ತಮಿಳುನಾಡು | ‘ಟಿವಿಕೆ’ ಅಲೆಗೆ ಕೊಚ್ಚಿಹೋದ ಕಮಲ; 33ರಲ್ಲಿ 1 ಸ್ಥಾನ ಗೆದ್ದ ಬಿಜೆಪಿ

Date:

ತಮಿಳುನಾಡು ರಾಜಕೀಯದಲ್ಲಿ ನೆಲೆ ಕಂಡುಕೊಳ್ಳುವ ಮಹತ್ವಾಕಾಂಕ್ಷೆಯೊಂದಿಗೆ 2026ರ ವಿಧಾನಸಭೆ ಚುನಾವಣೆಯಲ್ಲಿ ಅಖಾಡಕ್ಕಿಳಿದಿದ್ದ ಬಿಜೆಪಿ ತೀವ್ರ ಮುಖಭಂಗವಾಗಿದೆ. ಎಐಎಡಿಎಂಕೆ ನೇತೃತ್ವದ ಎನ್‌ಡಿಎ ಮೈತ್ರಿಕೂಟದ ಭಾಗವಾಗಿ 33 ಕ್ಷೇತ್ರಗಳಲ್ಲಿ ಸ್ಪರ್ಧಿಸಿದ್ದ ಬಿಜೆಪಿ, ಕೇವಲ 1 ಕ್ಷೇತ್ರದಲ್ಲಿ ಮಾತ್ರ ಗೆಲುವು ಸಾಧಿಸುವ ಮೂಲಕ ಹೀನಾಯ ಪ್ರದರ್ಶನ ನೀಡಿದೆ.

- Advertisement -

ಏಪ್ರಿಲ್ 23ರಂದು ನಡೆದಿದ್ದ ಮತದಾನದ ಫಲಿತಾಂಶ ಮೇ 4ರಂದು ಪ್ರಕಟವಾಗಿದ್ದು, ಕೇಂದ್ರ ಚುನಾವಣಾ ಆಯೋಗದ ಅಧಿಕೃತ ಅಂಕಿ-ಅಂಶಗಳ ಪ್ರಕಾರ ರಾಜ್ಯದ ಒಟ್ಟು 234 ವಿಧಾನಸಭಾ ಕ್ಷೇತ್ರಗಳ ಪೈಕಿ ಬಿಜೆಪಿ ಸಂಪೂರ್ಣವಾಗಿ ನೆಲಕಚ್ಚಿದೆ. ಕೇವಲ ಒಂದು ಸ್ಥಾನವನ್ನಷ್ಟೇ ತನ್ನದಾಗಿಸಿಕೊಂಡಿರುವ ಬಿಜೆಪಿಯ 5 ಅಭ್ಯರ್ಥಿಗಳು ಠೇವಣಿ ಕಳೆದುಕೊಂಡಿರುವುದು ಪಕ್ಷದ ಕಳಪೆ ಸಾಧನೆಗೆ ಕನ್ನಡಿ ಹಿಡಿದಿದೆ. ಚಲಾವಣೆಯಾದ ಒಟ್ಟು ಮತಗಳಲ್ಲಿ ಆರನೇ ಒಂದು ಭಾಗಕ್ಕಿಂತ ಕಡಿಮೆ ಮತಗಳನ್ನು ಪಡೆದ ಹಿನ್ನೆಲೆಯಲ್ಲಿ ಈ ಐವರು ಅಭ್ಯರ್ಥಿಗಳು ಠೇವಣಿ ಕಳೆದುಕೊಂಡಿದ್ದಾರೆ. ಶೇಕಡವಾರು ಮತ ಪ್ರಮಾಣ 2.97 ರಷ್ಟು ಮಾತ್ರ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಮೋದಿ ಸರ್ಕಾರ ಗೆದ್ದದ್ದೇ ಅಥವಾ ಕದ್ದದ್ದೇ? ಸಿಇಸಿ ವಿವಾದ...

2024ರ ಲೋಕಸಭಾ ಚುನಾವಣೆಯ ಮತದಾನ ಅಂಕಿಅಂಶಗಳಲ್ಲಿ ಕಂಡುಬಂದ 4.65 ಕೋಟಿ ಮತಗಳ ವ್ಯತ್ಯಾಸ ಮತ್ತು 79 ಕ್ಷೇತ್ರಗಳ ಫಲಿತಾಂಶಗಳ ಕುರಿತು VFD ವರದಿ ಗಂಭೀರ ಪ್ರಶ್ನೆಗಳನ್ನು ಎತ್ತಿತ್ತು. ಇದೇ ವೇಳೆ ಚುನಾವಣಾ ಆಯೋಗದ...

