ತಮಿಳುನಾಡು ಚುನಾವಣೆ | ಸ್ಪರ್ಧೆಯಿಂದ ಹೊರಗುಳಿಯಲು ಕಮಲ್‌ ಹಾಸನ್‌ ನಿರ್ಧಾರ!

Date:

ಆಡಳಿತಾರೂಢ ಡಿಎಂಕೆ ನೇತೃತ್ವದ ಜಾತ್ಯತೀತ ಪ್ರಗತಿಪರ ಒಕ್ಕೂಟದಲ್ಲಿರುವ ಪಕ್ಷಗಳಲ್ಲಿ ಒಂದಾದ ಮಕ್ಕಳ್ ನೀಧಿ ಮಯ್ಯಮ್ (ಎಂಎನ್‌ಎಂ) ಪಕ್ಷದ ಸಂಸ್ಥಾಪಕ ಕಮಲ್ ಹಾಸನ್ ಅವರು ತಮ್ಮ ಪಕ್ಷ ಈ ಬಾರಿಯ ತಮಿಳುನಾಡು ವಿಧಾನಸಭಾ ಚುನಾವಣೆಯಲ್ಲಿ ಸ್ಪರ್ಧಿಸುವುದಿಲ್ಲ ಎಂದು ಘೋಷಿಸಿದ್ದಾರೆ.

ಡಿಎಂಕೆ ನೇತೃತ್ವದ ಜಾತ್ಯತೀತ ಪ್ರಗತಿಪರ ಒಕ್ಕೂಟದ ಅಂಗ ಪಕ್ಷವಾಗಿರುವ ಕಮಲ್ ಹಾಸನ್ ನೇತೃತ್ವದ ಎಂಎನ್‌ಎಂ, ಡಿಎಂಕೆ ನೀಡಿರುವ ಸ್ಥಾನಗಳ ಸಂಖ್ಯೆ ಮತ್ತು ಎಂಎನ್‌ಎಂ ಅಭ್ಯರ್ಥಿಗಳು ಡಿಎಂಕೆ ಪಕ್ಷದ ಚಿಹ್ನೆಯಲ್ಲೇ ಸ್ಪರ್ಧಿಸಬೇಕೆಂಬ ‘ಸಲಹೆ’ಯನ್ನು ನಯವಾಗಿಯೇ ತಿರಸ್ಕರಿಸಿದೆ.

- Advertisement -

ಮಾತ್ರವಲ್ಲದೆ, ಚುನಾವಣೆಯಲ್ಲಿ ಸ್ಪರ್ಧಿಸದಿರಲು ನಿರ್ಧಾರ ಪ್ರಕಟಿಸಿದ ಎಂಎನ್‌ಎಂ ಸಂಸ್ಥಾಪಕ ಹಾಸನ್, ಡಿಎಂಕೆ ನೇತೃತ್ವದ ಒಕ್ಕೂಟದ ಎಲ್ಲಾ ಅಭ್ಯರ್ಥಿಗಳಿಗೆ ತಮ್ಮ ಪಕ್ಷ ಬೆಂಬಲವನ್ನು ನೀಡಲಿದೆ ಎಂದು ತಿಳಿಸಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಕಲಬುರಗಿ | ‘ನಮ್ಮನ್ನ ಎಲ್ಲಿಗೆ ಕಳುಹಿಸುತ್ತೀರಿ?’: ತಗ್ಗಿನ ಬೇಲಿಯ...

92ಕ್ಕೂ ಅಧಿಕ ಸ್ಲಂ ಕುಟುಂಬಗಳ ಬದುಕು ಕೇವಲ ಜಮೀನಿನ ಹಕ್ಕಿನ ಪ್ರಶ್ನೆಯಲ್ಲ; ಅವರ ಸುರಕ್ಷಿತ ಓಡಾಟ, ಕುಡಿಯುವ ನೀರು ಹಾಗೂ ನಿತ್ಯದ ಬದುಕಿನ ಹಕ್ಕಿನ ಪ್ರಶ್ನೆಯೂ ಹೌದು. ನ್ಯಾಯಾಲಯದ ವಿಚಾರಣೆ ಅಂತಿಮಗೊಳ್ಳುವವರೆಗೆ ಯಾವುದೇ...

