ವಿವಾಹೇತರ ಸಂಬಂಧ ಶಂಕೆ: ಪತ್ನಿ, ಇಬ್ಬರು ಹೆಣ್ಣುಮಕ್ಕಳ ಮೇಲೆ ಆ್ಯಸಿಡ್ ಎರಚಿದ ದುರುಳ

Date:

ವಿವಾಹೇತರ ಸಂಬಂಧವಿದೆ ಎಂದು ಶಂಕಿ ವ್ಯಕ್ತಿಯೋರ್ವ ತನ್ನ ಪತ್ನಿ ಮತ್ತು ತನ್ನ ಇಬ್ಬರು ಹೆಣ್ಣುಮಕ್ಕಳ ಮೇಲೆ ಆ್ಯಸಿಡ್ ಎರಚಿದ ಘಟನೆ ಉತ್ತರ ಪ್ರದೇಶದ ಟಿಕ್ರಿ ಗ್ರಾಮದಲ್ಲಿ ನಡೆದಿದೆ.

- Advertisement -

ಆ್ಯಸಿಡ್ ದಾಳಿಯಿಂದ 39 ವರ್ಷದ ರಾಮಗುಣಿ ಮತ್ತು ಆಕೆಯ ಇಬ್ಬರು ಹೆಣ್ಣುಮಕ್ಕಳಾದ 16 ವರ್ಷದ ನೇಹಾ ಮತ್ತು 23 ವರ್ಷದ ರಚಿತಾ ಗಂಭೀರವಾಗಿ ಗಾಯಗೊಂಡಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಬ್ರಿಟಿಷ್ ಕಾಲದ ʼಗುಲಾಮಗಿರಿʼ ಕಾನೂನುಗಳೇ ಇಂದಿನ ಪೊಲೀಸ್‌ ವ್ಯವಸ್ಥೆಯ...

ಸ್ವಾತಂತ್ರ್ಯ ಬಂದು ದಶಕಗಳೇ ಕಳೆದಿದ್ದರೂ, ನಾವಿನ್ನೂ ಬ್ರಿಟಿಷರು ಭಾರತೀಯರನ್ನು ದಮನ ಮಾಡಲು ರೂಪಿಸಿದ 1861ರ ಪೊಲೀಸ್ ಕಾಯಿದೆಯ ನೆರಳಿನಲ್ಲೇ ಬದುಕುತ್ತಿದ್ದೇವೆಯೇ? ಖಾಕಿ ಪಡೆಯನ್ನು 'ಪ್ರಜೆಗಳ ರಕ್ಷಕ'ನಾಗಿಸಬೇಕಿದ್ದ ವ್ಯವಸ್ಥೆ, ಇಂದಿಗೂ ರಾಜಕಾರಣಿಗಳ ಕೈಗೊಂಬೆಯಾಗಿ ಉಳಿದುಕೊಳ್ಳಲು...

ಯಾರು ಹಿತವರು ಈ ಇಬ್ಬರೊಳಗೆ? ನೇಹಾ ಬೋರಾ ಅಭಿಜಿತ್...

“ಹೋಲಿಕೆ ಬೇಡ, ಒಗ್ಗಟ್ಟು ಬೇಕು. ನಾವೆಲ್ಲರೂ ಒಟ್ಟಾಗಿ ಚುನಾವಣಾ ಆಯೋಗದ ಅಕ್ರಮಗಳ ವಿರುದ್ಧ ಹೋರಾಡಬೇಕು” ಎಂದು ನೇಹಾ ಬರೆದರೆ, ಅದಕ್ಕೆ ಅಭಿಜೀತ್ ಉತ್ತರ- “ಇಂಕ್ವಿಲಾಬ್ ಜಿಂದಾಬಾದ್” ನೇಹಾ ಬೋರಾ ಮತ್ತು ಅಭಿಜಿತ್ ದೀಪ್ಕೆ ನಡುವೆ...

