ತಮಿಳುನಾಡು: ತಿರುಪರಂಕುಂಡ್ರಂ ಸಿಕಂದರ್ ದರ್ಗಾದಲ್ಲಿ ನೂರಕ್ಕೂ ಹೆಚ್ಚು ಮುಸ್ಲಿಂ ಭಕ್ತರಿಂದ ಪ್ರಾರ್ಥನೆ

Date:

ಮಧುರೈನ ತಿರುಪರಂಕುಂಡ್ರಂ ಬೆಟ್ಟದ ಮೇಲಿರುವ ಹಜರತ್ ಸುಲ್ತಾನ್ ಸಿಕಂದರ್ ಬಾದುಷಾ ಔಲಿಯಾ ದರ್ಗಾದಲ್ಲಿ ಶನಿವಾರ ಬೆಳಿಗ್ಗೆ ನೂರಕ್ಕೂ ಹೆಚ್ಚು ಮುಸ್ಲಿಂ ಭಕ್ತರು ಜಮಾಯಿಸಿ ಪ್ರಾರ್ಥನೆ ಸಲ್ಲಿಸಿದರು. ಇವರಲ್ಲಿ ಸ್ಥಳೀಯರು ಹಾಗೂ ನೆರೆಯ ಕೇರಳದಿಂದ ಬಂದಿದ್ದ ಯಾತ್ರಾರ್ಥಿಗಳೂ ಸೇರಿದ್ದರು.

- Advertisement -

ಸಕ್ರಿಯ ಸೂಫಿ ದರ್ಗಾ ಮತ್ತು ಮಸೀದಿಯಾಗಿರುವ ಈ ಕ್ಷೇತ್ರದಲ್ಲಿ ವಿಶೇಷ ಪ್ರಾರ್ಥನೆ ಸಲ್ಲಿಸಲು ಬೆಟ್ಟ ಹತ್ತುವ ಸಲುವಾಗಿ, ಭಕ್ತರು ಬೆಳಿಗ್ಗೆ 6.15ರ ಸುಮಾರಿಗೆ ಬೆಟ್ಟದ ತಪ್ಪಲಿನಲ್ಲಿ ಸರತಿ ಸಾಲಿನಲ್ಲಿ ನಿಲ್ಲಲು ಆರಂಭಿಸಿದರು ಎಂದು ಮೂಲಗಳು ತಿಳಿಸಿವೆ. ದಿನದ ಅವಧಿಯಲ್ಲಿ ನೂರಕ್ಕೂ ಹೆಚ್ಚು ಭಕ್ತರ ಮತ್ತೊಂದು ತಂಡವೂ ಆಗಮಿಸುವ ನಿರೀಕ್ಷೆಯಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಸಂಸತ್ತಿನ ಈ ವಿಶೇಷ ಅಧಿವೇಶನ ಮಹಿಳೆಯರಿಗಾಗಿ ಅಲ್ಲ; ಕ್ಷೇತ್ರ...

ಮಹಿಳಾ ಮೀಸಲಾತಿಯನ್ನು ಯಾರೂ ವಿರೋಧಿಸಲು ಧೈರ್ಯ ಮಾಡುವುದಿಲ್ಲ ಎಂಬುದು ಸರ್ಕಾರದ ಲೆಕ್ಕವಾಗಿದೆ. ಹೀಗಾಗಿ ಕ್ಷೇತ್ರ ಮರುವಿಂಗಡಣೆಯ ಪ್ರಸ್ತಾವನೆಯನ್ನು ಮಹಿಳಾ ಮೀಸಲಾತಿಯ ಸೆರಗಿಗೆ ಗಂಟುಹಾಕುವ ಪ್ರಯತ್ನ ನಡೆದಿದೆ. ಭಾರತದ ಚುನಾವಣಾ ನಕ್ಷೆಯನ್ನೇ ಮರುರೂಪಿಸಬಲ್ಲ ಮಸೂದೆಯೊಂದನ್ನು ಬಹಳ...

ಸಂಸ್ಕೃತದ ಗೋಡೆ ಕೆಡವಿ ಕನ್ನಡ ಕಟ್ಟಿದ ಕವಿ ಕನಕದಾಸ!

ಕೇವಲ ಭಕ್ತರಾಗಿ ಮಾತ್ರವಲ್ಲದೆ, ಅಡುಗೆಮನೆಯ ಬೀಸುವ ಕಲ್ಲಿನಿಂದ ಹಿಡಿದು ಹೊಲದ ರಾಗಿಯವರೆಗೆ ನಮ್ಮದೇ ನೆಲದ ಉದಾಹರಣೆಗಳ ಮೂಲಕ ಕನ್ನಡ ಭಾಷೆಗೆ ಆಧ್ಯಾತ್ಮಿಕ ಮತ್ತು ಸಾಹಿತ್ಯಿಕ ಘನತೆಯನ್ನು ತಂದುಕೊಟ್ಟ ಮಹಾನ್ ಕ್ರಾಂತಿಕಾರಿ ಕವಿ ಕನಕದಾಸರು. ಭಾಷೆಯೊಂದು...

