ಲೋಕಸಭಾ ಸ್ಥಾನ 543ಕ್ಕೆ ಸೀಮಿತಗೊಳಿಸಲು ತಮಿಳು ಸರ್ಕಾರದ ನಿರ್ಣಯ ಅಂಗೀಕಾರ; ಡಿಎಂಕೆ ಬೆಂಬಲ

Date:

1971ರ ಜನಗಣತಿಯ ಆಧಾರದ ಮೇಲೆ ಲೋಕಸಭೆಯ ಹಾಲಿ 543 ಸ್ಥಾನಗಳ ಸಂಖ್ಯೆಯನ್ನೇ ಶಾಶ್ವತಗೊಳಿಸಬೇಕು. ಕ್ಷೇತ್ರ ಪುನರ್ವಿಂಗಡಣೆ (Delimitation) ಪ್ರಕ್ರಿಯೆಯನ್ನು ರದ್ದಗೊಳಿಸಬೇಕು ಎಂದು ಆಗ್ರಹಿಸಿದ ನಿರ್ಣಯವನ್ನು ತಮಿಳುನಾಡು ವಿಧಾನಸಭೆ ಗುರುವಾರ ಅಂಗೀಕರಿಸಿದೆ. ವಿಜಯ್ ಸರ್ಕಾರ ಮಂಡಿಸಿದ ನಿರ್ಣಯಕ್ಕೆ ವಿಪಕ್ಷ ಡಿಎಂಕೆ, ಕಾಂಗ್ರೆಸ್, ಸಿಪಿಐ, ಸಿಪಿಎಂ, ಐಯುಎಂಎಲ್ ಹಾಗೂ ವಿಸಿಕೆ ಪಕ್ಷಗಳು ಬೆಂಬಲ ನೀಡಿವೆ. ಆದರೆ, ಎಐಎಡಿಎಂಕೆ ಮತ್ತು ಬಿಜೆಪಿ ಮಾತ್ರ ಈ ನಿರ್ಣಯವನ್ನು ವಿರೋಧಿಸಿವೆ.

- Advertisement -

ಜನಸಂಖ್ಯಾ ನಿಯಂತ್ರಣವನ್ನು ಯಶಸ್ವಿಯಾಗಿ ಜಾರಿಗೆ ತಂದ ತಮಿಳುನಾಡು ಸೇರಿದಂತೆ ದಕ್ಷಿಣದ ರಾಜ್ಯಗಳಿಗೆ ತಾರತಮ್ಯವಾಗಬಾರದು. ಆದ್ದರಿಂದ, ಲೋಕಸಭಾ ಕ್ಷೇತ್ರಗಳು ಪ್ರಸ್ತುತ ಇರುವಂತೆಯೇ ಮುಂದುವರೆಯಬೇಕು ಎಂಬ ಉದ್ದೇಶದಿಂದ ತಮಿಳುನಾಡು ಸರ್ಕಾರವು ನಿರ್ಣಯ ಮಂಡಿಸಿದೆ.  “1971ರ ನಂತರದ ಅಥವಾ ಸಂಭಾವ್ಯ ಜನಗಣತಿಯ ಆಧಾರದಲ್ಲಿ ಕ್ಷೇತ್ರ ಪುನರ್ವಿಂಗಡಣೆ ನಡೆಸಿದರೆ ಸಂಸತ್ತಿನ ದಕ್ಷಿಣ ಭಾರತದ ರಾಜ್ಯಗಳ ರಾಜಕೀಯ ಪ್ರತಿನಿಧಿತ್ವ ತೀವ್ರವಾಗಿ ಕುಸಿಯಲಿದೆ. ಹೀಗಾಗಿ 1971ರ ಆಧಾರದಲ್ಲೇ ಲೋಕಸಭಾ ಸ್ಥಾನಗಳನ್ನು ಸೀಮಿತಗೊಳಿಸಬೇಕು” ಎಂದು ನಿರ್ಣಯದಲ್ಲಿ ಒತ್ತಾಯಿಸಲಾಗಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

History Repeats | ರೋಮ್‌ ಉರಿಯುತ್ತಿದ್ದಾಗ ಪಿಟೀಲು ನುಡಿಸಿದ...

