ಮಿನಿ ಬಸ್ ನಿಯಂತ್ರಣ ತಪ್ಪಿ ರಸ್ತೆ ಬದಿಯ ಮರಕ್ಕೆ ಡಿಕ್ಕಿ ಹೊಡೆದು ಆರು ಮಂದಿ ದಾರುಣವಾಗಿ ಸಾವನ್ನಪ್ಪಿದ ಘಟನೆ ತಮಿಳುನಾಡು ರಾಜ್ಯದ ಕಲ್ಲಕುರಿಚಿ ಜಿಲ್ಲೆಯಲ್ಲಿ ನಿನ್ನೆ ರಾತ್ರಿ ನಡೆದಿದೆ.
ವರದಿಗಳ ಪ್ರಕಾರ ಈ ಮಿನಿ ಬಸ್‌ನಲ್ಲಿ 20 ಜನರು ಪ್ರಯಾಣಿಸುತ್ತಿದ್ದರು. ರಾಣಿಪೇಟ್ ಜಿಲ್ಲೆಯ ಅರಣಿ ಬಳಿಯ ಮಂಬಕ್ಕಂ ವಜೈಪಂದಲ್ ಪ್ರದೇಶದಿಂದ ತಿರುಚೆಂದೂರ್ ಮುರುಗನ್ ದೇವಸ್ಥಾನಕ್ಕೆ ಭೇಟಿ ನೀಡಿ ಹಿಂತಿರುಗುತ್ತಿದ್ದ ವೇಳೆ ಈ ಘಟನೆ ಸಂಭವಿಸಿದೆ.
ಮೆಟ್ಟೂರು-ಚೆನ್ನೈ ತಿರುಚ್ಚಿ ಜಿಎಸ್‌ಟಿ ರಸ್ತೆಯಲ್ಲಿ ಉಲುಂದೂರುಪೇಟೆ ಬಳಿ ಚಾಲಕನ ನಿಯಂತ್ರಣ ತಪ್ಪಿ ಬಸ್ ಮರಕ್ಕೆ ಡಿಕ್ಕಿ ಹೊಡೆದಿದೆ. ಇಬ್ಬರು ಮಹಿಳೆಯರು ಸೇರಿದಂತೆ ಆರು ಮಂದಿ ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ.
ಇದನ್ನು ಓದಿದ್ದೀರಾ? ಚಿಕ್ಕಬಳ್ಳಾಪುರ | ಭೀಕರ ಅಪಘಾತ; ಮೂವರು ಸಾವು, ನಾಲ್ವರಿಗೆ ಗಾಯ
ಮಾಹಿತಿ ಪಡೆದ ಪೊಲೀಸರು ಮತ್ತು ಅಗ್ನಿಶಾಮಕ ದಳದ ತಂಡಗಳು ಸ್ಥಳಕ್ಕೆ ಧಾವಿಸಿ ಗಾಯಗೊಂಡ 14 ಪ್ರಯಾಣಿಕರನ್ನು ರಕ್ಷಿಸಿದ್ದಾರೆ. ಅವರನ್ನು ಚಿಕಿತ್ಸೆಗಾಗಿ ವಿಲ್ಲುಪುರಂ ಮುಂಡಿಯಂಬಕ್ಕಂ ಸರ್ಕಾರಿ ವೈದ್ಯಕೀಯ ಕಾಲೇಜು ಆಸ್ಪತ್ರೆಗೆ ದಾಖಲಿಸಲಾಗಿದೆ.
ಮೃತ ದೇಹಗಳನ್ನು ಮರಣೋತ್ತರ ಪರೀಕ್ಷೆಗೆ ಕಳುಹಿಸಲಾಗಿದೆ. ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ರಜತ್ ಚತುರ್ವೇದಿ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.
VIDEO | Tamil Nadu: At least six people were killed when a mini-bus hit a tree in Kallakurichi late last night. More details area awaited.#tamilnadunews
— Press Trust of India (@PTI_News) September 25, 2024
(Source: Third Party)
(Full video available on PTI Videos – https://t.co/n147TvqRQz) pic.twitter.com/hV3SVh9Nez
