ತಮಿಳುನಾಡು ಸರ್ಕಾರವು ಮೊದಲ ತಲೆಮಾರಿನ ಪದವೀಧರರಿಗೆ ಸರ್ಕಾರಿ ನೌಕರಿಗಳಲ್ಲಿ ಆದ್ಯತೆ ನೀಡುವ ಸಂಬಂಧ ಸುಗ್ರೀವಾಜ್ಞೆ ಹೊರಡಿಸಿದೆ.
ಈ ಸಂಬಂಧ ಸರ್ಕಾರ ಆದೇಶ ಹೊರಡಿಸಿರುವುದಾಗಿ ಅಧಿಕಾರಿಗಳು ತಿಳಿಸಿದ್ದಾರೆ. ಫಲಾನುಭವಿಗಳಿಗೆ ಸರ್ಟಿಫಿಕೇಟ್‌ಗಳನ್ನು ವಿತರಿಸುವುದರ ಬಗ್ಗೆ ಮಾರ್ಗಸೂಚಿಗಳನ್ನು ಕೂಡ ಪ್ರಕಟಿಸಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ಡಿಎಂಕೆ ಪಕ್ಷ ಅಧಿಕಾರಕ್ಕೆ ಬಂದಾಗಿನಿಂದಲೂ ಹಲವು ಜನೋಪಯೋಗಿ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳುತ್ತಿದೆ. ಸಾಮಾಜಿಕ ನ್ಯಾಯದ ನೆಲೆಯಲ್ಲಿ ಹಲವು ಹೊಸ ಕಾನೂನು ಜಾರಿಗೆ ತರುತ್ತಿದೆ. ಅವುಗಳ ಪೈಕಿ ಇದೂ ಕೂಡ ಒಂದು ಅನೇಕರು ಮುಖ್ಯಮಂತ್ರಿ ಸ್ಟಾಲಿನ್ ಅವರನ್ನು ಅಭಿನಂದಿಸುತ್ತಿದ್ದಾರೆ.