ತಮಿಳುನಾಡು | ಮಹಿಳಾ ಜಿಲ್ಲಾಧಿಕಾರಿಗೆ ಲೈಂಗಿಕ ಕಿರುಕುಳ ಆರೋಪ: ಟಿವಿಕೆ ಶಾಸಕ ಅರುಳ್ ವಿಘ್ನೇಶ್ ಬಂಧನ

Date:

ಮಹಿಳಾ ಜಿಲ್ಲಾಧಿಕಾರಿಗೆ (ಐಎಎಸ್ ಅಧಿಕಾರಿ) ಲೈಂಗಿಕ ಕಿರುಕುಳ ನೀಡಿದ ಮತ್ತು ಅನುಚಿತವಾಗಿ ವರ್ತಿಸಿದ ಆರೋಪದ ಮೇಲೆ ತಮಿಳುನಾಡಿನ ಕಳ್ಳಕುರಿಚಿ ಕ್ಷೇತ್ರದ ತಮಿಳಗ ವೆಟ್ರಿ ಕಳಗಂ (ಟಿವಿಕೆ) ಶಾಸಕ ಸಿ. ಅರುಳ್ ವಿಘ್ನೇಶ್ ಅವರನ್ನು ಶುಕ್ರವಾರ (ನವೆಂಬರ್ 27) ಸಂಜೆ ಪೊಲೀಸರು ಬಂಧಿಸಿದ್ದಾರೆ.

- Advertisement -

ಕಳ್ಳಕುರಿಚಿಯಲ್ಲಿರುವ ವಿಘ್ನೇಶ್ ಅವರ ನಿವಾಸಕ್ಕೆ ತೆರಳಿದ ತನಿಖಾಧಿಕಾರಿಯಾಗಿ ನೇಮಕಗೊಂಡಿರುವ ತಿರುಪ್ಪೂರು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಶ್ರುಷ್ಟಿ ಸಿಂಗ್ ನೇತೃತ್ವದ ಪೊಲೀಸ್ ತಂಡವು ಅವರನ್ನು ವಶಕ್ಕೆ ಪಡೆದಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಬಿರುಕು ಬಿಟ್ಟಿದ್ದ ‘ಕೈ’ ಕೋಟೆಗೆ ಒಗ್ಗಟ್ಟಿನ ಶಕ್ತಿ: ರಾಜಸ್ಥಾನ...

ಗೋವಿಂದ್ ಡೋಟಸರ ಮತ್ತು ಟೀಕಾರಾಮ್ ಜುಲ್ಲಿ ಅವರ ನಡುವಣ ಬಾಂಧವ್ಯ ಕೇವಲ ರಾಜಕೀಯ ಅನಿವಾರ್ಯತೆಯಲ್ಲ; ಅದು ಪರಸ್ಪರ ನಂಬಿಕೆ ಮತ್ತು ಪೂರಕ ಸಾಮರ್ಥ್ಯಗಳ ಸಮ್ಮಿಲನವಾಗಿದೆ. ಡೋಟಸರ ಅವರಲ್ಲಿರುವ ಆಕ್ರಮಣಕಾರಿ ಸಂಘಟನಾ ಶೈಲಿ, ಪ್ರಖರ...

ವನ್ಯಜೀವಿ ಸಂಘರ್ಷದ ಸುಳಿಯಲ್ಲಿ ಅರಣ್ಯದ ಭವಿಷ್ಯ: ಸಂರಕ್ಷಣೆಯ ಹೆಸರಿನಲ್ಲಿ...

ಬಂಡೀಪುರ-ನಾಗರಹೊಳೆ ಅರಣ್ಯಗಳ ಮೇಲೆ ಹೆಚ್ಚುತ್ತಿರುವ ಒತ್ತಡ; ಖಾಸಗಿ ಬಂಡವಾಳ, ಪ್ರವಾಸೋದ್ಯಮ ವಿಸ್ತರಣೆ ಮತ್ತು ಆದಿವಾಸಿಗಳ ಹಕ್ಕುಗಳ ನಡುವೆ ಸಂರಕ್ಷಣೆಯ ಮೂಲ ಆಶಯಕ್ಕೆ ಸವಾಲು. ಮನುಷ್ಯ-ವನ್ಯಜೀವಿ ಸಂಘರ್ಷಕ್ಕೆ ಶಾಶ್ವತ ಪರಿಹಾರವಿಲ್ಲ; ಅರಣ್ಯಗಳ ಮೇಲಿನ ನಿಯಂತ್ರಣ...

