ತಮಿಳುನಾಡಿನಲ್ಲಿ ಭಾರೀ ಮಳೆ: ವಿಮಾನ, ರೈಲು ಸೇವೆ ರದ್ದು, ಇಬ್ಬರ ಸಾವು

Date:

ಭಾರೀ ಮಳೆಯಿಂದಾಗಿ ತಮಿಳುನಾಡು ರಾಜ್ಯದ ನಾಲ್ಕು ಜಿಲ್ಲೆಗಳಲ್ಲಿ ಪ್ರವಾಹ ಉಂಟಾಗಿದ್ದು, ರಾಜ್ಯದ ತಿರುನಲ್ವೇಲಿ, ತೂತುಕುಡಿ, ತೆಂಕಶಿ ಮತ್ತು ಕನ್ಯಾಕುಮಾರಿ ಜಿಲ್ಲೆಗಳಲ್ಲಿ ಜನಜೀವನ ಅಸ್ತವ್ಯಸ್ತಗೊಂಡಿದೆ.

- Advertisement -

ತೂತುಕುಡಿಯಲ್ಲಿ ಒಬ್ಬರು, ತಿರುನೆಲ್ವೆಲಿ ಜಿಲ್ಲೆಯಲ್ಲಿ ಒಬ್ಬರು ಸಾವನ್ನಪ್ಪಿದ್ದಾರೆ. ರಕ್ಷಣಾ ಕಾರ್ಯಾಚರಣೆಗಳು ನಡೆಯುತ್ತಿದ್ದು, ಹೆಲೆಕಾಪ್ಟರ್ ಮೂಲಕ ಆಹಾರವನ್ನು ನೀಡಲು ರಾಜ್ಯವು ವಾಯುಪಡೆಯ ನೆರವನ್ನು ಕೇಳಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಬಿರುಕು ಬಿಟ್ಟಿದ್ದ ‘ಕೈ’ ಕೋಟೆಗೆ ಒಗ್ಗಟ್ಟಿನ ಶಕ್ತಿ: ರಾಜಸ್ಥಾನ...

ಗೋವಿಂದ್ ಡೋಟಸರ ಮತ್ತು ಟೀಕಾರಾಮ್ ಜುಲ್ಲಿ ಅವರ ನಡುವಣ ಬಾಂಧವ್ಯ ಕೇವಲ ರಾಜಕೀಯ ಅನಿವಾರ್ಯತೆಯಲ್ಲ; ಅದು ಪರಸ್ಪರ ನಂಬಿಕೆ ಮತ್ತು ಪೂರಕ ಸಾಮರ್ಥ್ಯಗಳ ಸಮ್ಮಿಲನವಾಗಿದೆ. ಡೋಟಸರ ಅವರಲ್ಲಿರುವ ಆಕ್ರಮಣಕಾರಿ ಸಂಘಟನಾ ಶೈಲಿ, ಪ್ರಖರ...

ವನ್ಯಜೀವಿ ಸಂಘರ್ಷದ ಸುಳಿಯಲ್ಲಿ ಅರಣ್ಯದ ಭವಿಷ್ಯ: ಸಂರಕ್ಷಣೆಯ ಹೆಸರಿನಲ್ಲಿ...

ಬಂಡೀಪುರ-ನಾಗರಹೊಳೆ ಅರಣ್ಯಗಳ ಮೇಲೆ ಹೆಚ್ಚುತ್ತಿರುವ ಒತ್ತಡ; ಖಾಸಗಿ ಬಂಡವಾಳ, ಪ್ರವಾಸೋದ್ಯಮ ವಿಸ್ತರಣೆ ಮತ್ತು ಆದಿವಾಸಿಗಳ ಹಕ್ಕುಗಳ ನಡುವೆ ಸಂರಕ್ಷಣೆಯ ಮೂಲ ಆಶಯಕ್ಕೆ ಸವಾಲು. ಮನುಷ್ಯ-ವನ್ಯಜೀವಿ ಸಂಘರ್ಷಕ್ಕೆ ಶಾಶ್ವತ ಪರಿಹಾರವಿಲ್ಲ; ಅರಣ್ಯಗಳ ಮೇಲಿನ ನಿಯಂತ್ರಣ...

