‘ಅಗ್ನಿಪಥ್’ ಯೋಜನೆಯ ಸಿಂಧುತ್ವ ಎತ್ತಿಹಿಡಿದ ಸುಪ್ರೀಂ ಕೋರ್ಟ್‌

Date:

ಸ್ವೇಚ್ಛಾನುಸಾರ ಆರಂಭಿಸಿದ ಯೋಜನೆಯಲ್ಲ ಮತ್ತು ಸಾರ್ವಜನಿಕ ಹಿತಾಸಕ್ತಿ ಇತರ ಪರಿಗಣನೆಗಳಿಗಿಂತ ಹೆಚ್ಚಾಗಿರುತ್ತದೆ’ ಎಂದು ‘ಅಗ್ನಿಪಥ್’ ಯೋಜನೆಗೆ ಮಾನ್ಯತೆ ನೀಡಿದ ಸುಪ್ರೀಂ ಕೋರ್ಟ್‌

ವಿವಾದ ಸೃಷ್ಟಿಸಿದ್ದ ಕೇಂದ್ರ ಸರ್ಕಾರದ ಅಗ್ನಿಪಥ್ ಯೋಜನೆಯ ಸಿಂಧುತ್ವವನ್ನು ಸುಪ್ರೀಂಕೋರ್ಟ್ ಸೋಮವಾರ ಎತ್ತಿಹಿಡಿದಿದೆ.

ಎರಡು ಅರ್ಜಿಗಳನ್ನು ತಿರಸ್ಕರಿಸಿ ಯೋಜನೆಗೆ ಮಾನ್ಯತೆ ನೀಡಿದ ಸುಪ್ರೀಂ ಕೋರ್ಟ್‌, “ಇದು ಸ್ವೇಚ್ಛಾನುಸಾರ ಆರಂಭಿಸಿದ ಯೋಜನೆಯಲ್ಲ. ಸಾರ್ವಜನಿಕ ಹಿತಾಸಕ್ತಿ ಇತರ ಪರಿಗಣನೆಗಳಿಗಿಂತ ಹೆಚ್ಚಾಗಿರುತ್ತದೆ. ‘ಅಗ್ನಿಪಥ್’ ಯೋಜನೆಗೆ ಮೊದಲು ರಕ್ಷಣಾ ಇಲಾಖೆಯ ನೇಮಕಾತಿ ಪ್ರಕ್ರಿಯೆಯಲ್ಲಿ ಆಯ್ಕೆಯಾಗಿದ್ದ ಅಭ್ಯರ್ಥಿಗಳ ನೇಮಕಾತಿಯಲ್ಲಿ ಪಟ್ಟಭದ್ರ ಹಿತಾಸಕ್ತಿ ಹೊಂದಿರಲಿಲ್ಲ” ಎಂದು ಅಭಿಪ್ರಾಯಪಟ್ಟಿದೆ.

ಫೆಬ್ರವರಿಯಲ್ಲಿ ದೆಹಲಿ ಹೈಕೋರ್ಟ್ ಯೋಜನೆಯ ಮಾನ್ಯತೆಯನ್ನು ಎತ್ತಿಹಿಡಿದಿತ್ತು. ದೆಹಲಿ ಹೈಕೋರ್ಟ್ ತನ್ನ ತೀರ್ಪಿನಲ್ಲಿ, “ಅಗ್ನಿಪಥ್ ಯೋಜನೆಯನ್ನು ರಾಷ್ಟ್ರೀಯ ಹಿತಾಸಕ್ತಿಯಲ್ಲಿ ರೂಪಿಸಲಾಗಿದೆ. ರಕ್ಷಣಾ ಪಡೆಗಳು ಹೆಚ್ಚು ಸಿಬ್ಬಂದಿಯನ್ನು ಹೊಂದಿರುವಂತೆ ಯೋಜನೆ ರೂಪಿಸಲಾಗಿದೆ” ಎಂದು ಅಭಿಪ್ರಾಯಪಟ್ಟಿತ್ತು.

ನಂತರ ಗೋಪಾಲ ಕೃಷ್ಣನ್ ಮತ್ತು ವಕೀಲ ಎಂ ಎಲ್ ಶರ್ಮಾ ಹೈಕೋರ್ಟ್ ತೀರ್ಪಿನ ವಿರುದ್ಧ ಸುಪ್ರೀಂ ಕೋರ್ಟ್‌ಗೆ ಮೇಲ್ಮನವಿ ಸಲ್ಲಿಸಿದ್ದರು.

