85ರ ಗ್ರಾನೈಟ್ ಉದ್ಯಮಿಯ ಕಾಮಕೃತ್ಯ; 20 ವರ್ಷಗಳಿಂದ ಅಪ್ರಾಪ್ತೆಯರ ಮೇಲೆ ನರಮೇಧ

Date:

ತಮಿಳುನಾಡಿನ ಪ್ರಭಾವಿ, ಗ್ರಾನೈಟ್ ಉದ್ಯಮಿ 85 ವರ್ಷದ ಆರ್‌. ವೀರಮಣಿ ವಿರುದ್ಧದ ಪೋಕ್ಸೋ ಪ್ರಕರಣದ ತನಿಖೆ ಚುರುಕುಗೊಂಡಿದೆ. ಇತ್ತೀಚಿನ ಘಟನೆಗಳು ಮಾತ್ರವಲ್ಲದೆ ಕಳೆದ ಎರಡು ದಶಕಗಳಿಗೂ ಹೆಚ್ಚು ಕಾಲದಿಂದ ಬಡ ಕುಟುಂಬಗಳ ಅಪ್ರಾಪ್ತ ಬಾಲಕಿಯರ ಮೇಲೆ ವೀರಮಣಿ ವ್ಯವಸ್ಥಿತವಾಗಿ ಲೈಂಗಿಕ ಶೋಷಣೆ ನಡೆಸುತ್ತಿದ್ದರೆಂಬ ಆಘಾತಕಾರಿ ಸತ್ಯಗಳು ಬೆಳಕಿಗೆ ಬಂದಿವೆ. ಕೇಂದ್ರ ಅಪರಾಧ ವಿಭಾಗದ (CCB) ಪೊಲೀಸರು ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಇನ್ನಷ್ಟು ಸಂತ್ರಸ್ತೆಯರ ಸಾಕ್ಷ್ಯ ಮತ್ತು ಹೇಳಿಕೆಗಳನ್ನು ಮದ್ರಾಸ್ ಹೈಕೋರ್ಟ್‌ನ ವಿಶೇಷ ಪೋಕ್ಸೋ ನ್ಯಾಯಾಲಯದ ಎದುರು ದಾಖಲಿಸಿಕೊಂಡಿದ್ದಾರೆ.

- Advertisement -

ಪಿಟಿಐ ಸುದ್ದಿ ಸಂಸ್ಥೆ ಬಿಡುಗಡೆ ಮಾಡಿರುವ ಮಾಹಿತಿಯ ಪ್ರಕಾರ, ತನಿಖಾಧಿಕಾರಿಗಳು ಆರೋಪಿಯ ಸಹಚರನೊಬ್ಬ ವೀರಮಣಿಗೆ ಕಳುಹಿಸಿದ್ದ ಹಳೆಯ ಮೊಬೈಲ್ ಸಂದೇಶವನ್ನು ಮರುಪಡೆಯುವಲ್ಲಿ ಯಶಸ್ವಿಯಾಗಿದ್ದಾರೆ. ಆ ಸಂದೇಶದಲ್ಲಿ 2003ರಲ್ಲೇ ನಡೆದ ಘಟನೆಯೊಂದರ ಉಲ್ಲೇಖವಿದ್ದು, ವೀರಮಣಿಯಿಂದ ಲೈಂಗಿಕ ದೌರ್ಜನ್ಯಕ್ಕೊಳಗಾಗಿದ್ದ ಅಪ್ರಾಪ್ತ ಬಾಲಕಿಯೊಬ್ಬಳು ಆತ್ಮಹತ್ಯೆ ಮಾಡಿಕೊಂಡಿದ್ದ ವಿಷಯ ಪ್ರಸ್ತಾಪವಾಗಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಲಕ್ಷ್ಮಣ್ @ 89: ‘ಅಚಲ’ ಆಶಾವಾದಿ – ಹಸಿರು...

