ತಮಿಳುನಾಡು ಚುನಾವಣೆ | ಎಐಎಡಿಎಂಕೆ 178, ಬಿಜೆಪಿ 27 ಕ್ಷೇತ್ರಗಳಲ್ಲಿ ಸ್ಪರ್ಧೆ

Date:

ಈ ಬಾರಿಯ ತಮಿಳುನಾಡು ವಿಧಾನಸಭಾ ಚುನಾವಣೆಯಲ್ಲಿ ಗೆದ್ದು ಅಧಿಕಾರಕ್ಕೇರಲೇ ಬೇಕೆಂದು ಪಣ ತೊಟ್ಟಿರುವ NDA ಮೈತ್ರಿಕೂಟ ಕೊನೆಗೂ ಸೀಟು ಹಂಚಿಕೆಯ ಮಾತುಕತೆಯನ್ನು ಅಂತಿಮಗೊಳಿಸಿದೆ. ತಮಿಳುನಾಡಿನ ಒಟ್ಟು 234 ವಿಧಾನಸಭಾ ಕ್ಷೇತ್ರಗಳ ಪೈಕಿ ಎಐಎಡಿಎಂಕೆ 178 ಕ್ಷೇತ್ರಗಳಲ್ಲಿ, ಬಿಜೆಪಿ 27 ಕ್ಷೇತ್ರಗಳಲ್ಲಿ ಸ್ಪರ್ಧಿಸಲಿವೆ. ಉಳಿದಂತೆ ಮೈತ್ರಿಕೂಟದ ಇತರ ಪಕ್ಷಗಳಾದ ಪಿಎಂಕೆ ಹಾಗೂ ಎಎಂಎಂಕೆಗೆ ಕ್ರಮವಾಗಿ 18 ಮತ್ತು 11 ಕ್ಷೇತ್ರಗಳನ್ನು ಹಂಚಿಕೆ ಮಾಡಲಾಗಿದೆ.

- Advertisement -

ಇನ್ನು, ಈ ಸಂಬಂಧಿಸಿದಂತೆ ಸುದ್ದಿಗೋಷ್ಠಿಯನ್ನು ಉದ್ದೇಶಿಸಿ ಮಾತನಾಡಿದ ಎಐಎಡಿಎಂಕೆ ನಾಯಕ ಎಡಪ್ಪಾಡಿ ಪಳನಿಸ್ವಾಮಿ, NDA ಮೈತ್ರಿಕೂಟದೊಳಗೆ ಸೀಟು ಹಂಚಿಕೆಯ ಮಾತುಕತೆ ಯಾವುದೇ ಗೊಂದಲಗಳಿಲ್ಲದೆ ನಡೆದಿದೆ. ಮೈತ್ರಿಪಕ್ಷಗಳಿಗೆ ಕ್ಷೇತ್ರಗಳನ್ನು ಅಧಿಕೃತವಾಗಿ ಹಂಚಿಕೆ ಮಾಡಲಾಗಿದೆ ಎಂದು ದೃಢಪಡಿಸಿದರು. ಉಳಿದ ಮೈತ್ರಿಪಕ್ಷಗಳೊಂದಿಗಿನ ಮಾತುಕತೆ ಮುಂದುವರಿದಿದ್ದು, ಶೀಘ್ರದಲ್ಲೇ ಅವುಗಳ ಸೀಟು ಹಂಚಿಕೆಯ ಕುರಿತು ಪ್ರಕಟಿಸಲಾಗುವುದು ಎಂದೂ ಅವರು ತಿಳಿಸಿದ್ದಾರೆ.

