ಪಶ್ಚಿಮ ಬಂಗಾಳದ ನೂತನ ಮುಖ್ಯಮಂತ್ರಿಯಾಗಿ ಸುವೇಂದು ಅಧಿಕಾರಿ ಪ್ರಮಾಣ ವಚನ ಸ್ವೀಕಾರ

Date:

ಪಶ್ಚಿಮ ಬಂಗಾಳದ ನೂತನ ಮುಖ್ಯಮಂತ್ರಿಯಾಗಿ ಬಿಜೆಪಿ ಹಿರಿಯ ನಾಯಕ ಸುವೇಂದು ಅಧಿಕಾರಿ ಅವರು ಪ್ರಮಾಣ ವಚನ ಸ್ವೀಕರಿಸಿದ್ದಾರೆ. ಇತ್ತೀಚೆಗೆ ಮುಕ್ತಾಯಗೊಂಡ ವಿಧಾನಸಭಾ ಚುನಾವಣೆಯಲ್ಲಿ ಗೆಲುವು ಸಾಧಿಸಿರುವ ಬಿಜೆಪಿ, ರಾಜ್ಯದಲ್ಲಿ ಇದೇ ಮೊದಲ ಬಾರಿಗೆ ಸರ್ಕಾರ ರಚಿಸುತ್ತಿದೆ.

- Advertisement -

ಟಿಎಂಸಿ ನಾಯಕಿ, ಪಶ್ಚಿಮ ಬಂಗಾಳ ಮಾಜಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರಿಗೆ ಪ್ರಬಲ ಪೈಪೋಟಿ ನೀಡುತ್ತಾ ಬಂದಿರುವ ಸುವೇಂದು ಅಧಿಕಾರಿ, ಪಶ್ಚಿಮ ಬಂಗಾಳದಲ್ಲಿ ಬಿಜೆಪಿಯ ಸಂಘಟನೆ ಮತ್ತು ಪಕ್ಷವನ್ನು ಅಧಿಕಾರದ ಗದ್ದುಗೆಗೆ ತರುವಲ್ಲಿ ನಿರ್ಣಾಯಕ ಪಾತ್ರ ವಹಿಸಿದ್ದಾರೆ. ಇದೀಗ ಪಶ್ಚಿಮ ಬಂಗಾಳದ 9ನೇ ಸಿಎಂ ಆಗಿ ಅಧಿಕಾರ ಸ್ವೀಕರಿಸಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಹಮ್ ಔರತೇನ್ ಆಜಾದ್ ಹೈ: ಸುರಕ್ಷತೆಯ ಹೆಸರಲ್ಲಿ ಕಡಿವಾಣ...

ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ ಮಹಿಳೆಯರು ಮತ್ತು ಅಪ್ರಾಪ್ತೆಯರ ಮೇಲಿನ ಲೈಂಗಿಕ ದೌರ್ಜನ್ಯ ಪ್ರಕರಣಗಳಿಗೆ ಕಡಿವಾಣ ಇಲ್ಲದಂತಾಗಿದೆ. ಸಾರ್ವಜನಿಕ ಸ್ಥಳಗಳಲ್ಲಿ ಅಭದ್ರತೆಯ ವಾತಾವರಣವಿರುವಾಗ ಈ ಲೋಪಗಳನ್ನು ಸರಿಪಡಿಸದೆಯೇ ದೌರ್ಜನ್ಯಕ್ಕೆ ಒಳಗಾಗುತ್ತಿರುವ ಸ್ರೀ ಸಮುದಾಯದ ಉಡುವ,...

ತಮ್ಮ ವಿರುದ್ಧ ತಾವೇ’ಆರೋಪಪಟ್ಟಿ’ ಸಿದ್ಧಪಡಿಸಿಕೊಂಡ ಗ್ಯಾನೇಶ್ ಕುಮಾರ್: ಪ್ರೆಸ್...

ಚುನಾವಣಾ ಆಯೋಗದ ಇತ್ತೀಚಿನ ನಡೆಗಳು ಮತ್ತು ಸಾಂವಿಧಾನಿಕ ವೈಫಲ್ಯದ ಅಸಲಿಯತ್ತನ್ನು ಸ್ವರಾಜ್ ಇಂಡಿಯಾ ಸದಸ್ಯ ಹಾಗೂ ‘ಭಾರತ್ ಜೋಡೊ ಅಭಿಯಾನ’ದ ರಾಷ್ಟ್ರೀಯ ಸಂಚಾಲಕ ಯೋಗೇಂದ್ರ ಯಾದವ್ ಅವರು 'ದಿ ಇಂಡಿಯನ್ ಎಕ್ಸ್‌ಪ್ರೆಸ್' ಪತ್ರಿಕೆಯಲ್ಲಿ...

