ಗೈರು ಹಾಜರಾಗಿದ್ದರೂ ಅಮಾನತು: ಡಿಎಂಕೆ ಸಂಸದ ಪಾರ್ಥಿಬನ್ ವಿರುದ್ಧದ ಕ್ರಮ ಹಿಂಪಡೆದ ಸರ್ಕಾರ

Date:

Advertisements

ಡಿಎಂಕೆ ಸಂಸದ ಎಸ್ ಆರ್ ಪಾರ್ಥಿಬನ್ ಅವರು ಸದನದಲ್ಲಿ ಗೈರುಹಾಜರಾಗಿದ್ದರೂ ಅಶಿಸ್ತಿನ ಆಧಾರದ ಮೇಲೆ ಅಮಾನತುಗೊಳಿಸಿರುವ ಘಟನೆ ಲೋಕಸಭೆಯಲ್ಲಿ ಇಂದು ನಡೆದಿದೆ.

ಇದರಿಂದ ಎಚ್ಚೆತ್ತ ಸರ್ಕಾರ ಅಮಾನತು ಆದೇಶವನ್ನು ಹಿಂಪಡೆದಿದೆ. ‘ತಪ್ಪಾಗಿ’  ಅಮಾನತು ಮಾಡಬೇಕಾದವರ ಜೊತೆಗೆ ಡಿಎಂಕೆ ಸಂಸದ ಪಾರ್ಥಿಬನ್ ಅವರ ಹೆಸರನ್ನು ಸೇರಿಸಿದ ಕಾರಣ ಲೋಕಸಭೆಯಿಂದ ಅಮಾನತುಗೊಳಿಸಿರುವುದನ್ನು ಹಿಂಪಡೆಯಲು ಸರ್ಕಾರ ನಿರ್ಧರಿಸಿದೆ.

ಸಂಸದೀಯ ವ್ಯವಹಾರಗಳ ಸಚಿವ ಪ್ರಹ್ಲಾದ್‌ ಜೋಷಿ, ಸದಸ್ಯರನ್ನು ಗುರುತಿಸುವಲ್ಲಿ ಸಿಬ್ಬಂದಿಯ ಕಡೆಯಿಂದ ತಪ್ಪಾಗಿರುವ ಕಾರಣ ಪಾರ್ಥಿಬನ್ ಹೆಸರನ್ನು ಅಮಾನತುಗೊಳಿಸಿದ ಲೋಕಸಭಾ ಸದಸ್ಯರ ಪಟ್ಟಿಯಿಂದ ಹಿಂಪಡೆಯಲಾಗಿದೆ ಎಂದು ಹೇಳಿದರು.

Advertisements

ತಪ್ಪಾದ ಗುರುತಿನ ಪ್ರಕರಣವಾಗಿರುವುದರಿಂದ ಸದಸ್ಯರ ಹೆಸರನ್ನು ಕೈಬಿಡುವಂತೆ ಸ್ಪೀಕರ್‌ ಅವರಿಗೆ ಮನವಿ ಮಾಡಿದ್ದೇನೆ ಎಂದು ಜೋಶಿ ಹೇಳಿದರು.

ಈ ಸುದ್ದಿ ಓದಿದ್ದೀರಾ? ಸಂಸತ್ತಿನಲ್ಲಿ ಭದ್ರತಾ ಉಲ್ಲಂಘನೆ: 4 ಆರೋಪಿಗಳು 7 ದಿನಗಳ ಕಾಲ ಪೊಲೀಸ್ ಕಸ್ಟಡಿಗೆ

ಈ ಸಲಹೆಗೆ ಸ್ಪೀಕರ್ ಒಪ್ಪಿಗೆ ಸೂಚಿಸಿದ್ದಾರೆ. ಸದನದ ಕಲಾಪ ಹೊಸ ಸಂಸತ್ ಭವನಕ್ಕೆ ಸ್ಥಳಾಂತರಗೊಂಡಾಗ, ಸದನದಲ್ಲಿ ಭಿತ್ತಿಪತ್ರಗಳನ್ನು ತೋರಿಸದಿರುವ ಹೊಸ ಸಂಕಲ್ಪದೊಂದಿಗೆ ಸದಸ್ಯರು ಕೆಲಸ ಮಾಡಬೇಕು ಎಂದು ಸ್ಪೀಕರ್ ಅವರು ವ್ಯವಹಾರ ಸಲಹಾ ಸಮಿತಿ (ಬಿಎಸಿ) ಸಭೆಯಲ್ಲಿ ಪ್ರಸ್ತಾಪಿಸಿದ್ದರು ಎಂದು ಜೋಶಿ ಹೇಳಿದರು.

