ಮೋದಿ ದ್ವೇಷ ಭಾಷಣದ ವಿರುದ್ಧ ಕ್ರಮ ಕೈಗೊಳ್ಳದ ಚುನಾವಣಾ ಆಯೋಗ: ಹೈಕೋರ್ಟ್ ಮೆಟ್ಟಿಲೇರಿದ ಕಾಂಗ್ರೆಸ್

Date:

ಲೋಕಸಭಾ ಚುನಾವಣೆ ವೇಳೆ ದ್ವೇಷ ಭಾಷಣ ಮಾಡುತ್ತಿರುವ ಪ್ರಧಾನಿ ನರೇಂದ್ರ ಮೋದಿ ಅವರಿಂದ ವಿವರಣೆ ಪಡೆಯುವಂತೆ ಭಾರತ ಚುನಾವಣಾ ಆಯೋಗಕ್ಕೆ ನಿರ್ದೇಶನ ನೀಡಬೇಕು ಎಂದು ಕೋರಿ ತಮಿಳುನಾಡು ಕಾಂಗ್ರೆಸ್‌ ಸಮಿತಿ (ಟಿಎನ್‌ಸಿಸಿ) ಮದ್ರಾಸ್‌ ಹೈಕೋರ್ಟ್‌ಗೆ ಅರ್ಜಿ ಸಲ್ಲಿಸಿದೆ.

- Advertisement -

ಮೋದಿಯವರ ದ್ವೇಷ ಭಾಷಣಗಳ ವಿರುದ್ಧ ಕೇಂದ್ರ ಚುನಾವಣಾ ಆಯೋಗಕ್ಕೆ ಹಲವು ದೂರುಗಳನ್ನು ಸಲ್ಲಿಸಲಾಗಿದ್ದರೂ, ಆಯೋಗವು ನೇರವಾಗಿ ನರೇಂದ್ರ ಮೋದಿ ಅವರನ್ನು ಪ್ರಶ್ನೆ ಕೇಳುವ ಬದಲು ಬಿಜೆಪಿಗೆ ಕೇವಲ ಒಂದು ಶೋಕಾಸ್‌ ನೋಟಿಸ್‌ ನೀಡಿದೆ ಎಂದು ತಮಿಳುನಾಡು ಕಾಂಗ್ರೆಸ್ ಅಧ್ಯಕ್ಷ ಕೆ ಸೆಲ್ವಪೆರುಂತಗೈ ಅವರು ತಮ್ಮ ಅರ್ಜಿಯಲ್ಲಿ ತಿಳಿಸಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಬ್ರಿಟಿಷ್ ಕಾಲದ ʼಗುಲಾಮಗಿರಿʼ ಕಾನೂನುಗಳೇ ಇಂದಿನ ಪೊಲೀಸ್‌ ವ್ಯವಸ್ಥೆಯ...

ಸ್ವಾತಂತ್ರ್ಯ ಬಂದು ದಶಕಗಳೇ ಕಳೆದಿದ್ದರೂ, ನಾವಿನ್ನೂ ಬ್ರಿಟಿಷರು ಭಾರತೀಯರನ್ನು ದಮನ ಮಾಡಲು ರೂಪಿಸಿದ 1861ರ ಪೊಲೀಸ್ ಕಾಯಿದೆಯ ನೆರಳಿನಲ್ಲೇ ಬದುಕುತ್ತಿದ್ದೇವೆಯೇ? ಖಾಕಿ ಪಡೆಯನ್ನು 'ಪ್ರಜೆಗಳ ರಕ್ಷಕ'ನಾಗಿಸಬೇಕಿದ್ದ ವ್ಯವಸ್ಥೆ, ಇಂದಿಗೂ ರಾಜಕಾರಣಿಗಳ ಕೈಗೊಂಬೆಯಾಗಿ ಉಳಿದುಕೊಳ್ಳಲು...

ಯಾರು ಹಿತವರು ಈ ಇಬ್ಬರೊಳಗೆ? ನೇಹಾ ಬೋರಾ ಅಭಿಜಿತ್...

“ಹೋಲಿಕೆ ಬೇಡ, ಒಗ್ಗಟ್ಟು ಬೇಕು. ನಾವೆಲ್ಲರೂ ಒಟ್ಟಾಗಿ ಚುನಾವಣಾ ಆಯೋಗದ ಅಕ್ರಮಗಳ ವಿರುದ್ಧ ಹೋರಾಡಬೇಕು” ಎಂದು ನೇಹಾ ಬರೆದರೆ, ಅದಕ್ಕೆ ಅಭಿಜೀತ್ ಉತ್ತರ- “ಇಂಕ್ವಿಲಾಬ್ ಜಿಂದಾಬಾದ್” ನೇಹಾ ಬೋರಾ ಮತ್ತು ಅಭಿಜಿತ್ ದೀಪ್ಕೆ ನಡುವೆ...

