ಪ್ರಮಾಣವಚನ ಸ್ವೀಕರಿಸಿದ ಗಂಟೆಯಲ್ಲೇ ನನಗೆ ಕೇಂದ್ರ ಮಂತ್ರಿ ಸ್ಥಾನ ಬೇಡವೆಂದ ಸುರೇಶ್ ಗೋಪಿ

Date:

ನರೇಂದ್ರ ಮೋದಿ ಮೂರನೇ ಸರ್ಕಾರದಲ್ಲಿ ರಾಜ್ಯ ಖಾತೆಯ ಮಂತ್ರಿಯಾಗಿ ಪ್ರಮಾಣ ವಚನ ಸ್ವೀಕರಿಸಿದ ಕೆಲವು ಗಂಟೆಗಳ ನಂತರ ಮಲಯಾಳಂ ನಟ ಹಾಗೂ ಕೇರಳದ ಬಿಜೆಪಿ ಸಂಸದ ಸುರೇಶ್ ಗೋಪಿ ತಮಗೆ ಮಂತ್ರಿ ಸ್ಥಾನ ಬೇಡವೆನ್ನುತ್ತಿದ್ದಾರೆ. ನನ್ನನ್ನು ಮಂತ್ರಿ ಸ್ಥಾನದಿಂದ ಮುಕ್ತಗೊಳಿಸಿ, ತ್ರಿಶೂರು ಸಂಸದನಾಗಿ ಜನರ ಸೇವೆ ಮಾಡುತ್ತೇನೆ ಎಂದು ಹೇಳಿದ್ದಾರೆ.

ಮಲಯಾಳಂ ಸಿನಿಮಾ ನಟನ ವೃತ್ತಿಯಿಂದ ರಾಜಕೀಯಕ್ಕೆ ಸೇರ್ಪಡೆಗೊಂಡಿದ್ದ ಸುರೇಶ್ ಗೋಪಿ ತಾವು ಈಗಾಗಲೇ ಒಪ್ಪಿಕೊಂಡಿರುವ ಸಿನಿಮಾಗಳನ್ನು ಪೂರ್ಣಗೊಳಿಸಬೇಕಿರುವುದು ಕೂಡ ಕೇಂದ್ರ ಮಂತ್ರಿ ಸ್ಥಾನದಿಂದ ಬಿಡುಗಡೆಗೆ ಅನುಮತಿ ಕೇಳುತ್ತಿದ್ದಾರೆ.

ಈ ಸುದ್ದಿ ಓದಿದ್ದೀರಾ? ಈ ದಿನ ಸಂಪಾದಕೀಯ | ದುಬಾರಿ ಚುನಾವಣೆಗಳು, ಸಾಮಾನ್ಯರ ಸ್ಪರ್ಧೆ ಮತ್ತು ಪ್ರಜಾಪ್ರಭುತ್ವ ವ್ಯವಸ್ಥೆ

ಸುದ್ದಿ ನಿರಂತರವಾಗಿ ಉಚಿತವೇ ಆಗಿರುವುದು ಹೇಗೆ ಸಾಧ್ಯ? ಅದಕ್ಕೆ ನಿಮ್ಮ ಬೆಂಬಲವೂ ನಿರಂತರವಾಗಿ ಇದ್ದಾಗ ಮಾತ್ರ ಸಾಧ್ಯ. ಚಂದಾದಾರರಾಗಿ – ಆ ಮೂಲಕ ಸತ್ಯ, ನ್ಯಾಯ, ಪ್ರೀತಿ ಮೌಲ್ಯಗಳನ್ನು ಎಲ್ಲರಿಗೂ ಹರಡಲು ಜೊತೆಯಾಗಿ.

ಪ್ರಮಾಣವಚನ ಸ್ವೀಕರಿಸಿದ ಕೆಲವು ಗಂಟೆಗಳ ನಂತರ ದೆಹಲಿಯಲ್ಲಿ ಸುದ್ದಿವಾಹಿನಿಯೊಂದಿಗೆ ಮಾತನಾಡಿದ ಸುರೇಶ್ ಗೋಪಿ, “ನನ್ನ ಉದ್ದೇಶ ಸಂಸದನಾಗಿ ಕಾರ್ಯನಿರ್ವಹಿಸಬೇಕಿದೆ.ನಾನು ಏನನ್ನು ಕೇಳುವುದಿಲ್ಲ. ನನಗೆ ಈ ಹುದ್ದೆ ಅಗತ್ಯವಿಲ್ಲ ಎಂದು ಹೇಳಿದ್ದೆ. ನನ್ನನ್ನು ಶೀಘ್ರದಲ್ಲೇ ಹುದ್ದೆಯಿಂದೆ ಬಂಧಮುಕ್ತಗೊಳಿಸಲಾಗುತ್ತದೆ. ನನಗೆ ತ್ರಿಶೂರು ಮತದಾರರಿಂದ ಯಾವುದೇ ಸಮಸ್ಯೆಯಿಲ್ಲ. ನಾನು ಸಂಸದನಾಗಿ ಅವರಿಗಾಗಿ ಉತ್ತಮವಾಗಿ ಕೆಲಸ ಮಾಡುತ್ತೇನೆಂದು ಅವರಿಗೆ ಗೊತ್ತಿದೆ. ನಾನು ಒಪ್ಪಿಕೊಂಡಿರುವ ಸಿನಿಮಾಗಳನ್ನು ಕಡ್ಡಾಯವಾಗಿ ಮುಗಿಸಬೇಕಿದೆ” ಎಂದು ತಿಳಿಸಿದ್ದಾರೆ.