ಸ್ವತಂತ್ರ ಸಾಂವಿಧಾನಿಕ ಸಂಸ್ಥೆಗಳ ಮೇಲಿನ ನಂಬಿಕೆಯನ್ನು ಕಸಿದುಕೊಳ್ಳುತ್ತಿರುವ ಚುನಾವಣಾ...

ನ್ಯಾಯಾಲಯ ಮತ್ತು ಚುನಾವಣಾ ಆಯೋಗಗಳ 'ಸ್ವತಂತ್ರತೆ' ಎಂಬ ಮುಖವಾಡವೇ ಈಗ ಸರ್ಕಾರಕ್ಕೆ ರಕ್ಷಣಾ ಕವಚವಾಗಿ ಕೆಲಸ ಮಾಡುತ್ತಿದೆ. ಹೀಗಾಗಿ ಇವತ್ತು ವಿರೋಧ ಪಕ್ಷಗಳ ಆಕ್ರೋಶವೆಲ್ಲವೂ ಸಾಂವಿಧಾನಿಕ ಸಂಸ್ಥೆಗಳ ಕಡೆಗೆ ತಿರುಗಿದೆ. ಸರ್ಕಾರ ತೀರಾ...

ಇದನ್ನು ಓದಿದ್ದೀರಾ? ಬೆಂಗಳೂರು | ವಿವಾಹೇತರ ಸಂಬಂಧಕ್ಕೆ 35 ವರ್ಷದ ಮಹಿಳೆ ಬಲಿ

ಈ ಬಗ್ಗೆ ಭಾನುವಾರ ಮಾಧ್ಯಮಗಳಿಗೆ ಮಾಹಿತಿ ನೀಡಿದ ನಗರದ ಹೆಚ್ಚುವರಿ ಪೊಲೀಸ್ ವರಿಷ್ಠಾಧಿಕಾರಿ (ಎಎಸ್‌ಪಿ) ದೇವೇಂದ್ರ ಕುಮಾರ್, “ಸಂತ್ರಸ್ತ ಮಹಿಳೆ ತನ್ನ ಇಬ್ಬರು ಹೆಣ್ಣುಮಕ್ಕಳು ಮತ್ತು ಒಬ್ಬ ಮಗನೊಂದಿಗೆ ಟಿಕ್ರಿ ಗ್ರಾಮದ ಬಾಡಿಗೆ ಮನೆಯಲ್ಲಿ ವಾಸಿಸುತ್ತಿದ್ದರು. ಆಕೆಯ ಪತಿ ರಾಮ್ ಗೋಪಾಲ್ ಶಹಾಬಾದ್ ಹರ್ದೋಯ್‌ನಲ್ಲಿ ವಾಸಿಸುತ್ತಿದ್ದನು. ಶುಕ್ರವಾರ ರಾತ್ರಿ, ರಾಮಗುಣಿ ಮತ್ತು ಆಕೆಯ ಹೆಣ್ಣುಮಕ್ಕಳು ನಿದ್ರಿಸುತ್ತಿದ್ದಾಗ ಆಕೆಯ ಪತಿ ಗೋಡೆ ಹಾರಿ ಮನೆಗೆ ನುಗ್ಗಿ ಅವರ ಮೇಲೆ ಆ್ಯಸಿಡ್ ಎರಚಿದ್ದಾನೆ” ಎಂದು ತಿಳಿಸಿದ್ದಾರೆ.

ಘಟನೆಯ ಸಮಯದಲ್ಲಿ, ರಾಮಗುಣಿ ಅವರ ಮಗ ಆಶು ತನ್ನ ಸ್ನೇಹಿತರೊಂದಿಗೆ ಇದ್ದ. ಬಳಿಕ ತನ್ನ ತಂದೆಯ ವಿರುದ್ಧ ದೂರು ದಾಖಲಿಸಿದ್ದಾನೆ ಎಂದು ವರದಿಯಾಗಿದೆ.

