ತಮಿಳುನಾಡು ಚುನಾವಣೆ | ಮಾದರಿ ನೀತಿಸಂಹಿತೆ ಉಲ್ಲಂಘಿಸಿದ ವಿಜಯ್‌ ವಿರುದ್ಧ ಪ್ರಕರಣ ದಾಖಲು

Date:

ಪೆರಂಬೂರ್‌ನಲ್ಲಿ ಚುನಾವಣಾ ಪ್ರಚಾರ ನಡೆಸುವ ವೇಳೆ ಮಾದರಿ ನೀತಿಸಂಹಿತೆಯನ್ನು ಉಲ್ಲಂಘಿಸಿದ್ದಾರೆಂಬ ಆರೋಪದ ಮೇಲೆ ತಮಿಳಗ ವೆಟ್ರಿ ಕಳಗಂ ಪಕ್ಷದ (ಟಿವಿಕೆ) ಮುಖ್ಯಸ್ಥ, ನಟ ವಿಜಯ್ ವಿರುದ್ಧ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ.

ಪೆರಂಬೂರು ಮತ್ತು ಕೊಳತ್ತೂರಿನಲ್ಲಿ ನಡೆದ ಚುನಾವಣಾ ಪ್ರಚಾರ ಸಭೆಯ ಸಂದರ್ಭದಲ್ಲಿ ವಿಜಯ್ ಭಾಗಿಯಾಗಿದ್ದರು. ಆದರೆ, ಭದ್ರತೆ ಕಾರಣದಿಂದ ವಿಲ್ಲಿವಕ್ಕಂನಲ್ಲಿ ನಡೆಯಬೇಕಿದ್ದ ಸಭೆಯನ್ನು ರದ್ದುಗೊಳಿಸಲಾಗಿತ್ತು.

ಇದನ್ನೂ ಓದಿ : ಬಂಗಾಳ ಚುನಾವಣೆ | ಮಮತಾ-ಅಭಿಷೇಕ್ ಜಂಟಿ ತಂತ್ರ – ಒಂಟಿ ಪ್ರಚಾರ; ಬಿಜೆಪಿ ಅತಂತ್ರ?

- Advertisement -

ಚುನಾವಣಾ ಅಧಿಕಾರಿ ಕುಮಾರ್ ನೀಡಿದ ದೂರಿನ ಆಧಾರದ ಮೇಲೆ ಮಾದರಿ ನೀತಿ ಸಂಹಿತೆ ಉಲ್ಲಂಘನೆ ಒಳಗೊಂಡಂತೆ ಒಟ್ಟು ಐದು ಸೆಕ್ಷನ್‌ಗಳ ಅಡಿಯಲ್ಲಿ ವಿಜಯ್ ವಿರುದ್ಧ ಪ್ರಕರಣ ದಾಖಲಿಸಲಾಗಿದೆ ಎಂದು ತಿಳಿದುಬಂದಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಹೊಸ ಓದು | ಬಿ. ಚಂದ್ರೇಗೌಡರ ‘ಕಾಳ ಮಾವನ...

ಬಿ. ಚಂದ್ರೇಗೌಡರ 'ಬಯಲು ಸೀಮೆಯ ಕಟ್ಟೆಪುರಾಣ' ಅಂಕಣ ಬರಹದಿಂದ ಎದ್ದುಬಂದ ಕಾಳಮಾವ ಈಗ ತನ್ನ ಕಡೇ ದಿನಗಳಲ್ಲಿದ್ದಾರೆ. ಅವರು ಕಣ್ಣುಮುಚ್ಚುವ, ಕಾಲುಮಡಚುವ ದೃಶ್ಯಗಳು ಭಾರತದ ಆತ್ಮಸಾಕ್ಷಿಯ ಅಂತ್ಯಸಂಸ್ಕಾರವನ್ನು ಸಂಕೇತಿಸುವಂತಿವೆ. ನಮ್ಮ ನೆಲದ ನಾಲಿಗೆನಿಷ್ಠೆ...

ಬ್ರಿಟಿಷ್ ಕಾಲದ ʼಗುಲಾಮಗಿರಿʼ ಕಾನೂನುಗಳೇ ಇಂದಿನ ಪೊಲೀಸ್‌ ವ್ಯವಸ್ಥೆಯ...

ಸ್ವಾತಂತ್ರ್ಯ ಬಂದು ದಶಕಗಳೇ ಕಳೆದಿದ್ದರೂ, ನಾವಿನ್ನೂ ಬ್ರಿಟಿಷರು ಭಾರತೀಯರನ್ನು ದಮನ ಮಾಡಲು ರೂಪಿಸಿದ 1861ರ ಪೊಲೀಸ್ ಕಾಯಿದೆಯ ನೆರಳಿನಲ್ಲೇ ಬದುಕುತ್ತಿದ್ದೇವೆಯೇ? ಖಾಕಿ ಪಡೆಯನ್ನು 'ಪ್ರಜೆಗಳ ರಕ್ಷಕ'ನಾಗಿಸಬೇಕಿದ್ದ ವ್ಯವಸ್ಥೆ, ಇಂದಿಗೂ ರಾಜಕಾರಣಿಗಳ ಕೈಗೊಂಬೆಯಾಗಿ ಉಳಿದುಕೊಳ್ಳಲು...

