ಸುಪ್ರೀಂ ಕೋರ್ಟ್‌ನ ಕ್ಷಮಿಸುವ ಗುಣದಿಂದ ದೇಶದಲ್ಲಿ ಅಪರಾಧ ಕೃತ್ಯ ಹೆಚ್ಚಳ: ಜಸ್ಟಿಸ್ ದೀಪಾಂಕರ್ ದತ್ತಾ

Date:

ಸುಪ್ರೀಂ ಕೋರ್ಟ್‌ನ ಕ್ಷಮಿಸುವ ಮತ್ತು ದಯೆ ತೋರುವ ಪ್ರವೃತ್ತಿಯಿಂದಾಗಿಯೇ ಇಂದು ದೇಶದಲ್ಲಿ ಅಪರಾಧಗಳ ಸಂಖ್ಯೆ ಹೆಚ್ಚುತ್ತಿದೆ ಎಂದು ಸುಪ್ರೀಂ ಕೋರ್ಟ್ ನ್ಯಾಯಮೂರ್ತಿ ದೀಪಾಂಕರ್ ದತ್ತಾ ಕಳವಳ ವ್ಯಕ್ತಪಡಿಸಿದ್ದಾರೆ. ಸಜಾ ಮಾಫಿ ಮತ್ತು ಮರಣದಂಡನೆ ಶಿಕ್ಷೆಯನ್ನು ಜೀವಾವಧಿ ಶಿಕ್ಷೆಯಾಗಿ ಪರಿವರ್ತಿಸುವ ಅರ್ಜಿ ವಿಚಾರಣೆ ವೇಳೆ ಅಭಿಪ್ರಾಯವನ್ನು ವ್ಯಕ್ತಪಡಿಸಿದ್ದಾರೆ.

- Advertisement -

ವಿಚಾರಣೆ ವೇಳೆ ಗಂಭೀರ ಅಪರಾಧ ಪ್ರಕರಣವೊಂದನ್ನು ಉಲ್ಲೇಖಿಸಿದ ಜಸ್ಟಿಸ್ ದತ್ತಾ, “ತಂದೆಯೊಬ್ಬ ತನ್ನ ಹಿರಿಯ ಮಗಳ ಮೇಲೆ ಅತ್ಯಾಚಾರ ಎಸಗಿ, ಅವಳನ್ನು ಕೊಲೆ ಮಾಡಿದ್ದ ಪ್ರಕರಣದಲ್ಲಿ ನ್ಯಾಯಾಲಯ ಮರಣದಂಡನೆಯನ್ನು ಜೀವಾವಧಿ ಶಿಕ್ಷೆಗೆ ಇಳಿಸಿತ್ತು. ಆ ವ್ಯಕ್ತಿ ಮುಂದೆ ಪೆರೋಲ್ ಮೇಲಿಂದ ಹೊರಬಂದು, ತನ್ನ ಕಿರಿಯ ಮಗಳ ಎದುರಲ್ಲೇ ಆಕೆಯ ತಾಯಿಯನ್ನೂ ಕೊಲೆ ಮಾಡಿದ. ಇಂತಹ ಕ್ರೂರ ಅಪರಾಧಗಳಲ್ಲೂ ಕ್ಷಮೆ ತೋರಿದರೆ ಸಮಾಜಕ್ಕೆ ಕಳುಹಿಸುವ ಸಂದೇಶವೇನು” ಎಂದು ಪ್ರಶ್ನಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಭಾರತಕ್ಕೆ ಬರದ ಬುಲೆಟ್ ಟ್ರೈನ್: ತಡವಾಗುತ್ತಿರುವುದು ಮೋದಿಯಿಂದಲೋ, ಜಪಾನ್‌ನವರಿಂದಲೋ?

