ತಮಿಳುನಾಡು ಚುನಾವಣೆ : ತಮ್ಮ ಡಿವೋರ್ಸ್ ವಿಷಯ, ರಾಜಕೀಯ ಷಡ್ಯಂತ್ರಗಳ ಬಗ್ಗೆ ಮೌನ ಮುರಿದ ವಿಜಯ್‌

Date:

ತಮಿಳುನಾಡು ವಿಧಾನಸಭೆ ಚುನಾವಣೆಗೆ ದಿನಗಣನೆ ಆರಂಭವಾಗಿದ್ದು, ತಮಿಳಗ ವೆಟ್ರಿ ಕಳಗಂ (TVK) ಪಕ್ಷದ ಮುಖ್ಯಸ್ಥ ವಿಜಯ್ ತಮ್ಮ ವೈಯಕ್ತಿಕ ಜೀವನ ಮತ್ತು ರಾಜಕೀಯ ವಿರೋಧಿಗಳ ವಿರುದ್ಧ ಆಕ್ರೋಶ ಹೊರಹಾಕಿದ್ದಾರೆ.

ಚುನಾವಣಾ ಬಹಿರಂಗ ಸಭೆಯಲ್ಲಿ ಮಾತನಾಡಿದ ವಿಜಯ್, ತಮ್ಮ ಪತ್ನಿ ಸಂಗೀತ ಸ್ವರ್ಣಲಿಂಗಂ ಅವರೊಂದಿಗಿನ ಡಿವೋರ್ಸ್ ವದಂತಿ ಹಾಗೂ ರಾಜಕೀಯ ಷಡ್ಯಂತ್ರಗಳ ಬಗ್ಗೆ ಮೌನ ಮುರಿದಿದ್ದಾರೆ. ಚುನಾವಣೆಯ ಹೊತ್ತಿನಲ್ಲಿ ನನ್ನ ಘನತೆಗೆ ಧಕ್ಕೆ ತರಲು ಕೆಲವು‌ ಶಕ್ತಿಗಳು ಈ ರೀತಿಯಾಗಿ ಸಂಚು ಮಾಡುತ್ತಿದ್ದಾರೆ ಎಂದು  ಆಕ್ರೋಶ ಹೊರ ಹಾಕಿದ್ದಾರೆ.

“ನನ್ನ ಸುತ್ತಮುತ್ತಲಿರುವ ಜನರು ಹಲವು ವರ್ಷಗಳಿಂದ ಕಾಯುತ್ತಿದ್ದರು. ಈಗ ಚುನಾವಣೆಗೆ ಕೆಲವೇ  ದಿನಗಳು ಬಾಕಿ ಇರುವ ಸಂದರ್ಭದಲ್ಲಿ ನನ್ನ ಹೆಸರನ್ನು ಕೆಡಿಸಲು ಯತ್ನಿಸುತ್ತಿದ್ದಾರೆ” ಎಂದು ಗುಡುಗಿದ್ದಾರೆ. ತಮ್ಮ ಡಿವೋರ್ಸ್ ವಿಷಯವನ್ನು ಮುಂದಿಟ್ಟುಕೊಂಡು ರಾಜಕೀಯ ಲಾಭ ಪಡೆಯಲು ಕೆಲವರು ಯತ್ನಿಸುತ್ತಿದ್ದಾರೆ ಎಂದೂ ಅವಚರು ಸಿಡಿಮಿಡಿಗೊಂಡಿದ್ದಾರೆ.

ಇದನ್ನೂ ಓದಿ : ಕೇರಳ | ಯುಡಿಎಫ್-ಎಲ್‌ಡಿಎಫ್ ಜಿದ್ದಾಜಿದ್ದಿನ ಸ್ಪರ್ಧೆ: ನಾಲ್ಕೈದು ಸ್ಥಾನ ಪಡೆಯಲೂ ಬಿಜೆಪಿ ಹರಸಾಹಸ

“ನನ್ನನ್ನು ಜನರಿಂದ ವಿಮುಖವಾಗಿಸಲು ಸಾಧ್ಯವಿಲ್ಲ”