“ಈ ಪ್ರಸ್ತಾವನೆಗೆ ಸರ್ವಾನುಮತದಿಂದ ಒಪ್ಪಿಗೆ ನೀಡಲಾಗಿದೆ. ಯಾರೂ ಅದನ್ನು ವಿರೋಧಿಸಲಿಲ್ಲ” ಎಂದು ಪ್ರಹ್ಲಾದ್‌ ಜೋಷಿ ಹೇಳಿದರು.

13 ಸಂಸದರು ಬಿಎಸಿ ಸಭೆಯಲ್ಲಿ ತೆಗೆದುಕೊಂಡ ನಿರ್ಣಯವನ್ನು ಉಲ್ಲಂಘಿಸಿ ಸದನಕ್ಕೆ ಫಲಕಗಳನ್ನು ತಂದರು ಮತ್ತು ಆದ್ದರಿಂದ ಅವರನ್ನು ಅಮಾನತುಗೊಳಿಸಲಾಯಿತು ಎಂದು ಸಚಿವರು ಹೇಳಿದರು.

ಸದ್ಯ ಚಳಿಗಾಲದ ಅಧಿವೇಶನ ಅಥವಾ ಸಂಸತ್ತಿನ ಉಳಿದ ಅವಧಿಗೆ ಅಮಾನತುಗೊಂಡಿರುವ ಒಟ್ಟು ಸಂಸದರ ಸಂಖ್ಯೆ ಲೋಕಸಭೆಯಿಂದ 13 ಮತ್ತು ರಾಜ್ಯಸಭೆಯಿಂದ ಒಬ್ಬರು ಸೇರಿ 14ಕ್ಕೆ ಏರಿಕೆಯಾಗಿದೆ.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಬಿಹಾರದಂತೆಯೇ, ಇಡೀ ದೇಶ ಚುನಾವಣಾ ಕಳ್ಳತನವನ್ನು ವಿರೋಧಿಸುತ್ತದೆ: ರಾಹುಲ್ ಗಾಂಧಿ

ಬಿಹಾರದಲ್ಲಿ ತಮ್ಮ 'ಮತದಾರ ಅಧಿಕಾರ ಯಾತ್ರೆ'ಗೆ ಸಕಾರಾತ್ಮಕ ಪ್ರತಿಕ್ರಿಯೆಯನ್ನು ಸ್ವಾಗತಿಸಿದ ಲೋಕಸಭೆ...

ಗುಜರಾತ್‌ನ ಗ್ರಾಮವೊಂದರಲ್ಲಿ ಕೊನೆಗೂ ದಲಿತರಿಗೆ ಕ್ಷೌರದಂಗಡಿಗೆ ಮುಕ್ತ ಪ್ರವೇಶ: ಶತಮಾನಗಳ ಅನಿಷ್ಟ ಪದ್ದತಿಗೆ ತೆರೆ

ಗುಜರಾತ್‌ನ ಜುನಾಗಡ್‌ ಜಿಲ್ಲೆಯಲ್ಲಿ ಗಡ್ಡ ಮೀಸೆ ಬೆಳೆಸಿದ್ದಕ್ಕೆ ದಲಿತ ಯುವಕರಿಬ್ಬರ ಜಾತಿ...

ರಾಜಸ್ಥಾನ | ರಸ್ತೆ ಅಪಘಾತ: ಮಹಿಳೆ ಸೇರಿ ನಾಲ್ವರು ಕಾರ್ಮಿಕರ ಸಾವು, ಐವರಿಗೆ ಗಾಯ

ಕಾರ್ಮಿಕರನ್ನು ಕರೆದೊಯ್ಯುತ್ತಿದ್ದ ವ್ಯಾನ್‌ಗೆ ವಾಹನವೊಂದು ಡಿಕ್ಕಿ ಹೊಡೆದು ಮಹಿಳೆ ಸೇರಿ ನಾಲ್ವರು...

Download Eedina App Android / iOS

X