ದೇಶದ ಪ್ರಜಾಪ್ರಭುತ್ವದ ಆಧಾರಸ್ತಂಭಗಳು ಒಂದೊಂದಾಗಿ ಕುಸಿಯುತ್ತಾ, ಚುನಾವಣಾ ವ್ಯವಸ್ಥೆಯೇ ಅಕ್ರಮ ಎಸಗುತ್ತಿರುವಾಗ, ನಿರುದ್ಯೋಗ-ಬೆಲೆ ಏರಿಕೆಯ ಭಾರದಿಂದ ಜನ ಹೈರಾಣಾಗಿರುವಾಗ ಭಾರತದ ಪ್ರಧಾನಿ ಭಜನೆ ಮಾಡುತ್ತಿದ್ದಾರೆ. ರೋಂ ಹೊತ್ತಿ ಉರಿಯುತ್ತಿದ್ದಾಗ ನೀರೋ ಪಿಟೀಲು...

ಅಪರಾಧಿಗಳ ಪರ ಬಿ ಸಿ ರೋಡ್ ಚಲೋ: ಎಂದಿನಂತೆ...

ಕೊಲೆಯಂತಹ ಗಂಭೀರ ಅಪರಾಧ ಎಸಗಿದ ಆರೋಪ ಹೊತ್ತವರ ಪರವಾಗಿ ಸಂಘಪರಿವಾರ ಬೀದಿಗಿಳಿಯುತ್ತಿರುವುದು ಇದೇ ಮೊದಲೇನಲ್ಲ. ಕರಾವಳಿಯ ಜನತೆ ಇಂತಹ ಪ್ರಚೋದನಾತ್ಮಕ ನಡೆಗಳನ್ನು ತಿರಸ್ಕರಿಸಿ, ಸತ್ಯ ಮತ್ತು ನ್ಯಾಯದ ಪರವಾಗಿ ನಿಲ್ಲಬೇಕಾಗಿದೆ. ಕರಾವಳಿ ಕರ್ನಾಟಕವಾಗಲಿ...

14 ಆಕ್ಷೇಪಗಳಿಂದ SIT ಬೇಡಿಕೆಯವರೆಗೆ: ಗ್ಯಾನೇಶ್‌ ಕುಮಾರ್ ಸುತ್ತ...

ಚುನಾವಣಾ ಆಯೋಗದೊಳಗಿನ ಭಿನ್ನಾಭಿಪ್ರಾಯಗಳು ಬಹಿರಂಗಗೊಂಡ ಬೆನ್ನಲ್ಲೇ ಎಸ್‌ಐಆರ್‌ ವಿವಾದ ಹೊಸ ತಿರುವು ಪಡೆದುಕೊಂಡಿದೆ. ಮುಖ್ಯ ಚುನಾವಣಾ ಆಯುಕ್ತ ಗ್ಯಾನೇಶ್‌ ಕುಮಾರ್ ಅವರ ನಿರ್ಧಾರಗಳ ಕುರಿತು ಚುನಾವಣಾ ಆಯುಕ್ತರಾದ ಸುಖಬೀರ್‌ ಸಿಂಗ್‌ ಸಂಧು ಮತ್ತು...

“ವಿವಿಧ ರಾಜ್ಯಗಳ ನಡುವೆ ಈಗಿರುವ ಲೋಕಸಭಾ ಸ್ಥಾನಗಳ ಹಂಚಿಕೆ ಹಾಗೂ ಲೋಕಸಭೆ-ರಾಜ್ಯಸಭೆಯ ನಡುವಿನ 2.2:1 ರಷ್ಟಿರುವ ಅನುಪಾತವನ್ನು ಶಾಶ್ವತವಾಗಿ ಮುಂದುವರಿಸಬೇಕು. ಪ್ರಸ್ತುತ ಇರುವ 543 ಸ್ಥಾನಗಳ ಆಧಾರದ ಮೇಲೆಯೇ 2029ರ ಲೋಕಸಭಾ ಚುನಾವಣೆಯಲ್ಲಿ ಮಹಿಳೆಯರಿಗೆ 33%ರಷ್ಟು ಮೀಸಲಾತಿಯನ್ನು ಯಾವುದೇ ವಿಳಂಬವಿಲ್ಲದೆ ತಕ್ಷಣವೇ ಜಾರಿಗೆ ತರಬೇಕು” ಎಂದು ಆಗ್ರಹಿಸಲಾಗಿದೆ.

