ಪ್ರಧಾನಿ ಮೋದಿಯನ್ನು ಭೇಟಿಯಾದ ತಮಿಳು ಸಿಎಂ ವಿಜಯ್; ಮೇಕೆದಾಟು ಯೋಜನೆ ಅನುಮತಿಸದಂತೆ ಒತ್ತಾಯ

Date:

ತಮಿಳುನಾಡು ಮುಖ್ಯಮಂತ್ರಿ ಜೋಸೆಫ್ ವಿಜಯ್ ಅವರು ದೆಹಲಿಗೆ ತೆರಳಿದ್ದು, ಪ್ರಧಾನಿ ಮೋದಿ ಅವರನ್ನು ಭೇಟಿ ಮಾಡಿದ್ದಾರೆ. ಭೇಟಿಯ ವೇಳೆ, ತಮಿಳುನಾಡಿನ ಹಿತಾಸಕ್ತಿಗೆ ಸಂಬಂಧಿಸಿದ ಹಲವು ಪ್ರಮುಖ ಬೇಡಿಕೆಗಳಿರುವ ಜ್ಞಾಪಕ ಪತ್ರವನ್ನು ಪ್ರಧಾನಿ ಮೋದಿಯವರಿಗೆ ವಿಜಯ್ ಸಲ್ಲಿಸಿದ್ದಾರೆ ಎಂದು ತಿಳಿದುಬಂದಿದೆ.

- Advertisement -

ಭೇಟಿಯ ಸಮಯದಲ್ಲಿ, ‘ಕರ್ನಾಟಕ ಸರ್ಕಾರವು ಕಾವೇರಿ ನದಿಗೆ ಅಡ್ಡಲಾಗಿ ಕಟ್ಟಲು ಮುಂದಾಗಿರುವ ‘ಮೇಕೆದಾಟು ಅಣೆಕಟ್ಟು ಯೋಜನೆ’ಗೆ ಕೇಂದ್ರ ಸರ್ಕಾರ ಅನುಮತಿ ನೀಡಬಾರದು’ ಎಂದು ಪ್ರಧಾನಿ ಮೋದಿ ಅವರನ್ನು ಸಿಎಂ ವಿಜಯ್ ಒತ್ತಾಯಿದ್ದಾರೆ ಎಂದು ಹೇಳಲಾಗಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಶಿಕ್ಷಣ ಮಾರಾಟ ಮಾಡಿದ ಶಾಲೆಗಳೇ ಈಗ ಮಾರಾಟಕ್ಕೆ!

ಕರ್ನಾಟಕದಲ್ಲಿ ಖಾಸಗಿ ಶಾಲೆಗಳು ಮುಚ್ಚುವ ಹಂತಕ್ಕೆ ತಲುಪಿದ್ದು, ಮಾರಾಟಕ್ಕೆ ಸಜ್ಜಾಗಿವೆ. ಕೋವಿಡ್-19 ಆಕ್ರಮಣದ ನಂತರದಲ್ಲಿ ಖಾಸಗಿ ಶಾಲೆಗಳಲ್ಲಿ ದಾಖಲಾತಿಯಲ್ಲಿ ಭಾರೀ ಕುಸಿತ, ಪ್ರತಿಷ್ಠಿತ ಶಾಲೆಗಳ ಜೊತೆಗೆ ಪೈಪೋಟಿ, ಮೂಲಭೂತ ಸೌಕರ್ಯಕ್ಕೆ ತಕ್ಕಂತೆ ಲಾಭದ...

ಬಿಗಿದ ತುಟಿಯ ದೃಶ್ಯಭಾಷೆ: ನಿರ್ಬಂಧಗಳ ನೆರಳಲ್ಲಿ ರೂಪಕಗಳ ಪ್ರತಿರೋಧ

ಸಿನೆಮಾವನ್ನು ನಿಯಂತ್ರಿಸಲು ಅಧಿಕಾರಶಾಹಿ ಸದಾ ಹೊಸ ಕಟ್ಟುಪಾಡುಗಳನ್ನು ಸೃಷ್ಟಿಸುತ್ತಲೇ ಇರುತ್ತದೆ; ಆದರೆ ಕಲೆಗೆ ಇರುವ ಶಕ್ತಿಯೆಂದರೆ, ಅದು ನಿರ್ಬಂಧಗಳ ಗೋಡೆಗಳನ್ನೇ ಹೊಸ ನೋಟದ ಕಿಟಕಿಗಳನ್ನಾಗಿಸಿಕೊಳ್ಳುತ್ತದೆ. ನೇರ ಮಾತನ್ನು ಕಸಿದುಕೊಂಡಷ್ಟೂ ರೂಪಕಗಳ ನಡಿಗೆ ಬಿಗಿಯಾಗುತ್ತದೆ,...

