ತಮಿಳುನಾಡು | ಮರಕ್ಕೆ ಡಿಕ್ಕಿ ಹೊಡೆದ ಮಿನಿ ಬಸ್; 6 ಮಂದಿ ದಾರುಣ ಸಾವು

Date:

ಮಿನಿ ಬಸ್ ನಿಯಂತ್ರಣ ತಪ್ಪಿ ರಸ್ತೆ ಬದಿಯ ಮರಕ್ಕೆ ಡಿಕ್ಕಿ ಹೊಡೆದು ಆರು ಮಂದಿ ದಾರುಣವಾಗಿ ಸಾವನ್ನಪ್ಪಿದ ಘಟನೆ ತಮಿಳುನಾಡು ರಾಜ್ಯದ ಕಲ್ಲಕುರಿಚಿ ಜಿಲ್ಲೆಯಲ್ಲಿ ನಿನ್ನೆ ರಾತ್ರಿ ನಡೆದಿದೆ.

- Advertisement -

ವರದಿಗಳ ಪ್ರಕಾರ ಈ ಮಿನಿ ಬಸ್‌ನಲ್ಲಿ 20 ಜನರು ಪ್ರಯಾಣಿಸುತ್ತಿದ್ದರು. ರಾಣಿಪೇಟ್ ಜಿಲ್ಲೆಯ ಅರಣಿ ಬಳಿಯ ಮಂಬಕ್ಕಂ ವಜೈಪಂದಲ್ ಪ್ರದೇಶದಿಂದ ತಿರುಚೆಂದೂರ್ ಮುರುಗನ್ ದೇವಸ್ಥಾನಕ್ಕೆ ಭೇಟಿ ನೀಡಿ ಹಿಂತಿರುಗುತ್ತಿದ್ದ ವೇಳೆ ಈ ಘಟನೆ ಸಂಭವಿಸಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಮೋದಿ ಆಡಳಿತದಲ್ಲಿ ಮಾಹಿತಿ ಹಕ್ಕು ಕಾಯ್ದೆಯ ‘ಸ್ಥಿತಿ’ ಹೇಗಿದೆ?...

ಯಾವುದೇ ಸರ್ಕಾರ ಆಡಳಿತದಲ್ಲಿರಲಿ ಪ್ರಜಾಸತ್ತಾತ್ಮಕ ವ್ಯವಸ್ಥೆಯನ್ನು ಕಾಪಾಡಬೇಕಾದ ಸಂಸ್ಥೆಗಳ ಸ್ವಾಯತ್ತತೆ ಉಳಿಯಬೇಕು. ಅವು ಪಾರದರ್ಶಕವಾಗಿರಬೇಕು. ಪ್ರಜಾಸತ್ತೆಯ ಕಾರ್ಯವೈಖರಿಯನ್ನು ಕುರಿತಂತೆ ಮುಕ್ತ ಚರ್ಚೆ ನಡೆಯುತ್ತಿರಬೇಕು. ಇದು ಸಕ್ರಿಯ, ಅರ್ಥಪೂರ್ಣ ಪ್ರಜಾಸತ್ತೆಯ ಕನಿಷ್ಠ ಅವಶ್ಯಕತೆ. ಹಾಗಾಗಿ...

ಬಂಗಾಳ ವಿಭಜನೆ | ವಿಭಜನೆಯ ವಿಷಬೀಜದಿಂದ ಒಗ್ಗಟ್ಟಿನ ಜ್ಯೋತಿ...

ಬ್ರಿಟಿಷರ 'ಒಡೆದು ಆಳುವ ನೀತಿ'ಯ ಭಾಗವಾಗಿ 1905ರ ಅಕ್ಟೋಬರ್‌ನಲ್ಲಿ ಜಾರಿಗೆ ಬಂದ ಬಂಗಾಳ ವಿಭಜನೆಯು ಭಾರತೀಯರ ರಾಷ್ಟ್ರೀಯತೆಯನ್ನು ಒಡೆಯುವ ಕುತಂತ್ರವಾಗಿತ್ತು. ಇದಕ್ಕೆ ಪ್ರತಿಯಾಗಿ ಭಾರತೀಯರು 'ರಾಷ್ಟ್ರೀಯ ಶೋಕ ದಿನ' ಆಚರಿಸಿ, ಪರಸ್ಪರ ರಾಖಿ...

ನಟ ಇಮ್ರಾನ್ ಖಾನ್ ಪ್ರತಿಭಟಿಸಿದರೆ ಗಡಿಪಾರು; ಟ್ರಂಪ್ ಪರ...