ಮಸೂದೆ ಮಂಡಿಸಿ ಮಾತನಾಡಿದ ಮುಖ್ಯಮಂತ್ರಿ ವಿಜಯ್, “ತಮಿಳುನಾಡಿನಲ್ಲಿ 50%ಕ್ಕಿಂತ ಹೆಚ್ಚು ಮಹಿಳಾ ಮತದಾರರಿದ್ದಾರೆ. ಕುಟುಂಬವಿರಲಿ ಅಥವಾ ದೇಶವಿರಲಿ, ಕೇವಲ ಸಂಪತ್ತಿನಿಂದ ಅಭಿವೃದ್ಧಿಯನ್ನು ಅಳೆಯಲಾಗುವುದಿಲ್ಲ; ಮಹಿಳಾ ಸಬಲೀಕರಣವೇ ನಿಜವಾದ ಪ್ರಗತಿ” ಎಂದು ಹೆಣ್ಣುಮಕ್ಕಳ ಮೀಸಲಾತಿಗೆ ಒತ್ತಾಯಿಸಿದರು.

ವಿಪಕ್ಷ ನಾಯಕ ಉದಯನಿಧಿ ಸ್ಟಾಲಿನ್ ಮಾತನಾಡಿ, “ಹಿಂದಿನ ಡಿಎಂಕೆ ಸರ್ಕಾರದ ಅವಧಿಯಲ್ಲೂ ಕ್ಷೇತ್ರ ಪುನರ್ವಿಂಗಡಣೆಯನ್ನು ವಿರೋಧಿಸಿ ನಿರ್ಣಯ ಅಂಗೀಕರಿಸಲಾಗಿತ್ತು. ಕೇಂದ್ರ ಸರ್ಕಾರದ ಹಿಂದಿನ ಪ್ರಯತ್ನಗಳು ವಿಫಲವಾಗಲು ಡಿಎಂಕೆಯ ಸತತ ಪ್ರತಿರೋಧವೇ ಕಾರಣ” ಎಂದರು.

ಲೋಕೋಪಯೋಗಿ ಸಚಿವ ಆಧವ್ ಅರ್ಜುನ ಮಾತನಾಡಿ, “ಅಮೆರಿಕದಲ್ಲಿ ಕಳೆದ 100 ವರ್ಷಗಳಿಂದ ಸಂಸದರ ಸಂಖ್ಯೆ ಬದಲಾಗಿಲ್ಲ. ಭಾರತದಲ್ಲಿ ಸಂಸದರ ಸಂಖ್ಯೆಯನ್ನು 50%ರಷ್ಟು ಹೆಚ್ಚಿಸಿದರೆ, ಅದು ಕೇವಲ ಹಿಂದಿ ಭಾಷಿಕ ರಾಜ್ಯಗಳಿಗೆ ಹೆಚ್ಚು ಶಕ್ತಿ ನೀಡುತ್ತದೆ. ಉತ್ತರ ಪ್ರದೇಶ, ಬಿಹಾರ ಹಾಗೂ ರಾಜಸ್ಥಾನದಂತಹ ಕೆಲವು ರಾಜ್ಯಗಳನ್ನು ಗೆದ್ದು ಕೇಂದ್ರದಲ್ಲಿ ಸರ್ಕಾರ ರಚಿಸುವ ವಾತಾವರಣ ನಿರ್ಮಾಣವಾಗಿ, ಈಶಾನ್ಯ ರಾಜ್ಯಗಳಂತೆ ತಮಿಳುನಾಡು ಕೂಡ ಸಂಸತ್ತಿನಲ್ಲಿ ತನ್ನ ಧ್ವನಿಯನ್ನು ಕಳೆದುಕೊಳ್ಳಬೇಕಾಗುತ್ತದೆ” ಎಂದು ಕಳವಳ ವ್ಯಕ್ತಪಡಿಸಿದರು.