ಮುಂಬೈ ಮತ್ತು ಅಹಮದಾಬಾದ್ ನಡುವಿನ 508 ಕಿ.ಮೀ ಉದ್ದದ ಈ ಮಾರ್ಗವು ಭಾರತೀಯ ರೈಲ್ವೆಯನ್ನು ಆಧುನೀಕರಿಸುವ ಯೋಜನೆಯ ಭಾಗವಾಗಿ ನರೇಂದ್ರ ಮೋದಿಯವರು ಘೋಷಿಸಿದ್ದರು. ಅದಾಗಿ ಹತ್ತು ವರ್ಷವಾದರೂ ಸುದ್ದಿಯೇ ಇಲ್ಲ. ಬುಲೆಟ್ ಟ್ರೈನ್...

ನೊಬೆಲ್‌ ಪ್ರಶಸ್ತಿ ಸರಣಿ | ರಸಾಯನವಿಜ್ಞಾನದ ʼಅಸಮಮಿತಿʼ (Chirality)ಯ...

ರಸಾಯನವಿಜ್ಞಾನದ ನೊಬೆಲ್ ಪ್ರಶಸ್ತಿಯನ್ನು ಈ ಬಾರಿ ಹೆನ್ರಿ ಕಗಾನ್‌ ಮತ್ತು ಕೆನ್ಸೊ ಸುಆಯ್‌ ಅವರಿಗೆ ನೀಡಲಾಗಿದೆ. ಅವರ ಸಂಶೋಧನೆಯ ಕೇಂದ್ರ ಬಿಂದು ರಸಾಯನವಿಜ್ಞಾನದಲ್ಲಿ ಶತಮಾನಗಟ್ಟಲೆ ಅತ್ಯಂತ ಕುತೂಹಲಕಾರಿ ಪ್ರಶ್ನೆಯಾಗಿದ್ದ- ಒಂದಕ್ಕೊಂದು ಕನ್ನಡಿಯ ಪ್ರತಿಬಿಂಬದಂತಿರುವ...

ಅನುದಾನ ಕೊರತೆ: ವಿದ್ಯಾರ್ಥಿಗಳಿಂದ ನಿರ್ವಹಣಾ ಶುಲ್ಕ ವಸೂಲಿ, ಶಿಕ್ಷಕರ...

ಹಾವೇರಿ ಜಿಲ್ಲೆಯಲ್ಲಿ ಸರಕಾರಿ ಶಾಲೆಗಳಿಗೆ ನಿರ್ವಹಣಾ ವೆಚ್ಚದ ಅನುದಾನ ಬಿಡುಗಡೆಯಾಗದ ಹಿನ್ನೆಲೆಯಲ್ಲಿ ಶಿಕ್ಷಕರು ನಿತ್ಯದ ಖರ್ಚು-ವೆಚ್ಚ ಸರಿದೂಗಿಸಲು ಪರದಾಡುವಂತಾಗಿದೆ. ಶಾಲೆ ನಡೆಸಲು ವಿದ್ಯಾರ್ಥಿಗಳಿಂದಲೇ ಹಣ ವಸೂಲಿ ಮಾಡುತ್ತಿರುವ ಆರೋಪ ಕೇಳಿಬಂದಿದ್ದು, ಪೋಷಕರಿಂದ ಮತ್ತು...

ಇದನ್ನೂ ಓದಿ: ಅಪರಾಧಿಯೆಂದು ಸಾರಿದರೂ, ಜೈಲು ಶಿಕ್ಷೆ ರದ್ದುಗೊಳಿಸಿದ್ದೇಕೆ ಸುಪ್ರೀಂ ಕೋರ್ಟ್‌?

ಅಲ್ಲದೆ, “ಸುಪ್ರೀಂ ಕೋರ್ಟ್‌ನ ಈ ಕ್ಷಮಿಸುವ ಪ್ರವೃತ್ತಿಗೆ ಎಲ್ಲಾದರೂ ಒಂದು ಕಡೆ ಕೊನೆ ಹಾಡಲೇಬೇಕಿದೆ. ಈ ರೀತಿಯ ಅಪರಿಮಿತ ಉದಾರತನದ ಕಾರಣದಿಂದಾಗಿಯೇ ದೇಶ ಇಂದು ಇಂತಹ ಗಂಭೀರ ಅಪರಾಧಗಳನ್ನು ಎದುರಿಸಬೇಕಾಗಿ ಬಂದಿದೆ” ಎಂದು ಜಸ್ಟಿಸ್ ದತ್ತಾ ಚಾಟಿ ಬೀಸಿದರು.

