ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಅವರ ಆಪ್ತ ಸಹಾಯಕ ಬಿಭವ್ ಕುಮಾರ್ ಅವರು ಸ್ವಾತಿ ಮಲಿವಾಲ್ ಮೇಲಿನ ಹಲ್ಲೆ ಪ್ರಕರಣದಲ್ಲಿ ತಮ್ಮ ಬಂಧನವನ್ನು ಪ್ರಶ್ನಿಸಿ ದೆಹಲಿ ಹೈಕೋರ್ಟ್‌ನ ಮೊರೆ ಹೋಗಿದ್ದಾರೆ. ಹಾಗೆಯೇ ತನ್ನ ಬಂಧನವನ್ನು ‘ಅಕ್ರಮ ಬಂಧನ’ ಎಂದು ಹೇಳಿರುವ ಭಿಬವ್ ಪರಿಹಾರ ಕೋರಿದ್ದಾರೆ.
ಅರ್ನೇಶ್ ಕುಮಾರ್ ತೀರ್ಪಿನಲ್ಲಿ ಸುಪ್ರೀಂ ಕೋರ್ಟ್ ನೀಡಿರುವ ಮಾರ್ಗಸೂಚಿಗಳನ್ನು ಉಲ್ಲಂಘಿಸಿರುವ ಕಾರಣ ತನ್ನ ಬಂಧನವನ್ನು ಕಾನೂನುಬಾಹಿರ ಎಂದು ಘೋಷಿಸಬೇಕೆಂದು ಬಿಭವ್ ಕುಮಾರ್ ಹೈಕೋರ್ಟ್‌ಗೆ ಮನವಿ ಮಾಡಿದ್ದಾರೆ.
Delhi CM Arvind Kejriwal’s close aide Bibhav Kumar moves Delhi High Court seeking direction to declare his arrest by Delhi Police as illegal and in gross violation of the provisions of Section 41A of the Code of Criminal Procedure. The plea also seeks order that the Petitioner be… pic.twitter.com/7XCVEtwNRQ
— ANI (@ANI) May 29, 2024
ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಅವರ ಮನೆಯೊಳಗೆ ಎಎಪಿ ಸಂಸದೆ ಸ್ವಾತಿ ಮಲಿವಾಲ್ ಮೇಲೆ ಹಲ್ಲೆ ನಡೆಸಿದ ಆರೋಪದ ಮೇಲೆ ದೆಹಲಿ ಪೊಲೀಸರು ಅರವಿಂದ್ ಕೇಜ್ರಿವಾಲ್ ಆಪ್ತ ಸಹಾಯಕ ಬಿಭವ್ ಕುಮಾರ್ ಅನ್ನು ಮೇ 18ರಂದು ಬಂಧಿಸಿದ್ದಾರೆ.
ಇದನ್ನು ಓದಿದ್ದೀರಾ? ಸ್ವಾತಿ ಮಲಿವಾಲ್ ಪ್ರಕರಣ| ಕೇಜ್ರಿವಾಲ್ ಆಪ್ತ ಸಹಾಯಕ ಬಿಭವ್ ಕುಮಾರ್ ಬಂಧನ
ಅದಾದ ಬಳಿಕ ನ್ಯಾಯಾಲಯವು ಐದು ದಿನಗಳ ಕಾಲ ಪೊಲೀಸ್ ಕಸ್ಟಡಿಗೆ ಒಪ್ಪಿಸಿದೆ. ಮೇ 24ರಂದು ಬಿಭವ್ ಕುಮಾರ್ ಅವರನ್ನು ನ್ಯಾಯಾಂಗ ಬಂಧನಕ್ಕೆ ಕಳುಹಿಸಲಾಗಿದೆ. ಮೇ 27ರಂದು ದೆಹಲಿಯ ತೀಸ್ ಹಜಾರಿ ಕೋರ್ಟ್ ಬಿಭವ್ ಕುಮಾರ್‌ಗೆ ಜಾಮೀನು ನಿರಾಕರಿಸಿತ್ತು.
ಕೇಜ್ರಿವಾಲ್ ಅವರ ಆಪ್ತ ಸಹಾಯಕ ಬಿಭವ್ ಕುಮಾರ್ 7-8 ಬಾರಿ ಕಪಾಳಮೋಕ್ಷ ಮಾಡಿದ್ದಾರೆ. ಹೊಟ್ಟೆಗೆ ಒದ್ದಿದ್ದಾರೆ ಎಂದು ಸ್ವಾತಿ ಮಲಿವಾಲ್ ಆರೋಪಿಸಿದ್ದಾರೆ. ಇದಾದ ಬಳಿಕ ದೆಹಲಿ ಪೊಲೀಸರು ಬಿಭವ್ ಕುಮಾರ್ ವಿರುದ್ಧ ಐಪಿಸಿಯ ಕಠಿಣ ಸೆಕ್ಷನ್‌ಗಳ ಅಡಿಯಲ್ಲಿ ಪ್ರಕರಣ ದಾಖಲಿಸಿದ್ದಾರೆ.
ಎಎಪಿ ಸ್ವಾತಿ ಮಲಿವಾಲ್ ವಿರುದ್ಧ ಪ್ರತ್ಯಾರೋಪ ಮಾಡಿದೆ. ಮಲಿವಾಲ್ ಭದ್ರತಾ ಸಿಬ್ಬಂದಿಯೊಂದಿಗೆ ವಾಗ್ವಾದಕ್ಕಿಳಿದಿದ್ದು ಹಲ್ಲೆ ನಡೆದಿದೆ ಎಂದು ಹೇಳಲಾದ ದಿನ ಮುಖ್ಯಮಂತ್ರಿ ನಿವಾಸದಿಂದ ಹೊರ ನಡೆದಿರುವುದು ವಿಡಿಯೋದಲ್ಲಿ ಕಾಣಿಸಿಕೊಂಡಿದೆ ಎಂದು ಎಎಪಿ ಹೇಳಿದೆ. ಹಾಗೆಯೇ ವಿಡಿಯೋವನ್ನು ಕೂಡಾ ಹಂಚಿಕೊಂಡಿದೆ.