ನಿರ್ಭಯಾ ಘಟನೆ ನಡೆದು ವರ್ಷಗಳಾದರೂ ಬದಲಾಗದ ವ್ಯವಸ್ಥೆ: ಕೇಂದ್ರ, ಯುಪಿ ಸರ್ಕಾರದ ವಿರುದ್ಧ ರಾಹುಲ್ ಗಾಂಧಿ ಕಿಡಿ

Date:

ಉತ್ತರ ಪ್ರದೇಶದ ಗ್ರೇಟರ್ ನೋಯ್ಡಾದಿಂದ ದೆಹಲಿಗೆ ಪ್ರಯಾಣಿಸುತ್ತಿದ್ದ ಚಲಿಸುವ ಸ್ಲೀಪರ್ ಬಸ್‌ನಲ್ಲಿ 16 ವರ್ಷದ ಅಪ್ರಾಪ್ತ ಬಾಲಕಿ ಮೇಲೆ ನಡೆದ ದಾರುಣ ಗ್ಯಾಂಗ್‌ರೇಪ್ (ಸಾಮೂಹಿಕ ಅತ್ಯಾಚಾರ) ಪ್ರಕರಣಕ್ಕೆ ಸಂಬಂಧಿಸಿದಂತೆ ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಅವರು ಕೇಂದ್ರ ಸರ್ಕಾರ ಮತ್ತು ಉತ್ತರ ಪ್ರದೇಶ ಸರ್ಕಾರದ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದಾರೆ. ನಿರ್ಭಯಾ ಘಟನೆ ನಡೆದು ಇಷ್ಟೊಂದು ವರ್ಷಗಳಾದ ಮೇಲೂ ಬಸ್‌ಗಳ ಪರಿಶೀಲನೆ ಮತ್ತು ನಿಯಂತ್ರಣದ ನಿಯಮಗಳನ್ನು ಏಕೆ ಪಾಲಿಸಲಾಗುತ್ತಿಲ್ಲ ಎಂದು ಪ್ರಶ್ನಿಸಿದ್ದಾರೆ.

- Advertisement -

ಘಟನೆಯ ಕುರಿತು ‘X’ (ಟ್ವಿಟರ್) ತಾಣದಲ್ಲಿ ಆಕ್ರೋಶ ವ್ಯಕ್ತಪಡಿಸಿರುವ ರಾಹುಲ್ ಗಾಂಧಿ, ದೆಹಲಿ-ಎನ್‌ಸಿಆರ್ ಪ್ರದೇಶವು ಮಹಿಳೆಯರಿಗೆ ಸಂಪೂರ್ಣವಾಗಿ ಅಸುರಕ್ಷಿತವಾಗಿದೆ ಎಂದು ಆರೋಪಿಸಿದ್ದಾರೆ. 47 ಕಿಲೋಮೀಟರ್‌ಗಳಿಗೂ ಹೆಚ್ಚು ದೂರ ಚಲಿಸುವ ಬಸ್‌ನಲ್ಲಿ ಈ ಕೃತ್ಯ ನಡೆದಿದ್ದರೂ ದೆಹಲಿ ಮತ್ತು ನೋಯ್ಡಾ ಪೊಲೀಸರಿಗೆ ಇದರ ಸುಳಿವೇ ಸಿಗದಿರುವುದು ಅತ್ಯಂತ ಆಶ್ಚರ್ಯಕರ ಸಂಗತಿಯಾಗಿದೆ ಎಂದು ಅಸಮಾಧಾನ ವ್ಯಕ್ತಪಡಿಸಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಮೋದಿ ಆಡಳಿತದಲ್ಲಿ ಮಾಹಿತಿ ಹಕ್ಕು ಕಾಯ್ದೆಯ ‘ಸ್ಥಿತಿ’ ಹೇಗಿದೆ?...

ಯಾವುದೇ ಸರ್ಕಾರ ಆಡಳಿತದಲ್ಲಿರಲಿ ಪ್ರಜಾಸತ್ತಾತ್ಮಕ ವ್ಯವಸ್ಥೆಯನ್ನು ಕಾಪಾಡಬೇಕಾದ ಸಂಸ್ಥೆಗಳ ಸ್ವಾಯತ್ತತೆ ಉಳಿಯಬೇಕು. ಅವು ಪಾರದರ್ಶಕವಾಗಿರಬೇಕು. ಪ್ರಜಾಸತ್ತೆಯ ಕಾರ್ಯವೈಖರಿಯನ್ನು ಕುರಿತಂತೆ ಮುಕ್ತ ಚರ್ಚೆ ನಡೆಯುತ್ತಿರಬೇಕು. ಇದು ಸಕ್ರಿಯ, ಅರ್ಥಪೂರ್ಣ ಪ್ರಜಾಸತ್ತೆಯ ಕನಿಷ್ಠ ಅವಶ್ಯಕತೆ. ಹಾಗಾಗಿ...

