ಪವರ್ ಟಿವಿ ಪ್ರಸಾರ ಸ್ಥಗಿತ: ಹೈಕೋರ್ಟ್ ಆದೇಶಕ್ಕೆ ಸುಪ್ರೀಂ ತಡೆ

Date:

ಪರವಾನಗಿ ನವೀಕರಿಸದೆ ಸುದ್ದಿ ಪ್ರಸಾರ ಮಾಡಿದ ಆರೋಪದಲ್ಲಿ ಪವರ್ ಟಿವಿ ಚಾನೆಲ್‌ಗೆ ತನ್ನೆಲ್ಲಾ ಕಾರ್ಯಕ್ರಮಗಳ ಪ್ರಸಾರವನ್ನು ನಿಲ್ಲಿಸಲು ಕರ್ನಾಟಕ ಹೈಕೋರ್ಟ್ ನೀಡಿದ್ದ ಮಧ್ಯಂತರ ಆದೇಶಕ್ಕೆ ಸುಪ್ರೀಂ ಕೋರ್ಟ್ ಶುಕ್ರವಾರ ತಡೆಯಾಜ್ಞೆ ನೀಡಿದೆ.

- Advertisement -

ಕೇಂದ್ರ ವಲಯದ ಐಜಿ ಬಿಆರ್‌ ರವಿಕಾಂತೇಗೌಡ, ವಿಧಾನ ಪರಿಷತ್‌ ಮಾಜಿ ಸದಸ್ಯ ಎಚ್‌ಎಂ ರಮೇಶ್‌ ಗೌಡ ಸಲ್ಲಿಸಿದ್ದ ಅರ್ಜಿಗಳ ವಿಚಾರಣೆ ನಡೆಸಿದ ಹೈಕೋರ್ಟ್‌ನ ನ್ಯಾಯಮೂರ್ತಿ ಎಸ್‌ ಆರ್‌ ಕೃಷ್ಣಕುಮಾರ್ ಅವರನ್ನು ಒಳಗೊಂಡ ಏಕಸದಸ್ಯ ಪೀಠ ತನ್ನೆಲ್ಲಾ ಕಾರ್ಯಕ್ರಮಗಳ ಪ್ರಸಾರ ಸ್ಥಗಿತಗೊಳಿಸುವಂತೆ ಪವರ್ ಟಿವಿಗೆ ನಿರ್ದೇಶನ ನೀಡಿತ್ತು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಬ್ರಿಟಿಷ್ ಕಾಲದ ʼಗುಲಾಮಗಿರಿʼ ಕಾನೂನುಗಳೇ ಇಂದಿನ ಪೊಲೀಸ್‌ ವ್ಯವಸ್ಥೆಯ...

ಸ್ವಾತಂತ್ರ್ಯ ಬಂದು ದಶಕಗಳೇ ಕಳೆದಿದ್ದರೂ, ನಾವಿನ್ನೂ ಬ್ರಿಟಿಷರು ಭಾರತೀಯರನ್ನು ದಮನ ಮಾಡಲು ರೂಪಿಸಿದ 1861ರ ಪೊಲೀಸ್ ಕಾಯಿದೆಯ ನೆರಳಿನಲ್ಲೇ ಬದುಕುತ್ತಿದ್ದೇವೆಯೇ? ಖಾಕಿ ಪಡೆಯನ್ನು 'ಪ್ರಜೆಗಳ ರಕ್ಷಕ'ನಾಗಿಸಬೇಕಿದ್ದ ವ್ಯವಸ್ಥೆ, ಇಂದಿಗೂ ರಾಜಕಾರಣಿಗಳ ಕೈಗೊಂಬೆಯಾಗಿ ಉಳಿದುಕೊಳ್ಳಲು...

ಯಾರು ಹಿತವರು ಈ ಇಬ್ಬರೊಳಗೆ? ನೇಹಾ ಬೋರಾ ಅಭಿಜಿತ್...

“ಹೋಲಿಕೆ ಬೇಡ, ಒಗ್ಗಟ್ಟು ಬೇಕು. ನಾವೆಲ್ಲರೂ ಒಟ್ಟಾಗಿ ಚುನಾವಣಾ ಆಯೋಗದ ಅಕ್ರಮಗಳ ವಿರುದ್ಧ ಹೋರಾಡಬೇಕು” ಎಂದು ನೇಹಾ ಬರೆದರೆ, ಅದಕ್ಕೆ ಅಭಿಜೀತ್ ಉತ್ತರ- “ಇಂಕ್ವಿಲಾಬ್ ಜಿಂದಾಬಾದ್” ನೇಹಾ ಬೋರಾ ಮತ್ತು ಅಭಿಜಿತ್ ದೀಪ್ಕೆ ನಡುವೆ...

ಸ್ವತಂತ್ರ ಸಾಂವಿಧಾನಿಕ ಸಂಸ್ಥೆಗಳ ಮೇಲಿನ ನಂಬಿಕೆಯನ್ನು ಕಸಿದುಕೊಳ್ಳುತ್ತಿರುವ ಚುನಾವಣಾ...