“ಒಂದು ಕಾಲದಲ್ಲಿ ಕೊಲೆ ಪ್ರಕರಣಗಳಲ್ಲಿ ಮಾತ್ರ ‘ವಿರಳಾತಿ ವಿರಳ’ (Rarest of Rare) ತತ್ವವನ್ನು ಅನ್ವಯಿಸಲಾಗುತ್ತಿತ್ತು. ಏಕೆಂದರೆ ಆಗ ಅಪರಾಧಗಳ ಸಂಖ್ಯೆ ಕಡಿಮೆಯಿತ್ತು. ಆದರೆ ಇಂದಿನ ಸನ್ನಿವೇಶ ಸಂಪೂರ್ಣ ಬದಲಾಗಿದ್ದು, ಅಪರಾಧ ತಡೆಯಲು ಶಿಕ್ಷೆಯ ವಿಚಾರದಲ್ಲಿ ಕಟ್ಟುನಿಟ್ಟಿನ ನಿಯಮ ಅನುಸರಿಸುವುದು ಅಗತ್ಯ” ಎಂದೂ ಅಭಿಪ್ರಾಯಪಟ್ಟಿದ್ದಾರೆ.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಮತ ಕಳೆದುಹೋದರೆ ಪ್ರಜಾಪ್ರಭುತ್ವ ಕಳೆದುಹೋಗುತ್ತದೆ: ಅಭಿಜೀತ್ ದೀಪ್ಕೆ

ದೇಶದಲ್ಲಿ ಮತದಾನದ ಹಕ್ಕು ಮತ್ತು ಪ್ರಜಾಪ್ರಭುತ್ವವನ್ನು ಉಳಿಸುವ ನಿಟ್ಟಿನಲ್ಲಿ ಜನರು ಎಚ್ಚೆತ್ತುಕೊಂಡು...

ಹಾಲಿನ ದರ ಏರಿಕೆ ಬೆನ್ನಲ್ಲೇ ಬಸ್ ಟಿಕೆಟ್ ದರ ಏರಿಕೆಗೆ ಮುಂದಾದ ರಾಜ್ಯ ಸರ್ಕಾರ!

ಕರ್ನಾಟಕದಲ್ಲಿ ದಿನಬಳಕೆಯ ಅಗತ್ಯ ವಸ್ತುಗಳ ಬೆಲೆ ಏರಿಕೆಯ ಬಿಸಿ ತಣ್ಣಗಾಗುವ ಮುನ್ನವೇ,...

ಈ ದಿನ ಸಂಪಾದಕೀಯ | ಪ್ರಬುದ್ಧತೆಯತ್ತ ರಾಹುಲ್, ಪಥಭ್ರಾಂತದತ್ತ ಮೋದಿ

ದೇಶದ ಇತ್ತೀಚಿನ ರಾಜಕೀಯ ಬೆಳವಣಿಗೆಗಳು, ಕಳೆಗಟ್ಟುತ್ತಿರುವ ಜೆನ್-ಝಿ ಹೋರಾಟ, ಕೇಂದ್ರ ಸರ್ಕಾರದ...

ಎಐ ದುರ್ಬಳಕೆ; ಅಶ್ಲೀಲ ವಿಡಿಯೋ, ಫೋಟೋ ವೈರಲ್: ದೆಹಲಿ ಹೈಕೋರ್ಟ್ ಮೆಟ್ಟಿಲೇರಿದ ಕಂಗನಾ

ಸಾಮಾಜಿಕ ಜಾಲತಾಣಗಳಲ್ಲಿ ಎಐ ತಂತ್ರಜ್ಞಾನ ಬಳಸಿ ರಚಿಸಲಾದ ಅಶ್ಲೀಲ ಮತ್ತು ನಕಲಿ...