ತಮಿಳುನಾಡು ಚುನಾವಣೆ | ಮಾಜಿ ರಾಜ್ಯಾಧ್ಯಕ್ಷರಿಗೆ ಟಿಕೆಟ್‌ ನೀಡದೆ ವಂಚಿಸಿದ ಬಿಜೆಪಿ

Date:

ಎಐಎಡಿಎಂಕೆ ನೇತೃತ್ವದ ಎನ್‌ಡಿಎ ಮೈತ್ರಿಯ ಸೀಟು ಹಂಚಿಕೆಯ ಬಳಿಕ ಬಿಜೆಪಿ ಟಿಕೆಟ್‌ ಘೋಷಣೆ ಮಾಡಿದೆ. ಬಿಜೆಪಿ ಮಾಜಿ ಅಧ್ಯಕ್ಷ ಕೆ.ಅಣ್ಣಾಮಲೈ ಈ ಬಾರಿಯ ಚುನಾವಣೆಯಲ್ಲಿ ಸ್ಪರ್ಧಿಸುವ ಸಾಧ್ಯತೆ ಇಲ್ಲ ಎಂದು ಪಕ್ಷದ ಉನ್ನತ ಮೂಲಗಳು ತಿಳಿಸಿರುವುದಾಗಿ ವರದಿಯಾಗಿದೆ.

 ಕೊಯಮತ್ತೂರಿನಲ್ಲಿ ಪಕ್ಷಕ್ಕೆ ಕೇವಲ ಒಂದು ಕ್ಷೇತ್ರ ಮಾತ್ರ ಹಂಚಿಕೆಯಾಗಿರುವ ಕಾರಣಕ್ಕೆ ಪಕ್ಷ ಅಣ್ಣಾಮಲೈ ಅವರಿಗೆ ಟಿಕೆಟ್‌ ನೀಡುವ ಆಸಕ್ತಿ ತೋರುತ್ತಿಲ್ಲ ಎಂಬ ಮಾಹಿತಿಯೂ ಲಭ್ಯವಾಗಿದೆ.

- Advertisement -

ಇನ್ನು, ಬಿಜೆಪಿಗೆ ಹಂಚಿಕೆಯಾಗಿರುವ ಎರಡು ಕ್ಷೇತ್ರಗಳಾದ ತಂಜಾವೂರು ಮತ್ತು ಗಂಧರ್ವಕೊಟ್ಟೈ ಕ್ಷೇತ್ರಗಳನ್ನು ಮಿತ್ರ ಪಕ್ಷಗಳಿಗೆ ಬಿಟ್ಟುಕೊಟ್ಟು, ಬದಲಿ ಕ್ಷೇತ್ರಗಳನ್ನು ಪಡೆಯುವುದರ ಬಗ್ಗೆ ಎನ್‌ಡಿಎ ಮೈತ್ರಿಯಲ್ಲಿ ಮಾತುಕತೆ ನಡೆಯುತ್ತಿದೆ ಎಂಬ ವರದಿಗಳೂ ಇವೆ.

ಗಂಧರ್ವಕೊಟ್ಟೈ ಪರಿಶಿಷ್ಟ ಜಾತಿಗಳಿಗೆ ಮೀಸಲಿಟ್ಟ ಕ್ಷೇತ್ರವಾಗಿದ್ದು, ಡಿಎಂಕೆ ನೇತೃತ್ವದ ಒಕ್ಕೂಟದ ಪಕ್ಷವಾಗಿರುವ ಸಿಪಿಎಂ 2021ರ ಚುನಾವಣೆಯಲ್ಲಿ ಗೆದ್ದಿತ್ತು. ಈಗ ಗಂಧರ್ವಕೊಟ್ಟೈನಲ್ಲಿ ಪರಿಚಿತ ಮುಖವನ್ನು ಕಣಕ್ಕಿಳಿಸುವ ಸವಾಲನ್ನು ಬಿಜೆಪಿ ಎದುರಿಸುತ್ತಿದೆ. ತಂಜಾವೂರನ್ನು ತನ್ನಲ್ಲೇ ಉಳಿಸಿಕೊಳ್ಳುವದಕ್ಕೆ ಎಐಎಡಿಎಂಕೆ ಆಸಕ್ತಿ ತೋರಿದ್ದು, ಹಾಗಾಗಿ ಕ್ಷೇತ್ರಗಳ ಬದಲಾವಣೆಯ ಬಗ್ಗೆ ಉಭಯ ಪಕ್ಷಗಳು ಮಾತುಕತೆಗೆ ಚಿಂತಿಸಿವೆ.