ಆದರೆ, ನಿರ್ಣಯವನ್ನು ವಿರೋಧಿಸಿದ ಎಐಎಡಿಎಂಕೆ ಪ್ರಧಾನ ಕಾರ್ಯದರ್ಶಿ, ಮಾಜಿ ಸಿಎಂ ಎಡಪ್ಪಾಡಿ ಕೆ. ಪಳನಿಸ್ವಾಮಿ, “ಕೇಂದ್ರ ಸರ್ಕಾರ ಇನ್ನೂ ಕ್ಷೇತ್ರ ಪುನರ್ವಿಂಗಡಣೆ ವಿಧೇಯಕದ ಕರಡನ್ನೇ ಬಹಿರಂಗಪಡಿಸಿಲ್ಲ. ಸಂಸದರ ಸಂಖ್ಯೆ ಹೆಚ್ಚಾದರೂ ತಮಿಳುನಾಡಿನ ಶೇಕಡಾವಾರು ಪ್ರತಿನಿಧಿತ್ವದಲ್ಲಿ (7.18 ರಿಂದ 7.21%) ಯಾವುದೇ ಭಾರಿ ವ್ಯತ್ಯಾಸವಾಗುವುದಿಲ್ಲ ಎಂದು ಕೇಂದ್ರ ಗೃಹ ಸಚಿವರೇ ಸ್ಪಷ್ಟಪಡಿಸಿದ್ದಾರೆ. ಹೀಗಿದ್ದಾಗ ವಿರೋಧಿಸುವ ಅಗತ್ಯವೇನಿದೆ?” ಎಂದು ಪ್ರಶ್ನಿಸಿದರು. ಆದಾಗ್ಯೂ, ಮಹಿಳಾ ಮೀಸಲಾತಿ ಜಾರಿಯನ್ನು ಅವರು ಬೆಂಬಲಿಸಿದರು.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಅಪರಾಧಿಗಳ ಪರ ಬಿ ಸಿ ರೋಡ್ ಚಲೋ: ಎಂದಿನಂತೆ ಅಮಾನವೀಯ ಕೊಲೆಗಡುಕರ ಬೆಂಬಲಕ್ಕೆ ನಿಂತ ಸಂಘಪರಿವಾರ

ಕೊಲೆಯಂತಹ ಗಂಭೀರ ಅಪರಾಧ ಎಸಗಿದ ಆರೋಪ ಹೊತ್ತವರ ಪರವಾಗಿ ಸಂಘಪರಿವಾರ ಬೀದಿಗಿಳಿಯುತ್ತಿರುವುದು...

14 ಆಕ್ಷೇಪಗಳಿಂದ SIT ಬೇಡಿಕೆಯವರೆಗೆ: ಗ್ಯಾನೇಶ್‌ ಕುಮಾರ್ ಸುತ್ತ ಬಿಗಿಯಾಗುತ್ತಿರುವ ಬಿಕ್ಕಟ್ಟು!

ಚುನಾವಣಾ ಆಯೋಗದೊಳಗಿನ ಭಿನ್ನಾಭಿಪ್ರಾಯಗಳು ಬಹಿರಂಗಗೊಂಡ ಬೆನ್ನಲ್ಲೇ ಎಸ್‌ಐಆರ್‌ ವಿವಾದ ಹೊಸ ತಿರುವು...

ಮೋದಿ ಜನ್ಮದಿನದ ನಾಟಕದಲ್ಲಿ ಅಭಿನಯಿಸಲು ನಕಾರ; ವಿದ್ಯಾರ್ಥಿಗೆ ‘ಅಂಕ ಕಡಿತ’ದ ಬೆದರಿಕೆ

ಪ್ರಧಾನಿ ಮೋದಿ ಜನ್ಮದಿನದ ಅಂಗವಾಗಿ ಆಯೋಜಿಸಲಾಗಿರುವ ನಾಟಕದಲ್ಲಿ ಅಭಿನಯಿಸಲು ನಿರಾಕರಿಸಿದ ವಿದ್ಯಾರ್ಥಿಗಳಿಗೆ...