ನಟ ಸುಶಾಂತ್ ಸಾವು ಪ್ರಕರಣ: ರಿಯಾ ಚಕ್ರವರ್ತಿ ವಿರುದ್ಧ ಜಾರಿಯಲ್ಲಿದ್ದ ಎಲ್‌ಒಸಿ ರದ್ದು; ಬಾಂಬೆ ಹೈಕೋರ್ಟ್ ಆದೇಶ

Date:

ನಟ ಸುಶಾಂತ್ ಸಿಂಗ್ ರಜಪೂತ್ ಅವರ ಸಾವಿನ ತನಿಖೆಗೆ ಸಂಬಂಧಿಸಿದಂತೆ ಸಿಬಿಐನಿಂದ ರಿಯಾ ಚಕ್ರವರ್ತಿ, ಅವರ ಸಹೋದರ ಶೋವಿಕ್ ಹಾಗೂ ತಂದೆ ವಿರುದ್ಧ ಹೊರಡಿಸಲಾದ ಲುಕ್ ಔಟ್ ಸುತ್ತೋಲೆಗಳನ್ನು (ಎಲ್‌ಒಸಿ) ಬಾಂಬೆ ಹೈಕೋರ್ಟ್ ಗುರುವಾರ ರದ್ದುಗೊಳಿಸಿದೆ.

ತಮ್ಮ ವಿರುದ್ಧ 2020ರಲ್ಲಿ ಸಿಬಿಐ ಹೊರಡಿಸಿದ್ದ ಎಲ್‌ಒಸಿಯನ್ನು ಪ್ರಶ್ನಿಸಿ ರಿಯಾ ಚಕ್ರವರ್ತಿ, ಅವರ ಸಹೋದರ ಶೋವಿಕ್ ಮತ್ತು ಅವರ ತಂದೆ ಇಂದ್ರಜಿತ್ ಅವರು ಅರ್ಜಿ ಸಲ್ಲಿಸಿದ್ದರು. ಅರ್ಜಿಯ ವಿಚಾರಣೆಯನ್ನು ಹೈಕೋರ್ಟ್‌ ನ್ಯಾಯಮೂರ್ತಿ ರೇವತಿ ಮೋಹಿತೆ ದೇರೆ ಮತ್ತು ಮಂಜುಷಾ ದೇಶಪಾಂಡೆ ಅವರ ವಿಭಾಗೀಯ ಪೀಠ ನಡೆಸಿದ್ದು, ಎಲ್‌ಒಸಿಯನ್ನು ರದ್ದುಗೊಳಿಸಿದೆ.

ಸಿಬಿಐ ಪರ ವಕೀಲ ಶ್ರೀರಾಮ್ ಶಿರ್ಸತ್ ಅವರು, “ಎಲ್‌ಒಸಿ ರದ್ದತಿ ಆದೇಶವನ್ನು ನಾಲ್ಕು ವಾರಗಳವರೆಗೆ ತಡೆಹಿಡಿಯಬೇಕು. ಇದರಿಂದ ಸಿಬಿಐ ಸುಪ್ರೀಂ ಕೋರ್ಟ್‌ನಲ್ಲಿ ಮೇಲ್ಮನವಿ ಸಲ್ಲಿಸಲು ಅವಕಾಶ ಇರುತ್ತದೆ” ಎಂದು ಪೀಠದ ಎದುರು ಮನವಿ ಮಾಡಿದರು. ಆದರೆ, ಪೀಠವು ತನ್ನ ಆದೇಶವನ್ನು ತಡೆಹಿಡಿಯಲು ನಿರಾಕರಿಸಿತು.