ನ್ಯಾಯಾಲಯ ಮತ್ತು ಚುನಾವಣಾ ಆಯೋಗಗಳ 'ಸ್ವತಂತ್ರತೆ' ಎಂಬ ಮುಖವಾಡವೇ ಈಗ ಸರ್ಕಾರಕ್ಕೆ ರಕ್ಷಣಾ ಕವಚವಾಗಿ ಕೆಲಸ ಮಾಡುತ್ತಿದೆ. ಹೀಗಾಗಿ ಇವತ್ತು ವಿರೋಧ ಪಕ್ಷಗಳ ಆಕ್ರೋಶವೆಲ್ಲವೂ ಸಾಂವಿಧಾನಿಕ ಸಂಸ್ಥೆಗಳ ಕಡೆಗೆ ತಿರುಗಿದೆ. ಸರ್ಕಾರ ತೀರಾ...

ಪವರ್‌ ಟಿವಿ ತನ್ನ ಚಾನೆಲ್‌ಗೆ ಪರವಾನಗಿ ನವೀಕರಿಸದ ಹಿನ್ನೆಲೆಯಲ್ಲಿ ಎಲ್ಲ ಕಾರ್ಯಕ್ರಮ ಸ್ಥಗಿತಗೊಳಿಸಲು ಆದೇಶಿಸಲಾಗಿತ್ತು.

ಇದಾದ ಬಳಿಕ ಹೈಕೋರ್ಟ್ ಆದೇಶವನ್ನು ಪ್ರಶ್ನಿಸಿ ಮೆಸರ್ಸ್‌ ಪವರ್ ಸ್ಮಾರ್ಟ್‌ ಮೀಡಿಯಾ ಪ್ರೈವೇಟ್ ಲಿಮಿಟೆಡ್ ಕಂಪನಿ ನಿರ್ದೇಶಕ ಬೆಂಗಳೂರಿನ ದಬ್ಬೇಗಟ್ಟ ಮಧು ಲಕ್ಷ್ಮಣ, ಮೆಸರ್ಸ್‌ ಮಿಟ್ಕಾನ್ ಇನ್ಫ್ರಾಪ್ರಾಜೆಕ್ಟ್ಸ್ ಪ್ರೈವೇಟ್ ಲಿಮಿಟೆಡ್ ಕಂಪನಿ ನಿರ್ದೇಶಕ ಮುಂಬೈನ ಶ್ರೀಕಾಂತ್ ಮಿಥೇಶ್ ಬಾಂಗ್ಡಿಯಾ ಮತ್ತು ಪವರ್ ಸ್ಮಾರ್ಟ್‌ ಮೀಡಿಯಾದ ಬೆಂಗಳೂರಿನ ಹೆಚ್ಚುವರಿ ನಿರ್ದೇಶಕ ರಾಕೇಶ್ ಸಂಜೀವ ಶೆಟ್ಟಿ ಅಲಿಯಾಸ್ ರಾಕೇಶ್ ಶೆಟ್ಟಿ ಮೇಲ್ಮನವಿ ಸಲ್ಲಿಸಿದ್ದರು.

ಇದನ್ನು ಓದಿದ್ದೀರಾ?  ತಕ್ಷಣದಿಂದ ಪವರ್ ಟಿವಿ ಪ್ರಸಾರ ಸ್ಥಗಿತಗೊಳಿಸಲು ಹೈಕೋರ್ಟ್ ಆದೇಶ

ಈ ಮೇಲ್ಮನವಿಯ ವಿಚಾರಣೆ ನಡೆಸಿದ ಕರ್ನಾಟಕ ಹೈಕೋರ್ಟ್‌ನ ವಿಭಾಗೀಯ ನ್ಯಾಯಪೀಠ ಮಧ್ಯಂತರ ನಿರ್ದೇಶನ ತೆರವಿಗೆ ನಿರಾಕರಿಸಿತ್ತು. ಜೊತೆಗೆ “ಪರವಾನಗಿ ನವೀಕರಣಕ್ಕೆ ಸಂಬಂಧಿಸಿದಂತೆ ಸಕ್ಷಮ ಪ್ರಾಧಿಕಾರವು ಮೇಲ್ಮನವಿದಾರರ ಅಹವಾಲನ್ನು ಆಲಿಸಿ ಆರು ವಾರಗಳಲ್ಲಿ ಇತ್ಯರ್ಥಗೊಳಿಸಿಕೊಳ್ಳಬೇಕು” ಎಂದು ನ್ಯಾಯಪೀಠ ಗಡುವು ನೀಡಿದೆ.