- Advertisement -

ವೈಯಕ್ತಿಕ ಜೀವನದ ಏರಿಳಿತಗಳ ನಡುವೆಯೂ ರಾಜಕೀಯದಲ್ಲಿ ಸಕ್ರಿಯರಾಗಿರುವ ವಿಜಯ್, ವಿರೋಧಿಗಳಿಗೆ ಖಡಕ್ ಸಂದೇಶ ರವಾನಿಸಿದ್ದಾರೆ. “ಆ ಪ್ರಯತ್ನ ಕೂಡ ಸಫಲವಾಗಲಿಲ್ಲ. ನೀವು ನನಗೆ ಎಷ್ಟೇ ನೋವು ನೀಡಿದರೂ, ಎಂತಹ ಕಷ್ಟಗಳನ್ನು ಕೊಟ್ಟರೂ, ನನ್ನನ್ನು ಜನರಿಂದ ಬೇರ್ಪಡಿಸಲು ಯಾರಿಂದಲೂ ಸಾಧ್ಯವಿಲ್ಲ” ಎಂದು ಎಚ್ಚರಿಕೆ ನೀಡಿದ್ದಾರೆ. ಈ ಮೂಲಕ ತಮ್ಮ ವೈಯಕ್ತಿಕ ಜೀವನದ ವಿವಾದಗಳು ತಮ್ಮ ರಾಜಕೀಯ ಹಾದಿಗೆ ಅಡ್ಡಿಯಾಗುವುದಿಲ್ಲ ಎಂದು ಅವರು ಸ್ಪಷ್ಟಪಡಿಸಿದ್ದಾರೆ.

ಡಿಎಂಕೆ ವಿರುದ್ಧ ವಿಜಯ್‌ ತೀವ್ರ ವಾಗ್ದಾಳಿ

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಗಡುಸಾದ ದನಿಯೊಳಗಿನ ಮೃದು ಮನಸ್ಸು: ʼನಾನಾ ಪಾಟೇಕರ್ʼ ಎಂಬ...

ಅವರ ಗಡುಸಾದ ದನಿಯಲ್ಲಿ ಸಾಮಾನ್ಯ ಮನುಷ್ಯನ ಆಕ್ರೋಶವಿತ್ತು; ಅವರ ತೀಕ್ಷ್ಣ ನೋಟದಲ್ಲಿ ಬದುಕಿನ ಕಹಿ ಸತ್ಯಗಳಿದ್ದವು. ‘ಕ್ರಾಂತಿವೀರ್’ನಲ್ಲಿ ಅನ್ಯಾಯದ ವಿರುದ್ಧ ಸಿಡಿದವರು, ‘ಖಾಮೋಶಿ’ಯಲ್ಲಿ ಮಾತಿಲ್ಲದೆ ಮನಸ್ಸು ತಟ್ಟಿದವರು, ‘ವೆಲ್‌ಕಮ್’ನಲ್ಲಿ ನಗುವಿನ ಹೊಳೆ ಹರಿಸಿದವರು...

ಕೂಲಿಕಾರ್ಮಿಕರ ಮೊಮ್ಮಗಳ ವಿಶ್ವ ವಿಜಯ: ಭಾರತೀಯ ಮೂಲದ ನವಿ...

ವಿಶ್ವಸಂಸ್ಥೆಯ ಮಾನವ ಹಕ್ಕುಗಳ ವಿಭಾಗದ ಮಾಜಿ ಮುಖ್ಯಸ್ಥೆ ಹಾಗೂ ಪ್ರಸ್ತುತ ಅಂತಾರಾಷ್ಟ್ರೀಯ ನ್ಯಾಯಾಲಯದ (ICJ) ನ್ಯಾಯಾಧೀಶರಾಗಿರುವ ದಕ್ಷಿಣ ಆಫ್ರಿಕಾ ಮತ್ತು ಭಾರತೀಯ ಮೂಲದ ನವನೀತಮ್ 'ನವಿ' ಪಿಳ್ಳೈ (85) ಅವರಿಗೆ 2026ನೇ ಸಾಲಿನ...

ಉತ್ತರ ಕನ್ನಡ | ಗ್ರಾಮೀಣ ಮಹಿಳೆಯರ ಸಬಲೀಕರಣಕ್ಕೆ ‘ಅಕ್ಕ...