ಇದನ್ನು ಓದಿದ್ದೀರಾ? ಒಡಿಶಾ | ಅಲೆಮಾರಿ ಕುಟುಂಬದ ಐವರ ಬರ್ಬರ ಹತ್ಯೆ; ಐವರ ಅಪಹರಣ

ಗಾಯಾಳುಗಳನ್ನು ಸರ್ಕಾರಿ ವೈದ್ಯಕೀಯ ಕಾಲೇಜಿಗೆ ದಾಖಲಿಸಲಾಗಿದೆ. ತನ್ನ ತಂದೆ ಮದ್ಯವ್ಯಸನಿಯಾಗಿದ್ದು, ವ್ಯಸನದಿಂದಾಗಿ ಶಹಾಬಾದ್ ಪ್ರದೇಶದಲ್ಲಿರುವ ತನ್ನ ಕೃಷಿ ಭೂಮಿಯನ್ನು ಮಾರಿದ್ದಾಗಿ ಆಶು ಪೊಲೀಸರಿಗೆ ತಿಳಿಸಿದ್ದಾನೆ.

ಇದರ ನಂತರ, ರಾಮಗುಣಿ ತನ್ನ ಮಕ್ಕಳೊಂದಿಗೆ ಟಿಕ್ರಿ ಗ್ರಾಮಕ್ಕೆ ತೆರಳಿದರು. ಆದರೂ ಆಕೆಗೆ ವಿವಾಹೇತರ ಸಂಬಂಧವಿದೆ ಎಂದು ಅನುಮಾನಿಸಿದ ಪತಿ ಆಗಾಗ್ಗೆ ಬಂದು ನೋಡುತ್ತಿದ್ದ ಎನ್ನಲಾಗಿದೆ. ಸದ್ಯ ಗೋಪಾಲ್ ತಲೆಮರೆಸಿಕೊಂಡಿದ್ದು, ಆತನನ್ನು ಪತ್ತೆಹಚ್ಚಲು ಹುಡುಕಾಟ ನಡೆಯುತ್ತಿದೆ.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಅಸ್ಸಾಂ ಉಪಚುನಾವಣೆ ಅಖಾಡ: ಸಿಎಂ ಶರ್ಮಾ ಮತ್ತು ಕಾಂಗ್ರೆಸ್ ಸಂಸದರ ನಡುವೆ ‘ಬಿರಿಯಾನಿ vs ರಸ್ಕ್’ ವಾಕ್ಸಮರ!

ಅಸ್ಸಾಂನ ನಗಾಂವ್ ಲೋಕಸಭಾ ಕ್ಷೇತ್ರಕ್ಕೆ ನಡೆಯಲಿರುವ ಉಪಚುನಾವಣೆಯ ಪ್ರಚಾರ ಕಣದಲ್ಲಿ ರಾಜಕೀಯ...

ಶಾಲಾ ಸಮಸ್ಯೆಗಳ ಕುರಿತು ಗ್ರಾಮ ಸಭೆಯಲ್ಲಿ ಧ್ವನಿ ಎತ್ತಿದ ವಿದ್ಯಾರ್ಥಿಗಳು; ಅಧಿಕಾರಿಗಳ ಮೆಚ್ಚುಗೆ-ಭರವಸೆ

ಸರ್ಕಾರಿ ಶಾಲಾ ವಿದ್ಯಾರ್ಥಿಗಳು ‘ವಿಶೇಷ ಗ್ರಾಮ ಸಭೆ’ಗಳಲ್ಲಿ ಪಾಲ್ಗೊಂಡು, ಪಂಚಾಯತ್ ಪ್ರತಿನಿಧಿಗಳು...

ಉತ್ತರಾಖಂಡ SIR ಅಂತಿಮ ಮತದಾರರ ಪಟ್ಟಿ ಪ್ರಕಟ: ಆದರೆ ಮುಗಿದಿಲ್ಲ ನೋಂದಣಿ ಪ್ರಕ್ರಿಯೆ

ಉತ್ತರಾಖಂಡ ರಾಜ್ಯದಲ್ಲಿ ನಡೆದ 'ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ' (ಎಸ್‌ಐಆರ್)...