ತಮಿಳುನಾಡಿನಲ್ಲಿ ಮತ್ತೊಮ್ಮೆ ಸೊನ್ನೆ ಸುತ್ತಿದ ಬಿಜೆಪಿ; ಎಲ್ಲ ಕ್ಷೇತ್ರಗಳಲ್ಲಿಯೂ ‘ಇಂಡಿಯಾ’ ಮುನ್ನಡೆ

Date:

ಲೋಕಸಭಾ ಚುನಾವಣೆಗೆ ಇಂದು ಮತ ಎಣಿಕೆ ನಡೆಯುತ್ತಿದೆ. ಬಿಜೆಪಿ ನೇತೃತ್ವದ ರಾಷ್ಟ್ರೀಯ ಪ್ರಜಾಸತ್ತಾತ್ಮಕ ಒಕ್ಕೂಟ (ಎನ್‌ಡಿಎ) ಮತ್ತು ವಿರೋಧ ಪಕ್ಷಗಳ ‘ಇಂಡಿಯಾ’ ಒಕ್ಕೂಟದ ನಡುವೆ ತೀವ್ರ ಪೈಪೋಟಿ ನಡೆಯುತ್ತಿದೆ. ನರೇಂದ್ರ ಮೋದಿ ಮೂರನೇ ಬಾರಿಗೆ ಪ್ರಧಾನ ಮಂತ್ರಿ ಹುದ್ದೆ ಏರಲು ಪ್ರಯತ್ನಿಸುತ್ತಿದ್ದಾರೆ. ಆದರೆ, ತಮಿಳುನಾಡಿನಲ್ಲಿ ಬಿಜೆಪಿ ಖಾತೆ ತೆರೆಯಲು ವಿಫಲವಾಗಿದ್ದು, ಮತ್ತೊಮ್ಮೆ ಸೊನ್ನೆ ಸುತ್ತಿದೆ.

- Advertisement -

ತಮಿಳುನಾಡಿನ ಕೊಯಮತ್ತೂರಿನಲ್ಲಿ ಸ್ಪರ್ಧಿಸಿದ್ದ ಬಿಜೆಪಿ ರಾಜ್ಯಾಧ್ಯಕ್ಷ ಅಣ್ಣಾಮಲೈ ಸೋಲು ಅನುಭವಿಸಿದ್ದಾರೆ. ಡಿಎಂಕೆಯ ಗಣಪತಿ ರಾಜ್‌ಕುಮಾರ್ ವಿರುದ್ಧ ಸೋಲು ಅನುಭವಿಸಿದ್ದಾರೆ. ದಕ್ಷಿಣ ಚೆನ್ನೈನಲ್ಲಿ ಬಿಜೆಪಿಯ ತಮಿಳಿಸೈ ಸೌಂದರರಾಜನ್ ಅವರು ಡಿಎಂಕೆಯ ತಮಿಜಾಚಿ ತಂಗಪಾಂಡಿಯನ್ ಅವರಿಗಿಂತ ಹಿಂದುಳಿದಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಬೆಟ್ಟದಷ್ಟಾದ ಅತ್ಯಾಚಾರ ಪ್ರಕರಣಗಳು – ತೆವಳುತ್ತಿರುವ ನ್ಯಾಯದಾನ

ಪೊಲೀಸರೆಂದು ನಟಿಸಿ ಬೆದರಿಸುವುದು, ನಿರ್ಜನ ಪ್ರದೇಶಗಳಲ್ಲಿ ತೋಳಗಳಂತೆ ಕಾದು ಹಲ್ಲೆಗೈದು ಸಾಮೂಹಿಕ ಅತ್ಯಾಚಾರ ನಡೆಸಿ ಕೊಂದೆಸೆಯುವುದು, ಕಿಂಚಿತ್ತೂ ಭಯವಿಲ್ಲದೆ ಕೃತ್ಯದ ವಿಡಿಯೋ ತುಣುಕುಗಳನ್ನು ಸಾಮಾಜಿಕ ಜಾಲತಾಣಗಳಲ್ಲಿ ಹರಿಬಿಡುವುದಲ್ಲದೆ, ಸಂತ್ರಸ್ತರ ಗುರುತು ಬಹಿರಂಗಪಡಿಸುವ ಪ್ರವೃತ್ತಿ...