ಸ್ವತಂತ್ರ ಸಾಂವಿಧಾನಿಕ ಸಂಸ್ಥೆಗಳ ಮೇಲಿನ ನಂಬಿಕೆಯನ್ನು ಕಸಿದುಕೊಳ್ಳುತ್ತಿರುವ ಚುನಾವಣಾ...

ನ್ಯಾಯಾಲಯ ಮತ್ತು ಚುನಾವಣಾ ಆಯೋಗಗಳ 'ಸ್ವತಂತ್ರತೆ' ಎಂಬ ಮುಖವಾಡವೇ ಈಗ ಸರ್ಕಾರಕ್ಕೆ ರಕ್ಷಣಾ ಕವಚವಾಗಿ ಕೆಲಸ ಮಾಡುತ್ತಿದೆ. ಹೀಗಾಗಿ ಇವತ್ತು ವಿರೋಧ ಪಕ್ಷಗಳ ಆಕ್ರೋಶವೆಲ್ಲವೂ ಸಾಂವಿಧಾನಿಕ ಸಂಸ್ಥೆಗಳ ಕಡೆಗೆ ತಿರುಗಿದೆ. ಸರ್ಕಾರ ತೀರಾ...

ಏಪ್ರಿಲ್ 21ರಿಂದ ಅನೇಕ ಚುನಾವಣಾ ಸಭೆಗಳಲ್ಲಿ ಪ್ರಧಾನಿ ಮುಸ್ಲಿಮರ ವಿರುದ್ಧ ದ್ವೇಷ ಭಾಷಣ ಮಾಡಿದ್ದಾರೆ. ದ್ವೇಷ ಭಾಷಣಗಳಿಗೆ ಸಂಬಂಧಿಸಿದಂತೆ ಖುದ್ದು ಮೋದಿಯೇ ಅಪರಾಧಿಯಾಗಿದ್ದಾರೆ. ಅವಹೇಳನಕಾರಿ ಮತ್ತು ವಿಭಜನಕಾರಿ ಭಾಷಣಗಳಿಗೆ ಮೋದಿ ಅವರು ಏಕಮಾತ್ರ ಜವಾಬ್ದಾರರಾಗಿದ್ದಾರೆ. ಕ್ರಮ ಕೈಗೊಳ್ಳದ ಚುನಾವಣಾ ಆಯೋಗದ ಮೃದು ಧೋರಣೆ ತಪ್ಪು ಸಂದೇಶ ನೀಡಲಿದ್ದು, ದೇಶದ ಸಂಪೂರ್ಣ ಚುನಾವಣಾ ಪ್ರಕ್ರಿಯೆಯ ಸಮಗ್ರತೆಯನ್ನು ಹಾಳುಮಾಡುತ್ತದೆ ಎಂದು ಅರ್ಜಿಯಲ್ಲಿ ತಿಳಿಸಲಾಗಿದೆ.

ಈ ಸುದ್ದಿ ಓದಿದ್ದೀರಾ? ಈ ದಿನ ಸಂಪಾದಕೀಯ | ಮಕ್ಕಳ ಬಗೆಗಿನ ಮಮಕಾರ ಮತ್ತು ಮೋದಿಯ ಸೋಗಲಾಡಿತನ

ಬಿಜೆಪಿ 2024ರ ಲೋಕಸಭೆ ಚುನಾವಣೆಯನ್ನು ಶತಾಯಗತಾಯ ಗೆಲ್ಲಲು ಯತ್ನಿಸುತ್ತಿದ್ದು ಕೋಮುವಾದದ ಮೂಲಕ ವಿಭಜನೆಯ ಪ್ರಚಾರದಲ್ಲಿ ತೊಡಗಿದೆ. ಸ್ವತಃ ಪ್ರಧಾನಿಯೇ ಮುಸ್ಲಿಮರನ್ನು “ನುಸುಳುಕೋರರು” ಮತ್ತು “ಹೆಚ್ಚು ಮಕ್ಕಳನ್ನು ಹೊಂದಿರುವವರು” ಎಂದು ಕರೆದಿದ್ದಾರೆ. ಕಾಂಗ್ರೆಸ್ ಪಕ್ಷದ ಪ್ರಣಾಳಿಕೆಯ ಬಗ್ಗೆ ಪ್ರಧಾನಿ ತಪ್ಪುದಾರಿಗೆಳೆಯುವ ಮತ್ತು ಅವಹೇಳನಕಾರಿ ಹೇಳಿಕೆಗಳನ್ನು ನೀಡಿದ್ದು ಹೀಗೆ ಅವಹೇಳನಕಾರಿ ಹೇಳಿಕೆಗಳನ್ನು ನೀಡುವುದನ್ನು ತಡೆಯಬೇಕು ಅರ್ಜಿಯಲ್ಲಿ ಕೆ ಸೆಲ್ವಪೆರುಂತಗೈ ತಿಳಿಸಿದ್ದಾರೆ.

