ತಮಿಳುನಾಡು ಚುನಾವಣೆ | ಟಿವಿಕೆ ಮುಖ್ಯಮಂತ್ರಿ ಅಭ್ಯರ್ಥಿಯಾಗಿ ನಟ ವಿಜಯ್ ಆಯ್ಕೆ

Date:

2026ರಲ್ಲಿ ನಡೆಯಲಿರುವ ತಮಿಳುನಾಡು ವಿಧಾನಸಭಾ ಚುನಾವಣೆಗೆ ತಮಿಳಗ ವೆಟ್ರಿ ಕಳಗಂ (ಟಿವಿಕೆ) ಪಕ್ಷದ ಮುಖ್ಯಮಂತ್ರಿ ಅಭ್ಯರ್ಥಿಯಾಗಿ ಪಕ್ಷದ ಸಂಸ್ಥಾಪಕ, ನಟ ವಿಜಯ್ ಆಯ್ಕೆಯಾಗಿದ್ದಾರೆ. ವಿಜಯ್ ಅವರೇ ಮುಖ್ಯಮಂತ್ರಿ ಎಂದು ಟಿವಿಕೆ ಅಧಿಕೃತವಾಗಿ ಘೋಷಿಸಿದೆ.

- Advertisement -

ಮುಂದಿನ ವರ್ಷದ ಆರಂಭದಲ್ಲಿ ತಮಿಳುನಾಡಿನಲ್ಲಿ ಚುನಾವಣೆ ನಡೆಯಲಿದೆ. ಚುನಾವಣೆಗಾಗಿ ಟಿವಿಕೆ ಪಕ್ಷವು ಸಿದ್ಧತೆ ನಡೆಸುತ್ತಿದೆ. ವಿಜಯ್ ಅವರು ಸೆಪ್ಟೆಂಬರ್‌ನಿಂದ ಡಿಸೆಂಬರ್ ಕೊನೆಯವರೆಗೆ ತಮಿಳುನಾಡಿನಾದ್ಯಂತ ಪ್ರವಾಸ ಮಾಡಲಿದ್ದಾರೆ. ಪಕ್ಷ ಸಂಘಟನೆಯಲ್ಲಿ ತೊಡಗಿಸಿಕೊಳ್ಳಲಿದ್ದಾರೆ ಎಂದು ಪಕ್ಷವು ತಿಳಿಸಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಬೆಟ್ಟದಷ್ಟಾದ ಅತ್ಯಾಚಾರ ಪ್ರಕರಣಗಳು – ತೆವಳುತ್ತಿರುವ ನ್ಯಾಯದಾನ

ಪೊಲೀಸರೆಂದು ನಟಿಸಿ ಬೆದರಿಸುವುದು, ನಿರ್ಜನ ಪ್ರದೇಶಗಳಲ್ಲಿ ತೋಳಗಳಂತೆ ಕಾದು ಹಲ್ಲೆಗೈದು ಸಾಮೂಹಿಕ ಅತ್ಯಾಚಾರ ನಡೆಸಿ ಕೊಂದೆಸೆಯುವುದು, ಕಿಂಚಿತ್ತೂ ಭಯವಿಲ್ಲದೆ ಕೃತ್ಯದ ವಿಡಿಯೋ ತುಣುಕುಗಳನ್ನು ಸಾಮಾಜಿಕ ಜಾಲತಾಣಗಳಲ್ಲಿ ಹರಿಬಿಡುವುದಲ್ಲದೆ, ಸಂತ್ರಸ್ತರ ಗುರುತು ಬಹಿರಂಗಪಡಿಸುವ ಪ್ರವೃತ್ತಿ...

ಶಾಮನೂರು ಫ್ಯಾಮಿಲಿಗೆ ಸಚಿವ ಬಸವಂತಪ್ಪ ಕೈ ಮುಗಿಯುವ ಅಗತ್ಯವಿದೆಯೇ?