ಚುನಾವಣಾ ಆಯೋಗದ ಸಭೆ: ಪರಿಹಾರವಲ್ಲ, ತೇಪೆ ಹಚ್ಚುವ ಕಾರ್ಯಕ್ರಮ

ಅವೈಜ್ಞಾನಿಕ 'SIR' ಪ್ರಕ್ರಿಯೆ ಮತ್ತು ಆಯೋಗದೊಳಗಿನ ಭಿನ್ನಾಭಿಪ್ರಾಯಗಳು ಸಾರ್ವಜನಿಕವಾಗಿ ಬಯಲಾದ ಬೆನ್ನಲ್ಲೇ ಬಿಡುಗಡೆಯಾದ ಚುನಾವಣಾ ಆಯೋಗದ ಪತ್ರಿಕಾ ಪ್ರಕಟಣೆ, ತಪ್ಪುಗಳನ್ನು ತಿದ್ದುವ ಬದಲು ವ್ಯವಸ್ಥೆಯ ಲೋಪಗಳಿಗೆ ತೇಪೆ ಹಚ್ಚುವ ಯತ್ನದಂತೆ ಕಾಣುತ್ತಿದೆ. ದೇಶದ ಇತಿಹಾಸದಲ್ಲೇ...

ಹೊರಟ್ಟಿ ಅವರ ಹೋರಾಟದ ಬದುಕು ಮತ್ತು ಅವರ ಭಕ್ತ...

ಗ್ಯಾರಂಟಿ ಯೋಜನೆಗಳಿಂದ ಕೂಲಿ ಕಾರ್ಮಿಕರು ಸಿಗುತ್ತಿಲ್ಲವೆಂಬ ಬಸವರಾಜ ಹೊರಟ್ಟಿ ಅವರ ಹೇಳಿಕೆ ಮತ್ತು ಅದಕ್ಕೆ ಸಿಕ್ಕ ಸಾರ್ವಜನಿಕ ಚಪ್ಪಾಳೆಗಳು, ಕೇವಲ ಹಸಿವನ್ನೇ ಶ್ರಮದ ಇಂಧನವನ್ನಾಗಿ ನೋಡುವ ಸಮಾಜದ ಕ್ರೂರ ಮನಸ್ಥಿತಿಯನ್ನು ಅನಾವರಣಗೊಳಿಸುತ್ತವೆ. ಬಸವರಾಜ ಹೊರಟ್ಟಿ...

ಚುನಾವಣಾ ಕಣದಿಂದ ದೂರವಿರುವುದು “ತ್ಯಾಗವಲ್ಲ, ಬದಲಾಗಿ ಕರ್ತವ್ಯ” ಎಂದು ಕಮಲ್ ಹಾಸನ್ ಹೇಳಿದ್ದಾರೆ. ಇದೊಂದು ಚುನಾವಣಾ ರಾಜಕೀಯದಲ್ಲಿ ಹೊಸ ಹೆಜ್ಜೆ ಎಂದೇ ತಮಿಳುನಾಡು ರಾಜಕೀಯ ವಲಯದಲ್ಲಿ ಚರ್ಚೆಯಾಗುತ್ತಿದೆ.

“ಮುಖ್ಯಮಂತ್ರಿಗಳು ಪ್ರೀತಿಯಿಂದ ನೀಡುವುದನ್ನು ಹೆಮ್ಮೆಯಿಂದ ತಿರಸ್ಕರಿಸುವುದು ಸಹ ಪ್ರೀತಿಯ ಒಂದು ರೂಪವಾಗಿದೆ” ಎಂದು ಕಮಲ್‌ ಹಾಸನ್‌ ಹೇಳಿದ್ದಾರೆ.