ಈ ಆದೇಶವನ್ನು ಪ್ರಶ್ನಿಸಿ ಈಗ ಮೆಸರ್ಸ್‌ ಪವರ್ ಸ್ಮಾರ್ಟ್‌ ಮೀಡಿಯಾ ಪ್ರೈವೇಟ್ ಲಿಮಿಟೆಡ್ ಕಂಪನಿ ಸುಪ್ರೀಂ ಕೋರ್ಟ್ ಕದ ತಟ್ಟಿದೆ. ಈ ಪ್ರಕರಣವನ್ನು ಆಲಿಸಿದ ಸುಪ್ರೀಂ ಕೋರ್ಟ್ ಪೀಠವು ಹೈಕೋರ್ಟ್‌ನ ಮಧ್ಯಂತರ ಆದೇಶಕ್ಕೆ ತಡೆ ನೀಡಿದೆ. ಹಾಗೆಯೇ ಇದು ‘ಸಂಪೂರ್ಣ ರಾಜಕೀಯ ದ್ವೇಷವಲ್ಲದೆ ಬೇರೇನೂ ಅಲ್ಲ’ ಎಂದಿದೆ.

ಇದನ್ನು ಓದಿದ್ದೀರಾ?  ಪವರ್ ಟಿವಿ ಪ್ರಸಾರ ಸ್ಥಗಿತ 6 ವಾರ ಮುಂದುವರಿಕೆ: ಹೈಕೋರ್ಟ್ ವಿಭಾಗೀಯ ಪೀಠ ತೀರ್ಪು

ಮುಖ್ಯ ನ್ಯಾಯಮೂರ್ತಿ ಡಿ ವೈ ಚಂದ್ರಚೂಡ ಮತ್ತು ನ್ಯಾಯಮೂರ್ತಿಗಳಾದ ಜೆಬಿ ಪಾರ್ದಿವಾಲಾ ಮತ್ತು ಮನೋಜ್ ಮಿಶ್ರಾ ಅವರ ಪೀಠವು “ನಾವು ವಾಕ್ ಮತ್ತು ಅಭಿವ್ಯಕ್ತಿ ಸ್ವಾತಂತ್ರ್ಯ ರಕ್ಷಣೆಗೆ ಆದ್ಯತೆ ನೀಡುತ್ತೇವೆ. ಇದು ರಾಜಕೀಯ ದ್ವೇಷದ ಸರಳ ಪ್ರಕರಣದಂತೆ ಕಾಣುತ್ತಿದೆ. ಅರ್ಜಿದಾರರ ರಕ್ಷಣೆ ಮಾಡದಿದ್ದರೆ ಈ ನ್ಯಾಯಾಲಯವು ತನ್ನ ಕರ್ತವ್ಯದಲ್ಲಿ ವಿಫಲವಾಗುತ್ತದೆ” ಎಂದು ಹೇಳಿದೆ.

ಕೇಂದ್ರ ಸರ್ಕಾರ ಮತ್ತು ಇತರರಿಗೆ ನೋಟಿಸ್ ಜಾರಿ ಮಾಡಿದ ಸುಪ್ರೀಂ ಕೋರ್ಟ್ ವಿಚಾರಣೆಯನ್ನು ಸೋಮವಾರಕ್ಕೆ ಮುಂದೂಡಿದೆ.

?s=150&d=mp&r=g
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಶಾಲಾ ಸಮಸ್ಯೆಗಳ ಕುರಿತು ಗ್ರಾಮ ಸಭೆಯಲ್ಲಿ ಧ್ವನಿ ಎತ್ತಿದ ವಿದ್ಯಾರ್ಥಿಗಳು; ಅಧಿಕಾರಿಗಳ ಮೆಚ್ಚುಗೆ-ಭರವಸೆ

ಸರ್ಕಾರಿ ಶಾಲಾ ವಿದ್ಯಾರ್ಥಿಗಳು ‘ವಿಶೇಷ ಗ್ರಾಮ ಸಭೆ’ಗಳಲ್ಲಿ ಪಾಲ್ಗೊಂಡು, ಪಂಚಾಯತ್ ಪ್ರತಿನಿಧಿಗಳು...

ಉತ್ತರಾಖಂಡ SIR ಅಂತಿಮ ಮತದಾರರ ಪಟ್ಟಿ ಪ್ರಕಟ: ಆದರೆ ಮುಗಿದಿಲ್ಲ ನೋಂದಣಿ ಪ್ರಕ್ರಿಯೆ

ಉತ್ತರಾಖಂಡ ರಾಜ್ಯದಲ್ಲಿ ನಡೆದ 'ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ' (ಎಸ್‌ಐಆರ್)...

ವಾಹನ ದಟ್ಟಣೆಯ ಸುಳಿಯಲ್ಲಿ ಮನಾಲಿ; ಪ್ರವಾಸೋದ್ಯಮದ ಒತ್ತಡಕ್ಕೆ ನಲುಗುತ್ತಿವೆಯೇ ಬೆಟ್ಟಗಳು?

ಮುಂಗಾರು ಮಳೆ ಕಡಿಮೆಯಾಗುತ್ತಿದ್ದಂತೆ ಹಿಮಾಚಲ ಪ್ರದೇಶದ ಪ್ರವಾಸಿ ತಾಣಗಳಿಗೆ ಪ್ರವಾಸಿಗರ ಆಗಮನ...