ತಮಿಳುನಾಡು ಚುನಾವಣೆ | 5 ಕ್ಷೇತ್ರಗಳಲ್ಲಿ ಸ್ಪರ್ಧಿಸಲು ಕೊನೆಗೂ ಒಪ್ಪಿದ ಸಿಪಿಎಂ

Date:

ಮುಂಬರುವ ತಮಿಳುನಾಡು ವಿಧಾನಸಭಾ ಚುನಾವಣೆಗೆ ಸಂಬಂಧಿಸಿದಂತೆ ಆಡಳಿತರೂಢ ಡಿಎಂಕೆ ಮತ್ತು ಸಿಪಿಎಂ ಪಕ್ಷಗಳ ನಡುವೆ ಕ್ಷೇತ್ರಗಳ ಹಂಚಿಕೆ ವಿಚಾರದಲ್ಲಿ ಭಿನ್ನಮತಗಳಿದ್ದವು. ನಾವು ಕೇಳಿದಷ್ಟು ಕ್ಷೇತ್ರಗಳನ್ನು ಬಿಟ್ಟುಕೊಡದಿದ್ದಲ್ಲಿ ಏಕಾಂಗಿಯಾಗಿ ಚುನಾವಣೆಯನ್ನು ಎದುರಿಸುವುದಾಗಿ ಸಿಪಿಎಂ ರಾಜ್ಯ ಘಟಕ ಡಿಎಂಕೆಗೆ ಎಚ್ಚರಿಕೆ ನೀಡಿತ್ತು. ಹಲವು ಸುತ್ತಿನ ಮಾತುಕತೆಯ ಬಳಿಕ ಡಿಎಂಕೆ ನೀಡಿರುವ 5 ಕ್ಷೇತ್ರಗಳಿಗೆ ಒಪ್ಪಿಗೆ ನೀಡಿದೆ.

- Advertisement -

ಸರಿಸುಮಾರು ಕಳೆದೊಂದು ತಿಂಗಳಿಂದ ಡಿಎಂಕೆ ಮತ್ತು ಸಿಪಿಎಂ ಪಕ್ಷಗಳ ನಡುವೆ ಸೀಟು ಹಂಚಿಕೆಯ ಮಾತುಕತೆಗಳು ನಡೆಯುತ್ತಿತ್ತು. ಗೊಂದಲಗಳು ಏರ್ಪಟ್ಟ ಬಳಿಕ ಸ್ವತಃ ಸಿಎಂ ಎಂ.ಕೆ ಸ್ಟ್ಯಾಲಿನ್‌ ಸಿಪಿಎಂ ರಾಜ್ಯ ಘಟಕದ ಮುಖಂಡರೊಂದಿಗೆ ಮಾತುಕತೆ ನಡೆಸಿ, 5 ಕ್ಷೇತ್ರಗಳಲ್ಲಿ ಸ್ಪರ್ಧಿಸುವಂತೆ ಮನವಿ ಮಾಡಿಕೊಂಡಿದ್ದಾರೆ ಎಂದು ಸಿಪಿಎಂ ರಾಜ್ಯ ಕಾರ್ಯದರ್ಶಿ ಪಿ.ಷಣ್ಮುಗಂ ತಿಳಿಸಿದ್ದಾರೆ.  

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಕಲಬುರಗಿ | ‘ನಮ್ಮನ್ನ ಎಲ್ಲಿಗೆ ಕಳುಹಿಸುತ್ತೀರಿ?’: ತಗ್ಗಿನ ಬೇಲಿಯ...

92ಕ್ಕೂ ಅಧಿಕ ಸ್ಲಂ ಕುಟುಂಬಗಳ ಬದುಕು ಕೇವಲ ಜಮೀನಿನ ಹಕ್ಕಿನ ಪ್ರಶ್ನೆಯಲ್ಲ; ಅವರ ಸುರಕ್ಷಿತ ಓಡಾಟ, ಕುಡಿಯುವ ನೀರು ಹಾಗೂ ನಿತ್ಯದ ಬದುಕಿನ ಹಕ್ಕಿನ ಪ್ರಶ್ನೆಯೂ ಹೌದು. ನ್ಯಾಯಾಲಯದ ವಿಚಾರಣೆ ಅಂತಿಮಗೊಳ್ಳುವವರೆಗೆ ಯಾವುದೇ...

