತ ಹಾಕಲು ಸಾಧ್ಯವಾಗದೆ ತಮಗೆ ಬೇಕಾದ ಸರ್ಕಾರವನ್ನು ಆಯ್ಕೆ ಮಾಡಿಕೊಳ್ಳುವುದರಿಂದ ವಂಚಿತರಾಗಿದ್ದಾರೆ.

ಈ ಎಸ್‌ಐಆರ್‌ನಿಂದಾಗಿಯೇ ಈ ಎರಡು ರಾಜ್ಯಗಳಲ್ಲಿ ಬಿಜೆಪಿ ಪ್ರಾಬಲ್ಯ ಸಾಧಿಸಿದೆ ಎಂದು ವಿಪಕ್ಷಗಳು, ತಜ್ಞರುಗಳು ನಿರಂತರವಾಗಿ ವಾದಿಸುತ್ತಿದ್ದಾರೆ. ಈ ನಡುವೆ ಸುಪ್ರೀಂ ಕೋರ್ಟ್ ಎಸ್‌ಐಆರ್ ಪ್ರಕ್ರಿಯೆಯನ್ನು ಎತ್ತಿಹಿಡಿದಿದೆ. ಇವೆಲ್ಲವುದರ ನಡುವೆ ದಾಖಲೆಗಳನ್ನು ಒದಗಿಸಲಾಗದೆ ತಮ್ಮ ಹಕ್ಕು ಕಳೆದುಕೊಂಡವರಲ್ಲಿ ಅಧಿಕವಾಗಿರುವವರು ದಲಿತರು, ಮಹಿಳೆಯರು ಮತ್ತು ಅಲ್ಪಸಂಖ್ಯಾತರು ಎಂಬುದನ್ನು ಮತ್ತೆ ನೆನಪಿಸಿಕೊಳ್ಳಬೇಕಾಗಿದೆ.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ವಿಜಯಪುರ | ಹೆಚ್ಚುತ್ತಿರುವ ಬೀದಿ ನಾಯಿಗಳ ಹಾವಳಿ: 9 ತಿಂಗಳಲ್ಲಿ 28,000 ನಾಯಿ ಕಡಿತ ಪ್ರಕರಣ!

ಬೀದಿ ನಾಯಿ ನಿಯಂತ್ರಣಕ್ಕೆ ನಗರಸಭೆ, ಪುರಸಭೆ, ಪಟ್ಟಣ ಪಂಚಾಯಿತಿ ಹಾಗೂ ಗ್ರಾಮ...

ಸಿಜೆಪಿ ಪ್ರತಿಭಟನೆ – ಹೆದರಿದ ಮೋದಿ: ಎಎಪಿ ನಾಯಕ ಕೇಜ್ರಿವಾಲ್ ಸೇರಿ ಹಲವರ ಬಂಧನ

ಮುಖ್ಯ ಚುನಾವಣಾ ಆಯುಕ್ತ ಗ್ಯಾನೇಶ್‌ ಕುಮಾರ್ ಅವರ ರಾಜೀನಾಮೆಗೆ ಆಗ್ರಹಿಸಿ ದೆಹಲಿಯಲ್ಲಿ...

ಇಎಸ್‌ಐ ಆಸ್ಪತ್ರೆ ಎಡವಟ್ಟು; ಇಲಿಗಳು ಮಹಿಳೆಯ ಶವ ಕಚ್ಚಿ ತಿಂದ ಆರೋಪ, ತನಿಖೆಗೆ ಸಮಿತಿ ರಚನೆ

ಪಶ್ಚಿಮ ಬಂಗಾಳದ ಕೋಲ್ಕತ್ತಾದ ಮಾಣಿಕ್ತಲದ ಇಎಸ್ಐ ಆಸ್ಪತ್ರೆಯೊಂದರಲ್ಲಿ ಮೃತಪಟ್ಟ ಮಹಿಳೆಯ ಮೃತದೇಹವನ್ನು...

ಕುಮಟಾ | ಹೆಗಲೆ ಗ್ರಾಮದಲ್ಲಿ ಮನೆ ಬೀಗ ಮುರಿದು ಚಿನ್ನಾಭರಣ, ನಗದು ಕಳವು

ಕುಮಟಾ ತಾಲೂಕಿನ ಹೆಗಲೆಯಲ್ಲಿರುವ ಶ್ರೀಪತಿ ವೆಂಕಟ್ರಮಣ ಆಚಾರಿ ಅವರ ಮನೆಯಲ್ಲಿ ಯಾರೂ...