89ನೇ ವಸಂತಕ್ಕೆ ಕಾಲಿಡುತ್ತಿರುವ ಎ.ಸಿ. ಲಕ್ಷ್ಮಣ್ ಅವರು ಭರವಸೆ ಮತ್ತು ಆಶಾವಾದದ ಸಂಕೇತವಾಗಿದ್ದಾರೆ. ತಮ್ಮ ಕಾರ್ಯಾಚರಣೆ ಇನ್ನೂ ಮುಗಿದಿಲ್ಲ ಎಂಬ ದೃಢ ನಂಬಿಕೆಯೊಂದಿಗೆ, ಅವರು ರೈತರಿಗೆ ಮಾರ್ಗದರ್ಶನ ನೀಡುತ್ತಾ, ಪರಿಸರವನ್ನು ರಕ್ಷಿಸುತ್ತಾ, ಮುಂದಿನ...

ಟಾಟಾ ಸನ್ಸ್ ಬೋರ್ಡ್ ರೂಮ್ ಕಲಹದ ಆಳ ಅಗಲವೇನು...

ಭಾರತದ ಭಾರೀ ಉದ್ಯಮ ಬ್ರ್ಯಾಂಡ್‌ಗಳಲ್ಲಿ ಒಂದು ಟಾಟಾ. ಉಪ್ಪಿನಿಂದ ಹಿಡಿದು ಉಕ್ಕು, ಕಾರು, ಐಟಿ, ಹೋಟೆಲ್, ವಿಮಾನಯಾನ, ಎಲೆಕ್ಟ್ರಿಕ್ ವಾಹನ, ಈಗ ಸೆಮಿಕಂಡಕ್ಟರ್‌ವರೆಗೆ ಟಾಟಾ ಸಾಮ್ರಾಜ್ಯ ವ್ಯಾಪಿಸಿದೆ. ಆದರೆ, ಈಗ ಇದೇ ಟಾಟಾ ಸಾಮ್ರಾಜ್ಯದ...

ESA ತೂಗುಗತ್ತಿ: ಕಸ್ತೂರಿ ರಂಗನ್ ವರದಿ ಕುರಿತು ಅರಣ್ಯ...

“ಗ್ರಾಮದ ಕನಿಷ್ಠ 20 ಪ್ರತಿಶತದಷ್ಟು ಪ್ರದೇಶವು ‘ಪರಿಸರ ಸೂಕ್ಷ್ಮ ಪ್ರದೇಶ’ (ESA) ಎಂದು ಕಂಡುಬಂದರೆ, ಉಳಿದ 80% ಪ್ರದೇಶ ನಗರೀಕರಣಗೊಂಡಿದ್ದರೂ ಇಡೀ ಗ್ರಾಮವನ್ನು ESA ಎಂದು ಪರಿಗಣಿಸುವ ನೀತಿಯನ್ನು ಕಸ್ತೂರಿ ರಂಗನ್ ವರದಿ...

ಈ ಬಲವಾದ ಸಾಕ್ಷ್ಯ ದೊರೆತ ನಂತರ ಪೊಲೀಸರು ಈ ಲೈಂಗಿಕ ಅಪರಾಧ ಜಾಲವು ಸುಮಾರು 20 ವರ್ಷಗಳಿಗಿಂತಲೂ ಹಳೆಯದು ಎಂಬುದನ್ನು ಖಚಿತಪಡಿಸಿಕೊಂಡಿದ್ದಾರೆ. ತನಿಖೆಯನ್ನು ಹಿಂದಿನ ಪ್ರಕರಣಗಳಿಗೂ ವಿಸ್ತರಿಸಿದ್ದಾರೆ. ಬಡ ಕುಟುಂಬಗಳ ಸಣ್ಣ ವಯಸ್ಸಿನ ಹೆಣ್ಣುಮಕ್ಕಳನ್ನೇ ಗುರಿಯಾಗಿಸಿಕೊಂಡು ಈ ಕಾಮುಕ ಜಾಲವು ಲೈಂಗಿಕ ದೌರ್ಜನ್ಯ ಎಸಗಲಾಗುತ್ತಿತ್ತು ಎಂಬುದು ಈಗ ಬೆಳಕಿಗೆ ಬಂದಿದೆ.