ಕೊರೆಯುವ ಚಳಿಯಲ್ಲೂ ಮೊಳಗಿದ ಗುಲಾಬಿ ಧ್ವನಿ, ಆಶಾ ಕಾರ್ಯಕರ್ತೆಯರ...

ಒಂದೆಡೆ ಭೋರ್ಗರೆಯುವ ಮಳೆ, ಮತ್ತೊಂದೆಡೆ ಮೈಕೊರೆಯುವ ಚಳಿ. ಪ್ರಕೃತಿಯ ಈ ಪ್ರತಿಕೂಲ ಪರಿಸ್ಥಿತಿಯನ್ನೂ ಲೆಕ್ಕಿಸದೆ ಬೆಂಗಳೂರಿನ ಫ್ರೀಡಂ ಪಾರ್ಕ್‌ನಲ್ಲಿ ಸಾವಿರಾರು ಗುಲಾಬಿ ಸೀರೆಧಾರಿ ಮಹಿಳೆಯರು ನ್ಯಾಯಕ್ಕಾಗಿ ಧ್ವನಿ ಎತ್ತುತ್ತಿದ್ದಾರೆ. ಅವರ ಹೋರಾಟವನ್ನು ನೋಡಿದಾಗ...

ಕಳೆದ ಕೆಲವು ದಿನಗಳಿಂದ ಬೆಟ್ಟದ ಮೇಲ್ಭಾಗದ ಸುತ್ತಮುತ್ತ ಉಂಟಾಗಿದ್ದ ಉದ್ವಿಗ್ನತೆ ಹಾಗೂ ನಿರ್ಬಂಧಗಳ ನಡುವೆಯೇ, ಸುಪ್ರೀಂ ಕೋರ್ಟ್ ಆದೇಶದಂತೆ ಸಮೀಪದ ದೀಪತೂಣ್ ಕಲ್ಲಿನ ಸ್ತಂಭದಲ್ಲಿ ಶನಿವಾರ ಕಾರ್ತಿಗೈ ದೀಪಂ ಬೆಳಗಿಸುವ ಕಾರ್ಯಕ್ರಮ ನಿಗದಿಯಾಗಿದೆ. ಅದೇ ದಿನ ದರ್ಗಾದಲ್ಲಿಯೂ ಭಕ್ತರು ಪ್ರಾರ್ಥನೆ ಸಲ್ಲಿಸಿದ್ದಾರೆ.
ಶುಕ್ರವಾರ ನಡೆದ ವಿಚಾರಣೆ ವೇಳೆ ದರ್ಗಾ ಪರ ಹಿರಿಯ ವಕೀಲರು ಸುಪ್ರೀಂ ಕೋರ್ಟ್‌ಗೆ ಮಾಹಿತಿ ನೀಡಿದ್ದು, ಸುಮಾರು 100ರಿಂದ 200 ಮಂದಿ ನಿಯಮಿತವಾಗಿ ದರ್ಗಾಕ್ಕೆ ಭೇಟಿ ನೀಡುತ್ತಾರೆ ಎಂದು ತಿಳಿಸಿದ್ದರು. ಅಲ್ಲದೆ, ವಾರ್ಷಿಕ ಉರುಸ್ (ಸಂದನಕೂಡು) ಉತ್ಸವವು ಡಿಸೆಂಬರ್ 10ರಂದು ಪ್ರತ್ಯೇಕವಾಗಿ ನಿಗದಿಯಾಗಿದೆ ಎಂದೂ ನ್ಯಾಯಾಲಯದ ಗಮನಕ್ಕೆ ತಂದಿದ್ದರು.

