BREAKING NEWS | ಸೌಜನ್ಯ ಅತ್ಯಾಚಾರ-ಕೊಲೆ ಪ್ರಕರಣ: ರಾಜ್ಯ ಸರ್ಕಾರ, ಸಿಬಿಐಗೆ ಸುಪ್ರೀಂ ನೋಟಿಸ್‌

Date:

ದೇಶವನ್ನೇ ಬೆಚ್ಚಿ ಬೀಳಿಸಿದ್ದ ಧರ್ಮಸ್ಥಳದ ಸೌಜನ್ಯ ಅತ್ಯಾಚಾರ ಮತ್ತು ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಸುಪ್ರೀಂ ಕೋರ್ಟ್ ಇಂದು ರಾಜ್ಯ ಸರ್ಕಾರ ಮತ್ತು ಸಿಬಿಐಗೆ ನೋಟಿಸ್ ನೀಡಿದೆ.

- Advertisement -

ಈ ಪ್ರಕರಣದ ಮರು ತನಿಖೆ ನಡೆಸುವಂತೆ ಕೋರಿ ಸೌಜನ್ಯ ತಾಯಿ ಕುಸುಮಾವತಿ ಸುಪ್ರೀಂ ಕೋರ್ಟ್ ಮೆಟ್ಟಿಲೇರಿದ್ದರು. ಹೈಕೋರ್ಟ್ ಆದೇಶವನ್ನು ಪ್ರಶ್ನಿಸಿದ್ದರು. ಈ ಅರ್ಜಿ ವಿಚಾರಣೆ ನಡೆಸಿದ ಸುಪ್ರೀಂ ಕೋರ್ಟ್ ರಾಜ್ಯ ಸರ್ಕಾರ, ಸಿಬಿಐಗೆ ನೋಟಿಸ್ ಜಾರಿ ಮಾಡಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಕಲಬುರಗಿ | ‘ನಮ್ಮನ್ನ ಎಲ್ಲಿಗೆ ಕಳುಹಿಸುತ್ತೀರಿ?’: ತಗ್ಗಿನ ಬೇಲಿಯ...

92ಕ್ಕೂ ಅಧಿಕ ಸ್ಲಂ ಕುಟುಂಬಗಳ ಬದುಕು ಕೇವಲ ಜಮೀನಿನ ಹಕ್ಕಿನ ಪ್ರಶ್ನೆಯಲ್ಲ; ಅವರ ಸುರಕ್ಷಿತ ಓಡಾಟ, ಕುಡಿಯುವ ನೀರು ಹಾಗೂ ನಿತ್ಯದ ಬದುಕಿನ ಹಕ್ಕಿನ ಪ್ರಶ್ನೆಯೂ ಹೌದು. ನ್ಯಾಯಾಲಯದ ವಿಚಾರಣೆ ಅಂತಿಮಗೊಳ್ಳುವವರೆಗೆ ಯಾವುದೇ...

ಚುನಾವಣಾ ಆಯೋಗದ ಸಭೆ: ಪರಿಹಾರವಲ್ಲ, ತೇಪೆ ಹಚ್ಚುವ ಕಾರ್ಯಕ್ರಮ

ಅವೈಜ್ಞಾನಿಕ 'SIR' ಪ್ರಕ್ರಿಯೆ ಮತ್ತು ಆಯೋಗದೊಳಗಿನ ಭಿನ್ನಾಭಿಪ್ರಾಯಗಳು ಸಾರ್ವಜನಿಕವಾಗಿ ಬಯಲಾದ ಬೆನ್ನಲ್ಲೇ ಬಿಡುಗಡೆಯಾದ ಚುನಾವಣಾ ಆಯೋಗದ ಪತ್ರಿಕಾ ಪ್ರಕಟಣೆ, ತಪ್ಪುಗಳನ್ನು ತಿದ್ದುವ ಬದಲು ವ್ಯವಸ್ಥೆಯ ಲೋಪಗಳಿಗೆ ತೇಪೆ ಹಚ್ಚುವ ಯತ್ನದಂತೆ ಕಾಣುತ್ತಿದೆ. ದೇಶದ ಇತಿಹಾಸದಲ್ಲೇ...

ಹೊರಟ್ಟಿ ಅವರ ಹೋರಾಟದ ಬದುಕು ಮತ್ತು ಅವರ ಭಕ್ತ...

