ಸ್ವಾತಿ ಮಲಿವಾಲ್ ಪ್ರಕರಣ| ಕೇಜ್ರಿವಾಲ್ ಆಪ್ತ ಸಹಾಯಕ ಬಿಭವ್ ಕುಮಾರ್ ಬಂಧನ

Date:

ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಅವರ ಮನೆಯೊಳಗೆ ಎಎಪಿ ಸಂಸದೆ ಸ್ವಾತಿ ಮಲಿವಾಲ್ ಮೇಲೆ ಹಲ್ಲೆ ನಡೆಸಿದ ಆರೋಪದ ಮೇಲೆ ದೆಹಲಿ ಪೊಲೀಸರು ಅರವಿಂದ್ ಕೇಜ್ರಿವಾಲ್ ಆಪ್ತ ಸಹಾಯಕ ಬಿಭವ್ ಕುಮಾರ್ ಬಂಧಿಸಿದ್ದಾರೆ.

- Advertisement -

ಕೇಜ್ರಿವಾಲ್ ಅವರ ಆಪ್ತ ಸಹಾಯಕ ಬಿಭವ್ ಕುಮಾರ್ 7-8 ಬಾರಿ ಕಪಾಳಮೋಕ್ಷ ಮಾಡಿದ್ದಾರೆ. ಹೊಟ್ಟೆಗೆ ಒದ್ದಿದ್ದಾರೆ ಎಂದು ಸ್ವಾತಿ ಮಲಿವಾಲ್ ಆರೋಪಿಸಿದ್ದಾರೆ. ಇದಾದ ಬಳಿಕ ದೆಹಲಿ ಪೊಲೀಸರು ಬಿಭವ್ ಕುಮಾರ್ ವಿರುದ್ಧ ಐಪಿಸಿಯ ಕಠಿಣ ಸೆಕ್ಷನ್‌ಗಳ ಅಡಿಯಲ್ಲಿ ಪ್ರಕರಣ ದಾಖಲಿಸಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಮೋದಿ ಆಡಳಿತದಲ್ಲಿ ಮಾಹಿತಿ ಹಕ್ಕು ಕಾಯ್ದೆಯ ‘ಸ್ಥಿತಿ’ ಹೇಗಿದೆ?...

ಯಾವುದೇ ಸರ್ಕಾರ ಆಡಳಿತದಲ್ಲಿರಲಿ ಪ್ರಜಾಸತ್ತಾತ್ಮಕ ವ್ಯವಸ್ಥೆಯನ್ನು ಕಾಪಾಡಬೇಕಾದ ಸಂಸ್ಥೆಗಳ ಸ್ವಾಯತ್ತತೆ ಉಳಿಯಬೇಕು. ಅವು ಪಾರದರ್ಶಕವಾಗಿರಬೇಕು. ಪ್ರಜಾಸತ್ತೆಯ ಕಾರ್ಯವೈಖರಿಯನ್ನು ಕುರಿತಂತೆ ಮುಕ್ತ ಚರ್ಚೆ ನಡೆಯುತ್ತಿರಬೇಕು. ಇದು ಸಕ್ರಿಯ, ಅರ್ಥಪೂರ್ಣ ಪ್ರಜಾಸತ್ತೆಯ ಕನಿಷ್ಠ ಅವಶ್ಯಕತೆ. ಹಾಗಾಗಿ...

ಬಂಗಾಳ ವಿಭಜನೆ | ವಿಭಜನೆಯ ವಿಷಬೀಜದಿಂದ ಒಗ್ಗಟ್ಟಿನ ಜ್ಯೋತಿ...

