ಗ್ರೇಟ್ ನಿಕೋಬಾರ್ ಬೃಹತ್ ಯೋಜನೆ ತಕ್ಷಣ ಸ್ಥಗಿತಗೊಳಿಸಿ: ಭಾರತಕ್ಕೆ ವಿಶ್ವಸಂಸ್ಥೆ ಸಮಿತಿ ಸೂಚನೆ

Date:

ಬುಡಕಟ್ಟು ಸಮುದಾಯಗಳ ಮೇಲಿನ ತೀವ್ರ ಪ್ರತಿಕೂಲ ಪರಿಣಾಮಗಳ ಹಿನ್ನೆಲೆಯಲ್ಲಿ, ಗ್ರೇಟ್ ನಿಕೋಬಾರ್ ದ್ವೀಪದಲ್ಲಿ ಉದ್ದೇಶಿಸಲಾಗಿರುವ ಬೃಹತ್ ಮೂಲಸೌಕರ್ಯ ಯೋಜನೆಗಳನ್ನು ತಕ್ಷಣವೇ ಸ್ಥಗಿತಗೊಳಿಸುವಂತೆ ಹದಿನೆಂಟು ಸ್ವತಂತ್ರ ತಜ್ಞರನ್ನೊಳಗೊಂಡ ‘ವಿಶ್ವಸಂಸ್ಥೆಯ ಜನಾಂಗೀಯ ತಾರತಮ್ಯ ನಿರ್ಮೂಲನಾ ಸಮಿತಿ’ (ಸಿಇಆರ್‌ಡಿ) ಭಾರತಕ್ಕೆ ಶಿಫಾರಸು ಮಾಡಿದೆ. ಯೋಜನೆಗಳ ಕುರಿತು ಪರಿಸರ, ಆರ್ಥಿಕ ಹಾಗೂ ಸಾಂಸ್ಕೃತಿಕ ಪರಿಣಾಮಗಳ ಸಮಗ್ರ ಮತ್ತು ಸ್ವತಂತ್ರ ಅಧ್ಯಯನಗಳು ಮುಕ್ತಾಯಗೊಳ್ಳುವವರೆಗೂ ಕಾಮಗಾರಿ ತಡೆಹಿಡಿಯಬೇಕು ಎಂದು ಸಮಿತಿ ಆಗಸ್ಟ್ 25ರಂದು ಬಿಡುಗಡೆ ಮಾಡಿದ ವರದಿಯಲ್ಲಿ ಸ್ಪಷ್ಟಪಡಿಸಿದೆ.

- Advertisement -

​ಈ ದ್ವೀಪದ ಕುರಿತು ಸರಣಿ ಹಾಗೂ ವಿವರವಾದ ಅಧ್ಯಯನಗಳನ್ನು ನಡೆಸುವಂತೆ ವಿಶ್ವಸಂಸ್ಥೆ ಸಮಿತಿ ಇದೀಗ ಕರೆ ನೀಡಿದೆ. ‘ಸಂಪೂರ್ಣ ಹಾಗೂ ಸ್ವತಂತ್ರವಾಗಿ ಪರಿಸರ, ಆರ್ಥಿಕ, ಸಾಮಾಜಿಕ, ಸಾಂಸ್ಕೃತಿಕ ಮತ್ತು ಆಧ್ಯಾತ್ಮಿಕ ಪರಿಣಾಮಗಳ ಅಧ್ಯಯನ ಪೂರ್ಣಗೊಳ್ಳುವವರೆಗೆ ಗ್ರೇಟ್ ನಿಕೋಬಾರ್ ಹಾಗೂ ಅಂಡಮಾನ್ ದ್ವೀಪಗಳಲ್ಲಿನ ಯೋಜನೆಗಳ ಅನುಷ್ಠಾನವನ್ನು ಸ್ಥಗಿತಗೊಳಿಸಬೇಕು’ ಎಂದು ಸಮಿತಿ ಸ್ಪಷ್ಟವಾಗಿ ಶಿಫಾರಸು ಮಾಡಿದೆ. 2006ರ ಅರಣ್ಯ ಹಕ್ಕು ಕಾಯ್ದೆಯ (ಅನುಸೂಚಿತ ಬುಡಕಟ್ಟು ಮತ್ತು ಇತರೆ ಪಾರಂಪರಿಕ ಅರಣ್ಯವಾಸಿಗಳ ಹಕ್ಕುಗಳ ಮಾನ್ಯತೆ) ಸಮರ್ಪಕ ಅನುಷ್ಠಾನದ ಕೊರತೆಯನ್ನು ಉಲ್ಲೇಖಿಸಿ ಸಮಿತಿ ಈ ನಿರ್ಧಾರ ಕೈಗೊಂಡಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಕತೆ | ಪೌರಶ್ರೀ – ಐಸಾಕ್‌ ಅಸಿಮೋವ್