ಶಿವಮೊಗ್ಗ | ನೀರಿಲ್ಲದೆ ಒಣಗುತ್ತಿವೆ ಅಡಿಕೆ ತೋಟಗಳು: ರೈತರ...

ಭದ್ರಾ ಅಚ್ಚುಕಟ್ಟು ಪ್ರದೇಶದ ರೈತರ ಪಾಲಿಗೆ ನಾಲೆಗಳ ನೀರು ಕೇವಲ ಕೃಷಿಗೆ ಪೂರಕವಾದ ವ್ಯವಸ್ಥೆಯಲ್ಲ. ಅದು ಅವರ ವಾರ್ಷಿಕ ಆದಾಯ, ಕುಟುಂಬದ ನಿರ್ವಹಣೆ, ಕೃಷಿ ಸಾಲದ ಮರುಪಾವತಿ ಹಾಗೂ ಮುಂದಿನ ಬದುಕಿನ ಭರವಸೆಯಾಗಿದೆ....

ಶಾಸಕ ಅರುಳ್ ವಿಘ್ನೇಶ್ ವಿರುದ್ಧ ನವೆಂಬರ್ 23ರಂದು ಕಳ್ಳಕುರಿಚಿ ಜಿಲ್ಲಾಧಿಕಾರಿಯಾಗಿರುವ ಮಹಿಳಾ ಐಎಎಸ್ ಅಧಿಕಾರಿಯು ರಾಜ್ಯ ಮುಖ್ಯ ಕಾರ್ಯದರ್ಶಿ ಎಂ. ಸಾಯಿ ಕುಮಾರ್ ಮತ್ತು ಕಳ್ಳಕುರಿಚಿ ಪೊಲೀಸರಿಗೆ ಲಿಖಿತ ದೂರು ನೀಡಿದ್ದರು.

ಇದನ್ನೂ ಓದಿ: ತಮಿಳುನಾಡು | ವಿಜಯ್ ಸರ್ಕಾರ ಪತನಕ್ಕೆ ಯತ್ನ, ಟಿವಿಕೆ ಶಾಸಕನಿಗೆ 35 ಕೋಟಿ ರೂ. ಆಮಿಷ

ಟಿವಿಕೆ ಶಾಸಕ ಅರುಳ್ ಅವರು ತಮಗೆ ವಾಟ್ಸಾಪ್‌ನಲ್ಲಿ ಅಶ್ಲೀಲ ಮತ್ತು ಅನುಚಿತ ಸಂದೇಶಗಳನ್ನು ಕಳುಹಿಸಿದ್ದಾರೆ. ಸಾರ್ವಜನಿಕ ಕಾರ್ಯಕ್ರಮಗಳಲ್ಲಿ ಉಡುಪು ಮತ್ತು ರೂಪದ ಬಗ್ಗೆ ಆಕ್ಷೇಪಾರ್ಹ ಕಾಮೆಂಟ್‌ಗಳನ್ನು ಮಾಡಿದ್ದಾರೆ. ಅಸಭ್ಯವಾಗಿ ಸ್ಪರ್ಶಿಸಲು ಯತ್ನಿಸಿದ್ದಾರೆ. ರಾತ್ರಿ ವೇಳೆ ತಮ್ಮ ಅಧಿಕೃತ ನಿವಾಸಕ್ಕೆ ಬರಲು ಪ್ರಯತ್ನಿಸಿದ್ದಾರೆ ಎಂದು ಮಹಿಳಾ ಅಧಿಕಾರಿ ದೂರಿನಲ್ಲಿ ತಿಳಿಸಿದ್ದಾರೆ.