ಸುದ್ದಿ ನಿರಂತರವಾಗಿ ಉಚಿತವೇ ಆಗಿರುವುದು ಹೇಗೆ ಸಾಧ್ಯ? ಅದಕ್ಕೆ ನಿಮ್ಮ ಬೆಂಬಲವೂ ನಿರಂತರವಾಗಿ ಇದ್ದಾಗ ಮಾತ್ರ ಸಾಧ್ಯ. ಚಂದಾದಾರರಾಗಿ – ಆ ಮೂಲಕ ಸತ್ಯ, ನ್ಯಾಯ, ಪ್ರೀತಿ ಮೌಲ್ಯಗಳನ್ನು ಎಲ್ಲರಿಗೂ ಹರಡಲು ಜೊತೆಯಾಗಿ.

ಸುಶಾಂತ್ ಸಿಂಗ್ ರಜಪೂತ್ ಅವರು 2020ರ ಜೂನ್ 14ರಂದು ಮುಂಬೈನ ಬಾಂದ್ರಾದಲ್ಲಿ ತಮ್ಮ ಅಪಾರ್ಟ್‌ಮೆಂಟ್‌ನಲ್ಲಿ ಶವವಾಗಿ ಪತ್ತೆಯಾಗಿದ್ದರು. ಪ್ರಕರಣ ದಾಖಲಿಸಿಕೊಂಡಿದ್ದ ಮುಂಬೈ ಪೊಲೀಸರು ತನಿಖೆ ಆರಂಭಿಸಿದ್ದರು. ಇದೇ ವೇಳೆ, ಸುಶಾಂತ್ ಅವರ ತಂದೆ 2020ರ ಜುಲೈನಲ್ಲಿ ಬಿಹಾರ ಪೊಲೀಸರಿಗೆ ದೂರು ನೀಡಿದ್ದರು. ತಮ್ಮ ದೂರಿನಲ್ಲಿ, ಸುಶಾಂತ್ ಸ್ನೇಹಿತೆ ರಿಯಾ ಚಕ್ರವರ್ತಿ ಮತ್ತು ಅವರ ಕುಟುಂಬಸ್ಥರು ಸುಶಾಂಗ್‌ಗೆ ‘ಆತ್ಮಹತ್ಯಗೆ ಪ್ರಚೋದನೆ ನೀಡಿದ್ದಾರೆ’ ಎಂದು ಆರೋಪಿಸಿದ್ದರು.

ಬಳಿಕ, ಪ್ರಕರಣವನ್ನು ಸಿಬಿಐಗೆ ವರ್ಗಾಯಿಸಲಾಗಿತ್ತು. ತನಿಖೆ ಆರಂಭಿಸಿದ ಸಿಬಿಐ, 2020ರ ಆಗಸ್ಟ್‌ನಲ್ಲಿ ರಿಯಾ ಚಕ್ರವರ್ತಿ, ಅವರ ಸಹೋದರ ಮತ್ತು ಅವರ ತಂದೆಯ ವಿರುದ್ಧ ಎಲ್‌ಒಸಿ ಜಾರಿಗೊಳಿಸಿತ್ತು.

ಅಲ್ಲದೆ, 2020ರಲ್ಲಿಯೇ, ರಜಪೂತ್‌ಗೆ ಸಂಬಂಧಿಸಿದ ಡ್ರಗ್ಸ್ ಪ್ರಕರಣದಲ್ಲಿ ರಿಯಾ ಮತ್ತು ಶೋವಿಕ್ ಇಬ್ಬರನ್ನೂ ನಾರ್ಕೋಟಿಕ್ಸ್ ಕಂಟ್ರೋಲ್ ಬ್ಯೂರೋ (ಎನ್‌ಸಿಬಿ) ಬಂಧಿಸಿತ್ತು. ಬಳಿಕ ಅವರಿಗೆ ಜಾಮೀನು ನೀಡಲಾಗಿತ್ತು.