ಪೌರಶ್ರೀ ಓದುವುದಕ್ಕೂ ಮುನ್ನ- ಒಂದು ಪುಟ್ಟ ಟಿಪ್ಪಣಿ ಈ ಸಹಸ್ರಮಾನದ ಅತ್ಯದ್ಭುತ ವೈಜ್ಞಾನಿಕ ಲೇಖಕ ರಲ್ಲಿ ಒಬ್ಬರು ಅಮೆರಿಕ ಬೋಸ್ಟನ್ ವಿಶ್ವ ವಿದ್ಯಾಲಯ ದಲ್ಲಿ ರಸಾಯನ ಶಾಸ್ತ್ರದ ಪ್ರಾಧ್ಯಾಪಕರಾಗಿದ್ದ ಐಸಾಕ್ ಅಸಿಮೋವ್. ವಿಶ್ವ...

ಶಿವಮೊಗ್ಗ | ದಾಖಲೆಗಳಲ್ಲಿ ಪೂರ್ಣ, ವಾಸ್ತವದಲ್ಲಿ ನೆನೆಗುದಿಗೆ...

ಶಿವಮೊಗ್ಗ ತಾಲೂಕಿನ ಕಾಚಿನಕಟ್ಟೆ ಗ್ರಾಮದಲ್ಲಿ ಸಮುದಾಯ ಭವನದ ಅಪೂರ್ಣ ಕಾಮಗಾರಿ ಆದರೆ ಶಿವಮೊಗ್ಗ ನಿರ್ಮಿತಿ ಕೇಂದ್ರ ದಾಖಲೆ ಪ್ರಕಾರ ಕಾಮಗಾರಿ ಸಂಪೂರ್ಣವಾಗಿದೆ ಎಂದು ದಾಖಲೆಗಳಲ್ಲಿ. ಈ ಸಂಬಂಧ ಲಂಚಮುಕ್ತ ಕರ್ನಾಟಕ ಮತ್ತು KRS ಪಕ್ಷದ...

ವಿಜಯಪುರ | ಹೆಚ್ಚುತ್ತಿರುವ ಬೀದಿ ನಾಯಿಗಳ ಹಾವಳಿ: 9...

ಬೀದಿ ನಾಯಿ ನಿಯಂತ್ರಣಕ್ಕೆ ನಗರಸಭೆ, ಪುರಸಭೆ, ಪಟ್ಟಣ ಪಂಚಾಯಿತಿ ಹಾಗೂ ಗ್ರಾಮ ಪಂಚಾಯಿತಿಗಳು ಪರಸ್ಪರ ಸಮನ್ವಯದಿಂದ ಕಾರ್ಯನಿರ್ವಹಿಸಿ, ಬೀದಿ ನಾಯಿಗಳ ಹಾವಳಿ ಹೆಚ್ಚಿರುವ ಪ್ರದೇಶಗಳನ್ನು ಗುರುತಿಸಿ ನಿಯಂತ್ರಣ ಕ್ರಮ ಕೈಗೊಳ್ಳಬೇಕು. ಶಾಲೆ, ಆಸ್ಪತ್ರೆ,...

​ಅಂಡಮಾನ್ ಮತ್ತು ನಿಕೋಬಾರ್‌ನಲ್ಲಿ 92,000 ಕೋಟಿ ರೂ. ಬೃಹತ್ ವೆಚ್ಚದಲ್ಲಿ ಕಂಟೇನರ್ ಟರ್ಮಿನಲ್, ವಿಮಾನ ನಿಲ್ದಾಣ, ವಿದ್ಯುತ್ ಸ್ಥಾವರ ನಿರ್ಮಿಸಲು ಕೇಂದ್ರ ಸರ್ಕಾರ ಮುಂದಾಗಿದೆ. ಆದರೆ, ಇದರಿಂದ 130 ಚದರ ಕಿಲೋಮೀಟರ್‌ನಷ್ಟು ದಟ್ಟ ಮಳೆಕಾಡು ನಾಶವಾಗಲಿದ್ದು, ಇಲ್ಲಿ ಅನಾದಿಕಾಲದಿಂದಲೂ ವಾಸಿಸುತ್ತಿರುವ ಶೋಂಪೆನ್ ಹಾಗೂ ನಿಕೋಬಾರೀಸ್‌ನಂತಹ ಅತಿ ಸೂಕ್ಷ್ಮ ಬುಡಕಟ್ಟು ಸಮುದಾಯಗಳ ಅಸ್ತಿತ್ವಕ್ಕೆ ಗಂಭೀರ ಬೆದರಿಕೆ ಎದುರಾಗಲಿದೆ ಎಂದು ವರದಿ ಎಚ್ಚರಿಸಿದೆ.