ಕತೆ | ಪೌರಶ್ರೀ – ಐಸಾಕ್‌ ಅಸಿಮೋವ್

ಪೌರಶ್ರೀ ಓದುವುದಕ್ಕೂ ಮುನ್ನ- ಒಂದು ಪುಟ್ಟ ಟಿಪ್ಪಣಿ ಈ ಸಹಸ್ರಮಾನದ ಅತ್ಯದ್ಭುತ ವೈಜ್ಞಾನಿಕ ಲೇಖಕ ರಲ್ಲಿ ಒಬ್ಬರು ಅಮೆರಿಕ ಬೋಸ್ಟನ್ ವಿಶ್ವ ವಿದ್ಯಾಲಯ ದಲ್ಲಿ ರಸಾಯನ ಶಾಸ್ತ್ರದ ಪ್ರಾಧ್ಯಾಪಕರಾಗಿದ್ದ ಐಸಾಕ್ ಅಸಿಮೋವ್. ವಿಶ್ವ...

“ಮೇಕೆದಾಟು ಯೋಜನೆ ಜಾರಿಯು 2018ರ ಕಾವೇರಿ ಜಲ ವಿವಾದ ನ್ಯಾಯಾಧಿಕರಣದ ತೀರ್ಪಿನ ಸ್ಪಷ್ಟ ಉಲ್ಲಂಘನೆಯಾಗುತ್ತದೆ. ಇದರಿಂದ, ತಮಿಳುನಾಡಿನ ರೈತರಿಗೆ ಭಾರಿ ಅನ್ಯಾಯವಾಗುತ್ತದೆ” ಎಂದು ವಿಜಯ್ ತಮ್ಮ ನಿಲುವನ್ನು ಸ್ಪಷ್ಟಪಡಿಸಿರುವುದಾಗಿ ವರದಿಯಾಗಿದೆ.

ಇನ್ನು, ತಮಿಳುನಾಡಿನ ವಿವಿಧ ಜನಕಲ್ಯಾಣ ಯೋಜನೆಗಳನ್ನು ಮುನ್ನಡೆಸಲು ಕೇಂದ್ರದ ಆರ್ಥಿಕ ಬೆಂಬಲದ ಅಗತ್ಯವಿದೆ. ರಾಜ್ಯಕ್ಕೆ ಕೇಂದ್ರದಿಂದ ಬರಬೇಕಾದ ಜಿಎಸ್‌ಟಿ ಬಾಕಿ ಹಣವನ್ನು ಶೀಘ್ರವಾಗಿ ಬಿಡುಗಡೆ ಮಾಡಬೇಕು ಎಂದು ಮೋದಿ ಅವರಿಗೆ ವಿಜಯ್ ಮನವಿ ಮಾಡಿದ್ದಾರೆ.

ಜೊತೆಗೆ, ರಾಜ್ಯದ ಮೂಲಸೌಕರ್ಯ ಅಭಿವೃದ್ಧಿ ಯೋಜನೆಗಳಿಗೆ ವಿಶೇಷ ಹಣಕಾಸು ಪ್ಯಾಕೇಜ್ ನೀಡುವಂತೆಯೂ ಕೋರಿದ್ದಾರೆ.

ತಮಿಳುನಾಡಿನ ರಾಜಧಾನಿ ಚೆನ್ನೈನ ಸಂಚಾರ ದಟ್ಟಣೆ ನಿಯಂತ್ರಿಸಲು ಅತ್ಯಂತ ನಿರ್ಣಾಯಕವಾಗಿರುವ ‘ಚೆನ್ನೈ ಮೆಟ್ರೋ ರೈಲು ಯೋಜನೆ’ಯ ಮುಂದಿನ ಹಂತದ ವಿಸ್ತರಣೆಗೆ ಕೇಂದ್ರದ ಅನುಮೋದನೆ. ನಿಧಿ ಬಿಡುಗಡೆಯನ್ನು ತ್ವರಿತಗೊಳಿಸುವಂತೆ ಸಿಎಂ ವಿಜಯ್ ಒತ್ತಾಯಿಸಿರುವುದಾಗಿ ವರದಿಯಾಗಿದೆ.