ಇದನ್ನೂ ಓದಿ :ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡು ಚುನಾವಣೆಯಲ್ಲಿ ಗೆಲುವಿನ ವಿಶ್ವಾಸ ವ್ಯಕ್ತಪಡಿಸಿದ ಪಳನಿಸ್ವಾಮಿ, ಎನ್‌ಡಿಎ ಮೈತ್ರಿಕೂಟ ರಾಜ್ಯದಾದ್ಯಂತ ಎಲ್ಲಾ ಕ್ಷೇತ್ರಗಳಲ್ಲಿ ಗೆಲ್ಲಲಿದ್ದು, ಎಐಎಡಿಎಂಕೆ ನೇತೃತ್ವದಲ್ಲಿ ಸರ್ಕಾರ ರಚನೆಯಾಗಲಿದೆ. ಎಐಎಡಿಎಂಕೆ ತನ್ನ ಸ್ವಂತ ಬಲದ ಮೇಲೆ ಸರ್ಕಾರ ರಚಿಸುವುದರಲ್ಲಿ ಯಾವುದೇ ಸಂಶಯವಿಲ್ಲ ಎಂದು ಹೇಳಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಕಲಬುರಗಿ | ‘ನಮ್ಮನ್ನ ಎಲ್ಲಿಗೆ ಕಳುಹಿಸುತ್ತೀರಿ?’: ತಗ್ಗಿನ ಬೇಲಿಯ...

92ಕ್ಕೂ ಅಧಿಕ ಸ್ಲಂ ಕುಟುಂಬಗಳ ಬದುಕು ಕೇವಲ ಜಮೀನಿನ ಹಕ್ಕಿನ ಪ್ರಶ್ನೆಯಲ್ಲ; ಅವರ ಸುರಕ್ಷಿತ ಓಡಾಟ, ಕುಡಿಯುವ ನೀರು ಹಾಗೂ ನಿತ್ಯದ ಬದುಕಿನ ಹಕ್ಕಿನ ಪ್ರಶ್ನೆಯೂ ಹೌದು. ನ್ಯಾಯಾಲಯದ ವಿಚಾರಣೆ ಅಂತಿಮಗೊಳ್ಳುವವರೆಗೆ ಯಾವುದೇ...

ಚುನಾವಣಾ ಆಯೋಗದ ಸಭೆ: ಪರಿಹಾರವಲ್ಲ, ತೇಪೆ ಹಚ್ಚುವ ಕಾರ್ಯಕ್ರಮ

ಅವೈಜ್ಞಾನಿಕ 'SIR' ಪ್ರಕ್ರಿಯೆ ಮತ್ತು ಆಯೋಗದೊಳಗಿನ ಭಿನ್ನಾಭಿಪ್ರಾಯಗಳು ಸಾರ್ವಜನಿಕವಾಗಿ ಬಯಲಾದ ಬೆನ್ನಲ್ಲೇ ಬಿಡುಗಡೆಯಾದ ಚುನಾವಣಾ ಆಯೋಗದ ಪತ್ರಿಕಾ ಪ್ರಕಟಣೆ, ತಪ್ಪುಗಳನ್ನು ತಿದ್ದುವ ಬದಲು ವ್ಯವಸ್ಥೆಯ ಲೋಪಗಳಿಗೆ ತೇಪೆ ಹಚ್ಚುವ ಯತ್ನದಂತೆ ಕಾಣುತ್ತಿದೆ. ದೇಶದ ಇತಿಹಾಸದಲ್ಲೇ...

ಹೊರಟ್ಟಿ ಅವರ ಹೋರಾಟದ ಬದುಕು ಮತ್ತು ಅವರ ಭಕ್ತ...

ಗ್ಯಾರಂಟಿ ಯೋಜನೆಗಳಿಂದ ಕೂಲಿ ಕಾರ್ಮಿಕರು ಸಿಗುತ್ತಿಲ್ಲವೆಂಬ ಬಸವರಾಜ ಹೊರಟ್ಟಿ ಅವರ ಹೇಳಿಕೆ ಮತ್ತು ಅದಕ್ಕೆ ಸಿಕ್ಕ ಸಾರ್ವಜನಿಕ ಚಪ್ಪಾಳೆಗಳು, ಕೇವಲ ಹಸಿವನ್ನೇ ಶ್ರಮದ ಇಂಧನವನ್ನಾಗಿ ನೋಡುವ ಸಮಾಜದ ಕ್ರೂರ ಮನಸ್ಥಿತಿಯನ್ನು ಅನಾವರಣಗೊಳಿಸುತ್ತವೆ. ಬಸವರಾಜ ಹೊರಟ್ಟಿ...