ದೂರಿನ ಆಧಾರದ ಮೇಲೆ ಕಳ್ಳಕುರಿಚಿ ಮಹಿಳಾ ಪೊಲೀಸ್ ಠಾಣೆಯಲ್ಲಿ ಶಾಸಕ ವಿಘ್ನೇಶ್ ವಿರುದ್ಧ ಭಾರತೀಯ ನ್ಯಾಯ ಸಂಹಿತೆ (ಬಿಎನ್‌ಎಸ್) ಸೆಕ್ಷನ್ 75 (ಲೈಂಗಿಕ ಕಿರುಕುಳ), ಸೆಕ್ಷನ್ 78 (ಹಿಂಬಾಲಿಸುವಿಕೆ/ಸ್ಟಾಕಿಂಗ್), ಸೆಕ್ಷನ್ 79 (ಮಹಿಳೆಯ ಗೌರವಕ್ಕೆ ಧಕ್ಕೆ) ಮತ್ತು ಸರ್ಕಾರಿ ನೌಕರರ ಕರ್ತವ್ಯಕ್ಕೆ ಅಡ್ಡಿಪಡಿಸಿದ ಆರೋಪದಡಿ ಸೆಕ್ಷನ್ 132 ಮತ್ತು ತಮಿಳುನಾಡು ಮಹಿಳಾ ಕಿರುಕುಳ ನಿಷೇಧ ಕಾಯ್ದೆಯಡಿ ಎಫ್‌ಐಆರ್ ದಾಖಲಿಸಲಾಗಿದೆ.

ಈ ಪ್ರಕರಣದ ಕುರಿತು ಸಲ್ಲಿಕೆಯಾಗಿದ್ದ ಅರ್ಜಿಯ ವಿಚಾರಣೆ ನಡೆಸಿದ್ದ ಮದ್ರಾಸ್ ಹೈಕೋರ್ಟ್, ತನಿಖೆಯ ಪ್ರಗತಿ ವರದಿಯನ್ನು ನವೆಂಬರ್ 27ರಂದು ಸಲ್ಲಿಸುವಂತೆ ಪೊಲೀಸರಿಗೆ ಸೂಚಿಸಿತ್ತು. ಇದರ ಬೆನ್ನಲ್ಲೇ ಗುರುವಾರ ಜಿಲ್ಲಾ ಫಾಸ್ಟ್ ಟ್ರ್ಯಾಕ್ ನ್ಯಾಯಾಲಯದ ನ್ಯಾಯಾಧೀಶರ ಮುಂದೆ ಹಾಜರಾದ ದೂರುದಾರ ಮಹಿಳಾ ಜಿಲ್ಲಾಧಿಕಾರಿ ಸುಮಾರು ಮೂರು ಗಂಟೆಗಳ ಕಾಲ ತಮ್ಮ ಹೇಳಿಕೆಯನ್ನು ದಾಖಲಿಸಿದ್ದರು. ಅಲ್ಲದೆ, ರಾಜ್ಯ ಸರ್ಕಾರವು ಹೆಚ್ಚುವರಿ ಮುಖ್ಯ ಕಾರ್ಯದರ್ಶಿ ಕಾಕರ್ಲ ಉಷಾ ನೇತೃತ್ವದಲ್ಲಿ ನಾಲ್ವರು ಸದಸ್ಯರ ಆಂತರಿಕ ದೂರು ಸಮಿತಿಯನ್ನೂ (ಐಸಿಸಿ) ರಚಿಸಿದೆ.