2025ರಲ್ಲಿ ಪೊಲೀಸರಿಗೆ ದೊರೆತಿದ್ದ ಯುಎಸ್‌ಬಿ ಡ್ರೈವ್ ಒಂದರಲ್ಲಿ ತೇನಂಪೇಟೆಯ ಅತಿಥಿಗೃಹವೊಂದರಲ್ಲಿ ಅಪ್ರಾಪ್ತ ಬಾಲಕಿಯ ಮೇಲೆ ಲೈಂಗಿಕ ದೌರ್ಜನ್ಯ ಎಸಗುತ್ತಿರುವ ದೃಶ್ಯಾವಳಿಗಳು ಲಭ್ಯವಾಗಿದ್ದವು. ಈ ದೃಶ್ಯಾವಳಿಗಳನ್ನು ಆಧರಿಸಿ ಕೇಂದ್ರ ಅಪರಾಧ ವಿಭಾಗದ ಪೊಲೀಸರು ಮೊದಲ ಬಾರಿಗೆ ಎಫ್‌ಐಆರ್ ದಾಖಲಿಸಿದ್ದರು. ಆ ವೀಡಿಯೊದಲ್ಲಿದ್ದ ಬಾಲಕಿಯು ಘಟನೆ ನಡೆದ ಸಮಯದಲ್ಲಿ ಅಪ್ರಾಪ್ತೆಯಾಗಿದ್ದಳು ಎಂಬುದು ದೃಢಪಟ್ಟಿತ್ತು. ಆದರೆ, ಸಂತ್ರಸ್ತೆಯನ್ನು ಪತ್ತೆಹಚ್ಚಲು ಸಾಧ್ಯವಾಗುತ್ತಿಲ್ಲ ಎಂಬ ಕಾರಣ ನೀಡಿ ಪೊಲೀಸರು ಪ್ರಕರಣವನ್ನು ಮುಕ್ತಾಯಗೊಳಿಸಲು ‘ಕ್ಲೋಸರ್ ರಿಪೋರ್ಟ್’ ಸಲ್ಲಿಸಿದ್ದರು. ಆ ಸಮಯದಲ್ಲಿ ವಿಶೇಷ ಪೋಕ್ಸೋ ನ್ಯಾಯಾಲಯವು ಪೊಲೀಸರ ವರದಿಯನ್ನು ತಿರಸ್ಕರಿಸಿ, ಮರುತನಿಖೆಗೆ ಸ್ಪಷ್ಟ ಆದೇಶ ನೀಡಿತ್ತು.

Advertisements

ಈ ಲೇಖನ ಓದಿದ್ದೀರಾ?: ಕರಗುವ ಹಿಮಾಲಯ, ಕುಸಿಯುವ ಆರ್ಥಿಕತೆ: ಹಿಮಪ್ರಳಯದ ಹಾದಿಯಲ್ಲಿ ಭಾರತದ ಭವಿಷ್ಯ!

ನ್ಯಾಯಾಲಯದ ಆದೇಶದಂತೆ ಮರುತನಿಖೆ ಆರಂಭಿಸಿದ ಪೊಲೀಸರು ಕಾರ್ಯಾಚರಣೆ ನಡೆಸಿ, ದೌರ್ಜನ್ಯಕ್ಕೊಳಗಾಗಿದ್ದ ಹಲವು ಸಂತ್ರಸ್ತೆಯರನ್ನು ಪತ್ತೆಹಚ್ಚುವಲ್ಲಿ ಯಶಸ್ವಿಯಾಗಿದ್ದಾರೆ. ಈ ಪೈಕಿ ಒಬ್ಬ ಸಂತ್ರಸ್ತೆ ಪರಿಶಿಷ್ಟ ಜಾತಿ (SC) ಸಮುದಾಯಕ್ಕೆ ಸೇರಿದವರೆಂದು ತಿಳಿದುಬಂದ ಹಿನ್ನೆಲೆಯಲ್ಲಿ, ಪ್ರಕರಣಕ್ಕೆ ‘ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಗಳ (ದೌರ್ಜನ್ಯ ತಡೆ) ಕಾಯ್ದೆ’ಯಡಿಯಲ್ಲೂ ಕಲಂಗಳನ್ನು ಸೇರಿಸಲಾಗಿದೆ. ಇದರಿಂದ, ಸಂತ್ರಸ್ತೆಗೆ ಸರ್ಕಾರದಿಂದ ಸಿಗಬೇಕಾದ ಕಾನೂನುಬದ್ಧ ಪರಿಹಾರ ಮತ್ತು ಆರ್ಥಿಕ ನೆರವನ್ನು ಒದಗಿಸಲು ಕ್ರಮ ಕೈಗೊಳ್ಳಲಾಗಿದೆ.