ಶಾಮನೂರು ಫ್ಯಾಮಿಲಿಗೆ ಸಚಿವ ಬಸವಂತಪ್ಪ ಕೈ ಮುಗಿಯುವ ಅಗತ್ಯವಿದೆಯೇ?

ಬಸವಂತಪ್ಪನವರನ್ನು ಗೆಲ್ಲಿಸಿದ್ದು, ಕಾಂಗ್ರೆಸ್ಸಿನ ಸಾಂಪ್ರದಾಯಿಕ ಮತದಾರರು. ಶಾಮನೂರು ಕುಟುಂಬದ ಸುತ್ತ ಕಟ್ಟಿರುವ ಕಲ್ಪಿತ ಬಲವನ್ನು ಮೀರಿ, ಬಸವಂತಪ್ಪ ಬೆಳೆಯಬೇಕು ಎಂಬುದು ಕ್ಷೇತ್ರದ ಮತದಾರರ ಅಭಿಪ್ರಾಯ. ಪೌರಕಾರ್ಮಿಕರ ಮಗನಾಗಿ ಹುಟ್ಟಿ, ಸಚಿವ ಸ್ಥಾನದವರೆಗೆ ಬೆಳೆದವರು ಕೆ.ಎಸ್....

ಪಾಕ್‌ಗೆ ತಕ್ಕ ಉತ್ತರ ನೀಡಿದ್ದಾಗಿ ಎದೆ ತಟ್ಟಿಕೊಳ್ಳುವ ಮೋದೀಜಿ,...

ಬಾಲಾಕೋಟ್‌ನಿಂದ ಇತ್ತೀಚಿನ 'ಆಪರೇಷನ್ ಸಿಂಧೂರ್'ವರೆಗೆ ಪಾಕಿಸ್ತಾನಕ್ಕೆ ತಕ್ಕ ಉತ್ತರ ನೀಡಿದ್ದಾಗಿ ಪ್ರಧಾನಿ ಮೋದಿ ನೇತೃತ್ವದ ಬಿಜೆಪಿ ಸರ್ಕಾರ ಎದೆ ತಟ್ಟಿಕೊಳ್ಳುತ್ತಿದೆ. ಶತೃ ದೇಶವನ್ನು ಮಣಿಸುವುದು ಯಾರಿಗಾದರೂ ಹೆಮ್ಮೆಯೇ. ಆದರೆ, ದೇಶದ ಅಖಂಡತೆಗೆ ಅತಿ...

ತಮಿಳುನಾಡಿನ 39 ಕ್ಷೇತ್ರಗಳಲ್ಲಿ ಇಂಡಿಯಾ ಒಕ್ಕೂಟ 39 ಸ್ಥಾನಗಳಲ್ಲಿಯೂ ಮುನ್ನಡೆ ಸಾಧಿಸಿದೆ. ಕಳೆದ ಬಾರಿಯಂತೆ ಈ ಬಾರಿಯೂ ಬಿಜೆಪಿ ತಮಿಳುನಾಡಿನಲ್ಲಿ ಸೊನ್ನೆ ಸುತ್ತಿದೆ.