ಉತ್ತರ ಕನ್ನಡ ಜಿಲ್ಲೆಯಲ್ಲಿ 'ಅಕ್ಕ ಕೆಫೆ' ಯೋಜನೆ ಯಶಸ್ವಿಯಾಗಿ ಮುನ್ನಡೆಯುತ್ತಿದ್ದು, ಗ್ರಾಮೀಣ ಮಹಿಳೆಯರು ಸ್ವಂತ ಉದ್ಯಮ ನಡೆಸಿ ಆರ್ಥಿಕ ಸ್ವಾವಲಂಬನೆ ಸಾಧಿಸಲು ಮತ್ತು ಉದ್ಯಮಿಗಳಾಗಿ ಹೊರಹೊಮ್ಮಲು ಇದು ದಾರಿಮಾಡಿಕೊಟ್ಟಿದೆ. ಸಂಜೀವಿನಿ ಎನ್‌ಆರ್‌ಎಲ್‌ಎಂ ಯೋಜನೆಯಡಿ...

ಇನ್ನು, ತಮಿಳುನಾಡಿನ ಎಮ್‌ ಕೆ ಸ್ಟ್ಯಾಲಿನ್‌ ನೇತೃತ್ವದ ಆಡಳಿತಾರೂಢ ಡಿಎಂಕೆ  ಸರ್ಕಾರದ ವಿರುದ್ಧವೂ ವಿಜಯ್ ವಾಗ್ದಾಳಿ ನಡೆಸಿದ್ದಾರೆ.

ಹಾಲಿ ಸರ್ಕಾರವನ್ನು “ಕ್ಯಾಶ್ ಬಾಕ್ಸ್ ಅಲಯನ್ಸ್” (ಹಣದ ಪೆಟ್ಟಿಗೆಯ ಮೈತ್ರಿ) ಎಂದು ಕರೆದಿರುವ ವಿಜಯ್, ಇದು ಜನರ ಹಣವನ್ನು ಲೂಟಿ ಹೊಡೆದು ನಿರ್ಮಿಸಿರುವ ಮೈತ್ರಿ ಎಂದು ಕಿಡಿಕಾರಿದ್ದಾರೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಯತ್ನಾಳ್ ವಿರುದ್ಧ ಹೊರ್ತಿ ವಾಗ್ದಾಳಿ; ಅರ್ಜಿ ವಾಪಸ್ ಪಡೆದ ಹಿಂದಿನ ಸತ್ಯ ಬಹಿರಂಗಪಡಿಸಲು ಸವಾಲು

ಮತದಾರರ ಪಟ್ಟಿಯಿಂದ ಹೆಸರುಗಳನ್ನು ತೆಗೆದುಹಾಕುವಂತೆ ಶಾಸಕ ಬಸನಗೌಡ ಪಾಟೀಲ ಯತ್ನಾಳ್ ಬರೆದಿರುವ...

ಲೈಂಗಿಕ ಕಿರುಕುಳ ಆರೋಪ; ಪ್ರಾಧ್ಯಾಪಕ ಹುದ್ದೆಯಿಂದ ಕಾಂಗ್ರೆಸ್ ಸಂಸದ ಬಿಮೋಲ್ ವಜಾ

11 ವಿದ್ಯಾರ್ಥಿನಿಯರು ಲೈಂಗಿಕ ಕಿರುಕುಳ ಹಾಗೂ ಅನುಚಿತ ವರ್ತನೆಯ ಆರೋಪದಡಿ ದೂರು...

ಬೀದರ್‌ | ಕಾನ್ಶಿರಾಂ ಹೋರಾಟ ಬಹುಜನರ ರಾಜಕೀಯ ಜಾಗೃತಿಗೆ ದಾರಿದೀಪ

ಬೀದರ್ ಜಿಲ್ಲಾ ದಲಿತ ಸಂಘಟನೆಗಳ ಒಕ್ಕೂಟ ಹಾಗೂ ವಿವಿಧ ಬಹುಜನ ಸಂಘಟನೆಗಳ...

ವಿಜಯನಗರ | ಎಸ್‌ಐಆರ್ ರದ್ದತಿಗೆ ಆಗ್ರಹಿಸಿ ವಿದ್ಯಾರ್ಥಿ-ಯುವಜನ ಸಂಘಟನೆಗಳ ಬೃಹತ್ ಪ್ರತಿಭಟನೆ

ಜನವಿರೋಧಿ ಎಸ್‌ಐಆರ್ (SIR) ರದ್ದುಪಡಿಸಿ ಹಾಗೂ ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ್...