​ಭಾರತದಲ್ಲಿ ಅರಣ್ಯ ಹಕ್ಕು ಕಾಯ್ದೆ ಹಾಗೂ ಪಂಚಾಯತ್ ರಾಜ್ ವಿಸ್ತರಣಾ ಕಾಯ್ದೆಗಳಿದ್ದರೂ, ಅವು ಬುಡಕಟ್ಟು ಜನರ ಹಕ್ಕುಗಳನ್ನು ರಕ್ಷಿಸುವಲ್ಲಿ ವಿಫಲವಾಗಿವೆ ಎಂದು ಸಮಿತಿ ಕಳವಳ ವ್ಯಕ್ತಪಡಿಸಿದೆ. ಅಭಿವೃದ್ಧಿ ಯೋಜನೆಗಳಿಗಾಗಿ ಸ್ಥಳೀಯರ ಒಪ್ಪಿಗೆ ಪಡೆಯುವ ಪ್ರಕ್ರಿಯೆಗಳಲ್ಲಿ ವ್ಯಾಪಕ ಲೋಪಗಳಾಗಿವೆ. ನಕಲಿ ದಾಖಲೆಗಳ ಮೂಲಕ ಗ್ರಾಮಸಭೆಗಳ ಒಪ್ಪಿಗೆ ಪಡೆದ ನಿದರ್ಶನಗಳಿವೆ. ಇದರಿಂದ ಮೂಲನಿವಾಸಿಗಳಿಗೆ ತಮ್ಮ ಭೂಮಿ ಮತ್ತು ನೈಸರ್ಗಿಕ ಸಂಪನ್ಮೂಲಗಳ ಮೇಲಿನ ನ್ಯಾಯಸಮ್ಮತ ಹಕ್ಕುಗಳು ವ್ಯವಸ್ಥಿತವಾಗಿ ನಿರಾಕರಣೆಯಾಗುತ್ತಿವೆ ಎಂದು ವರದಿಯು ಸ್ಪಷ್ಟವಾಗಿ ಉಲ್ಲೇಖಿಸಿದೆ.

​ಈ ಹಿನ್ನೆಲೆಯಲ್ಲಿ, ಭಾರತವು ತನ್ನ ಪ್ರಸ್ತುತ ಶಾಸಕಾಂಗ ಚೌಕಟ್ಟನ್ನು ಮರುಪರಿಶೀಲನೆಗೆ ಒಳಪಡಿಸಬೇಕು ಎಂದು ಸಮಿತಿಯು ಆಗ್ರಹಿಸಿದೆ. ವಿಶೇಷವಾಗಿ ಅರಣ್ಯ ಹಕ್ಕು ಕಾಯ್ದೆಯನ್ನು ಅಂತರರಾಷ್ಟ್ರೀಯ ಮಾನದಂಡಗಳಿಗೆ ಅನುಗುಣವಾಗಿ ತಿದ್ದುಪಡಿ ಮಾಡಿ, ಸ್ಥಳೀಯರ ಪೂರ್ವಾನುಮತಿ ಪಡೆಯುವ ಪ್ರಕ್ರಿಯೆಯನ್ನು ಪಾರದರ್ಶಕಗೊಳಿಸಬೇಕು. ಅಲ್ಲದೆ, ಎಡಪಂಥೀಯ ಉಗ್ರವಾದ ಪೀಡಿತ ಪ್ರದೇಶಗಳ ನೆಪವೊಡ್ಡಿ ರಕ್ಷಣಾ ಮತ್ತು ಸಾರ್ವಜನಿಕ ಯೋಜನೆಗಳಿಗೆ ವಿನಾಯಿತಿ ನೀಡುವ ಇತ್ತೀಚಿನ ಅರಣ್ಯ ಸಂರಕ್ಷಣಾ ತಿದ್ದುಪಡಿ ಕಾಯ್ದೆಯ ಬಗ್ಗೆಯೂ ಸಮಿತಿಯು ತನ್ನ ತೀವ್ರ ಆಕ್ಷೇಪವನ್ನು ಕೂಡ ವ್ಯಕ್ತಪಡಿಸಿದೆ.