ಕಾನೂನು ಮತ್ತು ರಾಜತಾಂತ್ರಿಕ ನಿಯಮಗಳು ಎಲ್ಲರಿಗೂ ಒಂದೇ ಆಗಿರಬೇಕು ಹೊರತು ಪ್ರಧಾನಿ ಮೋದಿಯವರ ರಾಜಕೀಯ ಅನುಕೂಲಕ್ಕೆ ತಕ್ಕಂತೆ ಬದಲಾಗಬಾರದು. ವಿದೇಶಿ ಪ್ರಜೆಯೊಬ್ಬ ಭಾರತದ ನೆಲದಲ್ಲಿ ಪ್ರತಿಭಟನೆಯಲ್ಲಿ ಪಾಲ್ಗೊಳ್ಳುವುದು ತಪ್ಪು ಎನ್ನುವುದಾದರೆ, ಭಾರತದ ಪ್ರಧಾನಿಯೊಬ್ಬರು...

ಮೆಟ್ಟೂರು-ಚೆನ್ನೈ ತಿರುಚ್ಚಿ ಜಿಎಸ್‌ಟಿ ರಸ್ತೆಯಲ್ಲಿ ಉಲುಂದೂರುಪೇಟೆ ಬಳಿ ಚಾಲಕನ ನಿಯಂತ್ರಣ ತಪ್ಪಿ ಬಸ್ ಮರಕ್ಕೆ ಡಿಕ್ಕಿ ಹೊಡೆದಿದೆ. ಇಬ್ಬರು ಮಹಿಳೆಯರು ಸೇರಿದಂತೆ ಆರು ಮಂದಿ ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ.

ಇದನ್ನು ಓದಿದ್ದೀರಾ? ಚಿಕ್ಕಬಳ್ಳಾಪುರ | ಭೀಕರ ಅಪಘಾತ; ಮೂವರು ಸಾವು, ನಾಲ್ವರಿಗೆ ಗಾಯ

ಮಾಹಿತಿ ಪಡೆದ ಪೊಲೀಸರು ಮತ್ತು ಅಗ್ನಿಶಾಮಕ ದಳದ ತಂಡಗಳು ಸ್ಥಳಕ್ಕೆ ಧಾವಿಸಿ ಗಾಯಗೊಂಡ 14 ಪ್ರಯಾಣಿಕರನ್ನು ರಕ್ಷಿಸಿದ್ದಾರೆ. ಅವರನ್ನು ಚಿಕಿತ್ಸೆಗಾಗಿ ವಿಲ್ಲುಪುರಂ ಮುಂಡಿಯಂಬಕ್ಕಂ ಸರ್ಕಾರಿ ವೈದ್ಯಕೀಯ ಕಾಲೇಜು ಆಸ್ಪತ್ರೆಗೆ ದಾಖಲಿಸಲಾಗಿದೆ.

ಮೃತ ದೇಹಗಳನ್ನು ಮರಣೋತ್ತರ ಪರೀಕ್ಷೆಗೆ ಕಳುಹಿಸಲಾಗಿದೆ. ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ರಜತ್ ಚತುರ್ವೇದಿ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

‘ಮೋದಿಯನ್ನು ದೇವರನ್ನಾಗಿಸುವ ಯತ್ನ’: ಬಿಹಾರ ಸಿಎಂ ಹೇಳಿಕೆಗೆ ಪ್ರಶಾಂತ್ ಕಿಶೋರ್ ಕಿಡಿ

ಪ್ರಧಾನಿ ನರೇಂದ್ರ ಮೋದಿ ಅವರು ಶ್ರೀರಾಮನಿಗೂ ಮನೆ ಒದಗಿಸಿದರು ಎಂಬ ಬಿಹಾರ...

‘ಲೆಹರಾ ದೋ ತಿರಂಗಾ’ ಮಾರ್ಚ್‌ಗೆ ಮುನ್ನ ಸಿಜೆಪಿ ಸಂಸ್ಥಾಪಕ ಅಭಿಜೀತ್ ದೀಪ್ಕೆ ದೆಹಲಿ ಪೊಲೀಸರಿಂದ ವಶಕ್ಕೆ

ಕಾಕ್ರೋಚ್ ಜನತಾ ಪಾರ್ಟಿ (ಸಿಜೆಪಿ) ಸಂಸ್ಥಾಪಕ ಅಭಿಜೀತ್ ದೀಪ್ಕೆ ಅವರನ್ನು ಶುಕ್ರವಾರ...

ಸಿಎಂಆರ್‌ಎಲ್ ಲಂಚ ಪ್ರಕರಣ: ಕೇರಳದ ಮಾಜಿ ಸಿಎಂ ಪಿಣರಾಯಿ ವಿಜಯನ್‌ಗೆ ಇ.ಡಿ ಸಮನ್ಸ್

ಬಹುಚರ್ಚಿತ ಕೊಚ್ಚಿನ್ ಮಿನರಲ್ಸ್ ಅಂಡ್ ರೂಟೈಲ್ ಲಿಮಿಟೆಡ್ (ಸಿಎಂಆರ್‌ಎಲ್) ಅಕ್ರಮ ಹಣ...