SIR | ‘ಫಾರ್ಮ್ 7’ ದುರ್ಬಳಕೆ – ಅಕ್ರಮ:...

ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ನಾಗರಿಕನಿಗೆ ಇರುವ ಅತ್ಯಂತ ಮೂಲಭೂತ ಮತ್ತು ಶಕ್ತಿಶಾಲಿ ಅಸ್ತ್ರ - ಮತದಾನದ ಹಕ್ಕು. ಆದರೆ, ಇತ್ತೀಚಿನ ದಿನಗಳಲ್ಲಿ ಚುನಾವಣಾ ಆಯೋಗದ ನಿರ್ಲಜ್ಜತನ ಮತ್ತು ನಿಯಮಗಳಲ್ಲಿನ ಲೋಪದೋಷಗಳನ್ನು ಬಳಸಿಕೊಂಡು, ಮತದಾರರ ಪಟ್ಟಿಯಿಂದ...

ಇದನ್ನು ಓದಿದ್ದೀರಾ? ಪಶ್ಚಿಮ ಬಂಗಾಳದ ನೂತನ ಮುಖ್ಯಮಂತ್ರಿಯಾಗಿ ಸುವೇಂದು ಅಧಿಕಾರಿ ಆಯ್ಕೆ

ಪಶ್ಚಿಮ ಬಂಗಾಳದಲ್ಲಿ ಸಿಪಿಐ(ಎಂ) ನೇತೃತ್ವದ ಎಡರಂಗವು 1977ರಿಂದ 2011ರವರೆಗೆ ಸತತ 34 ವರ್ಷಗಳ ಕಾಲ ಆಳ್ವಿಕೆ ನಡೆಸಿತ್ತು. ಆದರೆ 2011ರ ವಿಧಾನಸಭಾ ಚುನಾವಣೆಯಲ್ಲಿ, ಮಮತಾ ಬ್ಯಾನರ್ಜಿ ನೇತೃತ್ವದ ಟಿಎಂಸಿ ಎಡರಂಗವನ್ನು ಸೋಲಿಸುವ ಮೂಲಕ 34 ವರ್ಷಗಳ ದೀರ್ಘ ಆಳ್ವಿಕೆಗೆ ಅಂತ್ಯ ಹಾಡಿತು. ಇದೀಗ ಟಿಎಂಸಿ ಆಳ್ವಿಕೆ ಅಂತ್ಯವಾಗಿದ್ದು ಬಿಜೆಪಿ ಅಧಿಕಾರ ಪಡೆದಿದೆ. ಈ ಮೂಲಕ ಸುವೇಂದು ಅಧಿಕಾರಿ ಪಶ್ಚಿಮ ಬಂಗಾಳದ ಮೊದಲ ಬಿಜೆಪಿ ಸರ್ಕಾರದ ಮುಖ್ಯಮಂತ್ರಿಯಾಗಿದ್ದಾರೆ.

suvendu2

ಸುವೇಂದು ಅಧಿಕಾರಿ ಯಾರು?

ಮಾಜಿ ಕೇಂದ್ರ ಸಚಿವ ಸಿಸಿರ್ ಅಧಿಕಾರಿ ಅವರ ಪುತ್ರರಾದ ಸುವೇಂದು ಅಧಿಕಾರಿ, ಕಾಂಗ್ರೆಸ್ ಪಕ್ಷದ ವಿದ್ಯಾರ್ಥಿ ಘಟಕದ ಮೂಲಕ ರಾಜಕೀಯ ಪ್ರವೇಶಿಸಿದರು. ಬಳಿಕ ಟಿಎಂಸಿ ಸೇರಿದರು. ಮಮತಾ ಬ್ಯಾನರ್ಜಿ ಅವರ ಆಪ್ತ ವಲಯದಲ್ಲಿದ್ದ ಸುವೇಂದು 2007ರ ನಂದಿಗ್ರಾಮ್ ಭೂಸ್ವಾಧೀನ ವಿರೋಧಿ ಹೋರಾಟದ ಮೂಲಕ ಮುಂಚೂಣಿಗೆ ಬಂದವರು. ಟಿಎಂಸಿ ಸರ್ಕಾರದಲ್ಲಿ ಸಾರಿಗೆ, ನೀರಾವರಿ ಮತ್ತು ಜಲಸಂಪನ್ಮೂಲ ಸಚಿವರಾಗಿ ಕೆಲಸ ಮಾಡಿದ್ದರು.