ಶಿವಮೊಗ್ಗ | ನೀರಿಲ್ಲದೆ ಒಣಗುತ್ತಿವೆ ಅಡಿಕೆ ತೋಟಗಳು: ರೈತರ...

ಭದ್ರಾ ಅಚ್ಚುಕಟ್ಟು ಪ್ರದೇಶದ ರೈತರ ಪಾಲಿಗೆ ನಾಲೆಗಳ ನೀರು ಕೇವಲ ಕೃಷಿಗೆ ಪೂರಕವಾದ ವ್ಯವಸ್ಥೆಯಲ್ಲ. ಅದು ಅವರ ವಾರ್ಷಿಕ ಆದಾಯ, ಕುಟುಂಬದ ನಿರ್ವಹಣೆ, ಕೃಷಿ ಸಾಲದ ಮರುಪಾವತಿ ಹಾಗೂ ಮುಂದಿನ ಬದುಕಿನ ಭರವಸೆಯಾಗಿದೆ....

ತೂತುಕುಡಿ ಜಿಲ್ಲೆಯ ತಿರುಚೆಂದೂರಿನಲ್ಲಿ ಬೆಳಗಿನ ಜಾವ 1:30 ರವರೆಗಿನ ಕೇವಲ 15 ಗಂಟೆಗಳಲ್ಲಿ 60 ಸೆಂ.ಮೀ ಮಳೆಯಾಗಿದೆ. ತಿರುನಲ್ವೇಲಿ ಜಿಲ್ಲೆಯ ಪಾಲಯಂಕೊಟ್ಟೈನಲ್ಲಿ 26 ಸೆಂ.ಮೀ. ಇದೇ ವೇಳೆ ಕನ್ಯಾಕುಮಾರಿಯಲ್ಲಿ 17.3 ಸೆಂ.ಮೀ ಮಳೆಯಾಗಿದೆ.

ಧಾರಾಕಾರ ಮಳೆಯಿಂದಾಗಿ ತಮಿಳುನಾಡು ರಾಜ್ಯದ ಸಂತ್ರಸ್ತ ಜಿಲ್ಲೆಗಳಲ್ಲಿ ಇಂದು ಸಾರ್ವಜನಿಕ ರಜೆ ಘೋಷಿಸಲಾಗಿದೆ. ಶಾಲೆಗಳು, ಕಾಲೇಜುಗಳು, ಬ್ಯಾಂಕುಗಳು, ಖಾಸಗಿ ಸಂಸ್ಥೆಗಳು ಮತ್ತು ಸಾರ್ವಜನಿಕ ವಲಯದ ಸಂಸ್ಥೆಗಳು ಮುಚ್ಚಲ್ಪಟ್ಟಿವೆ.

ಪಾಪನಾಸಂ, ಪೆರುಂಜನಿ ಮತ್ತು ಪೆಚುಪರೈ ಅಣೆಕಟ್ಟುಗಳಿಂದ ನೀರು ಬಿಡುತ್ತಿರುವುದರಿಂದ ತಿರುನಲ್ವೇಲಿ, ತೂತುಕುಡಿ ಮತ್ತು ಕನ್ಯಾಕುಮಾರಿ ಜಿಲ್ಲೆಗಳಲ್ಲಿ ಮೂರರಿಂದ ನಾಲ್ಕು ಅಡಿಗಳವರೆಗೆ ನೀರು ನಿಂತಿದೆ.

ತಾಮರಪರಣಿ ನದಿ ಉಕ್ಕಿ ಹರಿಯುತ್ತಿದೆ. ಅಣೆಕಟ್ಟುಗಳಲ್ಲಿ ನೀರಿನ ಸಮರ್ಪಕ ನಿರ್ವಹಣೆ ಮಾಡುವಂತೆ ಜಿಲ್ಲಾಧಿಕಾರಿಗಳಿಗೆ ಸೂಚಿಸಲಾಗಿದೆ.