ಮೈತ್ರಿ ಮತ್ತು ಸ್ವೀಕೃತಿಗೆ ಹೆಣ್ತನ ಮುಖ್ಯ ಎನ್ನುವ ‘ಡೋರೊಥಿ’

ಲಿಂಗತ್ವ ಅಲ್ಪಸಂಖ್ಯಾತ ಭಾವನೆಗಳನ್ನು 'ಅಸ್ಪೃಶ್ಯತೆ'ಗೆ ಸಮನಾಗಿ ಈ ಗಂಡಾಳ್ವಿಕೆ ನೋಡುತ್ತದೆ; 'ಲಿಂಗ ಸಂಕರ' ಸ್ಥಿತಿಯನ್ನು, ಜಾತಿ ಸಂಕರದಷ್ಟೇ 'ಮರ್ಯಾದಾಗೇಡು' ಎಂಬಂತೆ ಭಾವಿಸುತ್ತದೆ. ಹೀಗೆ ನೋಡುವ 'ಸನಾತನ' (ಜಡ್ಡುಗಟ್ಟಿದ ಗಂಡು ಮನಸ್ಥಿತಿ ಅಥವಾ ಮುದಿಯಾದ...

ಐತಿಹಾಸಿಕ ರೈತ ಹೋರಾಟಕ್ಕೆ ಸಾಕ್ಷಿಯಾದ ಹುಬ್ಬಳ್ಳಿ! ಆಕ್ರೋಶದ ನಡುವೆಯೂ...

ಡಾ. ಸ್ವಾಮಿನಾಥನ್ ಆಯೋಗ ವರದಿ ಜಾರಿಗೊಳಿಸುವ ಮೂಲಕ ಪ್ರತಿ ಟನ್ ಕಬ್ಬಿಗೆ ಕನಿಷ್ಠ ರೂ.5,500 ಬೆಂಬಲ ಬೆಲೆ ನಿಗದಿಪಡಿಸಲು ಮತ್ತು ಸಕ್ಕರೆಯ ಕನಿಷ್ಠ ಬೆಂಬಲ ಬೆಲೆಯನ್ನು ರೂ.31ರಿಂದ 60ಕ್ಕೆ ಏರಿಕೆ ಮಾಡಿ ವಾಣಿಜ್ಯ...

ಇದನ್ನು ಓದಿದ್ದೀರಾ? ತಮಿಳುನಾಡಿನಲ್ಲಿ ತುಮಕೂರು ಮೂಲದ ಕನ್ನಡಿಗನ ಜಯಭೇರಿ; ಟಿವಿಕೆ ಪಕ್ಷದಿಂದ ಸುನಿಲ್ ಆನಂದ್ ಶಾಸಕ

2021ರ ವಿಧಾನಸಭೆ ಚುನಾವಣೆಯಲ್ಲಿ 20 ಕ್ಷೇತ್ರಗಳಲ್ಲಿ ಸ್ಪರ್ಧಿಸಿದ್ದ ಬಿಜೆಪಿ, ಈ ಬಾರಿ ದ್ರಾವಿಡ ನಾಡಿನಲ್ಲಿ ತನ್ನ ವ್ಯಾಪ್ತಿಯನ್ನು ವಿಸ್ತರಿಸಿಕೊಳ್ಳುವ ಉದ್ದೇಶದಿಂದ 33 ಕ್ಷೇತ್ರಗಳಲ್ಲಿ ಕಣಕ್ಕಿಳಿದಿತ್ತು. ಹೆಚ್ಚು ಸ್ಥಾನಗಳಲ್ಲಿ ಸ್ಪರ್ಧಿಸಿದರೂ, ಪಕ್ಷದ ಸಾಧನೆ ಮಾತ್ರ ತೀವ್ರ ಪಾತಾಳಕ್ಕೆ ಕುಸಿದಿದೆ. ಇದಕ್ಕೆ ಮುಖ್ಯ ಕಾರಣ ನಟ ವಿಜಯ್ ಅವರ ‘ತಮಿಳಗ ವೆಟ್ರಿ ಕಳಗಂ’ (ಟಿವಿಕೆ) ಪಕ್ಷ. ರಾಜ್ಯದಲ್ಲಿ ಸೃಷ್ಟಿಯಾದ ಬೃಹತ್ ‘ಟಿವಿಕೆ ಅಲೆ’ಗೆ ಸಿಲುಕಿ ಬಿಜೆಪಿಯ ಮತಬ್ಯಾಂಕ್ ಮತ್ತು ಸ್ಥಾನಗಳು ಬಹುಪಾಲು ಕೊಚ್ಚಿಹೋಗಿವೆ.