ಬಂಗಾಳ ವಿಭಜನೆ | ವಿಭಜನೆಯ ವಿಷಬೀಜದಿಂದ ಒಗ್ಗಟ್ಟಿನ ಜ್ಯೋತಿ...

ಬ್ರಿಟಿಷರ 'ಒಡೆದು ಆಳುವ ನೀತಿ'ಯ ಭಾಗವಾಗಿ 1905ರ ಅಕ್ಟೋಬರ್‌ನಲ್ಲಿ ಜಾರಿಗೆ ಬಂದ ಬಂಗಾಳ ವಿಭಜನೆಯು ಭಾರತೀಯರ ರಾಷ್ಟ್ರೀಯತೆಯನ್ನು ಒಡೆಯುವ ಕುತಂತ್ರವಾಗಿತ್ತು. ಇದಕ್ಕೆ ಪ್ರತಿಯಾಗಿ ಭಾರತೀಯರು 'ರಾಷ್ಟ್ರೀಯ ಶೋಕ ದಿನ' ಆಚರಿಸಿ, ಪರಸ್ಪರ ರಾಖಿ...

ನಟ ಇಮ್ರಾನ್ ಖಾನ್ ಪ್ರತಿಭಟಿಸಿದರೆ ಗಡಿಪಾರು; ಟ್ರಂಪ್ ಪರ...

ಕಾನೂನು ಮತ್ತು ರಾಜತಾಂತ್ರಿಕ ನಿಯಮಗಳು ಎಲ್ಲರಿಗೂ ಒಂದೇ ಆಗಿರಬೇಕು ಹೊರತು ಪ್ರಧಾನಿ ಮೋದಿಯವರ ರಾಜಕೀಯ ಅನುಕೂಲಕ್ಕೆ ತಕ್ಕಂತೆ ಬದಲಾಗಬಾರದು. ವಿದೇಶಿ ಪ್ರಜೆಯೊಬ್ಬ ಭಾರತದ ನೆಲದಲ್ಲಿ ಪ್ರತಿಭಟನೆಯಲ್ಲಿ ಪಾಲ್ಗೊಳ್ಳುವುದು ತಪ್ಪು ಎನ್ನುವುದಾದರೆ, ಭಾರತದ ಪ್ರಧಾನಿಯೊಬ್ಬರು...

ಇದನ್ನೂ ಓದಿ: ಘೋರ ಕೃತ್ಯ | ಪತಿ, ಮಗನ ಎದುರೇ ಬುಡಕಟ್ಟು ಮಹಿಳೆ ಮೇಲೆ ಸಾಮೂಹಿಕ ಅತ್ಯಾಚಾರ

ಗೃಹ ಸಚಿವ ಅಮಿತ್ ಶಾ ಅವರ ಅಧೀನದಲ್ಲಿರುವ ದೆಹಲಿ ಪೊಲೀಸ್ ಅಥವಾ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅವರ ಅಧೀನದಲ್ಲಿರುವ ಯುಪಿ ಪೊಲೀಸ್ ಇಲಾಖೆಗಳಿಂದ ಈ ಬಗ್ಗೆ ಯಾವುದೇ ಹೊಣೆಗಾರಿಕೆ ನಿರೀಕ್ಷಿಸಲು ಸಾಧ್ಯವಿಲ್ಲ, ಈ ಅಪರಾಧವನ್ನೂ ಮುಚ್ಚಿಹಾಕಲಾಗುತ್ತದೆ ಎಂದು ಆರೋಪಿಸಿದ್ದಾರೆ.

ನೋಯ್ಡಾ-ಗ್ರೇಟರ್ ನೋಯ್ಡಾ ಎಕ್ಸ್‌ಪ್ರೆಸ್‌ವೇ, ದೆಹಲಿಯ ರಿಂಗ್ ರೋಡ್ ಹಾಗೂ ರಾಜ್ಯದ ಗಡಿಗಳನ್ನು ದಾಟಿ ಬಸ್ ಸಾಗುತ್ತಿದ್ದರೂ, ಒಂದೇ ಒಂದು ಚೆಕ್‌ಪೋಸ್ಟ್‌ನಲ್ಲೂ ಬಸ್ಸನ್ನು ತಡೆಯಲಾಗಿಲ್ಲ. ಬಸ್ಸಿನ ಕಿಟಕಿಗಳಿಗೆ ಪರದೆಗಳನ್ನು ಎಳೆಯಲಾಗಿತ್ತು. “ಈ ಪರದೆಗಳು ಕೇವಲ ಬಸ್ಸಿನ ಕಿಟಕಿಗೆ ಮಾತ್ರ ಎಳೆದದ್ದಲ್ಲ; ಸರ್ಕಾರವು ವರ್ಷಗಳಿಂದ ತನ್ನ ಆಡಳಿತಾತ್ಮಕ ವೈಫಲ್ಯಗಳನ್ನು ಮುಚ್ಚಿಡಲು ಎಳೆಯುತ್ತಿರುವ ಪರದೆಗಳ ಸಂಕೇತವಾಗಿದೆ” ಎಂದು ರಾಹುಲ್ ಟ್ವೀಟ್ ಮಾಡಿದ್ದಾರೆ.