ಪ್ರಸ್ತುತ ಪ್ರಕರಣದ ಮುಖ್ಯ ಆರೋಪಿ ವೀರಮಣಿ ಮತ್ತು ಆತನ ಇಬ್ಬರು ಸಹಚರರ ವಿರುದ್ಧ ಪೋಕ್ಸೋ ಕಾಯ್ದೆ ಮತ್ತು ಮಾಹಿತಿ ತಂತ್ರಜ್ಞಾನ (IT) ಕಾಯ್ದೆಯಡಿ ಪ್ರಕರಣಗಳು ದಾಖಲಾಗಿವೆ.

ಪ್ರಮುಖ ಆರೋಪಿ ವೀರಮಣಿಗೆ 85 ವರ್ಷ ವಯಸ್ಸಾಗಿದ್ದು, ಆತನ ಅನಾರೋಗ್ಯ ಮತ್ತು ವಯಸ್ಸಿನ ಕಾರಣಗಳನ್ನು ಪರಿಗಣಿಸಿರುವ ನ್ಯಾಯಾಲಯ, ಆತನನ್ನು ಪುಳಲ್ ಜೈಲಿನ ಆವರಣದಲ್ಲೇ ವಿಚಾರಣೆಗೆ ಒಳಪಡಿಸುವಂತೆ ತನಿಖಾ ತಂಡಕ್ಕೆ ನಿರ್ದೇಶನ ನೀಡಿದೆ.

ಹಿರಿಯ ಪೊಲೀಸ್ ಅಧಿಕಾರಿಗಳ ನೇತೃತ್ವದಲ್ಲಿ ಜೈಲಿನಲ್ಲೇ ವಿಚಾರಣೆ ಪ್ರಕ್ರಿಯೆ ನಡೆಯುತ್ತಿದ್ದು, ಇದನ್ನು ವಿಡಿಯೋ ರೆಕಾರ್ಡಿಂಗ್ ಮಾಡಲಾಗುತ್ತಿದೆ. ವಿಚಾರಣೆಯಲ್ಲಿ, ಇಷ್ಟು ವರ್ಷಗಳ ಕಾಲ ಮುಚ್ಚಿಹೋಗಿದ್ದ ಈ ಭೀಕರ ದೌರ್ಜನ್ಯದ ಜಾಲ ಸಂಪೂರ್ಣವಾಗಿ ಹೊರಬರುವ ನಿರೀಕ್ಷೆಯಿದೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಈ ದಿನ ಸಂಪಾದಕೀಯ | ಅಮೆರಿಕ ದಾದಾಗಿರಿಗೆ ಮೋದಿ ಮೌನ- ರಾಜತಾಂತ್ರಿಕತೆಯಲ್ಲ, ಶರಣಾಗತಿ!

ಅಮೆರಿಕ ಜೊತೆಗಿನ ಭಾರತದ ನಂಟು 'ಸಮಾನ ಸಾರ್ವಭೌಮತ್ವ'ದ ಮೇಲೆ ಆಧಾರಿತವಾಗಿರಬೇಕೇ ಹೊರತು,...

ಅಮೆರಿಕದ ಅಹಂಕಾರಕ್ಕೆ ಪೆಟ್ಟು: ಯುದ್ಧದ ನಡುವೆಯೂ ಇರಾನ್ ನಾಯಕರಿಗೆ ವೀಸಾ ನೀಡಿಕೆ

ಅಮೆರಿಕ ಮತ್ತು ಇರಾನ್ ನಡುವೆ ಭೀಕರ ಯುದ್ಧ ಆರಂಭವಾಗಿ ಸುಮಾರು ಏಳು...

ಮುದ್ದೇಬಿಹಾಳ | ಸೆ.21ರಂದು ಕ್ರಾಂತಿ ಜ್ಯೋತಿ ಪ್ರವಾದಿ ಮುಹಮ್ಮದ್ ಸೀರತ್ ಸಮಾರಂಭ

ಜಮಾಅತೆ ಇಸ್ಲಾಮಿ ಹಿಂದ್ ಮುದ್ದೇಬಿಹಾಳ ಘಟಕದ ವತಿಯಿಂದ ‘ಕ್ರಾಂತಿಯ ಜ್ಯೋತಿ ಪ್ರವಾದಿ...