ಸುಪ್ರೀಂ ಕೋರ್ಟ್ ನಿರ್ದೇಶನದ ಮೇರೆಗೆ ನಿಯೋಜಿಸಲಾಗಿರುವ ಸಿಆರ್‌ಪಿಎಫ್ ಸಿಬ್ಬಂದಿ ಹಾಗೂ ಸ್ಥಳೀಯ ಪೊಲೀಸರು ಬೆಟ್ಟದ ಮೇಲಿನ ಜನಸಂಚಾರವನ್ನು ನಿಯಂತ್ರಿಸುತ್ತಿದ್ದಾರೆ. ಬೆಟ್ಟದ ತಪ್ಪಲಿನಲ್ಲಿ ಭಕ್ತರ ವಿವರಗಳನ್ನು ದಾಖಲಿಸಿಕೊಳ್ಳುತ್ತಿದ್ದು, ಭದ್ರತಾ ತಪಾಸಣೆ ನಡೆಸುತ್ತಿದ್ದಾರೆ. ದೇಗುಲದಲ್ಲಿ ಸಾಂಪ್ರದಾಯಿಕ ಕಾರ್ತಿಗೈ ದೀಪಂ ಬೆಳಗಿಸುವ ಸಿದ್ಧತೆಗಳ ಜತೆಜತೆಗೇ, ದರ್ಗಾಕ್ಕೆ ತೆರಳುವ ಯಾತ್ರಾರ್ಥಿಗಳು ಯಾವುದೇ ಅಡೆತಡೆಯಿಲ್ಲದೆ ಪ್ರಾರ್ಥನೆ ಸಲ್ಲಿಸಲು ಭದ್ರತಾ ಸಿಬ್ಬಂದಿ ಸುಗಮ ವ್ಯವಸ್ಥೆ ಕಲ್ಪಿಸಿದ್ದಾರೆ.

eedina
ಈ ದಿನ ಡೆಸ್ಕ್‌
Website | + posts

<p><iframe src="https://www.youtube.com/embed/8qwx4L0lKFQ?autoplay=1&mute=1&loop=1&playlist=8qwx4L0lKFQ&controls=0&modestbranding=1&showinfo=0" width="560" height="315" frameborder="0" allowfullscreen="allowfullscreen"></iframe></p>

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಬಿಸ್ಲೆರಿ ಬಂಗಾಳ ಘಟಕದ ನೀರಿನ ಮಾದರಿಯಲ್ಲಿ ‘ಕೋಲಿಫಾರ್ಮ್’ ಪತ್ತೆ; ಕಾನೂನು ಕ್ರಮಕ್ಕೆ FSSAI ಅನುಮತಿ

ಪ್ಯಾಕೇಜ್ಡ್ ಕುಡಿಯುವ ನೀರಿನ ಮಾರುಕಟ್ಟೆಯ ಪ್ರತಿಷ್ಠಿತ ಕಂಪನಿ ಬಿಸ್ಲೆರಿ ಇಂಟರ್‌ನ್ಯಾಷನಲ್ ಪ್ರೈವೇಟ್...

ನ್ಯೂಜಿಲೆಂಡ್-ಭಾರತ ಟೆಸ್ಟ್‌ ಸರಣಿ – ಸಿರಾಜ್‌ ಕೈಬಿಟ್ಟು ತಪ್ಪು ಮಾಡಿದರೇ ಗೌತಮ್‌ ಗಂಭೀರ್?

ನ್ಯೂಜಿಲೆಂಡ್ ವಿರುದ್ಧದ ಎರಡು ಪಂದ್ಯಗಳ ಟೆಸ್ಟ್ ಸರಣಿಯ ವೆಲ್ಲಿಂಗ್ಟನ್ ಮತ್ತು ಕ್ರೈಸ್ಟ್‌ಚರ್ಚ್...

ಜಾಗತಿಕವಾಗಿ 2.4 ಕೋಟಿ ಉದ್ಯೋಗಗಳಿಗೆ ಕುತ್ತು? ಭಾರತ – ಅಮೆರಿಕ ಮೇಲೆ ಪರಿಣಾಮ?

ಕೃತಕ ಬುದ್ಧಿಮತ್ತೆ (AI) ತಂತ್ರಜ್ಞಾನದ ವೇಗದ ಬೆಳವಣಿಗೆಯು ಜಾಗತಿಕ ಉದ್ಯೋಗ ಮಾರುಕಟ್ಟೆಯಲ್ಲಿ...

ಕ್ಷೇತ್ರ ಪುನರ್‌ವಿಂಗಡಣೆ ಮಸೂದೆ ಬೆಂಬಲಿಸಿದ ಎನ್‌ಸಿಪಿ (ಎಸ್‌ಪಿ) ವಿರುದ್ಧ ಕಾಂಗ್ರೆಸ್ ಆಕ್ರೋಶ

ಬಿಜೆಪಿ ನೇತೃತ್ವದ ಕೇಂದ್ರ ಸರ್ಕಾರ ಪ್ರಸ್ತಾವಿಸಿರುವ ಕ್ಷೇತ್ರ ಪುನರ್‌ವಿಂಗಡಣೆ ಮಸೂದೆಗೆ ಎನ್‌ಸಿಪಿ...