ಈ ಸುದ್ದಿ ಓದಿದ್ದೀರಾ? ಭಾರತದಲ್ಲಿ ಕೊರೋನಾ ಮತ್ತೆ ಸಕ್ರಿಯ: 1800 ಪ್ರಕರಣ ದಾಖಲು

ಮುಖ್ಯಮಂತ್ರಿ ಎಂ ಕೆ ಸ್ಟಾಲಿನ್ ಅವರು ಇಂದು(ಡಿ.18) ಸಚಿವರು ಮತ್ತು ಹಿರಿಯ ಅಧಿಕಾರಿಗಳನ್ನು ಪರಿಹಾರ ಮತ್ತು ರಕ್ಷಣಾ ಕಾರ್ಯಾಚರಣೆಗೆ ನಿಯೋಜಿಸಿದ್ದಾರೆ. ಪ್ರತಿ ಪೀಡಿತ ಜಿಲ್ಲೆಯ ಮೇಲ್ವಿಚಾರಣೆಗೆ ಹಿರಿಯ ಅಧಿಕಾರಿಗಳನ್ನು ನಿಯೋಜಿಸಲಾಗಿದೆ.

ದುರ್ಬಲ ಪ್ರದೇಶಗಳಲ್ಲಿ ಪರಿಹಾರ ಕೇಂದ್ರಗಳು, ದೋಣಿಗಳನ್ನು ಸಿದ್ಧಪಡಿಸುವಂತೆ ಮತ್ತು ಅಗತ್ಯವಿದ್ದಲ್ಲಿ ಜನರನ್ನು ಬೇಗನೆ ಸ್ಥಳಾಂತರಿಸುವಂತೆ ಸ್ಟಾಲಿನ್ ಜಿಲ್ಲಾಧಿಕಾರಿಗಳಿಗೆ ಸೂಚನೆ ನೀಡಿದರು.

ತಲಾ 50 ಸದಸ್ಯರನ್ನೊಳಗೊಂಡ ಎರಡು ರಾಷ್ಟ್ರೀಯ ವಿಪತ್ತು ನಿರ್ವಹಣಾ ಪಡೆ (ಎನ್‌ಡಿಆರ್‌ಎಫ್) ತಂಡಗಳು ತಿರುನಲ್ವೇಲಿ ಮತ್ತು ತೂತುಕುಡಿ ಜಿಲ್ಲೆಗಳಿಗೆ ಧಾವಿಸಿದ್ದು, ಕನ್ಯಾಕುಮಾರಿ ಜಿಲ್ಲೆಯಲ್ಲಿ ಮೂರು ರಾಜ್ಯ ವಿಪತ್ತು ನಿರ್ವಹಣಾ ಪಡೆ ತಂಡಗಳನ್ನು ನಿಯೋಜಿಸಲಾಗಿದೆ.

ಹೆಚ್ಚುವರಿ ದೋಣಿಗಳನ್ನು ತೂತುಕುಡಿ ಮತ್ತು ಹತ್ತಿರದ ಪಟ್ಟಣಗಳಾದ ಶ್ರೀವೈಕುಂಡಂ ಮತ್ತು ಕಾಯಲ್ಪಟ್ಟಿಣಂ ಮುಂತಾದ ಪ್ರದೇಶಗಳಿಗೆ ಸಜ್ಜುಗೊಳಿಸಲಾಗಿದೆ. ಸುಮಾರು 7,500 ಜನರನ್ನು 84 ಪರಿಹಾರ ಶಿಬಿರಗಳಿಗೆ ಸ್ಥಳಾಂತರಿಸಲಾಗಿದೆ.

ಮೊಬೈಲ್ ಗಳ ಮೂಲಕ 62 ಲಕ್ಷ ಜನರಿಗೆ ಎಚ್ಚರಿಕೆ ಸಂದೇಶ ಕಳುಹಿಸಲಾಗಿದೆ. ಅಲ್ಲದೆ, ಪೀಡಿತ ಜಿಲ್ಲೆಗಳಲ್ಲಿ 4,000 ಪೊಲೀಸ್ ಸಿಬ್ಬಂದಿಯನ್ನು ನಿಯೋಜಿಸಲಾಗಿದೆ. ಮೀನುಗಾರರು 40 ರಿಂದ 55 ಕಿ.ಮೀ ವರೆಗಿನ ಹೆಚ್ಚಿನ ಗಾಳಿಯ ವೇಗದಲ್ಲಿ ಸಮುದ್ರಕ್ಕೆ ಇಳಿಯದಂತೆ ಬಲವಾಗಿ ಸೂಚಿಸಲಾಗಿದೆ.

