2000 ಕೋಟಿ ರೂ. ಮೊತ್ತದ ಅಂತಾರಾಷ್ಟ್ರೀಯ ಮಟ್ಟದ ಡ್ರಗ್ ಜಾಲ ಪತ್ತೆ: ತಮಿಳು ನಿರ್ಮಾಪಕ ಜಾಲದ ಪ್ರಮುಖ ರೂವಾರಿ

Date:

ನಾರ್ಕೋಟಿಕ್ಸ್ ಕಂಟ್ರೋಲ್ ಬ್ಯೂರೊ (ಎನ್‌ಸಿಬಿ) ಹಾಗೂ ದೆಹಲಿ ವಿಶೇಷ ಪೊಲೀಸ್ ಜಂಟಿ ಕಾರ್ಯಾಚರಣೆಯಿಂದ ಅಂತಾರಾಷ್ಟ್ರೀಯ ಡ್ರಗ್‌ ಜಾಲವನ್ನು ಪತ್ತೆ ಹಚ್ಚಿದ್ದು ಸುಮಾರು 50 ಕೆಜಿ ಮಾದಕ ವಸ್ತುವನ್ನು ವಶಪಡಿಸಿಕೊಂಡಿದೆ. ಪ್ರಕರಣಕ್ಕೆ ಸಂಬಂಧಿಸಿ ದೆಹಲಿಯಲ್ಲಿ ಮೂವರನ್ನು ಬಂಧಿಸಲಾಗಿದೆ.

- Advertisement -

ಪತ್ತೆಹಚ್ಚಲಾದ ಡ್ರಗ್‌ ಜಾಲವು ಭಾರತ ಮಾತ್ರವಲ್ಲದೆ ನ್ಯೂಜಿಲೆಂಡ್, ಆಸ್ಟ್ರೇಲಿಯಾ ಹಾಗೂ ಮಲೇಷಿಯಾದಲ್ಲೂ ಜಾಲ ಹೊಂದಿದೆ. ಪ್ರಕರಣದ ಪ್ರಮುಖ ರೂವಾರಿ ತಮಿಳು ನಿರ್ಮಾಪಕನಾಗಿದ್ದು, ಈತ ಸದ್ಯ ತಲೆಮರೆಸಿಕೊಂಡಿದ್ದಾನೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಬ್ರಿಟಿಷ್ ಕಾಲದ ʼಗುಲಾಮಗಿರಿʼ ಕಾನೂನುಗಳೇ ಇಂದಿನ ಪೊಲೀಸ್‌ ವ್ಯವಸ್ಥೆಯ...

ಸ್ವಾತಂತ್ರ್ಯ ಬಂದು ದಶಕಗಳೇ ಕಳೆದಿದ್ದರೂ, ನಾವಿನ್ನೂ ಬ್ರಿಟಿಷರು ಭಾರತೀಯರನ್ನು ದಮನ ಮಾಡಲು ರೂಪಿಸಿದ 1861ರ ಪೊಲೀಸ್ ಕಾಯಿದೆಯ ನೆರಳಿನಲ್ಲೇ ಬದುಕುತ್ತಿದ್ದೇವೆಯೇ? ಖಾಕಿ ಪಡೆಯನ್ನು 'ಪ್ರಜೆಗಳ ರಕ್ಷಕ'ನಾಗಿಸಬೇಕಿದ್ದ ವ್ಯವಸ್ಥೆ, ಇಂದಿಗೂ ರಾಜಕಾರಣಿಗಳ ಕೈಗೊಂಬೆಯಾಗಿ ಉಳಿದುಕೊಳ್ಳಲು...

ಯಾರು ಹಿತವರು ಈ ಇಬ್ಬರೊಳಗೆ? ನೇಹಾ ಬೋರಾ ಅಭಿಜಿತ್...

“ಹೋಲಿಕೆ ಬೇಡ, ಒಗ್ಗಟ್ಟು ಬೇಕು. ನಾವೆಲ್ಲರೂ ಒಟ್ಟಾಗಿ ಚುನಾವಣಾ ಆಯೋಗದ ಅಕ್ರಮಗಳ ವಿರುದ್ಧ ಹೋರಾಡಬೇಕು” ಎಂದು ನೇಹಾ ಬರೆದರೆ, ಅದಕ್ಕೆ ಅಭಿಜೀತ್ ಉತ್ತರ- “ಇಂಕ್ವಿಲಾಬ್ ಜಿಂದಾಬಾದ್” ನೇಹಾ ಬೋರಾ ಮತ್ತು ಅಭಿಜಿತ್ ದೀಪ್ಕೆ ನಡುವೆ...

