ಚುನಾವಣಾ ಕರ್ತವ್ಯಕ್ಕೆ ಅರಣ್ಯ ಸಿಬ್ಬಂದಿ ಬಳಕೆ: ಕೇಂದ್ರ, ರಾಜ್ಯಕ್ಕೆ ಸುಪ್ರೀಂ ಕೋರ್ಟ್ ತರಾಟೆ

Date:

ಉತ್ತರಾಖಂಡದಲ್ಲಿ ನಿರಂತರವಾಗಿ ಉಂಟಾಗುತ್ತಿರುವ ಕಾಡ್ಗಿಚ್ಚಿನ ಬಗ್ಗೆ ಕೇಂದ್ರ ಹಾಗೂ ರಾಜ್ಯ ಸರ್ಕಾರವನ್ನು ಸುಪ್ರೀಂ ಕೋರ್ಟ್ ತರಾಟೆಗೆ ತೆಗೆದುಕೊಂಡಿತು.

ಕಳೆದ ವರ್ಷದ ನವೆಂಬರ್‌ನಿಂದ ಉತ್ತರಾಖಂಡ ರಾಜ್ಯದಲ್ಲಿ 1 ಸಾವಿರಕ್ಕೂ ಹೆಚ್ಚು ಅಗ್ನಿ ಅನಾಹುತ ಸಂಭವಿಸಿ 1100 ಹೆಕ್ಟೇರ್‌ ಅರಣ್ಯ ನಾಶದಿಂದ ಕೋಟ್ಯಂತರ ರೂ. ನಷ್ಟವಾಗಿರುವ ಬಗ್ಗೆ ದಿಗ್ಬ್ರಮೆ ವ್ಯಕ್ತಪಡಿಸಿದ ಸುಪ್ರೀಂ ಕೋರ್ಟ್ ಅನುದಾನ ಕೊರತೆ, ಕಾವಲುಗಾರರನ್ನು ಚುನಾವಣಾ ಕರ್ತವ್ಯಕ್ಕೆ ಬಳಕೆ ಮಾಡಿಕೊಂಡಿದ್ದಕ್ಕೆ ಆಕ್ರೋಶ ವ್ಯಕ್ತಪಡಿಸಿತು.

ಅಗ್ನಿ ಅನಾಹುತಗಳನ್ನು ತಡೆಯಲು ರಾಜ್ಯ ಸರ್ಕಾರಕ್ಕೆ ಅರಣ್ಯ ಇಲಾಖೆ 10 ಕೋಟಿ ರೂ.ಗೆ ಬೇಡಿಕೆಯಿಟ್ಟರೂ 3.15 ಕೋಟಿ ರೂ. ಮಾತ್ರ ಮಂಜೂರು ಮಾಡಿರುವ ರಾಜ್ಯ ಸರ್ಕಾರದ ವಿರುದ್ಧ ಆಕ್ರೋಶ ಹೊರ ಹಾಕಿತು. ಹಾಗೆಯೇ ಚುನಾವಣಾ ಜವಾಬ್ದಾರಿಗಳನ್ನು ಅರಣ್ಯ ಸಿಬ್ಬಂದಿಗಳಿಗೆ ನೀಡಿದ್ದಕ್ಕೂ ಕೇಂದ್ರ ಸರ್ಕಾರವನ್ನು ಸುಪ್ರೀಂ ಕೋರ್ಟ್ ತರಾಟೆಗೆ ತೆಗೆದುಕೊಂಡಿತು.

ಸುದ್ದಿ ನಿರಂತರವಾಗಿ ಉಚಿತವೇ ಆಗಿರುವುದು ಹೇಗೆ ಸಾಧ್ಯ? ಅದಕ್ಕೆ ನಿಮ್ಮ ಬೆಂಬಲವೂ ನಿರಂತರವಾಗಿ ಇದ್ದಾಗ ಮಾತ್ರ ಸಾಧ್ಯ. ಚಂದಾದಾರರಾಗಿ – ಆ ಮೂಲಕ ಸತ್ಯ, ನ್ಯಾಯ, ಪ್ರೀತಿ ಮೌಲ್ಯಗಳನ್ನು ಎಲ್ಲರಿಗೂ ಹರಡಲು ಜೊತೆಯಾಗಿ.

ಈ ಸುದ್ದಿ ಓದಿದ್ದೀರಾ? ಈ ದಿನ ಸಂಪಾದಕೀಯ | ದೇಶ ತನ್ನ ಹಳೆಯ ಲಯಕ್ಕೆ, ಪ್ರಜಾಪ್ರಭುತ್ವಕ್ಕೆ ಹಿಂದಿರುಗುತ್ತಿದೆಯೇ?