ಚುನಾವಣಾ ಆಯೋಗದ ಸಭೆ: ಪರಿಹಾರವಲ್ಲ, ತೇಪೆ ಹಚ್ಚುವ ಕಾರ್ಯಕ್ರಮ

ಅವೈಜ್ಞಾನಿಕ 'SIR' ಪ್ರಕ್ರಿಯೆ ಮತ್ತು ಆಯೋಗದೊಳಗಿನ ಭಿನ್ನಾಭಿಪ್ರಾಯಗಳು ಸಾರ್ವಜನಿಕವಾಗಿ ಬಯಲಾದ ಬೆನ್ನಲ್ಲೇ ಬಿಡುಗಡೆಯಾದ ಚುನಾವಣಾ ಆಯೋಗದ ಪತ್ರಿಕಾ ಪ್ರಕಟಣೆ, ತಪ್ಪುಗಳನ್ನು ತಿದ್ದುವ ಬದಲು ವ್ಯವಸ್ಥೆಯ ಲೋಪಗಳಿಗೆ ತೇಪೆ ಹಚ್ಚುವ ಯತ್ನದಂತೆ ಕಾಣುತ್ತಿದೆ. ದೇಶದ ಇತಿಹಾಸದಲ್ಲೇ...

ಹೊರಟ್ಟಿ ಅವರ ಹೋರಾಟದ ಬದುಕು ಮತ್ತು ಅವರ ಭಕ್ತ...

ಗ್ಯಾರಂಟಿ ಯೋಜನೆಗಳಿಂದ ಕೂಲಿ ಕಾರ್ಮಿಕರು ಸಿಗುತ್ತಿಲ್ಲವೆಂಬ ಬಸವರಾಜ ಹೊರಟ್ಟಿ ಅವರ ಹೇಳಿಕೆ ಮತ್ತು ಅದಕ್ಕೆ ಸಿಕ್ಕ ಸಾರ್ವಜನಿಕ ಚಪ್ಪಾಳೆಗಳು, ಕೇವಲ ಹಸಿವನ್ನೇ ಶ್ರಮದ ಇಂಧನವನ್ನಾಗಿ ನೋಡುವ ಸಮಾಜದ ಕ್ರೂರ ಮನಸ್ಥಿತಿಯನ್ನು ಅನಾವರಣಗೊಳಿಸುತ್ತವೆ. ಬಸವರಾಜ ಹೊರಟ್ಟಿ...

‘ಡಿಎಂಕೆ ನೇತೃತ್ವದ ಮೈತ್ರಿಕೂಟಕ್ಕೆ ಈ ಬಾರಿ ಚುನಾವಣೆಗಾಗಿ ಹೊಸ ಪಕ್ಷಗಳ ಸೇರ್ಪಡೆಯಿಂದ ಪ್ರಸ್ತುತ ಮೈತ್ರಿಕೂಟ ಬಲಗೊಂಡಿದೆ. ಆದ್ದರಿಂದ 6ಕ್ಕಿಂತ ಹೆಚ್ಚಿನ ಕ್ಷೇತ್ರಗಳನ್ನು ನೀಡಿ ಎಂದು ಒತ್ತಾಯಿಸದಿರಲು ನಿರ್ಧರಿಸಿದ್ದೇವೆ. ʼ2021ರ ವಿಧಾನಸಭಾ ಚುನಾವಣೆಯಲ್ಲಿ ನಾವು ಸ್ಪರ್ಧಿಸಿದ್ದ ಕನಿಷ್ಠ 6 ಕ್ಷೇತ್ರಗಳನ್ನು ಈ ಬಾರಿಯೂ ಉಳಿಸಿಕೊಳ್ಳಲು ಪಕ್ಷದ ಕಾರ್ಯಕಾರಿ ಸಮಿತಿ ಸೂಚಿಸಿದೆ’ ಎಂದು ಷಣ್ಮುಗಂ ತಿಳಿಸಿದ್ದಾರೆ.