ತಮಿಳುನಾಡಿನ ಪ್ರಗತಿಗಾಗಿ ಮತ್ತು ದ್ರಾವಿಡ ಮಾಡೆಲ್ 2.0 ಸರ್ಕಾರ ರಚನೆಗಾಗಿ ಈ ತೀರ್ಮಾನ ಮಾಡಲಾಗಿದೆ. ಇದು ತಮಿಳುನಾಡಿನ ರಾಜಕೀಯದ ತುರ್ತು ಎಂದು ಕೂಡ ಹಾಸನ್‌ ಅಭಿಪ್ರಾಯ ಪಟ್ಟಿದ್ದಾರೆ.

ಇದನ್ನೂ ಓದಿ : ಅಸ್ಸಾಂ ಚುನಾವಣೆ: ಬಿಜೆಪಿಯ ಹತಾಶ ‘ಆಪರೇಷನ್’ ತಂತ್ರ, ಪುಟಿದೇಳಲು ಕಾಂಗ್ರೆಸ್‌ಗೆ ಸುವರ್ಣಾವಕಾಶ

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ತಮಿಳುನಾಡಿನಲ್ಲಿ ತೀವ್ರ ವಿರೋಧ: ‘ಆರ್‌ಟಿಐ ವಿನಾಯಿತಿ’ ನಿರ್ಧಾರದಿಂದ ಹಿಂದೆ ಸರಿದ ವಿಜಯ್ ಸರ್ಕಾರ

ತಮಿಳುನಾಡಿನ ಮುಖ್ಯಮಂತ್ರಿ ಸಿ. ಜೋಸೆಫ್ ವಿಜಯ್ ನೇತೃತ್ವದ 'ತಮಿಳಗ ವೆಟ್ರಿ ಕಳಗಂ'...

ಅಸ್ಸಾಂ ಸರ್ಕಾರದ ವೈಫಲ್ಯಗಳನ್ನು ಮುಚ್ಚಿಡಲು ನಮ್ಮ ಬಂಧನ: ಸಿಜೆಪಿ ನಾಯಕ ಅಶುತೋಷ್ ರಂಕಾ ಆರೋಪ

ಕಾಕ್ರೋಚ್ ಜನತಾ ಪಾರ್ಟಿ (ಸಿಜೆಪಿ) ಸಹ-ಸಂಚಾಲಕ ಅಶುತೋಷ್ ರಂಕಾ ಮತ್ತು ಅವರ...

ವಿಜಯನ್ ವಿರುದ್ಧ ಸಿಎಂಆರ್‌ಎಲ್ ಪ್ರಕರಣ: ಇಡಿ ಹೇಳಿದ ತಕ್ಷಣ ಎಫ್‌ಐಆರ್ ದಾಖಲಿಸಲಾಗದು ಎಂದು ಕೇರಳ ಗೃಹ ಸಚಿವ

ಜಾರಿ ನಿರ್ದೇಶನಾಲಯ (ಇಡಿ) ಕೋರಿದೆ ಎಂದಮಾತ್ರಕ್ಕೆ ತಕ್ಷಣವೇ ಎಫ್‌ಐಆರ್ ನೋಂದಾಯಿಸಲು ಸಾಧ್ಯವಿಲ್ಲ....

4 ವರ್ಷಗಳಲ್ಲಿ 111 ಸಂಸದರು, ಶಾಸಕರ ಪಕ್ಷಾಂತರ: ಶೇ. 26ರಷ್ಟು ನಾಯಕರನ್ನು ಸೇರಿಸಿಕೊಂಡ ಬಿಜೆಪಿ!

ದೇಶದ ರಾಜಕೀಯ ಕ್ಷೇತ್ರದಲ್ಲಿ ಜನಪ್ರತಿನಿಧಿಗಳ ಪಕ್ಷಾಂತರ ಪರ್ವ ತಡೆಯಿಲ್ಲದೆ ಮುಂದುವರಿದಿದೆ. ಅದರಲ್ಲೂ...