ಇದನ್ನೂ ಓದಿ : ಹೊಸ ಓದು | ಬಿ. ಶ್ರೀಪಾದ ಭಟ್ ಅವರ ಕೃತಿ- ಉನ್ನತ ಶಿಕ್ಷಣ: ಒಳಗೂ…

ಬಿಜೆಪಿಗೆ ಹಂಚಿಕೆಯಾಗಿರುವ 27 ಕ್ಷೇತ್ರಗಳ ಪೈಕಿ, ಕೊಯಮತ್ತೂರು ಉತ್ತರ ಮಾತ್ರ ಕೊಯಮತ್ತೂರು ಲೋಕಸಭಾ ಕ್ಷೇತ್ರದ ವ್ಯಾಪ್ತಿಯಲ್ಲಿ ಬರುತ್ತದೆ. ಅಣ್ಣಾಮಲೈ ಸಿಂಗನಲ್ಲೂರು ಅಥವಾ ಕಾವುಂಡಂಪಾಳಯಂನಿಂದ ಸ್ಪರ್ಧಿಸಲು ಆದ್ಯತೆ ನೀಡಿದ್ದರು ಎಂದು ಮೂಲಗಳು ತಿಳಿಸಿವೆ. ಆದರೆ,  ಅಣ್ಣಾಮಲೈ ಸ್ಪರ್ಧಿಸಲು ಬಯಸಿದ್ದ ಎರಡೂ ಕ್ಷೇತ್ರಗಳು ಬಿಜೆಪಿ ಪಾಲಿಗೆ ಹಂಚಿಕೆ ಮಾಡಲಾಗಿಲ್ಲ. ಹಾಗಾಗಿ, ಅಣ್ಣಾಮಲೈ ಸ್ಪರ್ಧೆಯಿಂದ ಹೊರಕ್ಕುಳಿಯದ್ದಾರೆ ಎಂದು ಹೇಳಲಾಗುತ್ತಿದೆ.

ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ (ಸಂಘಟನೆ) ಬಿ ಎಲ್ ಸಂತೋಷ್ ಅಧ್ಯಕ್ಷತೆಯಲ್ಲಿ ಮಾ.26ರಂದು ಚೆನ್ನೈನ ಪಕ್ಷದ ಪ್ರಧಾನ ಕಚೇರಿಯಲ್ಲಿ ಮಹತ್ವದ ಸಭೆ ನಡೆದಿತ್ತು. ಈ ಸಭೆಯಲ್ಲಿ ಅಣ್ಣಾಮಲೈ ಅವರ ಅನುಪಸ್ಥಿತಿ ಎದ್ದು ಕಂಡಿತ್ತು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಬೆಟ್ಟದಷ್ಟಾದ ಅತ್ಯಾಚಾರ ಪ್ರಕರಣಗಳು – ತೆವಳುತ್ತಿರುವ ನ್ಯಾಯದಾನ

ಪೊಲೀಸರೆಂದು ನಟಿಸಿ ಬೆದರಿಸುವುದು, ನಿರ್ಜನ ಪ್ರದೇಶಗಳಲ್ಲಿ ತೋಳಗಳಂತೆ ಕಾದು ಹಲ್ಲೆಗೈದು ಸಾಮೂಹಿಕ ಅತ್ಯಾಚಾರ ನಡೆಸಿ ಕೊಂದೆಸೆಯುವುದು, ಕಿಂಚಿತ್ತೂ ಭಯವಿಲ್ಲದೆ ಕೃತ್ಯದ ವಿಡಿಯೋ ತುಣುಕುಗಳನ್ನು ಸಾಮಾಜಿಕ ಜಾಲತಾಣಗಳಲ್ಲಿ ಹರಿಬಿಡುವುದಲ್ಲದೆ, ಸಂತ್ರಸ್ತರ ಗುರುತು ಬಹಿರಂಗಪಡಿಸುವ ಪ್ರವೃತ್ತಿ...

ಶಾಮನೂರು ಫ್ಯಾಮಿಲಿಗೆ ಸಚಿವ ಬಸವಂತಪ್ಪ ಕೈ ಮುಗಿಯುವ ಅಗತ್ಯವಿದೆಯೇ?

ಬಸವಂತಪ್ಪನವರನ್ನು ಗೆಲ್ಲಿಸಿದ್ದು, ಕಾಂಗ್ರೆಸ್ಸಿನ ಸಾಂಪ್ರದಾಯಿಕ ಮತದಾರರು. ಶಾಮನೂರು ಕುಟುಂಬದ ಸುತ್ತ ಕಟ್ಟಿರುವ ಕಲ್ಪಿತ ಬಲವನ್ನು ಮೀರಿ, ಬಸವಂತಪ್ಪ ಬೆಳೆಯಬೇಕು ಎಂಬುದು ಕ್ಷೇತ್ರದ ಮತದಾರರ ಅಭಿಪ್ರಾಯ. ಪೌರಕಾರ್ಮಿಕರ ಮಗನಾಗಿ ಹುಟ್ಟಿ, ಸಚಿವ ಸ್ಥಾನದವರೆಗೆ ಬೆಳೆದವರು ಕೆ.ಎಸ್....