ವಿರೋಧಿಗಳು ಗೆಲುವು ಸಾಧಿಸಿದರೆ ಹಿಂದೂಗಳ ಸಂಪತ್ತು ಮುಸ್ಲಿಮರ ಕೈ ಸೇರುತ್ತಾರೆ ಎಂಬ ಅವರ ಮಾತೂ ಪ್ರತಿರೋಧಕ್ಕೆ ಅರ್ಹವಾದುದು. ಮೇ 1 ರಂದು ಚೆನ್ನೈನಲ್ಲಿರುವ ಮುಖ್ಯ ಚುನಾವಣಾಧಿಕಾರಿಗಳ ಕಚೇರಿಗೆ ಈ ಕುರಿತು ಪತ್ರ ಬರೆದಿದ್ದರೂ ಅವರು ಇದುವರೆಗೆ ಕ್ರಮ ಕೈಗೊಂಡಿಲ್ಲ. ಆದ್ದರಿಂದ ಹೈಕೋರ್ಟ್‌ಗೆ ಪ್ರಸ್ತುತ ಅರ್ಜಿ ಸಲ್ಲಿಸಲಾಗಿದ್ದು ಮೋದಿ ಅವರಿಂದ ವಿವರಣೆ ಪಡೆಯುವಂತೆ ಚುನಾವಣಾ ಆಯೋಗಕ್ಕೆ ನಿರ್ದೇಶನ ನೀಡಬೇಕು ಎಂದು ಮನವಿ ಮಾಡಿದ್ದಾರೆ.

ಅರ್ಜಿಯನ್ನು ನ್ಯಾಯಮೂರ್ತಿಗಳಾದ ಎ ಡಿ ಜಗದೀಶ್ ಚಂದಿರ ಮತ್ತು ಆರ್ ಕಲೈಮತಿ ಅವರಿದ್ದ ರಜಾಕಾಲೀನ ಪೀಠದೆದುರು ಪ್ರಸ್ತಾಪಿಸಲಾಯಿತು. ಆದರೆ ಪೀಠ, ರಿಜಿಸ್ಟ್ರಿ ಮೂಲಕ ವಿಚಾರಣೆಗೆ ಸಂಖ್ಯೆ ಪಡೆಯುವಂತೆ ಸೂಚಿಸಿತು.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಶಾಲಾ ಸಮಸ್ಯೆಗಳ ಕುರಿತು ಗ್ರಾಮ ಸಭೆಯಲ್ಲಿ ಧ್ವನಿ ಎತ್ತಿದ ವಿದ್ಯಾರ್ಥಿಗಳು; ಅಧಿಕಾರಿಗಳ ಮೆಚ್ಚುಗೆ-ಭರವಸೆ

ಸರ್ಕಾರಿ ಶಾಲಾ ವಿದ್ಯಾರ್ಥಿಗಳು ‘ವಿಶೇಷ ಗ್ರಾಮ ಸಭೆ’ಗಳಲ್ಲಿ ಪಾಲ್ಗೊಂಡು, ಪಂಚಾಯತ್ ಪ್ರತಿನಿಧಿಗಳು...

ಉತ್ತರಾಖಂಡ SIR ಅಂತಿಮ ಮತದಾರರ ಪಟ್ಟಿ ಪ್ರಕಟ: ಆದರೆ ಮುಗಿದಿಲ್ಲ ನೋಂದಣಿ ಪ್ರಕ್ರಿಯೆ

ಉತ್ತರಾಖಂಡ ರಾಜ್ಯದಲ್ಲಿ ನಡೆದ 'ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ' (ಎಸ್‌ಐಆರ್)...

ವಾಹನ ದಟ್ಟಣೆಯ ಸುಳಿಯಲ್ಲಿ ಮನಾಲಿ; ಪ್ರವಾಸೋದ್ಯಮದ ಒತ್ತಡಕ್ಕೆ ನಲುಗುತ್ತಿವೆಯೇ ಬೆಟ್ಟಗಳು?

ಮುಂಗಾರು ಮಳೆ ಕಡಿಮೆಯಾಗುತ್ತಿದ್ದಂತೆ ಹಿಮಾಚಲ ಪ್ರದೇಶದ ಪ್ರವಾಸಿ ತಾಣಗಳಿಗೆ ಪ್ರವಾಸಿಗರ ಆಗಮನ...