ತಮಿಳುನಾಡು ಉಪಮುಖ್ಯಮಂತ್ರಿ ಮತ್ತು ಡಿಎಂಕೆ ಯುವ ಮೋರ್ಚಾ ಕಾರ್ಯದರ್ಶಿ ಆಗಿರುವ ಉದಯನಿಧಿ ಸ್ಟಾಲಿನ್ ಚೆಪಾಕ್-ತಿರುವಲ್ಲಿಕೇಣಿ ಕ್ಷೇತ್ರದಿಂದ ಎರಡನೇ ಬಾರಿಗೆ ಸ್ಪರ್ಧೆಗೆ ಇಳಿದಿದ್ದು, ಏ.02ರಂದು ನಾಮಪತ್ರ ಸಲ್ಲಿಸಿದ್ದಾರೆ.
ನಾಮಪತ್ರ ಸಲ್ಲಿಕೆಗೂ ಮುನ್ನಾ ಬೃಹತ್ ರೋಡ್ ಶೋನಲ್ಲಿ ಅವರು ಭಾಗವಹಿಸಿದರು. ನಾಮಪತ್ರ ಸಲ್ಲಿಸಿದ ನಂತರ ಸುದ್ದಿಗಾರರಿಗೆ ಸ್ಪಂದಿಸಿದ ಮಾತನಾಡಿದ ಅವರು, ಚುನಾವಣೆಯಲ್ಲಿ ಡಿಎಂಕೆಗೆ ಬಹುಮತ ಪಡೆದು ಅಧಿಕಾರ ಹಿಡಿಯುತ್ತದೆ ಎಂದು ವಿಶ್ವಾಸ ವ್ಯಕ್ತಪಡಿಸಿದ್ದಾರೆ.
ʼಕಳೆದ ಐದು ವರ್ಷಗಳಲ್ಲಿ ಸ್ಟಾಲಿನ್ ನೇತೃತ್ವದ ಸರ್ಕಾರದ ಆಡಳಿತದ ಬಗ್ಗೆ ರಾಜ್ಯದ ಜನತೆ ವಿಶೇಷವಾಗಿ ಮಹಿಳೆಯರು ತೃಪ್ತಿ ಹೊಂದಿದ್ದಾರೆ. ಚೆಪಾಕ್-ತಿರುವಲ್ಲಿಕೇಣಿ ನನ್ನ ಮನೆ. ಈ ಕ್ಷೇತ್ರದ ಬೆಂಬಲ ಪಕ್ಷದ ಜಯವನ್ನು ಧೃಡಪಡಿಸುತ್ತದೆ’ ಎಂದು ಹೇಳಿದ್ದಾರೆ.