ಬ್ರಿಟಿಷರ 'ಒಡೆದು ಆಳುವ ನೀತಿ'ಯ ಭಾಗವಾಗಿ 1905ರ ಅಕ್ಟೋಬರ್‌ನಲ್ಲಿ ಜಾರಿಗೆ ಬಂದ ಬಂಗಾಳ ವಿಭಜನೆಯು ಭಾರತೀಯರ ರಾಷ್ಟ್ರೀಯತೆಯನ್ನು ಒಡೆಯುವ ಕುತಂತ್ರವಾಗಿತ್ತು. ಇದಕ್ಕೆ ಪ್ರತಿಯಾಗಿ ಭಾರತೀಯರು 'ರಾಷ್ಟ್ರೀಯ ಶೋಕ ದಿನ' ಆಚರಿಸಿ, ಪರಸ್ಪರ ರಾಖಿ...

ನಟ ಇಮ್ರಾನ್ ಖಾನ್ ಪ್ರತಿಭಟಿಸಿದರೆ ಗಡಿಪಾರು; ಟ್ರಂಪ್ ಪರ...

ಕಾನೂನು ಮತ್ತು ರಾಜತಾಂತ್ರಿಕ ನಿಯಮಗಳು ಎಲ್ಲರಿಗೂ ಒಂದೇ ಆಗಿರಬೇಕು ಹೊರತು ಪ್ರಧಾನಿ ಮೋದಿಯವರ ರಾಜಕೀಯ ಅನುಕೂಲಕ್ಕೆ ತಕ್ಕಂತೆ ಬದಲಾಗಬಾರದು. ವಿದೇಶಿ ಪ್ರಜೆಯೊಬ್ಬ ಭಾರತದ ನೆಲದಲ್ಲಿ ಪ್ರತಿಭಟನೆಯಲ್ಲಿ ಪಾಲ್ಗೊಳ್ಳುವುದು ತಪ್ಪು ಎನ್ನುವುದಾದರೆ, ಭಾರತದ ಪ್ರಧಾನಿಯೊಬ್ಬರು...

ಆಮ್ ಆದ್ಮಿ ಪಕ್ಷವು ಬಿಭವ್ ಕುಮಾರ್ ಪರವಾಗಿ ನಿಂತಿದ್ದು, ಅರವಿಂದ್ ಕೇಜ್ರಿವಾಲ್ ಅವರನ್ನು ಗುರಿಯಾಗಿಸಲು ಬಿಜೆಪಿಯು ಸ್ವಾತಿ ಮಲಿವಾಲ್ ಅವರನ್ನು ಬಳಸಿಕೊಳ್ಳುತ್ತಿದೆ ಎಂದು ಆರೋಪಿಸಿದೆ. ಹಾಗೆಯೇ ಬಿಭವ್ ಕುಮಾರ್ ಮತ್ತು ಸ್ವಾತಿ ಮಲಿವಾಲ್ ನಡುವೆ ವಾಗ್ವಾದದ ಹೊಸ ವಿಡಿಯೋವನ್ನು ಕೂಡಾ ಹಂಚಿಕೊಂಡಿದೆ.

ಇದನ್ನು ಓದಿದ್ದೀರಾ?  ಸ್ವಾತಿ ಮಲಿವಾಲ್ ಪ್ರಕರಣ | ಎಫ್‌ಐಆರ್ ಬಳಿಕ ಹೊರಗಡೆ ಬಂದ ಘಟನೆಯ ಹೊಸ ವೀಡಿಯೋ!

ಈ ವಿಡಿಯೋ ಅರವಿಂದ್ ಕೇಜ್ರಿವಾಲ್ ಅವರನ್ನು ಭೇಟಿ ಮಾಡಲು ಬಂದ ಸಂಸದೆಯನ್ನು ಭದ್ರತಾ ಸಿಬ್ಬಂದಿ ತಡೆಯುತ್ತಾರೆ. ಹೀಗಾಗಿ ಅಲ್ಲಿಗೆ ಬಂದ ಕೇಜ್ರಿವಾಲ್ ಆಪ್ತ ಸಹಾಯಕ ಬಿಭವ್ ಕುಮಾರ್, “ನೀವು ಈಗ ಭೇಟಿ ಮಾಡಲು ಸಾಧ್ಯವಿಲ್ಲ. ನೀವು ಇಲ್ಲಿಂದ ಹೊರಡಿ” ಎಂದು ಸ್ವಾತಿ ಮಲಿವಾಲ್ ಗೆ ಸೂಚಿಸುತ್ತಾರೆ.