ಪಾಕ್‌ಗೆ ತಕ್ಕ ಉತ್ತರ ನೀಡಿದ್ದಾಗಿ ಎದೆ ತಟ್ಟಿಕೊಳ್ಳುವ ಮೋದೀಜಿ,...

ಬಾಲಾಕೋಟ್‌ನಿಂದ ಇತ್ತೀಚಿನ 'ಆಪರೇಷನ್ ಸಿಂಧೂರ್'ವರೆಗೆ ಪಾಕಿಸ್ತಾನಕ್ಕೆ ತಕ್ಕ ಉತ್ತರ ನೀಡಿದ್ದಾಗಿ ಪ್ರಧಾನಿ ಮೋದಿ ನೇತೃತ್ವದ ಬಿಜೆಪಿ ಸರ್ಕಾರ ಎದೆ ತಟ್ಟಿಕೊಳ್ಳುತ್ತಿದೆ. ಶತೃ ದೇಶವನ್ನು ಮಣಿಸುವುದು ಯಾರಿಗಾದರೂ ಹೆಮ್ಮೆಯೇ. ಆದರೆ, ದೇಶದ ಅಖಂಡತೆಗೆ ಅತಿ...

ಇನ್ನು, ಮೈಲಾಪುರ ವಿಧಾನಸಭಾ ಕ್ಷೇತ್ರದಿಂದ ಕಣಕ್ಕಿಳಿಯುವ ಸಾಧ್ಯತೆಯಿರುವ ಹಿರಿಯ ಬಿಜೆಪಿ ನಾಯಕಿ ತಮಿಳಿಸೈ ಸೌಂದರರಾಜನ್ ಮತ್ತು ಈ ಬಾರಿ ಕೊಯಮತ್ತೂರು ಉತ್ತರ ಕ್ಷೇತ್ರದಿಂದ ಸ್ಪರ್ಧಿಸುವ ನಿರೀಕ್ಷೆಯಿರುವ ಕೊಯಮತ್ತೂರು ದಕ್ಷಿಣ ಶಾಸಕಿ ವನತಿ ಶ್ರೀನಿವಾಸನ್ ಸಭೆಯಲ್ಲಿ ಭಾಗಿಯಾಗಿದ್ದರು. ಬಿಜೆಪಿ ಒಂದೆರಡು ದಿನಗಳಲ್ಲಿ ಎಲ್ಲಾ ಕ್ಷೇತ್ರಗಳ ಅಭ್ಯರ್ಥಿಗಳ ಪಟ್ಟಿಯನ್ನು ಬಿಡುಗಡೆ ಮಾಡುವ ಸಾಧ್ಯತೆಯಿದೆ.

ಅಣ್ಣಾಮಲೈ 2021 ರ ವಿಧಾನಸಭಾ ಚುನಾವಣೆಯಲ್ಲಿ ಅರವಕುರಿಚಿ ವಿಧಾನಸಭಾ ಕ್ಷೇತ್ರದಿಂದ ಮತ್ತು 2024ರ ಲೋಕಸಭಾ ಚುನಾವಣೆಯಲ್ಲಿ ಕೊಯಮತ್ತೂರು ಸಂಸದೀಯ ಕ್ಷೇತ್ರದಿಂದ ಸ್ಪರ್ಧಿಸಿದ್ದರು, ಆದರೆ ಎರಡೂ ಚುನಾವಣೆಗಳಲ್ಲಿ ಸೋತಿದ್ದರು.

ಇನ್ನು, ಫೆಬ್ರವರಿಯಲ್ಲಿ, ಪಕ್ಷ ಅಣ್ಣಾಮಲೈ ಅವರನ್ನು ಚುನಾವಣಾ ಪ್ರಚಾರ ಸಮಿತಿಯ ವ್ಯವಸ್ಥಾಪಕರನ್ನಾಗಿ ನೇಮಿಸಿದಾಗ, ಅಣ್ಣಾಮಲೈ ತಮ್ಮ ತಂದೆಯ ಆರೋಗ್ಯದ ಕಾರಣ ಹೇಳಿ ಜವಾಬ್ದಾರಿಯನ್ನು ತ್ಯಜಿಸಿದ್ದರು. ಪಕ್ಷದ ಅಧ್ಯಕ್ಷ ಸ್ಥಾನದಿಂದ ಅವರನ್ನು ಕೆಳಗಿಳಿಸಿದ್ದಕ್ಕೆ, ಪಕ್ಷದ ಹೈಕಮಾಂಡ್‌ ಮೇಲೆ ಅಸಮಾಧಾನ ಹೊಂದಿರುವ ಕಾರಣಕ್ಕೆ ಪಕ್ಷ ಕೊಟ್ಟ ಜವಾಬ್ದಾರಿಯನ್ನು ಅಣ್ಣಾಮಲೈ ನಿರಾಕರಿಸಿದ್ದರು ಎನ್ನುವ ಚರ್ಚೆ ರಾಜಕೀಯ ವಲಯದಲ್ಲಿ ಕೇಳಿ ಬಂದಿತ್ತು.