ಅಮಿತ್‌ ಅವರ ಭೇಟಿಯ ಬಗ್ಗೆ ವರದಿಗಾರರೊಬ್ಬರು ಕೇಳಿದ ಪ್ರಶ್ನೆಗೆ ಪ್ರತಿಕ್ರಿಯಿಸಿದ ಅವರು, ಮೈತ್ರಿಪಕ್ಷಗಳು ಭೇಟಿಯಾಗುವುದು ಸಹಜ ಸಂಗತಿ. ರಾಹುಲ್ ಗಾಂಧಿಯನ್ನು ಭೇಟಿಯಾಗಲು ಕನಿಮೋಳಿಯೇಕೆ ದೆಹಲಿಗೆ ಹೋಗಿದ್ದರು ಎಂದು ಮರುಪ್ರಶ್ನಿಸಿದ್ದಾರೆ.

ಈ ನಡುವೆ ಬಿಜೆಪಿಗೆ 27 ಕ್ಷೇತ್ರಗಳನ್ನು ಬಿಟ್ಟುಕೊಡುವುದಕ್ಕೆ ಪಳನಿಸ್ವಾಮಿ ದೆಹಲಿಗೆ ಹೋಗಿ ನರೇಂದ್ರ ಮೋದಿ ಮತ್ತು ಅಮಿತ್‌ ಅವರಿಗಾಗಿ ಬಾಗಿಲು ಕಾಯಬೇಕಿತ್ತೇ ಎಂದು ಪ್ರತಿಪಕ್ಷಗಳು ಟೀಕೆ ಮಾಡುತ್ತಿವೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ತಮಿಳುನಾಡಿನಲ್ಲಿ ತೀವ್ರ ವಿರೋಧ: ‘ಆರ್‌ಟಿಐ ವಿನಾಯಿತಿ’ ನಿರ್ಧಾರದಿಂದ ಹಿಂದೆ ಸರಿದ ವಿಜಯ್ ಸರ್ಕಾರ

ತಮಿಳುನಾಡಿನ ಮುಖ್ಯಮಂತ್ರಿ ಸಿ. ಜೋಸೆಫ್ ವಿಜಯ್ ನೇತೃತ್ವದ 'ತಮಿಳಗ ವೆಟ್ರಿ ಕಳಗಂ'...

ಅಸ್ಸಾಂ ಸರ್ಕಾರದ ವೈಫಲ್ಯಗಳನ್ನು ಮುಚ್ಚಿಡಲು ನಮ್ಮ ಬಂಧನ: ಸಿಜೆಪಿ ನಾಯಕ ಅಶುತೋಷ್ ರಂಕಾ ಆರೋಪ

ಕಾಕ್ರೋಚ್ ಜನತಾ ಪಾರ್ಟಿ (ಸಿಜೆಪಿ) ಸಹ-ಸಂಚಾಲಕ ಅಶುತೋಷ್ ರಂಕಾ ಮತ್ತು ಅವರ...

ವಿಜಯನ್ ವಿರುದ್ಧ ಸಿಎಂಆರ್‌ಎಲ್ ಪ್ರಕರಣ: ಇಡಿ ಹೇಳಿದ ತಕ್ಷಣ ಎಫ್‌ಐಆರ್ ದಾಖಲಿಸಲಾಗದು ಎಂದು ಕೇರಳ ಗೃಹ ಸಚಿವ

ಜಾರಿ ನಿರ್ದೇಶನಾಲಯ (ಇಡಿ) ಕೋರಿದೆ ಎಂದಮಾತ್ರಕ್ಕೆ ತಕ್ಷಣವೇ ಎಫ್‌ಐಆರ್ ನೋಂದಾಯಿಸಲು ಸಾಧ್ಯವಿಲ್ಲ....

4 ವರ್ಷಗಳಲ್ಲಿ 111 ಸಂಸದರು, ಶಾಸಕರ ಪಕ್ಷಾಂತರ: ಶೇ. 26ರಷ್ಟು ನಾಯಕರನ್ನು ಸೇರಿಸಿಕೊಂಡ ಬಿಜೆಪಿ!

ದೇಶದ ರಾಜಕೀಯ ಕ್ಷೇತ್ರದಲ್ಲಿ ಜನಪ್ರತಿನಿಧಿಗಳ ಪಕ್ಷಾಂತರ ಪರ್ವ ತಡೆಯಿಲ್ಲದೆ ಮುಂದುವರಿದಿದೆ. ಅದರಲ್ಲೂ...