ಈ ಬಾರಿಯ ತಮಿಳುನಾಡು ಚುನಾವಣೆಯು ಐತಿಹಾಸಿಕ ತಿರುವು ಪಡೆದುಕೊಂಡಿದೆ. ದಶಕಗಳಿಂದ ರಾಜ್ಯವನ್ನು ಆಳುತ್ತಿದ್ದ ಪ್ರಾದೇಶಿಕ ದ್ರಾವಿಡ ಪಕ್ಷಗಳ ದ್ವಂದ್ವ ಪಾರುಪತ್ಯವನ್ನು ಮುರಿಯುವಲ್ಲಿ ಈ ಚುನಾವಣೆ ನಿರ್ಣಾಯಕ ಪಾತ್ರ ವಹಿಸಿದೆ. ಇದರ ನಡುವೆ, ತಮಿಳುನಾಡಿನಲ್ಲಿ ದೊಡ್ಡ ಮಟ್ಟದ ನಿರೀಕ್ಷೆ ಇಟ್ಟುಕೊಂಡಿದ್ದ ಬಿಜೆಪಿಗೆ ತನ್ನ ನೆಲೆ ವಿಸ್ತರಿಸಿಕೊಳ್ಳಲು ಸಾಧ್ಯವಾಗದಿರುವುದು ಅರಗಿಸಿಕೊಳ್ಳಲಾಗದ ಸತ್ಯವಾಗಿ ಪರಿಣಮಿಸಿದೆ ಎಂದು ರಾಜಕೀಯ ವಿಶ್ಲೇಷಣೆಗಳು ದೃಢಪಡಿಸಿವೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ವಿಚಾರಣೆಯಿಲ್ಲದೆ 5 ವರ್ಷಗಳಿಂದ ಜೈಲು: ಉಮರ್ ಖಾಲಿದ್, ಶರ್ಜೀಲ್ ಇಮಾಮ್ ಜಾಮೀನು ಅರ್ಜಿ ಮತ್ತೆ ವಜಾ

2020ರ ದೆಹಲಿ ಗಲಭೆ ವಿಚಾರದಲ್ಲಿ ಜೈಲು ಸೇರಿರುವ ವಿದ್ಯಾರ್ಥಿ ನಾಯಕರಾದ ಉಮರ್...

ಕ್ಯಾಬ್‌ಗಳಲ್ಲಿ ಮಹಿಳಾ ಸುರಕ್ಷತೆ | ಓಲಾ, ಉಬರ್, ರ‍್ಯಾಪಿಡೊಗೆ ದೆಹಲಿ ಹೈಕೋರ್ಟ್ ನೋಟಿಸ್

ಆ್ಯಪ್ ಆಧಾರಿತ ಕ್ಯಾಬ್‌ ಸೇವೆಗಳಲ್ಲಿ ಮಹಿಳೆಯರ ಸುರಕ್ಷತೆ ಖಚಿತಪಡಿಸಲು ಸಮಗ್ರ ಕ್ರಮ...

ಬಂಗಾಳವನ್ನು BJPಗೆ ಕೊಟ್ಟ ಗ್ಯಾನೇಶ್‌ ಕುಮಾರ್‌ಗೆ ‘ಭಾರತ ರತ್ನ’ ಕೊಡಿ: ಜೆಕೆ ಸಿಎಂ ಒಮರ್ ಅಬ್ದುಲ್ಲಾ

ಇಡೀ ಪಶ್ಚಿಮ ಬಂಗಾಳವನ್ನೇ ಬಿಜೆಪಿಗೆ ಒಪ್ಪಿಸಿರುವ ಕೇಂದ್ರ ಚುನಾವಣಾ ಆಯೋಗದ (ECI)...

ನಾವು ‘ಇಂಡಿಯಾ’ ಒಕ್ಕೂಟದ ಭಾಗವಲ್ಲ, ಸಭೆಗೆ ಹಾಜರಾಗಲ್ಲ: ಎಎಪಿ ನಾಯಕ ಸಂಜಯ್ ಸಿಂಗ್

ವಿಪಕ್ಷಗಳ 'ಇಂಡಿಯಾ' ಮೈತ್ರಿಕೂಟದ ಪ್ರಮುಖ ಸಭೆಯಿಂದ ಆಮ್ ಆದ್ಮಿ ಪಾರ್ಟಿ (ಎಎಪಿ)...