ಅಗ್ನಿ ಅನಾಹುತ ತಡೆಗೆ ಏಕೆ ಸಾಕಷ್ಟು ಅನುದಾನ ನೀಡಿಲ್ಲ? ಅರಣ್ಯ ಸಿಬ್ಬಂದಿಗಳನ್ನು ಏಕೆ ಚುನಾವಣಾ ಕೆಲಸಗಳಿಗೆ ಬಳಸಿಕೊಂಡಿದ್ದೀರಿ? ಎಂದು ನ್ಯಾಯಮೂರ್ತಿಗಳಾದ ಬಿ ಆರ್ ಗವಾಯಿ, ಎಸ್‌ವಿಎನ್‌ ಭಟ್ಟಿ ಹಾಗೂ ಸಂದೀಪ್‌ ಮೆಹ್ತಾ ಅವರ ಪೀಠವು ಸರ್ಕಾರಗಳನ್ನು ಪ್ರಶ್ನಿಸಿತು.

ಉತ್ತರಾಖಂಡ ರಾಜ್ಯದ ಐದು ಲೋಕಸಭಾ ಕ್ಷೇತ್ರಗಳಿಗೆ ಏ.19ರಂದು ಚುನಾವಣೆ ನಡೆದಿದೆ.

ಕಳೆದು ಕೆಲವು ತಿಂಗಳ ಹಿಂದೆ ಉತ್ತರಾಖಂಡ ಅರಣ್ಯದಲ್ಲಿ ಸಂಭವಿಸಿದ ಕಾಡ್ಗಿಚ್ಚಿನಿಂದ ಐವರು ಮೃತಪಟ್ಟು, ಸಾವಿರಕ್ಕೂ ಹೆಚ್ಚು ಹೆಕ್ಟೇರ್‌ ಕಾಡು ಬೆಂಕಿಗೆ ಆಹುತಿಯಾಗಿತ್ತು.

ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಹೆಚ್ಚು ಓದಿಸಿಕೊಂಡ ಲೇಖನಗಳು

ವಿಡಿಯೋ

ಸುದ್ದಿ ನಿರಂತರವಾಗಿ ಉಚಿತವೇ ಆಗಿರುವುದು ಹೇಗೆ ಸಾಧ್ಯ? ಅದಕ್ಕೆ ನಿಮ್ಮ ಬೆಂಬಲವೂ ನಿರಂತರವಾಗಿ ಇದ್ದಾಗ ಮಾತ್ರ ಸಾಧ್ಯ. ಚಂದಾದಾರರಾಗಿ – ಆ ಮೂಲಕ ಸತ್ಯ, ನ್ಯಾಯ, ಪ್ರೀತಿ ಮೌಲ್ಯಗಳನ್ನು ಎಲ್ಲರಿಗೂ ಹರಡಲು ಜೊತೆಯಾಗಿ.
Related

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಉತ್ತರ ಪ್ರದೇಶದಲ್ಲಿ ಅಪಘಾತ: 11 ಮಂದಿ ಸಾವು, 10 ಜನರಿಗೆ ಗಾಯ

ಉತ್ತರ ಪ್ರದೇಶ ಶಹಜಹಾನ್‌ಪುರದಲ್ಲಿ ಬಸ್‌ ಹಾಗೂ ಟ್ರಕ್ ನಡುವೆ  ಸಂಭವಿಸಿದ ಭೀಕರ...

ಬಾಂಗ್ಲಾದೇಶ ಸಂಸದನ ಹತ್ಯೆ ಪ್ರಕರಣ: ತನಿಖೆಗಾಗಿ ಢಾಕಾ ಪೊಲೀಸರ ತಂಡ ಕೋಲ್ಕತ್ತಾಗೆ ಭೇಟಿ

ಕೋಲ್ಕತ್ತಾದಲ್ಲಿ ಈ ವಾರದ ಆರಂಭದಲ್ಲಿ ನಡೆದ ಬಾಂಗ್ಲಾದೇಶದ ಸಂಸದ ಅನ್ವರುಲ್ ಅಜೀಮ್...

ಧ್ವನಿ ಬದಲಾಯಿಸುವ ಆ್ಯಪ್ ಬಳಸಿ 7 ಆದಿವಾಸಿ ವಿದ್ಯಾರ್ಥಿನಿಯರ ಮೇಲೆ ಅತ್ಯಾಚಾರ

30 ವರ್ಷದ ವ್ಯಕ್ತಿಯೊಬ್ಬ ಧ್ವನಿ ಬದಲಾವಣೆ ಮಾಡುವ ಆ್ಯಪ್ ಬಳಸಿ, ಶಿಕ್ಷಕಿಯಾಗಿ...

ಮೊದಲ ಬಾರಿಗೆ ಮತ ಚಲಾಯಿಸಿದ ಹಣಕಾಸು ಆಯೋಗದ ಮುಖ್ಯಸ್ಥ ಅರವಿಂದ್ ಪನಗಾರಿಯಾ

ಹದಿನಾರನೇ ಹಣಕಾಸು ಆಯೋಗದ ಅಧ್ಯಕ್ಷ, 71 ವರ್ಷ ವಯಸ್ಸಿನ ಅರವಿಂದ್ ಪನಗಾರಿಯಾ...