ಗ್ಯಾರಂಟಿ ಯೋಜನೆಗಳಿಂದ ಕೂಲಿ ಕಾರ್ಮಿಕರು ಸಿಗುತ್ತಿಲ್ಲವೆಂಬ ಬಸವರಾಜ ಹೊರಟ್ಟಿ ಅವರ ಹೇಳಿಕೆ ಮತ್ತು ಅದಕ್ಕೆ ಸಿಕ್ಕ ಸಾರ್ವಜನಿಕ ಚಪ್ಪಾಳೆಗಳು, ಕೇವಲ ಹಸಿವನ್ನೇ ಶ್ರಮದ ಇಂಧನವನ್ನಾಗಿ ನೋಡುವ ಸಮಾಜದ ಕ್ರೂರ ಮನಸ್ಥಿತಿಯನ್ನು ಅನಾವರಣಗೊಳಿಸುತ್ತವೆ. ಬಸವರಾಜ ಹೊರಟ್ಟಿ...

ಇದನ್ನು ಓದಿದ್ದೀರಾ? ಧರ್ಮಸ್ಥಳ | 74 ಅಸಹಜ ಸಾವು: ಸರ್ಕಾರಕ್ಕೆ ಹೈಕೋರ್ಟ್‌ ನೋಟಿಸ್

ಈ ಹಿಂದೆ ಹೈಕೋರ್ಟ್ ಈ ಪ್ರಕರಣಕ್ಕೆ ಸಂಬಂಧಿಸಿದಂತೆ ವೈದ್ಯಕೀಯ ಪುರಾವೆ ಇಲ್ಲ ಎಂದು ಹೇಳಿ ಮರು ತನಿಖೆಗೆ ಅದೇಶಿಸಲು ನಿರಾಕರಿಸಿತ್ತು. ಆದರೆ ಇದೀಗ ಸುಪ್ರೀಂ ಕೋರ್ಟ್‌ಗೆ ವೈದ್ಯಕೀಯ ಪುರಾವೆ ಸಲ್ಲಿಸಲಾಗಿದೆ ಎಂದು ಹೇಳಲಾಗಿದೆ.

2012ರ ಅಕ್ಟೋಬರ್ 9ರಂದು ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿ ತಾಲೂಕಿನ ಉಜಿರೆಯ ಧರ್ಮಸ್ಥಳದ ಬಳಿ 17 ವರ್ಷದ ಕಾಲೇಜು ವಿದ್ಯಾರ್ಥಿನಿ ಸೌಜನ್ಯಳನ್ನು ಅಪಹರಿಸಿ ಅತ್ಯಾಚಾರ ಮಾಡಲಾಗಿತ್ತು. ಮರುದಿನ ಆಕೆಯ ಮೃತದೇಹ ನೇತ್ರಾವತಿ ಸ್ನಾನಘಟ್ಟದ ಬಳಿಯ ಪೊದೆಯಲ್ಲಿ ಸಿಕ್ಕಿತ್ತು.

ದಕ್ಷಿಣ ಕನ್ನಡ ಜಿಲ್ಲೆ, ಕರ್ನಾಟಕ ರಾಜ್ಯ ಮಾತ್ರವಲ್ಲದೆ ದೇಶದ ಹಲವು ಭಾಗಗಳಲ್ಲಿ ತೀವ್ರ ಆಕ್ರೋಶ ವ್ಯಕ್ತವಾಗಿತ್ತು. ಈ ವೇಳೆಯೇ ಧರ್ಮಸ್ಥಳ ವ್ಯಾಪ್ತಿಯಲ್ಲಿ ನಡೆದಿರುವ ಹಲವು ಕೊಲೆ, ನಿಗೂಢ ಸಾವು, ನಾಪತ್ತೆ ಪ್ರಕರಣಗಳು ಮುನ್ನೆಲೆಗೆ ಬಂದಿತ್ತು.

ಸೌಜನ್ಯ ಪ್ರಕರಣವನ್ನು 2013ರಲ್ಲಿ ಸಿಬಿಐಗೆ ವರ್ಗಾಯಿಸಲಾಗಿತ್ತು. ನಂತರ 2015ರಲ್ಲಿ ಮಂಗಳೂರಿನಿಂದ ಬೆಂಗಳೂರಿನ ವಿಶೇಷ ಸಿಬಿಐ ನ್ಯಾಯಾಲಯಕ್ಕೆ ವರ್ಗಾಯಿಸಲಾಗಿತ್ತು. ಈ ನಡುವೆ ಪ್ರಕರಣದ ಸಾಕ್ಷಿಯಾಗಿದ್ದ ರವಿ ಪೂಜಾರಿ ಎಂಬುವವರು ನಿಗೂಢವಾಗಿ ಸಾವನ್ನಪ್ಪಿದ್ದರು. ಸೌಜನ್ಯ ಅತ್ಯಾಚಾರ ಕೊಲೆ ನಡೆದ ಎರಡು ದಿನದಲ್ಲೇ ಸಂತೋಷ್ ರಾವ್ ಎಂಬಾತನ ಬಂಧನ ಮಾಡಲಾಗಿತ್ತು. ಸುಮಾರು 11 ವರ್ಷಗಳ ಕಾಲ ಸಂತೋಷ್ ಜೈಲಿನಲ್ಲಿದ್ದರು.