ಬಸವಂತಪ್ಪನವರನ್ನು ಗೆಲ್ಲಿಸಿದ್ದು, ಕಾಂಗ್ರೆಸ್ಸಿನ ಸಾಂಪ್ರದಾಯಿಕ ಮತದಾರರು. ಶಾಮನೂರು ಕುಟುಂಬದ ಸುತ್ತ ಕಟ್ಟಿರುವ ಕಲ್ಪಿತ ಬಲವನ್ನು ಮೀರಿ, ಬಸವಂತಪ್ಪ ಬೆಳೆಯಬೇಕು ಎಂಬುದು ಕ್ಷೇತ್ರದ ಮತದಾರರ ಅಭಿಪ್ರಾಯ. ಪೌರಕಾರ್ಮಿಕರ ಮಗನಾಗಿ ಹುಟ್ಟಿ, ಸಚಿವ ಸ್ಥಾನದವರೆಗೆ ಬೆಳೆದವರು ಕೆ.ಎಸ್....

ಪಾಕ್‌ಗೆ ತಕ್ಕ ಉತ್ತರ ನೀಡಿದ್ದಾಗಿ ಎದೆ ತಟ್ಟಿಕೊಳ್ಳುವ ಮೋದೀಜಿ,...

ಬಾಲಾಕೋಟ್‌ನಿಂದ ಇತ್ತೀಚಿನ 'ಆಪರೇಷನ್ ಸಿಂಧೂರ್'ವರೆಗೆ ಪಾಕಿಸ್ತಾನಕ್ಕೆ ತಕ್ಕ ಉತ್ತರ ನೀಡಿದ್ದಾಗಿ ಪ್ರಧಾನಿ ಮೋದಿ ನೇತೃತ್ವದ ಬಿಜೆಪಿ ಸರ್ಕಾರ ಎದೆ ತಟ್ಟಿಕೊಳ್ಳುತ್ತಿದೆ. ಶತೃ ದೇಶವನ್ನು ಮಣಿಸುವುದು ಯಾರಿಗಾದರೂ ಹೆಮ್ಮೆಯೇ. ಆದರೆ, ದೇಶದ ಅಖಂಡತೆಗೆ ಅತಿ...

ಟಿವಿಕೆ ಕಾರ್ಯಕಾರ್ಯ ಸಮಿತಿಯ ಸಭೆಯಲ್ಲಿ ವಿಜಯ್ ಅವರನ್ನು ಮುಖ್ಯಮಂತ್ರಿ ಅಭ್ಯರ್ಥಿಯಾಗಿ ಆಯ್ಕೆ ಮಾಡಲಾಗಿದೆ. ಸಭೆಯಲ್ಲಿ ಮಾತನಾಡಿದ ವಿಜಯ್, ಆಡಳಿತಾರೂಢ ಡಿಎಂಕೆ-ಕಾಂಗ್ರೆಸ್‌ ಅಥವಾ ವಿಪಕ್ಷ ಎಐಎಡಿಎಂಕೆ-ಬಿಜೆಪಿ ಜೊತೆಗಿನ ಮೈತ್ರಿಯನ್ನು ತಳ್ಳಿಹಾಕಿದ್ದಾರೆ. ಈ ಪಕ್ಷಗಳು ತಮ್ಮ ಪಕ್ಷದ ‘ಸೈದ್ಧಾಂತಿಕ ಶತ್ರುಗಳು’ ಎಂದಿದ್ದಾರೆ.

ಈ ಲೇಖನ ಓದಿದ್ದೀರಾ?: ಭೂಮಿಯನ್ನು ಕೃಷಿಯೇತರ ಉದ್ದೇಶಕ್ಕೆ ಬಳಸುವುದರಿಂದ ಉಂಟಾಗುವ ಬಿಕ್ಕಟ್ಟುಗಳೇನು ಬಲ್ಲಿರಾ?