ಸ್ವತಂತ್ರ ಸಾಂವಿಧಾನಿಕ ಸಂಸ್ಥೆಗಳ ಮೇಲಿನ ನಂಬಿಕೆಯನ್ನು ಕಸಿದುಕೊಳ್ಳುತ್ತಿರುವ ಚುನಾವಣಾ...

ನ್ಯಾಯಾಲಯ ಮತ್ತು ಚುನಾವಣಾ ಆಯೋಗಗಳ 'ಸ್ವತಂತ್ರತೆ' ಎಂಬ ಮುಖವಾಡವೇ ಈಗ ಸರ್ಕಾರಕ್ಕೆ ರಕ್ಷಣಾ ಕವಚವಾಗಿ ಕೆಲಸ ಮಾಡುತ್ತಿದೆ. ಹೀಗಾಗಿ ಇವತ್ತು ವಿರೋಧ ಪಕ್ಷಗಳ ಆಕ್ರೋಶವೆಲ್ಲವೂ ಸಾಂವಿಧಾನಿಕ ಸಂಸ್ಥೆಗಳ ಕಡೆಗೆ ತಿರುಗಿದೆ. ಸರ್ಕಾರ ತೀರಾ...

ವಶಪಡಿಸಿಕೊಳ್ಳಲಾದ ಸ್ಯೂಡೋಫೆಡ್ರಿನ್ ಮಾದಕ ವಸ್ತುವು ಮೆಥಂಪಟಮೈನ್ ತಯಾರಿಸಲು ಬಳಸುತ್ತಾರೆ. ಇದು ಅತ್ಯಂತ ಅಪಾಯಕಾರಿಯಾಗಿದ್ದು ವ್ಯಸನಕಾರಿ ಸಂಷ್ಲೇಷಿತ ಮಾದಕ ದ್ರವ್ಯವಾಗಿದೆ. ಈ ದ್ರವ್ಯವು ಕಾನೂನಿನ ಕೆಲ ಬಳಕೆಯನ್ನು ಹೊಂದಿದ್ದರೂ ಭಾರತದಲ್ಲಿ ನಿಯಂತ್ರಿತ ವಸ್ತುವಾಗಿ ವರ್ಗಿಕರಿಸಲಾಗಿದೆ.ಇವುಗಳ ಉತ್ಪಾದನೆ,ಮಾರಾಟ, ರಫ್ತು ಹಾಗೂ ಬಳಕೆಯ ಮೇಲೆ ಕಟ್ಟುನಿಟ್ಟಾದ ನಿಯಂತ್ರಣವಿದೆ.

ಈ ಮಾದಕ ವಸ್ತುವನ್ನು ಅಕ್ರಮವಾಗಿ ಉತ್ಪಾದನೆ ಹಾಗೂ ಮಾರಾಟ ಮಾಡಿದರೆ ಎನ್‌ಡಿಪಿಎಸ್‌ ಕಾಯ್ದೆ 1985ರ ಪ್ರಕಾರ 10 ವರ್ಷಗಳ ಕಾಲ ಕಠಿಣ ಶಿಕ್ಷೆಗೆ ಒಳಪಡಿಸಲಾಗುತ್ತದೆ.

ಈ ಸುದ್ದಿ ಓದಿದ್ದೀರಾ? ಈ ದಿನ ಸಂಪಾದಕೀಯ | ವಿಪಕ್ಷ ನಾಯಕ ಅಶೋಕ್ ಮತ್ತು ಸಾರ್ವಜನಿಕ ಸಭ್ಯತೆ

ನಿಷೇಧಿತ ಮಾದಕ ವಸ್ತುವನ್ನು ಅಡುಗೆ ಸಾಮಗ್ರಿಗಳ ರೀತಿಯಲ್ಲಿ ವಿಮಾನ ಹಾಗೂ ಸಮುದ್ರ ಸಂಚಾರದ ಮೂಲಕ ಕಳ್ಳಸಾಗಣೆ ಮಾಡಲಾಗುತ್ತಿತ್ತು.

ನ್ಯೂಜಿಲೆಂಡ್ ಹಾಗೂ ಆಸ್ಟ್ರೇಲಿಯಾ ದೇಶಗಳಿಗೆ ಸ್ಯೂಡೋಫೆಡ್ರಿನ್ ಮಾದಕ ವಸ್ತುವನ್ನು ಕಳ್ಳಸಾಗಣೆ ಮಾಡಲಾಗುತ್ತಿದೆ ಎಂದು ನ್ಯೂಜಿಲೆಂಡ್ ಕಸ್ಟಮ್ಸ್ ಹಾಗೂ ಆಸ್ಟ್ರೇಲಿಯಾ ಪೊಲೀಸರು ನಾರ್ಕೋಟಿಕ್ಸ್ ಕಂಟ್ರೋಲ್ ಬ್ಯೂರೊ ಅವರಿಗೆ ಮಾಹಿತಿ ನೀಡಿದ್ದರು.

