ಕಿರಣ್‌ ರಿಜಿಜು ಹೇಳಿಕೆ ವಿರುದ್ಧ ಸುಪ್ರೀಂಕೋರ್ಟ್‌, ಹೈಕೋರ್ಟ್ ವಕೀಲರಿಂದ ಖಂಡನೆ

Date:

  • ಕಿರಣ್‌ ರಿಜಿಜು, ಉಪರಾಷ್ಟ್ರಪತಿ ವಿರುದ್ಧ ಬಾಂಬೆ ವಕೀಲರ ಸಂಘದಿಂದ ಸುಪ್ರೀಂಗೆ ಅರ್ಜಿ
  • ಕೊಲಿಜಿಯಂನ ನೇಮಕ ಪ್ರಕ್ರಿಯೆ ಪಾರದರ್ಶಕವಾಗಿಲ್ಲ ಎಂದು ಹೇಳಿದ್ದ ಕಿರಣ್‌ ರಿಜಿಜು

ಕೇಂದ್ರ ಕಾನೂನು ಸಚಿವ ಕಿರಣ್‌ ರಿಜಿಜು ಹಾಗೂ ಉಪ ರಾಷ್ಟ್ರಪತಿ ಜಗದೀಪ್‌ ಧನಕರ್‌ ಅವರ ವಿವಾದಾತ್ಮಕ ಹೇಳಿಕೆಯನ್ನು ಸುಪ್ರೀಂ ಕೋರ್ಟ್ ಹಾಗೂ ವಿವಿಧ ಹೈಕೋರ್ಟ್‌ನ 350ಕ್ಕೂ ಹೆಚ್ಚು ವಕೀಲರು ಖಂಡಿಸಿದ್ದಾರೆ.

ಕೆಲವು ದಿನಗಳ ಹಿಂದಷ್ಟೆ “ಕೆಲವು ನಿವೃತ್ತ ನ್ಯಾಯಾಧೀಶರು ಭಾರತ ವಿರೋಧಿ ಗ್ಯಾಂಗ್‌ಗೆ ಸೇರಿದವರು” ಎಂದು ಕಿರಣ್ ರಿಜಿಜು ಹೇಳಿಕೆ ನೀಡಿದ್ದರು. ಕಾನೂನು ಸಚಿವರ ಹೇಳಿಕೆಯನ್ನು ಖಂಡಿಸಿರುವ ವಕೀಲರು, “ಇಂತಹ ದಬ್ಬಾಳಿಕೆ ಮತ್ತು ಬೆದರಿಸುವುದು ಸಚಿವರ ಉನ್ನತ ಹುದ್ದೆಗೆ ತಕ್ಕುದಲ್ಲ” ಎಂದು ಹೇಳಿದ್ದಾರೆ.

ಕಿರಣ್‌ ರಿಜಿಜು, ಉಪರಾಷ್ಟ್ರಪತಿ ವಿರುದ್ಧ ಸುಪ್ರೀಂಗೆ ಅರ್ಜಿ

ಕೇಂದ್ರ ಕಾನೂನು ಸಚಿವ ಕಿರಣ್‌ ರಿಜಿಜು ಮತ್ತು ಉಪರಾಷ್ಟ್ರಪತಿ ಜಗದೀಪ್‌ ಧನಕರ್‌ ವಿರುದ್ಧ ಬಾಂಬೆ ವಕೀಲರ ಸಂಘ ಸಲ್ಲಿಸಿದ್ದ ಅರ್ಜಿಯನ್ನು ವಜಾಗೊಳಿಸಿರುವ ಹೈಕೋರ್ಟ್ ನಿರ್ಣಯ ಪ್ರಶ್ನಿಸಿ, ಸಂಘವು ಸುಪ್ರೀಂ ಕೋರ್ಟ್ ಮೆಟ್ಟಿಲೇರಿದೆ.

ಈ ಸುದ್ದಿ ಓದಿದ್ದೀರಾ? ಕೋಮು ಸಾಮರಸ್ಯಕ್ಕೆ ದ್ವೇಷ ಭಾಷಣದ ಕಡಿವಾಣ ಅಗತ್ಯ; ಸುಪ್ರೀಂ ಕೋರ್ಟ್

“ಕೊಲಿಜಿಯಂನ ನೇಮಕ ಪ್ರಕ್ರಿಯೆ ಪಾರದರ್ಶಕವಾಗಿಲ್ಲ” ಎಂದು ಕಿರಣ್‌ ರಿಜಿಜು ಹೇಳಿದ್ದರೆ, 1973ರ ಕೇಶವಾನಂದ ಭಾರತಿ ಪ್ರಕರಣದ ತೀರ್ಪನ್ನು ಕೆಟ್ಟ ನಿದರ್ಶನವೆಂದು ಉಪರಾಷ್ಟ್ರಪತಿ ಜರೆದಿದ್ದರು. ಈ ಹಿನ್ನಲೆಯಲ್ಲಿ ಇವರಿಬ್ಬರಿಗೂ ದೇಶದ ನ್ಯಾಯಾಂಗ ಮತ್ತು ಸಂವಿಧಾನದ ಬಗ್ಗೆ ನಂಬಿಕೆ ಇಲ್ಲವೆಂದು ಆರೋಪಿಸಿ, ಇವರಿಬ್ಬರ ಪದಚ್ಯುತಿ ಕೋರಿ ವಕೀಲರ ಸಂಘ ಹೈಕೋರ್ಟ್‌ನಲ್ಲಿ ಸಾರ್ವಜನಿಕ ಹಿತಾಸಕ್ತಿ ಅರ್ಜಿ ಸಲ್ಲಿಸಿತ್ತು.