“ನಮ್ಮ ಪಕ್ಷವು ಬಿಜೆಪಿ ಜೊತೆ ಎಂದಿಗೂ ಮೈತ್ರಿ ಮಾಡಿಕೊಳ್ಳುವುದಿಲ್ಲ. ನಾವು ಸಾರ್ವಜನಿಕವಾಗಿ ಮಾತ್ರವಲ್ಲ, ತೆರೆಯ ಹಿಂದೆಯೂ ಬಿಜೆಪಿ ಜೊತೆ ಮೈತ್ರಿ ಸಾಧ್ಯವೇ ಇಲ್ಲ. ಬಿಜೆಪಿ ದೇಶದ ವಿವಿಧೆಡೆ ವಿಷ-ದ್ವೇಷದ ಬೀಜ ಬಿತ್ತುತ್ತಿದೆ. ಆದರೆ ತಮಿಳುನಾಡಿನಲ್ಲಿ ಅದು ಸಾಧ್ಯವಿಲ್ಲ. ಬಿಜೆಪಿಗರು ಅಣ್ಣಾ, ಪರೆಯಾರ್ ಅವರನ್ನು ವಿರೋಧಿಸಲು ಮತ್ತು ತಮಿಳುನಾಡನ್ನು ಗೆಲ್ಲಲು ಸಾಧ್ಯವಿಲ್ಲ” ಎಂದು ಹೇಳಿದ್ದಾರೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಇಸಿ ಗ್ಯಾನೇಶ್‌ ಕುಮಾರ್‌ ವಿರುದ್ಧ ದೇಶವ್ಯಾಪಿ ಪ್ರತಿಭಟನೆ; ಹೈದರಾಬಾದ್‌ನಲ್ಲಿ ‘ಸಿಜೆಪಿ’ ಮಹತ್ವದ ಸಭೆ

ಮುಖ್ಯ ಚುನಾವಣಾ ಆಯುಕ್ತ (ಸಿಇಸಿ) ಗ್ಯಾನೇಶ್ ಕುಮಾರ್ ಅವರ ರಾಜೀನಾಮೆಗೆ ಆಗ್ರಹಿಸಿ...

ಜಮ್ಮು-ಕಾಶ್ಮೀರಕ್ಕೆ ಪೂರ್ಣ ರಾಜ್ಯ ಸ್ಥಾನಮಾನದ ನಿರ್ಣಯ ಅಂಗೀಕಾರ; ಸದನದಲ್ಲಿ ಬಿಜೆಪಿ ಗದ್ದಲ

ಜಮ್ಮು-ಕಾಶ್ಮೀರಕ್ಕೆ ತುರ್ತಾಗಿ ಪೂರ್ಣ ರಾಜ್ಯದ ಸ್ಥಾನಮಾನವನ್ನು ಮರುಸ್ಥಾಪಿಸಬೇಕು ಎಂದು ಆಗ್ರಹಿಸುವ ನಿರ್ಣಯವನ್ನು...

ಅಕ್ಟೋಬರ್ 8ರೊಳಗೆ ಪಶ್ಚಿಮ ಬಂಗಾಳ ಶಾಸಕರ ಅನರ್ಹತೆ ಅರ್ಜಿಗಳ ವಿಲೇವಾರಿಗೆ ಸ್ಪೀಕರ್​ಗೆ ಸುಪ್ರೀಂ ಸೂಚನೆ

ಪಕ್ಷಾಂತರ ನಿಷೇಧ ಕಾಯ್ದೆ ಹಾಗೂ ಸಂವಿಧಾನದ ಹತ್ತನೇ ಶೆಡ್ಯೂಲ್‌ನ ಅಡಿಯಲ್ಲಿ, ರಿತಬ್ರತಾ...

ಮೋದಿ ಸರ್ಕಾರ ECಗೆ ಇಮ್ಯೂನಿಟಿ ನೀಡಿದ್ದರೂ ಹೊಣೆಗಾರಿಕೆಯಿಂದ ತಪ್ಪಿಸಿಕೊಳ್ಳಲಾಗಲ್ಲ: ಕಪಿಲ್ ಸಿಬಲ್

ಮುಖ್ಯ ಚುನಾವಣಾ ಆಯುಕ್ತರಿಗೆ (CEC) ಕ್ರಿಮಿನಲ್ ಪ್ರಕರಣಗಳಿಂದ ಕಾನೂನು ರಕ್ಷಣೆ ನೀಡಲಾಗಿದೆ...