ಉತ್ತರ ಪ್ರದೇಶದ ಮೈನ್‌ಪುರಿಯ 11ನೇ ತರಗತಿ ವಿದ್ಯಾರ್ಥಿನಿ ಆಗಸ್ಟ್ 4ರ ರಾತ್ರಿ ತಾಯಿಯ ಕೋಪದಿಂದ ಮನೆ ಬಿಟ್ಟು ಬಂದಿದ್ದಳು. ಗ್ರೇಟರ್ ನೋಯ್ಡಾದ ಪರಿ ಚೌಕ್ ಬಳಿ ಮಳೆಯಲ್ಲಿ ಸಿಲುಕಿದ್ದ ಬಾಲಕಿಗೆ, ತಾಂತ್ರಿಕ ದುರಸ್ತಿಗೆಂದು ಗ್ಯಾರೇಜ್‌ನಿಂದ ಹೊರಟಿದ್ದ ಬಸ್ಸಿನ ಚಾಲಕ ಮತ್ತು ಕಂಡಕ್ಟರ್ ಡ್ರಾಪ್ ಕೊಡುವುದಾಗಿ ನಂಬಿಸಿ ಬಸ್‌ಗೆ ಹತ್ತಿಸಿಕೊಂಡಿದ್ದರು. ನಂತರ ಚಲಿಸುವ ಬಸ್‌ನಲ್ಲಿ ಬಾಲಕಿಯ ಮೇಲೆ ಗ್ಯಾಂಗ್‌ರೇಪ್ ಎಸಗಿ, ಹಳೆಯ ದೆಹಲಿಯ ಕಾಶ್ಮೀರಿ ಗೇಟ್ ಬಳಿ ಆಕೆಯನ್ನುಳಿದು ಪರಾರಿಯಾಗಿದ್ದರು. ಸದ್ಯ ಪ್ರಕರಣಕ್ಕೆ ಸಂಬಂಧಿಸಿದಂತೆ ದೆಹಲಿ ಪೊಲೀಸರು ಇಬ್ಬರೂ ಆರೋಪಿಗಳನ್ನು ಬಂಧಿಸಿದ್ದಾರೆ.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಈ ದಿನ ಸಂಪಾದಕೀಯ | ಅಂಕಿತಾ ಹತ್ಯೆ ಶಂಕಿತರಿಗೆ ಸಾಂವಿಧಾನಿಕ ಹುದ್ದೆ ಸರಿಯೇ?

ಅಂಕಿತಾ ಭಂಡಾರಿ ಕೊಲೆ ಪ್ರಕರಣದಲ್ಲಿದ್ದ ವಿಐಪಿ ದುಶ್ಯಂತ್‌ ಅವರ ಮೇಲಿನ...

‘ಮೋದಿಯನ್ನು ದೇವರನ್ನಾಗಿಸುವ ಯತ್ನ’: ಬಿಹಾರ ಸಿಎಂ ಹೇಳಿಕೆಗೆ ಪ್ರಶಾಂತ್ ಕಿಶೋರ್ ಕಿಡಿ

ಪ್ರಧಾನಿ ನರೇಂದ್ರ ಮೋದಿ ಅವರು ಶ್ರೀರಾಮನಿಗೂ ಮನೆ ಒದಗಿಸಿದರು ಎಂಬ ಬಿಹಾರ...

ಬಾಗಲಕೋಟೆ | ಎಸ್‌ಐಆರ್ ಪ್ರಕ್ರಿಯೆ ಸ್ಥಗಿತಕ್ಕೆ ಒತ್ತಾಯಿಸಿ ದಲಿತ ಸಂಘರ್ಷ ಸಮಿತಿ ಪ್ರತಿಭಟನೆ

ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ್ ಕುಮಾರ್ ವಜಾಗೊಳಿಸಿ, ಅವರ ವಿರುದ್ಧ ಕ್ರಿಮಿನಲ್...

ಬೆಳಗಾವಿ | ಚೂನಪ್ಪ ಪೂಜೇರಿ, ನಾನು ಸತ್ತರೂ ಒಂದೇ ಗೋರಿಯಲ್ಲಿ ಮಣ್ಣಾಗಬೇಕು: ಶಶಿಕಾಂತ ಗುರೂಜಿ

ಕಬ್ಬು ಬೆಳೆಗಾರರ ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಬೆಳಗಾವಿ ಜಿಲ್ಲೆಯ ಹತ್ತರಗಿ...