ತಮಿಳುನಾಡು ಚುನಾವಣೆ | ನಯನತಾರಾ ಬೇಕು. ನೀವು ನನ್ನ ಬಯಕೆಯನ್ನು ಈಡೇರಿಸುತ್ತೀರಾ? : AIADMK  ಸಂಸದ ಸಿ.ವಿ. ಷಣ್ಮುಗಂ ವಿವಾದಾತ್ಮಕ ಹೇಳಿಕೆ

Date:

ತಮಿಳುನಾಡಿನ ಹಾಲಿ ಮುಖ್ಯಮಂತ್ರಿ ಎಂ.ಕೆ ಸ್ಟ್ಯಾಲಿನ್‌ ಅವರ ‘ನಿಮ್ಮ ಬಯಕೆ, ಕನಸನ್ನು ನಮಗೆ ತಿಳಿಸಿ, ನಿಮ್ಮ ಕನಸು ಮತ್ತು ಬಯಕೆಯನ್ನು ನಮ್ಮ ಸರ್ಕಾರದಲ್ಲಿ ನಾವು ಈಡೇರಿಸುತ್ತೇವೆ ಎಂದು ನೀಡಿದ್ದ ಹೇಳಿಕೆಯನ್ನು ಟೀಕಿಸುವ ಭರದಲ್ಲಿ,  ಚಿತ್ರನಟಿ ನಯನತಾರಾ ಅವರ ಹೆಸರನ್ನು ಉಲ್ಲೇಖಿಸಿ ಎಐಎಡಿಎಂಕೆ ಸಂಸದ ಸಿ.ವಿ. ಷಣ್ಮುಗಂ ಅವರು ನಾಲಿಗೆ ಹರಿಬಿಟ್ಟಿದ್ದಾರೆ. ಅವರು ನೀಡಿರುವ ಹೇಳಿಕೆ ಈಗ ತಮಿಳುನಾಡಿನ ರಾಜಕೀಯ ವಲಯದಲ್ಲಿ ವಿವಾದದ ಸ್ವರೂಪ ತಾಳಿದೆ.

ಆಡಳಿತಾರೂಢ ಡಿಎಂಕೆ ಸರ್ಕಾರದ ವಿರುದ್ಧ ಎಐಎಡಿಎಂಕೆ ವಿಲ್ಲುಪುರಂನಲ್ಲಿ  ಪ್ರತಿಭಟನೆ ನಡೆಸಿತ್ತು. ಪ್ರತಿಭಟನೆಯಲ್ಲಿ ಭಾಗಿಯಾಗಿದ್ದ ಷಣ್ಮುಗಂ ಅವರು ರಾಜ್ಯ ಸರ್ಕಾರವನ್ನು ಟೀಕಿಸುವ ಭರದಲ್ಲಿ ಮುಖ್ಯಮಂತ್ರಿ ಸ್ಟ್ಯಾಲಿನ್‌ ಅವರ ಮೇಲೆ ಉಲ್ಲೇಖಿಸಿರುವ ಹೇಳಿಕೆಯನ್ನು ಪ್ರಸ್ತಾಪಿಸಿ, “ನನಗೆ ನಯನತಾರಾ ಬೇಕು. ನೀವು ನನ್ನ ಬಯಕೆಯನ್ನು ಈಡೇರಿಸುತ್ತೀರಾ? ನಯನತಾರಾ ಅವರನ್ನು ಮದುವೆಯಾಗುವ ಯಾರೊಬ್ಬರ ಕನಸನ್ನಾದರೂ ಮುಖ್ಯಮಂತ್ರಿ ಸ್ಟ್ಯಾಲಿನ್ ಈಡೇರಿಸುತ್ತಾರಾ’ ಎಂದು ಪ್ರಶ್ನಿಸಿದ್ದರು. ಇದು ಈಗ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ.

- Advertisement -

ಸ್ಟಾಲಿನ್ ತಮ್ಮ ಅಧಿಕಾರದ ಅವಧಿಯ ಐದು ವರ್ಷಗಳಲ್ಲಿ ಏನು ಮಾಡಿದ್ದಾರೆ ಎಂದು ಕೂಡ ಅವರು ವಾಗ್ದಾಳಿ ಮಾಡಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಅಸ್ಸಾಂ, ಬಿಹಾರ ಕತ್ತಲಲ್ಲಿ ಮುಳುಗಿದಾಗ ಮೋದಿಗೆ ‘ಆಶೀರ್ವಾದ್ ಕಾ...

ದೆಹಲಿಯಲ್ಲಿ ಕಟ್ಟಡ ಕುಸಿದು ವಿದ್ಯಾರ್ಥಿಗಳು ಹೆಣವಾದಾಗ, ಪ್ರಶ್ನೆ ಪತ್ರಿಕೆ ಸೋರಿಕೆಯಿಂದ ಆಘಾತಗೊಂಡು ಎಳೆ ಜೀವಗಳು ಸಾವಿನ ದಾರಿ ಹಿಡಿದಾಗ, ತಮ್ಮ ಹಕ್ಕುಗಳಿಗಾಗಿ ದೇಶದ ಯುವಜನ ಬೀದಿಗಿಳಿದಾಗ, ಕೊನೆಗೆ ನೈಸರ್ಗಿಕ ವಿಕೋಪದಿಂದ ದೇಶದ ಜನ...