ಆದರೆ ಪ್ರಕರಣದ ವಿಚಾರಣೆ ನಡೆಸಿದ ವಿಶೇಷ ನ್ಯಾಯಾಲಯದ ನ್ಯಾಯಾಧೀಶ ಸಿ.ಬಿ ಸಂತೋಷ್‌ ಅವರು 2023ರಲ್ಲಿ ಸಂತೋಷ ರಾವ್‌ ಪ್ರಕರಣದಲ್ಲಿ ನಿರ್ದೋಷಿ ಎಂದು ಘೋಷಿಸಿದ್ದರು. ಇವಿಷ್ಟು ನಡೆಯುತ್ತಿದ್ದಂತೆ ನಿಜಕ್ಕೂ ಈ ನೀಚ ಕೃತ್ಯವನ್ನು ಎಸಗಿದವರು ಯಾರು ಎಂಬ ಪ್ರಶ್ನೆ ಪ್ರಶ್ನೆಯಾಗಿಯೇ ಉಳಿದಿದೆ. ಸೌಜನ್ಯ ತಾಯಿ ನ್ಯಾಯಕ್ಕಾಗಿ ಕಾನೂನು ಹೋರಾಟ ಮುಂದುವರೆಸಿದ್ದಾರೆ.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಗ್ಯಾನೇಶ್ ಕುಮಾರ್ ರಾಜೀನಾಮೆ ನೀಡಲಿ: ಇಸಿಐ ವಿವರಣೆ ತಿರಸ್ಕರಿಸಿದ ಸಿಪಿಐಎಂ; ಸಿಇಸಿ ಪದಚ್ಯುತಿಗೆ ಆಗ್ರಹ

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಪ್ರಕ್ರಿಯೆಗೆ ಸಂಬಂಧಿಸಿದಂತೆ ಕೇಂದ್ರ...

ಮುದ್ದೇಬಿಹಾಳ | ದಾಸೋಹಿ ರೈತ ಉತ್ಪಾದಕ ಸಹಕಾರಿ ಸಂಘದ ಆರ್ಥಿಕ ಚಟುವಟಿಕೆ: ಗವಿಸಿದ್ದೇಶ್ವರ ಶ್ರೀಗಳಿಂದ ಚಾಲನೆ

ರೈತರೇ ಮಾಲೀಕರಾಗಿ, ರೈತರ ಆರ್ಥಿಕ ಸಬಲೀಕರಣವನ್ನೇ ಕೇಂದ್ರವಾಗಿಟ್ಟುಕೊಂಡು ಅಸ್ತಿತ್ವಕ್ಕೆ ಬಂದಿರುವ ದಾಸೋಹಿ...

ಸಮುದ್ರದಲ್ಲಿ ಅಲೆಗಳು ಭೋರ್ಗರೆಯುತ್ತಿರುವಾಗ ಈಜುವುದು ನನಗಿಷ್ಟ: ವೈರಲ್ ಆಯ್ತು ರಾಹುಲ್ ಗಾಂಧಿ ‘X’ ಪೋಸ್ಟ್

ಸಮುದ್ರದಲ್ಲಿ ಅಲೆಗಳು ಭೋರ್ಗರೆಯುತ್ತಿರುವಾಗ ಈಜುವುದು ನನಗಿಷ್ಟ ಎಂದು ಕಾಂಗ್ರೆಸ್ ನಾಯಕ ಹಾಗೂ...

ಗವಿಸಿದ್ದೇಶ್ವರ ಸ್ವಾಮೀಜಿ ದಸರಾ ಉದ್ಘಾಟನೆ ಆಹ್ವಾನ ತಿರಸ್ಕರಿಸಿದ್ದಾರೆಂಬ ಸುಳ್ಳುಸುದ್ದಿ: ತಪ್ಪಿತಸ್ಥನ ವಿರುದ್ಧ FIR

ಗವಿಮಠದ ಅಭಿನವ ಗವಿಸಿದ್ದೇಶ್ವರ ಸ್ವಾಮೀಜಿ ಮೈಸೂರು ದಸರಾ ಮಹೋತ್ಸವದ ಉದ್ಘಾಟನೆ ಆಹ್ವಾನವನ್ನು...