2020ರ ಡಿಸೆಂಬರ್‌ ವೇಳೆಗೆ ಟಿಎಂಸಿ ತೊರೆದು ಬಿಜೆಪಿ ಸೇರಿದರು. 2021ರ ಚುನಾವಣೆಯಲ್ಲಿ ನಂದಿಗ್ರಾಮ್ ಕ್ಷೇತ್ರದಲ್ಲಿ ಮಮತಾ ಬ್ಯಾನರ್ಜಿ ಅವರನ್ನು ಸೋಲಿಸಿ ಗಮನ ಸೆಳೆದಿದ್ದರು. 2026ರ ವಿಧಾನಸಭಾ ಚುನಾವಣೆಯಲ್ಲಿ ಭಬಾನಿಪುರ ಕ್ಷೇತ್ರದಿಂದ ಗೆಲುವು ಸಾಧಿಸಿದ್ದಾರೆ. ಆದರೆ ಮತದಾರರ ಪಟ್ಟಿ ವಿಶೇಷ ತೀವ್ರ ಪರಿಷ್ಕರಣೆಯಲ್ಲಿ ಭಬಾನಿಪುರ ಕ್ಷೇತ್ರದಲ್ಲಿ ಅಧಿಕ ಮತದಾರರ ಹೆಸರು ಡಿಲೀಟ್ ಆಗಿರುವುದು ಸದ್ಯ ತೀವ್ರ ಚರ್ಚೆಗೆ ಎಡೆ ಮಾಡಿಕೊಟ್ಟಿದೆ.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಬೀದರ್‌ | ಜನವರಿಯಲ್ಲಿ ಅಗ್ನಿವೀರ ಸೇನಾ ಭರ್ತಿ ರ‍್ಯಾಲಿ

ಬೀದರ್‌ ನಗರದಲ್ಲಿ 2027ರ ಜನವರಿ ತಿಂಗಳಲ್ಲಿ 15 ದಿನಗಳ ಕಾಲ ಅಗ್ನಿವೀರ...

ದೇವಿಯಿಂದ ಕತ್ತಿ ಪಡೆದ ರಾಜರ ಕಥೆಗಳು ಶಾಲಾ ಪಠ್ಯದಲ್ಲಿ; NCERTಯಿಂದ ಮತ್ತೊಂದು ವಿವಾದ?

"ಭಾರತದಲ್ಲಿ ದೇವಿಯರ ಆರಾಧನೆಗೂ, ಯುದ್ಧಕ್ಕೂ ಅನಾದಿ ಕಾಲದಿಂದಲೂ ಅವಿನಾಭಾವ ಸಂಬಂಧವಿದೆ. ಪ್ರಾಚೀನ...

‘INDIA’ ಮೈತ್ರಿಕೂಟದ ಸಭೆಗಾಗಿ ದೆಹಲಿಗೆ ಮಮತಾ ಪ್ರಯಾಣ: ‘ದಿಮಾಗಿ ನಕ್ಸಲರ’ ಜತೆ ಸಮಾಲೋಚನೆ ಎಂದ ಸುವೇಂದು ಅಧಿಕಾರಿ

ಬುಧವಾರ ನಡೆಯಲಿರುವ 'INDIA' ಮೈತ್ರಿಕೂಟದ ಪ್ರಮುಖ ಸಭೆಯಲ್ಲಿ ಪಾಲ್ಗೊಳ್ಳಲು ಪಶ್ಚಿಮ ಬಂಗಾಳದ...

ಮೋದಿ ಪ್ರಮಾಣಪತ್ರ ವಿವಾದ: ಕೇಜ್ರಿವಾಲ್ ಮೇಲ್ಮನವಿ ವಜಾಗೊಳಿಸಿದ ಗುಜರಾತ್ ಹೈಕೋರ್ಟ್

ಪ್ರಧಾನಿ ನರೇಂದ್ರ ಮೋದಿ ಅವರ ಶೈಕ್ಷಣಿಕ ಪದವಿ ಪ್ರಮಾಣಪತ್ರವನ್ನು ಬಹಿರಂಗಪಡಿಸುವಂತೆ ಗುಜರಾತ್...