ಈ ಸುದ್ದಿ ಓದಿದ್ದೀರಾ?: ಪ್ರಧಾನಿ ಮೋದಿಯವರ ‘ಅರಣ್ಯಾಸಕ್ತಿ’; ಅರಣ್ಯ ಸಂರಕ್ಷಣಾ ಕಾಯ್ದೆಯ ತಿದ್ದುಪಡಿ ಮಸೂದೆ ಹೇಳುವುದೇನು?

 “ನಾವು ಹೈಕೋರ್ಟ್ ತೀರ್ಪಿನಲ್ಲಿ ಬದಲಾವಣೆ ತರಲು ಬಯಸುವುದಿಲ್ಲ. ಹೈಕೋರ್ಟ್ ತೀರ್ಪು ನೀಡುವ ಮೊದಲು ಈ ವಿಚಾರದ ಎಲ್ಲಾ ಅಂಶಗಳನ್ನೂ ಪರಿಗಣಿಸಿದೆ” ಎಂದು ಸುಪ್ರೀಂ ಕೋರ್ಟ್ ಹೇಳಿದೆ.

ಆದರೆ ಭಾರತೀಯ ವಾಯುಸೇನೆಯಲ್ಲಿ ಅಗ್ನಿಪಥ್ ಯೋಜನೆಯನ್ನು ಆರಂಭಿಸುವ ವಿರುದ್ಧ ಸಲ್ಲಿಕೆಯಾಗಿರುವ ಅರ್ಜಿಯನ್ನು ಸುಪ್ರೀಂಕೋರ್ಟ್‌ ಏಪ್ರಿಲ್ 17ಕ್ಕೆ ವಿಚಾರಣೆಗೆ ಮುಂದೂಡಿದೆ. ಈ ವಿಚಾರದಲ್ಲಿ ಕೇಂದ್ರ ಸರ್ಕಾರಕ್ಕೆ ಪ್ರತಿಕ್ರಿಯೆ ನೀಡುವಂತೆ ಸುಪ್ರೀಂಕೋರ್ಟ್ ಸೂಚಿಸಿದೆ.

ಈ ದಿನ ಡೆಸ್ಕ್‌
Website | + posts

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಹೆಚ್ಚು ಓದಿಸಿಕೊಂಡ ಲೇಖನಗಳು

ವಿಡಿಯೋ

ಸತ್ಯದ ಪಥಕ್ಕೆ ಬಲ ತುಂಬಲು ದೇಣಿಗೆ ನೀಡಿ. ನಿಮ್ಮಗಳ ಬೆಂಬಲವೇ ನಮಗೆ ಬಲ. ಈ ಕೆಳಗಿನ ಲಿಂಕ್ ಮೂಲಕ ದೇಣಿಗೆ ನೀಡಿ
Related

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಮಣಿಪುರ ಫೈಲ್ಸ್ ಲೇಖಕ ಪ್ರಣಬಾನಂದ ದಾಸ್ ವಿರುದ್ಧ ಎಫ್ಐಆರ್ ದಾಖಲು

ಈಶಾನ್ಯ ರಾಜ್ಯದಲ್ಲಿನ ಜನಾಂಗೀಯ ಹಿಂಸಾಚಾರವನ್ನು ಆಧರಿಸಿದ 'ಮಣಿಪುರ ಫೈಲ್ಸ್' ಕೃತಿಯ ಮೂಲಕ...

ಚಂದ್ರಬಾಬು ನಾಯ್ಡು ಜಾಮೀನು ಷರತ್ತು ಸಡಿಲಿಸಿದ ಸುಪ್ರೀಂ; ರ‍್ಯಾಲಿ, ಸಭೆಗಳಲ್ಲಿ ಭಾಗವಹಿಸಲು ಅನುಮತಿ

ಕೌಶಲ್ಯಾಭಿವೃದ್ಧಿ ಕಾರ್ಯಕ್ರಮ ಹಗರಣ ಪ್ರಕರಣದಲ್ಲಿ ಜಾಮೀನಿನ ಮೇಲೆ ಬಿಡುಗಡೆಯಾಗಿ ಷರತ್ತಾಗಿ ಸಾರ್ವಜನಿಕ...

ಗುಜರಾತ್ | ಹಿಂದೂ ದೇಶದಲ್ಲಿರಬೇಕಾದರೆ ಜೈ ಶ್ರೀರಾಮ್ ಎನ್ನಬೇಕು ಎಂದವನ ಬಂಧನ

ವ್ಯಕ್ತಿಯೊಬ್ಬ ಹಿಂದೂ ದೇಶದಲ್ಲಿರಬೇಕಾದರೆ ನೀನು ಜೈ ಶ್ರೀರಾಮ್ ಎನ್ನಬೇಕು ಎಂದ ವ್ಯಕ್ತಿಯೊಬ್ಬನನ್ನು...