ಗಮನಾರ್ಹವಾಗಿ, ತಮಿಳುನಾಡಿನ ಜವಳಿ ಉದ್ಯಮದ ಹಿತರಕ್ಷಣೆಗಾಗಿ, ಜವಳಿ ಉದ್ಯಮಕ್ಕೆ ಅಗತ್ಯವಿರುವ ಕಚ್ಚಾ ವಸ್ತುಗಳ ಸುಲಭ ಲಭ್ಯತೆಗಾಗಿ ಹತ್ತಿಯ ಮೇಲಿರುವ 11%ರಷ್ಟು ಆಮದು ಸುಂಕವನ್ನು ಸಂಪೂರ್ಣವಾಗಿ ರದ್ದುಗೊಳಿಸಬೇಕು ಎಂದು ವಿಜಯ್ ಕೋರಿದ್ದಾರೆ.

ಈ ಲೇಖನ ಓದಿದ್ದೀರಾ?: ಮುಖ್ಯಮಂತ್ರಿ ಬದಲಾವಣೆ: ಏನಾಗಲಿದೆ ಸರ್ಕಾರದ ಭವಿಷ್ಯ?

ಮುಂಬರುವ ಮುಂಗಾರು ಹಂಗಾಮಿನ ಕೃಷಿ ಚಟುವಟಿಕೆಗಳಿಗೆ ತಮಿಳುನಾಡಿಗೆ ಯಾವುದೇ ವ್ಯತ್ಯಯವಿಲ್ಲದೆ ನಿರಂತರವಾಗಿ ರಸಗೊಬ್ಬರ ಪೂರೈಕೆ ಮಾಡುವುದನ್ನು ಕೇಂದ್ರ ಸರ್ಕಾರ ಖಚಿತಪಡಿಸಬೇಕು ಎಂದು ಮನವಿ ಮಾಡಿದ್ದಾರೆ.

ದೆಹಲಿಯಲ್ಲಿಯೇ ಇರುವ ಮುಖ್ಯಮಂತ್ರಿ ವಿಜಯ್ ಅವರು ಕೇಂದ್ರ ಗೃಹ ಸಚಿವ ಅಮಿತ್ ಶಾ, ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಹಾಗೂ ಉಪರಾಷ್ಟ್ರಪತಿ ಸಿ.ಪಿ. ರಾಧಾಕೃಷ್ಣನ್ ಅವರನ್ನು ಭೇಟಿ ಮಾಡುವ ಸಾಧ್ಯತೆಗಳಿವೆ ಎಂದು ವರದಿಗಳು ಹೇಳಿವೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸುಪ್ರೀಂ ಆದೇಶ ಉಲ್ಲಂಘನೆ: ಕಾನೂನುಬಾಹಿರ ವಶಕ್ಕೆ ತಡೆ ಇದ್ದರೂ 100ಕ್ಕೂ ಹೆಚ್ಚು ಪ್ರತಿಭಟನಾಕಾರರ ಬಂಧನ!

ರಾಜಧಾನಿ ದೆಹಲಿಯಲ್ಲಿ ಕನ್ಹಾಟ್ ಪ್ಲೇಸ್ ಹಾಗೂ ಜಂತರ್ ಮಂತರ್ ಸುತ್ತಮುತ್ತ ನಡೆಯುತ್ತಿರುವ...

ಗ್ಯಾನೂ ವಿರುದ್ಧ ಪ್ರತಿಭಟನೆ: ವಿದ್ಯಾರ್ಥಿ ನಾಯಕಿ ನೇಹಾ ಬೋರಾ ಬಂಧನ

ದೆಹಲಿಯಲ್ಲಿ ಚುನಾವಣಾ ಆಯೋಗ ಮತ್ತು ಕೇಂದ್ರ ಸರ್ಕಾರದ ವಿರುದ್ಧದ ಪ್ರತಿಭಟನೆಗಳು ಭಾನುವಾರವೂ...

ಸಿಜೆಪಿ ಪ್ರತಿಭಟನೆ: ವಿದ್ಯಾರ್ಥಿ, ಯುವತಿಯರ ಮೇಲೆ ಹಲ್ಲೆ; ನಾಲ್ವರು RSS ಗೂಂಡಾಗಳ ಬಂಧನ

ದೆಹಲಿಯಲ್ಲಿ ನಡೆದ 'ಕಾಕ್ರೋಚ್ ಜನತಾ ಪಾರ್ಟಿ' (CJP) ಪ್ರತಿಭಟನೆಯ ಸಂದರ್ಭದಲ್ಲಿ ವಿದ್ಯಾರ್ಥಿಗಳು...