ಬಾಂಬೆ ವಕೀಲರ ಸಂಘದ ಅರ್ಜಿಯನ್ನು ವಜಾಗೊಳಿಸಿರುವ ಬಾಂಬೆ ಹೈಕೋರ್ಟ್‌ನ ಹಂಗಾಮಿ ಮುಖ್ಯ ನ್ಯಾಯಮೂರ್ತಿ ಸಂಜಯ್ ವಿ ಗಂಗಾಪುರವಾಲಾ ಮತ್ತು ನ್ಯಾಯಮೂರ್ತಿ ಸಂದೀಪ್ ವಿ ಮಾರ್ನೆ ಅವರ ವಿಭಾಗೀಯ ಪೀಠವು “ಭಾರತದ ಸುಪ್ರೀಂಕೋರ್ಟ್‌ನ ವಿಶ್ವಾಸಾರ್ಹತೆ ಉನ್ನತ ಹಂತದಲ್ಲಿದೆ ಮತ್ತು ಅದನ್ನು ವ್ಯಕ್ತಿಗಳ ಹೇಳಿಕೆಗಳಿಂದ ನಾಶಗೊಳಿಸಲಾಗುವುದಿಲ್ಲ ಅಥವಾ ಅಡ್ಡಿಪಡಿಸಲಾಗುವುದಿಲ್ಲ” ಎಂದು ತನ್ನ ಆದೇಶದಲ್ಲಿ ಉಲ್ಲೇಖಿಸಿದೆ.

ಈ ದಿನ ಡೆಸ್ಕ್‌
Website | + posts

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಹೆಚ್ಚು ಓದಿಸಿಕೊಂಡ ಲೇಖನಗಳು

ವಿಡಿಯೋ

ಸುದ್ದಿ ನಿರಂತರವಾಗಿ ಉಚಿತವೇ ಆಗಿರುವುದು ಹೇಗೆ ಸಾಧ್ಯ? ಅದಕ್ಕೆ ನಿಮ್ಮ ಬೆಂಬಲವೂ ನಿರಂತರವಾಗಿ ಇದ್ದಾಗ ಮಾತ್ರ ಸಾಧ್ಯ. ಚಂದಾದಾರರಾಗಿ – ಆ ಮೂಲಕ ಸತ್ಯ, ನ್ಯಾಯ, ಪ್ರೀತಿ ಮೌಲ್ಯಗಳನ್ನು ಎಲ್ಲರಿಗೂ ಹರಡಲು ಜೊತೆಯಾಗಿ.
Related

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಬರ ಪರಿಹಾರಕ್ಕಾಗಿ ಕರ್ನಾಟಕಕ್ಕೆ 18,171 ಕೋಟಿ ರೂ. ಬಿಡುಗಡೆಗೆ ಕೇಂದ್ರಕ್ಕೆ ಖರ್ಗೆ ಮನವಿ

ಭೀಕರ ಬರಗಾಲದಿಂದ ತತ್ತರಿಸಿರುವ ಕರ್ನಾಟಕಕ್ಕೆ ರಾಷ್ಟ್ರೀಯ ವಿಪತ್ತು ನಿರ್ವಹಣಾ ನಿಧಿಯಿಂದ (ಎನ್‌ಡಿಆರ್‌ಎಫ್)...

ಶೂದ್ರರು, ದಲಿತರಿಗೆ ಆರ್‌ಎಸ್‌ಎಸ್‌ ಗರ್ಭಗುಡಿಗೆ ಪ್ರವೇಶ ಇಲ್ಲ ಎಂಬುದು ಮತ್ತೆ ಸಾಬೀತು: ಸಿದ್ದರಾಮಯ್ಯ

ಹೊರಬಾಗಿಲಲ್ಲಿ ನಿಂತು 'ಜೀ..ಜೀ..ಹುಜೂರ್' ಎಂದಷ್ಟೇ ಹೇಳಬೇಕು:‌ ಸಿದ್ದರಾಮಯ್ಯ ಗೂಳಿಹಟ್ಟಿ ಶೇಖರ್...

ಪಿಒಕೆ ವಿಷಯದಲ್ಲಿ ನೆಹರು ಮಾಡಿದ್ದು ಐತಿಹಾಸಿಕ ಪ್ರಮಾದ ಎಂದ ಅಮಿತ್ ಶಾ

ಜಮ್ಮು ಮತ್ತು ಕಾಶ್ಮೀರಕ್ಕೆ ಸಂಬಂಧಿಸಿದ ಜಮ್ಮು ಮತ್ತು ಕಾಶ್ಮೀರ ಮೀಸಲಾತಿ (ತಿದ್ದುಪಡಿ)...

ವಿಧಾನಸಭೆಗೆ ಆಯ್ಕೆಯಾಗಿದ್ದ ಇಬ್ಬರು ಕೇಂದ್ರ ಸಚಿವರು, 8 ಸಂಸದರ ರಾಜೀನಾಮೆ

ರಾಜಸ್ಥಾನ, ಮಧ್ಯಪ್ರದೇಶ ಮತ್ತು ಛತ್ತೀಸ್‌ಗಢದ ಮೂರು ರಾಜ್ಯಗಳ ವಿಧಾನಸಭಾ ಚುನಾವಣೆಯಲ್ಲಿ ಗೆಲುವು...