2023ರ ಸೆಪ್ಟೆಂಬರ್‌ನಲ್ಲಿ, ಶೋವಿಕ್‌ ವಿದೇಶ ಪ್ರಯಾಣಕ್ಕೆ ತೆರಳಲು ಅನುವು ಮಾಡಿಕೊಟ್ಟಿದ್ದ ಹೈಕೋರ್ಟ್, ಎಲ್‌ಒಸಿಯನ್ನು ತಾತ್ಕಾಲಿಕವಾಗಿ ಅಮಾನತುಗೊಳಿಸಿತ್ತು. ಇದೀಗ, ಎಲ್‌ಒಸಿಯನ್ನು ರದ್ದುಗೊಳಿಸಿದೆ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಹೆಚ್ಚು ಓದಿಸಿಕೊಂಡ ಲೇಖನಗಳು

ವಿಡಿಯೋ

ಸುದ್ದಿ ನಿರಂತರವಾಗಿ ಉಚಿತವೇ ಆಗಿರುವುದು ಹೇಗೆ ಸಾಧ್ಯ? ಅದಕ್ಕೆ ನಿಮ್ಮ ಬೆಂಬಲವೂ ನಿರಂತರವಾಗಿ ಇದ್ದಾಗ ಮಾತ್ರ ಸಾಧ್ಯ. ಚಂದಾದಾರರಾಗಿ – ಆ ಮೂಲಕ ಸತ್ಯ, ನ್ಯಾಯ, ಪ್ರೀತಿ ಮೌಲ್ಯಗಳನ್ನು ಎಲ್ಲರಿಗೂ ಹರಡಲು ಜೊತೆಯಾಗಿ.
Related

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ದೆಹಲಿಯಲ್ಲಿ 52.3 ಡಿಗ್ರಿ ಸೆಲ್ಸಿಯಸ್ ತಾಪಮಾನ; ಭಾರತದ ಸಾರ್ವಕಾಲಿಕ ದಾಖಲೆ

ದೆಹಲಿಯಲ್ಲಿ 52.3 ಡಿಗ್ರಿ ಸೆಲ್ಸಿಯಸ್ ತಾಪಮಾನ ದಾಖಲಾಗಿದ್ದು, ಇದು ದೇಶದಲ್ಲಿ ದಾಖಲಾದ...

‘ಯಾವುದು ಹಾಳಾಗಿಲ್ಲವೋ ಅದನ್ನು ಎಂದಿಗೂ ಸರಿಪಡಿಸಲು ಪ್ರಯತ್ನಿಸಬೇಡಿ’; ವಿದ್ಯಾರ್ಥಿನಿ ಪ್ರಾಚಿ ನಿಗಮ್

ಉತ್ತರಪ್ರದೇಶದ 10ನೇ ತರಗತಿಯ ಬೋರ್ಡ್‌ ಪರೀಕ್ಷೆಯಲ್ಲಿ 55 ಲಕ್ಷ ವಿದ್ಯಾರ್ಥಿಗಳಲ್ಲಿ ಪ್ರಾಚಿ...

ಕಾಂಗ್ರೆಸ್‌ನೊಂದಿಗಿನ ವಿವಾಹ ಶಾಶ್ವತವಲ್ಲ: ಅರವಿಂದ್ ಕೇಜ್ರಿವಾಲ್

ಕಾಂಗ್ರೆಸ್‌ನೊಂದಿಗಿನ ವಿವಾಹ ಶಾಶ್ವತವಲ್ಲ ಎಂದು ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್‌ ತಿಳಿಸಿದ್ದು,ಲೋಕಸಭೆ...

ಲೋಕಸಭೆ ಚುನಾವಣೆ| ನೀತಿ ಸಂಹಿತೆ ಉಲ್ಲಂಘನೆ; ಮೆಹಬೂಬಾ ಮುಫ್ತಿ ವಿರುದ್ಧ ಎಫ್‌ಐಆರ್

ಕಾಶ್ಮೀರದ ಚುನಾವಣಾ ಅಧಿಕಾರಿಗಳು ಮಾದರಿ ನೀತಿ ಸಂಹಿತೆ ಉಲ್ಲಂಘಿಸಿದ ಆರೋಪದ ಮೇಲೆ...