ಈ ತಿಂಗಳ 3 ಮತ್ತು 4 ರಂದು ಮಿಚಾಂಗ್ ಚಂಡಮಾರುತ ತಂದ ಭಾರೀ ಮಳೆಯಿಂದ ಉಂಟಾದ ಪ್ರವಾಹದ ನಂತರ ಚೆನ್ನೈ ಮತ್ತು ಪಕ್ಕದ ಮೂರು ಜಿಲ್ಲೆಗಳು ಚೇತರಿಸಿಕೊಳ್ಳುತ್ತಿರುವಾಗಲೇ ತಮಿಳುನಾಡಿನ ದಕ್ಷಿಣ ಜಿಲ್ಲೆಗಳಲ್ಲಿ ಮಳೆ ಅವಾಂತರ ಸೃಷ್ಟಿಸಿದೆ.

ತೂತುಕುಡಿಗೆ ಹೋಗುವ ವಿಮಾನಗಳನ್ನು ರದ್ದುಗೊಳಿಸಲಾಗಿದೆ. ವಂದೇ ಭಾರತ್ ರೈಲು ಸೇರಿದಂತೆ ತಿರುನಲ್ವೇಲಿಗೆ ಹೋಗುವ ಮತ್ತು ಆಗಮಿಸುವ ಹದಿನೇಳು ರೈಲುಗಳನ್ನು ಭಾಗಶಃ ಅಥವಾ ಸಂಪೂರ್ಣವಾಗಿ ರದ್ದುಗೊಳಿಸಲಾಗಿದೆ.

eedina
ಈ ದಿನ ಡೆಸ್ಕ್‌
Website | + posts

<p><iframe src="https://www.youtube.com/embed/8qwx4L0lKFQ?autoplay=1&mute=1&loop=1&playlist=8qwx4L0lKFQ&controls=0&modestbranding=1&showinfo=0" width="560" height="315" frameborder="0" allowfullscreen="allowfullscreen"></iframe></p>

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಕ್ಷೇತ್ರ ಪುನರ್ವಿಂಗಡಣೆ ಮಸೂದೆ ಜನರ ರಾಜಕೀಯ ಶಕ್ತಿ ಕಸಿಯುವ ‘ಬಿಜೆಪಿ ಪಿತೂರಿ’: ಸಂಜಯ್ ರಾವುತ್ ವಾಗ್ದಾಳಿ

ಉದ್ದೇಶಿತ ಕ್ಷೇತ್ರ ಪುನರ್ವಿಂಗಡಣೆ (Delimitation) ಮಸೂದೆಯು ದೇಶದ ಜನರ ರಾಜಕೀಯ ಮತ್ತು...

ಬಿಹಾರ ಜೆಡಿಯು ಶಾಸಕ ಅನಂತ್ ಸಿಂಗ್ ಮಗಳ ಮದುವೆಯ ಅವಾಂತರ

ಜೆಡಿಯುನಿಂದ ಉಚ್ಚಾಟಿತ ಮೊಕಾಮಾ ಶಾಸಕ ಅನಂತ್ ಸಿಂಗ್ ಅವರ ಮಗಳು ಶಿವಾಂಗಿ...

ಯುದ್ಧದ ನೆಪ, ಬೆಲೆ ಏರಿಕೆಯ ತಾಪ: ಅಸಲಿ ಕಾರಣಗಳೇನು?

ದೇಶವು ಚಿನ್ನ-ಬೆಳ್ಳಿಯಂತಹ ಲೋಹಗಳಿಗೆ ಆಮದನ್ನೇ ಹೆಚ್ಚಾಗಿ ನಂಬಿಕೊಂಡಿದೆ. ಒಂದೆಡೆ ಕಚ್ಚಾ ತೈಲ,...

ಪಶ್ಚಿಮ ಬಂಗಾಳ| ಟ್ರೈಬ್ಯುನಲ್‌ಗೆ ಮೇಲ್ಮನವಿ ಸಲ್ಲಿಸಿದ ಮತದಾರರ ಮನೆಗೆ ಪೊಲೀಸರು: ಯಾವ ಕಾನೂನು ಎಂದು ವಿಪಕ್ಷಗಳ ಪ್ರಶ್ನೆ

ಪಶ್ಚಿಮ ಬಂಗಾಳದಲ್ಲಿ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ಪ್ರಕ್ರಿಯೆಯು...