ಯಾರು ಹಿತವರು ಈ ಇಬ್ಬರೊಳಗೆ? ನೇಹಾ ಬೋರಾ ಅಭಿಜಿತ್...

“ಹೋಲಿಕೆ ಬೇಡ, ಒಗ್ಗಟ್ಟು ಬೇಕು. ನಾವೆಲ್ಲರೂ ಒಟ್ಟಾಗಿ ಚುನಾವಣಾ ಆಯೋಗದ ಅಕ್ರಮಗಳ ವಿರುದ್ಧ ಹೋರಾಡಬೇಕು” ಎಂದು ನೇಹಾ ಬರೆದರೆ, ಅದಕ್ಕೆ ಅಭಿಜೀತ್ ಉತ್ತರ- “ಇಂಕ್ವಿಲಾಬ್ ಜಿಂದಾಬಾದ್” ನೇಹಾ ಬೋರಾ ಮತ್ತು ಅಭಿಜಿತ್ ದೀಪ್ಕೆ ನಡುವೆ...

ಚುನಾವಣಾ ಪ್ರಚಾರ ಸಭೆಯಲ್ಲಿ ಅನುಮತಿಗಿಂತ ಹೆಚ್ಚು ಧ್ವನಿವರ್ಧಕಗಳನ್ನು ಬಳಸಲಾಗಿದೆ. ಅಂಬ್ಯುಲೆನ್ಸ್‌ ಸಂಚಾರಕ್ಕೆ ಅಡ್ಡಿಪಡಿಸಲಾಗಿದೆ. ಮಾತ್ರವಲ್ಲದೇ, 5,000ಕ್ಕೂ ಹೆಚ್ಚು ಜನರನ್ನು ಸೇರಿಸುವ ಮೂಲಕ ಸಾರ್ವಜನಿಕರಿಗೆ ತೊಂದರೆ ಉಂಟುಮಾಡಲಾಗಿದೆ ಎಂದು ಕುಮಾರ್ ತಮ್ಮ ದೂರಿನಲ್ಲಿ ಉಲ್ಲೇಖ ಮಾಡಿದ್ದಾರೆ. ಅವರ ದೂರಿನ ಅನ್ವಯ ಪ್ರಕರಣ ದಾಖಲಾಗಿದೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ದೆಹಲಿ ಪ್ರತಿಭಟನೆ ವೇಳೆ ಪೊಲೀಸರಿಂದ ಲೈಂಗಿಕ ಕಿರುಕುಳ: ಮೂವರು ಪತ್ರಕರ್ತೆಯರ ಆರೋಪ

ದೇಶದ ರಾಜಧಾನಿ ದೆಹಲಿಯ ಜಂತರ್ ಮಂತರ್ ಬಳಿ ನಡೆದ ಪ್ರತಿಭಟನೆಯ ವರದಿಗಾರಿಕೆಯಲ್ಲಿ...

ಹಳೆಯ ಪ್ರಕರಣ: ಮುಖ್ಯ ಚುನಾವಣಾ ಆಯುಕ್ತ ಗ್ಯಾನೇಶ್ ಕುಮಾರ್ ವಿರುದ್ಧ ವಿಜಿಲೆನ್ಸ್ ತನಿಖೆಗೆ ಕೇರಳ ಸರ್ಕಾರ ಆದೇಶ

20೦6ರ ಪ್ರಕರಣವೊಂದಕ್ಕೆ ಸಂಬಂಧಿಸಿದಂತೆ ಹಾಲಿ ಮುಖ್ಯ ಚುನಾವಣಾ ಆಯುಕ್ತ (CEC) ಗ್ಯಾನೇಶ್...

ಗಣೇಶ ವಿಸರ್ಜನೆ ಮುಗಿಯಿತು, ಇನ್ನು ಸಿಇಸಿ ಗ್ಯಾನೇಶ್ ಕುಮಾರ್ ವಿಸರ್ಜನೆ ಬಾಕಿ: ನಟ ಪ್ರಕಾಶ್ ರಾಜ್

ದೇಶಾದ್ಯಂತ ಗಣೇಶ ವಿಸರ್ಜನೆ ಪ್ರಕ್ರಿಯೆ ಪೂರ್ಣಗೊಂಡಿದ್ದು, ಈಗ ಮುಖ್ಯ ಚುನಾವಣಾ ಆಯುಕ್ತ...

ಜಿಎಸ್‌ಟಿ ದಸ್ತಗಿರಿ ಅಧಿಕಾರ ಹಿಂಪಡೆಯುವ ಪ್ರಸ್ತಾಪ: ಆಡಂಬರದ ಜಾರಿಯೂ ಇಂದಿನ ಭ್ರಮನಿರಸನವೂ….

2017ರ ಜೂನ್ 30ರ ಮಧ್ಯರಾತ್ರಿ ಭಾರತದ ಸಂಸತ್ತಿನಲ್ಲಿ ವಿಶೇಷ ಅಧಿವೇಶನ ಕರೆಯಾಗಿತ್ತು....