2021ರ ವಿಧಾನಸಭಾ ಚುನಾವಣೆಯಲ್ಲಿ ಎಡ ಪಕ್ಷಗಳಾದ ಸಿಪಿಐ ಮತ್ತು ಸಿಪಿಎಂ ತಲಾ ಆರು ಸ್ಥಾನಗಳಲ್ಲಿ ಸ್ಪರ್ಧಿಸಿದ್ದವು.

ಇದನ್ನೂ ಓದಿ : ಸರ್ವರನ್ನೂ ತಬ್ಬುವವಳು ತಾಯಿ ಗಂಗೆ; ಇಫ್ತಾರ್ ಊಟದಿಂದ ಆಕೆಯ ಉದಾರ ಮಡಿಲು ಮಲಿನವಾಗದು

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ತಮಿಳುನಾಡಿನಲ್ಲಿ ತೀವ್ರ ವಿರೋಧ: ‘ಆರ್‌ಟಿಐ ವಿನಾಯಿತಿ’ ನಿರ್ಧಾರದಿಂದ ಹಿಂದೆ ಸರಿದ ವಿಜಯ್ ಸರ್ಕಾರ

ತಮಿಳುನಾಡಿನ ಮುಖ್ಯಮಂತ್ರಿ ಸಿ. ಜೋಸೆಫ್ ವಿಜಯ್ ನೇತೃತ್ವದ 'ತಮಿಳಗ ವೆಟ್ರಿ ಕಳಗಂ'...

ಅಸ್ಸಾಂ ಸರ್ಕಾರದ ವೈಫಲ್ಯಗಳನ್ನು ಮುಚ್ಚಿಡಲು ನಮ್ಮ ಬಂಧನ: ಸಿಜೆಪಿ ನಾಯಕ ಅಶುತೋಷ್ ರಂಕಾ ಆರೋಪ

ಕಾಕ್ರೋಚ್ ಜನತಾ ಪಾರ್ಟಿ (ಸಿಜೆಪಿ) ಸಹ-ಸಂಚಾಲಕ ಅಶುತೋಷ್ ರಂಕಾ ಮತ್ತು ಅವರ...

ವಿಜಯನ್ ವಿರುದ್ಧ ಸಿಎಂಆರ್‌ಎಲ್ ಪ್ರಕರಣ: ಇಡಿ ಹೇಳಿದ ತಕ್ಷಣ ಎಫ್‌ಐಆರ್ ದಾಖಲಿಸಲಾಗದು ಎಂದು ಕೇರಳ ಗೃಹ ಸಚಿವ

ಜಾರಿ ನಿರ್ದೇಶನಾಲಯ (ಇಡಿ) ಕೋರಿದೆ ಎಂದಮಾತ್ರಕ್ಕೆ ತಕ್ಷಣವೇ ಎಫ್‌ಐಆರ್ ನೋಂದಾಯಿಸಲು ಸಾಧ್ಯವಿಲ್ಲ....

4 ವರ್ಷಗಳಲ್ಲಿ 111 ಸಂಸದರು, ಶಾಸಕರ ಪಕ್ಷಾಂತರ: ಶೇ. 26ರಷ್ಟು ನಾಯಕರನ್ನು ಸೇರಿಸಿಕೊಂಡ ಬಿಜೆಪಿ!

ದೇಶದ ರಾಜಕೀಯ ಕ್ಷೇತ್ರದಲ್ಲಿ ಜನಪ್ರತಿನಿಧಿಗಳ ಪಕ್ಷಾಂತರ ಪರ್ವ ತಡೆಯಿಲ್ಲದೆ ಮುಂದುವರಿದಿದೆ. ಅದರಲ್ಲೂ...