ಇವೆರೆಡು ದೇಶಗಳಿಗೆ ಸ್ಯೂಡೋಫೆಡ್ರಿನ್ ಮಾದಕ ವಸ್ತುವನ್ನು ಒಂದು ಕೆಜಿಗೆ ಅಂದಾಜು 1.5 ಕೋಟಿ ರೂ.ಗಳಿಗೆ ಮಾರಾಟ ಮಾಡಲಾಗುತ್ತಿತ್ತು ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಅಮೆರಿಕದ ಡ್ರಗ್‌ ಎನ್‌ಫೋರ್ಸ್‌ಮೆಂಟ್ ಅಡ್‌ಮಿನಿಸ್ಟ್ರೇಷನ್‌ ಕೂಡ ಈ ಡ್ರಗ್‌ ಜಾಲದ ಮೂಲ ದೆಹಲಿ ಎಂದು ತಿಳಿಸಿದೆ. ಜಾಲದ ಬಗ್ಗೆ ಮಾಹಿತಿ ಪಡೆದ ನಂತರ ದೆಹಲಿ ಪೊಲೀಸ್ ಹಾಗೂ ಎನ್‌ಸಿಬಿ ಕಾರ್ಯಾಚರಣೆ ನಡೆಸಿ ಮಾದಕ ವಸ್ತುವನ್ನು ವಶಪಡಿಸಿಕೊಂಡಿವೆ.

ಬಂಧಿತ ಮೂವರು ತಮಿಳುನಾಡಿನವರಾಗಿದ್ದು, ಇವರ ಆರಂಭಿಕ ವಿಚಾರಣೆಗೊಳಪಡಿಸಿದ ನಂತರ ಕಳೆದ ಮೂರು ವರ್ಷಗಳಲ್ಲಿ 2 ಸಾವಿರ ಕೋಟಿ ಮೊತ್ತದ 3500 ಕೆಜಿ ಸ್ಯೂಡೋಫೆಡ್ರಿನ್ ಮಾದಕ ವಸ್ತುವನ್ನು 45 ಸಾಗಣೆಗಳ ಮೂಲಕ ಅಂತಾರಾಷ್ಟ್ರೀಯ ಮಾರುಕಟ್ಟೆ ತಲುಪಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

WhatsApp Image 2025 11 17 at 3.21.38 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಶಾಲಾ ಸಮಸ್ಯೆಗಳ ಕುರಿತು ಗ್ರಾಮ ಸಭೆಯಲ್ಲಿ ಧ್ವನಿ ಎತ್ತಿದ ವಿದ್ಯಾರ್ಥಿಗಳು; ಅಧಿಕಾರಿಗಳ ಮೆಚ್ಚುಗೆ-ಭರವಸೆ

ಸರ್ಕಾರಿ ಶಾಲಾ ವಿದ್ಯಾರ್ಥಿಗಳು ‘ವಿಶೇಷ ಗ್ರಾಮ ಸಭೆ’ಗಳಲ್ಲಿ ಪಾಲ್ಗೊಂಡು, ಪಂಚಾಯತ್ ಪ್ರತಿನಿಧಿಗಳು...

ಉತ್ತರಾಖಂಡ SIR ಅಂತಿಮ ಮತದಾರರ ಪಟ್ಟಿ ಪ್ರಕಟ: ಆದರೆ ಮುಗಿದಿಲ್ಲ ನೋಂದಣಿ ಪ್ರಕ್ರಿಯೆ

ಉತ್ತರಾಖಂಡ ರಾಜ್ಯದಲ್ಲಿ ನಡೆದ 'ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ' (ಎಸ್‌ಐಆರ್)...

ವಾಹನ ದಟ್ಟಣೆಯ ಸುಳಿಯಲ್ಲಿ ಮನಾಲಿ; ಪ್ರವಾಸೋದ್ಯಮದ ಒತ್ತಡಕ್ಕೆ ನಲುಗುತ್ತಿವೆಯೇ ಬೆಟ್ಟಗಳು?

ಮುಂಗಾರು ಮಳೆ ಕಡಿಮೆಯಾಗುತ್ತಿದ್ದಂತೆ ಹಿಮಾಚಲ ಪ್ರದೇಶದ ಪ್ರವಾಸಿ ತಾಣಗಳಿಗೆ ಪ್ರವಾಸಿಗರ ಆಗಮನ...