​ಕಾಯ್ದೆಗಳಿದ್ದರೂ ಆಡಳಿತ ಯಂತ್ರದಿಂದ ಅವುಗಳ ವ್ಯವಸ್ಥಿತ ಉಲ್ಲಂಘನೆಯಾಗುತ್ತಿರುವುದೇ ಮೂಲ ಸಮಸ್ಯೆ ಎಂದು ಬುಡಕಟ್ಟು ಹಕ್ಕುಗಳ ಸಂಶೋಧಕ ಬಿಜೋಯ್ ಸಿ.ಆರ್. ಅಭಿಪ್ರಾಯಪಟ್ಟಿದ್ದಾರೆ. ನಿಕೋಬಾರ್‌ ದ್ವೀಪದಲ್ಲಿ ಗ್ರಾಮಸಭೆಗಳ ಕೋರಂ ಇಲ್ಲದಿದ್ದರೂ, ಕೇವಲ ಶೇಕಡಾ ಎರಡರಿಂದ ಹದಿನೈದರಷ್ಟು ಜನರ ಹಾಜರಾತಿ ಮುಂದಿಟ್ಟುಕೊಂಡು ಯೋಜನೆಗಳಿಗೆ ಒಪ್ಪಿಗೆ ಪಡೆಯಲಾಗಿದೆ ಎಂಬ ಪ್ರಕರಣವು ಪ್ರಸ್ತುತ ಕಲ್ಕತ್ತಾ ಹೈಕೋರ್ಟ್‌ನಲ್ಲಿದೆ. ಅಭಿವೃದ್ಧಿಯ ಹೆಸರಿನಲ್ಲಿ ಬುಡಕಟ್ಟು ಜನರ ಬದುಕು ಹಾಗೂ ಅಪರೂಪದ ಪರಿಸರವನ್ನು ಬಲಿಕೊಡಬಾರದು ಎಂಬುದೇ ವಿಶ್ವಸಂಸ್ಥೆಯ ಈ ಎಚ್ಚರಿಕೆಯ ಪ್ರಮುಖ ಸಾರಾಂಶವಾಗಿದೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

‌ಬೀದರ್‌ | ಮತದಾನ ಹಕ್ಕು ಕಸಿಯುವ ʼಎಸ್‌ಐಆರ್ʼ ಪ್ರಕ್ರಿಯೆ ವಿರೋಧಿಸಿ ಅ.12ರಂದು ಪ್ರತಿಭಟನೆ

ದೇಶಾದ್ಯಂತ ಎಸ್‌ಐಆರ್ ಹೆಸರಿನಲ್ಲಿ ಮತದಾರರ ಪಟ್ಟಿಯಿಂದ ಕೋಟ್ಯಂತರ ಮತದಾರರನ್ನು ಕೈಬಿಡಲಾಗಿರುವುದನ್ನು ಆರೋಪಿಸಿ,...

ವಿಜಯಪುರ | ದಸಂಸ ರಾಜ್ಯ ಸಂಘಟನಾ ಸಂಚಾಲಕಿಯಾಗಿ ಪ್ರತಿಭಾ ಹೊಸಮನಿ ಆಯ್ಕೆ

ಕರ್ನಾಟಕ ದಲಿತ ಸಂಘರ್ಷ ಸಮಿತಿ (ಅಂಬೇಡ್ಕರ್‌ವಾದ) ಚಿಕ್ಕಮಗಳೂರಿನಲ್ಲಿ ಆಯೋಜಿಸಲಾಗಿದ್ದ ರಾಜ್ಯ...

ʼವೋಟ್‌ ಚೋರಿʼ ಆರೋಪಕ್ಕೆ ಪುರಾವೆ ಅಗತ್ಯʼ: ಚುನಾವಣಾ ಆಯೋಗದ ಪರ 124 ನಿವೃತ್ತ ಅಧಿಕಾರಿಗಳ ಪತ್ರ

ಚುನಾವಣಾ ಅಕ್ರಮಗಳ ಆರೋಪಗಳಿಗೆ ವಿಶ್ವಾಸಾರ್ಹ ಪುರಾವೆಗಳು ಅಗತ್ಯ ಎಂದು ಪ್ರತಿಪಾದಿಸಿರುವ 124...

ಮುದ್ದೇಬಿಹಾಳ | ದೆಹಲಿ ಸಭೆಗೂ ಮುನ್ನ ಕಬ್ಬು ಬೆಳೆಗಾರರ ಬೇಡಿಕೆ ಈಡೇರಿಕೆಗೆ ಆಗ್ರಹ

ಕಬ್ಬು ಬೆಳೆಗಾರರಿಗೆ ಪ್ರತಿ ಟನ್‌ಗೆ ₹8,500 ಕನಿಷ್ಠ ಬೆಲೆ ಹಾಗೂ ಹೆಚ್ಚುವರಿಯಾಗಿ...