ಆಡಳಿತಾರೂಢ ಟಿವಿಕೆ ಶಾಸಕರ ವಿರುದ್ಧ ಕ್ರಮ ಕೈಗೊಳ್ಳುವಂತೆ ವಿರೋಧ ಪಕ್ಷದ ನಾಯಕ ಉದಯನಿಧಿ ಸ್ಟ್ಯಾಲಿನ್ ಸೇರಿದಂತೆ ವಿಪಕ್ಷಗಳು ತೀವ್ರ ಒತ್ತಡ ಹೇರಿದ್ದವು ಮತ್ತು ಪ್ರಕರಣವನ್ನು ಸಿಬಿಐ ತನಿಖೆಗೆ ವಹಿಸುವಂತೆ ರಾಜ್ಯಪಾಲರಿಗೆ ಮನವಿ ಮಾಡಿದ್ದವು. ರಾಷ್ಟ್ರೀಯ ಮಹಿಳಾ ಆಯೋಗವೂ (ಎನ್‌ಸಿಡಬ್ಲ್ಯೂ) ಈ ಪ್ರಕರಣವನ್ನು ಸ್ವಯಂಪ್ರೇರಿತವಾಗಿ ಕೈಗೆತ್ತಿಕೊಂಡಿತ್ತು.

ಮತ್ತೊಂದೆಡೆ, ಬಂಧನಕ್ಕೂ ಮುನ್ನ ಮಾಧ್ಯಮಗಳಿಗೆ ಪ್ರತಿಕ್ರಿಯಿಸಿದ್ದ ಶಾಸಕ ಅರುಳ್ ವಿಘ್ನೇಶ್, ತಮ್ಮ ಮೇಲಿನ ಎಲ್ಲ ಆರೋಪಗಳನ್ನು ನಿರಾಕರಿಸಿದ್ದು, ರಾಜಕೀಯ ದುರುದ್ದೇಶದಿಂದ ತಮ್ಮ ಮತ್ತು ಪಕ್ಷದ ವರ್ಚಸ್ಸಿಗೆ ಧಕ್ಕೆ ತರಲು ಸುಳ್ಳು ಸುದ್ದಿ ಹಬ್ಬಿಸಲಾಗುತ್ತಿದೆ ಎಂದು ಹೇಳಿದ್ದರು.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

<p><iframe src="https://www.youtube.com/embed/8qwx4L0lKFQ?autoplay=1&mute=1&loop=1&playlist=8qwx4L0lKFQ&controls=0&modestbranding=1&showinfo=0" width="560" height="315" frameborder="0" allowfullscreen="allowfullscreen"></iframe></p>

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಲೇಖಕಿ, ಪ್ರಾಧ್ಯಾಪಕಿ ಡಾ. ಅನಸೂಯಾ ಕಾಂಬಳೆ ಅವರಿಗೆ ಎಚ್. ಎಸ್. ಪಾರ್ವತಿ ದತ್ತಿ ಪ್ರಶಸ್ತಿ

ಕರ್ನಾಟಕ ಲೇಖಕಿಯರ ಸಂಘ (ಕಲೇಸಂ) ಪ್ರತಿವರ್ಷ ನೀಡುವ ಪ್ರತಿಷ್ಠಿತ ‘ಎಚ್.ಎಸ್. ಪಾರ್ವತಿ...

ಮೇಕೆದಾಟು ಪ್ರಕರಣ: ವಿಚಾರಣೆ ಮುಂದೂಡಿಕೆ ಕೋರಿದ ತಮಿಳುನಾಡಿಗೆ ಸುಪ್ರೀಂ ಕೋರ್ಟ್ ತರಾಟೆ

ಮೇಕೆದಾಟು ಅಣೆಕಟ್ಟು ಯೋಜನೆಗೆ ಸಂಬಂಧಿಸಿದ ಪ್ರಕರಣದಲ್ಲಿ ಪದೇ ಪದೇ ವಿಚಾರಣೆ ಮುಂದೂಡುವಂತೆ...

ಆಧಾರವಿಲ್ಲದೆ ಅಪಪ್ರಚಾರ ಮಾಡುವುದೇ ಜೆಡಿಎಸ್‌ನವರ ಕೆಲಸ : ರವಿಕುಮಾರ್ ಗೌಡ ಬೇಸರ

ಇತ್ತೀಚಿನ ದಿನಗಳಲ್ಲಿ ಪತ್ರಿಕೆಗಳು, ದೃಶ್ಯಮಾಧ್ಯಮಗಳು ಹಾಗೂ ಸಾಮಾಜಿಕ ಜಾಲತಾಣಗಳಲ್ಲಿ ನನ್ನ ನಾಯಕತ್ವ...