ಸದ್ಯ, ಮತ್ತೊಮ್ಮೆ ತಮಿಳುನಾಡಿನಲ್ಲಿ ಬಿಜೆಪಿ ʼಬಳಸಿ ಬಿಸಾಡುವʼ ತನ್ನ ಹಳೆಯ ರಾಜಕೀಯ ನೀತಿಯನ್ನು ಅಣ್ಣಾಮಲೈ ಅವರಿಗೆ ಮಾಡಿ ತೋರಿಸಿದೆ. ಪಕ್ಷ ಅವರಿಗೆ ವಂಚಿಸಿದೆ ಎಂದು ಎನ್‌ಡಿಎಯೇತರ ಪಕ್ಷಗಳು ಟೀಕಿಸುತ್ತಿವೆ.

ಇದನ್ನೂ ಓದಿ : ವಿಶ್ವಗುರು’ವಿನ ನಿಜ ಬಣ್ಣ ಬಯಲು ಮಾಡಿದ ಮಧು ಕಿಶ್ವರ್: ಸುದ್ದಿ ಮಾಡದ ಮಡಿಲ ಮಾಧ್ಯಮಗಳು

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಇಸಿ ಗ್ಯಾನೇಶ್‌ ಕುಮಾರ್‌ ವಿರುದ್ಧ ದೇಶವ್ಯಾಪಿ ಪ್ರತಿಭಟನೆ; ಹೈದರಾಬಾದ್‌ನಲ್ಲಿ ‘ಸಿಜೆಪಿ’ ಮಹತ್ವದ ಸಭೆ

ಮುಖ್ಯ ಚುನಾವಣಾ ಆಯುಕ್ತ (ಸಿಇಸಿ) ಗ್ಯಾನೇಶ್ ಕುಮಾರ್ ಅವರ ರಾಜೀನಾಮೆಗೆ ಆಗ್ರಹಿಸಿ...

ಜಮ್ಮು-ಕಾಶ್ಮೀರಕ್ಕೆ ಪೂರ್ಣ ರಾಜ್ಯ ಸ್ಥಾನಮಾನದ ನಿರ್ಣಯ ಅಂಗೀಕಾರ; ಸದನದಲ್ಲಿ ಬಿಜೆಪಿ ಗದ್ದಲ

ಜಮ್ಮು-ಕಾಶ್ಮೀರಕ್ಕೆ ತುರ್ತಾಗಿ ಪೂರ್ಣ ರಾಜ್ಯದ ಸ್ಥಾನಮಾನವನ್ನು ಮರುಸ್ಥಾಪಿಸಬೇಕು ಎಂದು ಆಗ್ರಹಿಸುವ ನಿರ್ಣಯವನ್ನು...

ಅಕ್ಟೋಬರ್ 8ರೊಳಗೆ ಪಶ್ಚಿಮ ಬಂಗಾಳ ಶಾಸಕರ ಅನರ್ಹತೆ ಅರ್ಜಿಗಳ ವಿಲೇವಾರಿಗೆ ಸ್ಪೀಕರ್​ಗೆ ಸುಪ್ರೀಂ ಸೂಚನೆ

ಪಕ್ಷಾಂತರ ನಿಷೇಧ ಕಾಯ್ದೆ ಹಾಗೂ ಸಂವಿಧಾನದ ಹತ್ತನೇ ಶೆಡ್ಯೂಲ್‌ನ ಅಡಿಯಲ್ಲಿ, ರಿತಬ್ರತಾ...

ಮೋದಿ ಸರ್ಕಾರ ECಗೆ ಇಮ್ಯೂನಿಟಿ ನೀಡಿದ್ದರೂ ಹೊಣೆಗಾರಿಕೆಯಿಂದ ತಪ್ಪಿಸಿಕೊಳ್ಳಲಾಗಲ್ಲ: ಕಪಿಲ್ ಸಿಬಲ್

ಮುಖ್ಯ ಚುನಾವಣಾ ಆಯುಕ್ತರಿಗೆ (CEC) ಕ್ರಿಮಿನಲ್ ಪ್ರಕರಣಗಳಿಂದ ಕಾನೂನು ರಕ್ಷಣೆ ನೀಡಲಾಗಿದೆ...