ಕೇರಳದಿಂದ ಸುರೇಶ್ ಗೋಪಿ ಜೊತೆಗೆ ಜಾರ್ಜ್‌ ಕುರಿಯನ್‌ ಕೂಡ ಕೇಂದ್ರ ಮಂತ್ರಿಯಾಗಿ ಪ್ರಮಾಣ ವಚನ ಸ್ವೀಕರಿಸಿದ್ದಾರೆ.

ಎಡ ಪಂಥೀಯ ಭದ್ರಕೋಟೆಯಾದ ತ್ರಿಶೂರ್‌ ಲೋಕಸಭಾ ಕ್ಷೇತ್ರದಲ್ಲಿ ಸುರೇಶ್ ಗೋಪಿ ಬಿಜೆಪಿಯಿಂದ ಸ್ಪರ್ಧಿಸಿ ಗೆಲುವು ಸಾಧಿಸಿದ್ದರು. ಸುರೇಶ್ ಗೋಪಿ ಅವರು ಸಿಪಿಐನ ವಿ ಎಸ್‌ ಸುನಿಲ್‌ ಕುಮಾರ್‌ ಅವರನ್ನು 74 ಸಾವಿರಗಳ ಮತಗಳ ಅಂತರದಿಂದ ಸೋಲಿಸಿದ್ದರು.

ಲೋಕಸಭಾ ಚುನಾವಣಾ ಪ್ರಚಾರದ ಸಂದರ್ಭದಲ್ಲಿ ತ್ರಿಶೂರಿಗೆ ಒಂದು ಕೇಂದ್ರ ಸಚಿವ ಸ್ಥಾನ, ಅದು ಮೋದಿ ಗ್ಯಾರಂಟಿ ಎಂದು ಪ್ರಚಾರ ನಡೆಸಲಾಗಿತ್ತು.

ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ನಮ್ಮನ್ನು ಬೆಂಬಲಿಸಿ

ಹೆಚ್ಚು ಓದಿಸಿಕೊಂಡ ಲೇಖನಗಳು

ವಿಡಿಯೋ

ಸುದ್ದಿ ನಿರಂತರವಾಗಿ ಉಚಿತವೇ ಆಗಿರುವುದು ಹೇಗೆ ಸಾಧ್ಯ? ಅದಕ್ಕೆ ನಿಮ್ಮ ಬೆಂಬಲವೂ ನಿರಂತರವಾಗಿ ಇದ್ದಾಗ ಮಾತ್ರ ಸಾಧ್ಯ. ಚಂದಾದಾರರಾಗಿ – ಆ ಮೂಲಕ ಸತ್ಯ, ನ್ಯಾಯ, ಪ್ರೀತಿ ಮೌಲ್ಯಗಳನ್ನು ಎಲ್ಲರಿಗೂ ಹರಡಲು ಜೊತೆಯಾಗಿ.
Related

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ನೀರಿನ ಸಮಸ್ಯೆ| ದೆಹಲಿ ಜಲ ಮಂಡಳಿ ಕಚೇರಿ ಧ್ವಂಸಗೊಳಿಸಿದ ಬಿಜೆಪಿ ಮಹಿಳಾ ಕಾರ್ಯಕರ್ತರು

ದೆಹಲಿಯಲ್ಲಿ ತೀವ್ರ ನೀರಿನ ಬಿಕ್ಕಟ್ಟಿನ ನಡುವೆ ಬಿಜೆಪಿಯ ಮಹಿಳಾ ಪ್ರತಿಭಟನಾಕಾರರು ಚತ್ತರ್‌ಪುರದಲ್ಲಿರುವ...

ಅಡುಗೆಮನೆಯಲ್ಲಿ ಪುರುಷ, ಫುಟ್‌ಬಾಲ್ ಮೈದಾನದಲ್ಲಿ ಬಾಲಕಿ; ಪಿತೃಪ್ರಭುತ್ವವನ್ನು ಛಿದ್ರಗೊಳಿಸುವ ಕೇರಳದ ಶಾಲಾ ಪಠ್ಯಗಳು

ಒಬ್ಬ ಪುರುಷ ಅಡುಗೆಮನೆಯಲ್ಲಿ ತೆಂಗಿನಕಾಯಿ ತುರಿಯುತ್ತಾನೆ. ಆತನ ಪತ್ನಿ ಅಡುಗೆ ಮಾಡುತ್ತಾರೆ....

ಲೋಕಸಭೆ ಸ್ಪೀಕರ್ ಚುನಾವಣೆ| ಟಿಡಿಪಿ ಸ್ಪರ್ಧಿಸಿದರೆ ‘ಇಂಡಿಯಾ’ ಒಕ್ಕೂಟ ಬೆಂಬಲಿಸುತ್ತೆ: ಸಂಜಯ್ ರಾವತ್

ಲೋಕಸಭೆ ಸ್ಪೀಕರ್ ಚುನಾವಣೆಗೆ ಅಭ್ಯರ್ಥಿಯನ್ನು ಕಣಕ್ಕಿಳಿಸಿದರೆ, ಆಡಳಿತಾರೂಢ ಮಿತ್ರ ಪಕ್ಷವಾದ ತೆಲುಗು...

ಯುಎಸ್‌ನ ಪ್ರತಿ ಐವರು ವಲಸಿಗ ವೈದ್ಯರಲ್ಲಿ ಒಬ್ಬರು ಭಾರತೀಯರು!

ಯುನೈಟೆಡ್ ಸ್ಟೇಟ್ಸ್‌ನಲ್ಲಿರುವ ವಲಸಿಗ ವೈದ್ಯರು, ಶಸ್ತ್ರಚಿಕಿತ್ಸಕರ ಪಟ್ಟಿಯಲ್ಲಿ ಭಾರತವು ಮೂರನೇ ಸ್ಥಾನವನ್ನು...