“ಈ ವೇಳೆ, ಇಲ್ಲ ನಾನು ಇಲ್ಲಿಯೇ ಇರುತ್ತೇನೆ. ನೀವು ನನ್ನ ಮೇಲೆ ದಬ್ಬಾಳಿಕೆ ನಡೆಸಿದರೆ, ನನ್ನನ್ನು ಮುಟ್ಟಿದರೆ ನಾನು ಪೊಲೀಸರಿಗೆ ಕರೆ ಮಾಡಬೇಕಾಗುತ್ತದೆ” ಎಂದು ಸ್ವಾತಿ ಹೇಳುತ್ತಾರೆ. ಮುಂದೆ ನಿಮ್ಮ ಕೆಲಸ ಸಹ ಹೋಗಬಹುದು ಎಂದು ಎಚ್ಚರಿಸುತ್ತಾರೆ.

ಈ ವೇಳೆ ಮಾತಿಗೆ ಮಾತು ಬೆಳೆದು ಸ್ವಾತಿ ಅವರು, ಬಿಭವ್‌ಗೆ ‘ಗಾಂಜಾ ಸಾಲಾ’ ಎಂದು ಸ್ವಾತಿ ಮಲಿವಾಲ್ ಕರೆದಿರುವಲ್ಲಿಗೆ ವಿಡಿಯೋ ಕಟ್ ಆಗುತ್ತದೆ. ಇದಾದ ನಂತರ ಹಲ್ಲೆ ನಡೆದಿರಬಹುದು ಎಂದು ವರದಿಯಾಗಿದೆ.

 

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

‘ಲೆಹರಾ ದೋ ತಿರಂಗಾ’ ಮಾರ್ಚ್‌ಗೆ ಮುನ್ನ ಸಿಜೆಪಿ ಸಂಸ್ಥಾಪಕ ಅಭಿಜೀತ್ ದೀಪ್ಕೆ ದೆಹಲಿ ಪೊಲೀಸರಿಂದ ವಶಕ್ಕೆ

ಕಾಕ್ರೋಚ್ ಜನತಾ ಪಾರ್ಟಿ (ಸಿಜೆಪಿ) ಸಂಸ್ಥಾಪಕ ಅಭಿಜೀತ್ ದೀಪ್ಕೆ ಅವರನ್ನು ಶುಕ್ರವಾರ...

ಸಿಎಂಆರ್‌ಎಲ್ ಲಂಚ ಪ್ರಕರಣ: ಕೇರಳದ ಮಾಜಿ ಸಿಎಂ ಪಿಣರಾಯಿ ವಿಜಯನ್‌ಗೆ ಇ.ಡಿ ಸಮನ್ಸ್

ಬಹುಚರ್ಚಿತ ಕೊಚ್ಚಿನ್ ಮಿನರಲ್ಸ್ ಅಂಡ್ ರೂಟೈಲ್ ಲಿಮಿಟೆಡ್ (ಸಿಎಂಆರ್‌ಎಲ್) ಅಕ್ರಮ ಹಣ...

ನ್ಯಾಯಾಂಗದ ಮೇಲೆ ಗೌರವವಿದೆ, ತಪ್ಪಾಗಿದ್ದರೆ ಕ್ಷಮೆಯಾಚಿಸುವೆ: ಸಂಜಯ್ ರಾವತ್

ಸುಪ್ರೀಂ ಕೋರ್ಟ್ ಕುರಿತು ತಾವು ನೀಡಿರುವ ಹೇಳಿಕೆಗಳು ಸೂಕ್ತವಲ್ಲ ಅಥವಾ ಅನುಚಿತ...