ಚುನಾವಣಾ ಕಳ್ಳತನ: ಎದುರಾಳಿಗಳೇ ಮಾಯವಾದರೆ! ನಂದಿಗ್ರಾಮದ ಟ್ರೇಲರ್ –...

ಮತದಾನಕ್ಕೂ ಮುನ್ನ ಎದುರಾಳಿಯೇ ಕಣದಿಂದ ಮಾಯವಾದರೆ, ಅದನ್ನು ಚುನಾವಣೆ ಎನ್ನಬಹುದೇ? ನಂದಿಗ್ರಾಮದ ಬೆಳವಣಿಗೆಗಳು 2027ರ ಉತ್ತರ ಪ್ರದೇಶ ಚುನಾವಣೆಗೂ ಗಂಭೀರ ಸವಾಲು ಒಡ್ಡುವಂತಿವೆ ಪಶ್ಚಿಮ ಬಂಗಾಳದ ನಂದಿಗ್ರಾಮ ವಿಧಾನಸಭಾ ಕ್ಷೇತ್ರಕ್ಕೆ ಉಪಚುನಾವಣೆ ನಡೆಯುತ್ತಿದೆ. ನಂದಿಗ್ರಾಮದ...

ಡಿಜಿಟಲ್ ಇಂಡಿಯಾಕ್ಕೆ ಹಿನ್ನಡೆ; ಮೋದಿ ನೀತಿಯಿಂದ ಮತ್ತೆ ನಗದಿನತ್ತ...

ಸರ್ಕಾರದ ಈ ನಿರ್ಧಾರ ಜನಸಾಮಾನ್ಯರಿಗೆ ಎಷ್ಟು ಕಿರಿಕಿರಿ ಉಂಟುಮಾಡಿದೆ ಎಂಬುದನ್ನು 'ಲೋಕಲ್ ಸರ್ಕಲ್ಸ್' (Local Circles) ನಡೆಸಿದ 32,000ಕ್ಕೂ ಹೆಚ್ಚು ಜನರ ಸಮೀಕ್ಷೆ ಬಟಾಬಯಲು ಮಾಡಿದೆ. ಸಮೀಕ್ಷೆಯ ಪ್ರಕಾರ, ಕೇವಲ ಶೇ.17ರಷ್ಟು ವರ್ತಕರು...

ಇನ್ನು, ನಯನತಾರಾ ಬಗ್ಗೆ ನೀಡಿದ್ದ ಈ ಹೇಳಿಕೆ ವಿವಾದದ ಸ್ವರೂಪ ಪಡೆಯುತ್ತಿದ್ದಂತೆ, ಮಾಜಿ ಕಾನೂನು ಸಚಿವರೂ ಆಗಿರುವ ಷಣ್ಮುಗಂ ಅವರು ವಿಷಾದ ವ್ಯಕ್ತಪಡಿಸಿದ್ದಾರೆ. ನನ್ನ ಹೇಳಿಕೆಗಳನ್ನು ‘ತಪ್ಪಾಗಿ’ ಬಿಂಬಿಸಲಾಗಿದೆ. ನಾನು ದುರುದ್ದೇಶದಿಂದ ನಟಿ ನಯನತಾರಾ ಅವರ ಬಗ್ಗೆ ಹೇಳಿಕೆ ನೀಡಿಲ್ಲ ಎಂದು ಸ್ಪಷ್ಟನೆ ನೀಡಿದ್ದಾರೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ವಸ್ತುವನ್ನು ಸುಡುವುದರಿಂದಷ್ಟೇ ‘ಚರಸ್’ ಎಂದು ಸಾಬೀತುಪಡಿಸಲಾಗದು: 22 ವರ್ಷಗಳ ಬಳಿಕ ಇಬ್ಬರು ಖುಲಾಸೆ

ವಶಪಡಿಸಿಕೊಂಡ ವಸ್ತುವಿನ ಒಂದು ಸಣ್ಣ ಭಾಗವನ್ನು ಸುಟ್ಟು ನೋಡುವುದರಿಂದ ಮಾತ್ರವೇ ಅದು...

ಲಕ್ಷ್ಮಣ್ @ 89: ‘ಅಚಲ’ ಆಶಾವಾದಿ – ಹಸಿರು ಕಾವಲುಗಾರನ ಕಥನ

89ನೇ ವಸಂತಕ್ಕೆ ಕಾಲಿಡುತ್ತಿರುವ ಎ.ಸಿ. ಲಕ್ಷ್ಮಣ್ ಅವರು ಭರವಸೆ ಮತ್ತು ಆಶಾವಾದದ...

ವಲಸೆ ತಡೆಗೆ ‘ರುದ್ರಾಕ್ಷಿ ಕೃಷಿ’ ಯೋಜನೆಗೆ ಮುಂದಾದ ಉತ್ತರಾಖಂಡ ಸರ್ಕಾರ; 1.5 ಲಕ್ಷ ಉದ್ಯೋಗ ಸೃಷ್ಟಿ ಸಾಧ್ಯವೇ?

ಉತ್ತರಾಖಂಡದ ಗುಡ್ಡಗಾಡು ಪ್ರದೇಶಗಳಿಂದ ಜನರು ನೌಕರಿ ಮತ್ತು ಜೀವನೋಪಾಯ ಅರಸಿ ನಗರಗಳಿಗೆ...