ಹಾಲಿ ಡಿಎಂಕೆ ಸಂಸದೆ ಕನಿಮೊಳಿ ತೂತುಕುಡಿಯಲ್ಲಿ ಎಐಎಡಿಎಂಕೆಯ ಆರ್ ಶಿವಸಾಮಿ ವೇಲುಮಣಿ ಅವರನ್ನು ಎದುರಿಸುತ್ತಿದ್ದಾರೆ. ಬಿಜೆಪಿ ಅಭ್ಯರ್ಥಿ ಮತ್ತು ತೆಲಂಗಾಣ ಮಾಜಿ ಗವರ್ನರ್ ತಮಿಳಿಸೈ ಸೌಂದರರಾಜ್ ಅವರು ಚೆನ್ನೈ ದಕ್ಷಿಣದಿಂದ ಸ್ಪರ್ಧಿಸಿದ್ದಾರೆ. ಮಾಜಿ ಟೆಲಿಕಾಂ ಸಚಿವ ಎ ರಾಜಾ ಅವರು ನೀಲಗಿರಿಯಲ್ಲಿ ಕೇಂದ್ರ ಮೀನುಗಾರಿಕೆ ರಾಜ್ಯ ಸಚಿವರೂ ಆಗಿರುವ ಬಿಜೆಪಿಯ ಎಲ್ ಮುರುಗನ್ ವಿರುದ್ಧ ಸ್ಪರ್ಧಿಸಿದ್ದಾರೆ.

1,14,277 ಮತಗಳೊಂದಿಗೆ, ಇಂಡಿಯಾ ಒಕ್ಕೂಟದ ಮಿತ್ರಪಕ್ಷವಾದ ಮರುಮಲಾರ್ಚಿ ದ್ರಾವಿಡ ಮುನ್ನೇತ್ರ ಕಳಗಂ (ಎಮ್‌ಡಿಎಮ್‌ಕೆ) ನ ದುರೈ ವೈಕೋ ತಿರುಚಿರಾಪಳ್ಳಿ ಕ್ಷೇತ್ರದಲ್ಲಿ ಮುನ್ನಡೆ ಸಾಧಿಸಿದ್ದಾರೆ. ಎಐಎಡಿಎಂಕೆಯ ಕರುಪ್ಪಯ್ಯ ನಂತರದ ಸ್ಥಾನದಲ್ಲಿದ್ದಾರೆ. ಪಿ 54,574 ಮತಗಳೊಂದಿಗೆ ತೀರಾ ಹಿಂದುಳಿದಿದ್ದಾರೆ.

ಈ ಸುದ್ದಿ ಓದಿದ್ದೀರಾ? ಆಂಧ್ರಪ್ರದೇಶ ವಿಧಾನಸಭಾ ಚುನಾವಣೆ | ಟಿಡಿಪಿ ಸರ್ಕಾರ ರಚಿಸುವುದು ಬಹುತೇಕ ಖಚಿತ

ಡಿಎಂಕೆ ಅಭ್ಯರ್ಥಿಗಳಾದ ಕಲಾನಿಧಿ ವೀರಸ್ವಾಮಿ, ತಮಿಳಚಿ ತಂಗಪಾಂಡಿಯನ್ ಮತ್ತು ದಯಾನಿಧಿ ಮಾರನ್ ಅವರು ಚೆನ್ನೈನ ಎಲ್ಲಾ ಮೂರು ಕ್ಷೇತ್ರಗಳಲ್ಲಿ ಮುನ್ನಡೆ ಸಾಧಿಸಿದ್ದಾರೆ.

ಪ್ರಸ್ತುತ ಕರೂರ್ ಲೋಕಸಭಾ ಕ್ಷೇತ್ರದಿಂದ ಎಐಎಡಿಎಂಕೆಯ ತಂಗವೇಲ್ ಎಲ್ ಹಿನ್ನಡೆ ಸಾಧಿಸಿದ್ದು, ಕಾಂಗ್ರೆಸ್‌ನ ಎಸ್‌ ಜೋತಿಮಣಿ ಮುನ್ನಡೆ ಸಾಧಿಸಿದ್ದಾರೆ.

ಪ್ರಧಾನಿ ನರೇಂದ್ರ ಮೋದಿ ಅವರು ತಮಿಳುನಾಡಿನಲ್ಲಿ ಭಾರೀ ಪ್ರಚಾರ ನಡೆಸಿದ್ದರು. ಅಲ್ಲದೆ, ರಾಮೇಶ್ವರಂ ಕ್ಷೇತ್ರದಲ್ಲಿ ಮೋದಿ ಸ್ಪರ್ಧೆ ಮಾಡುತ್ತಾರೆ ಎಂಬ ಮಾತುಗಳು ಇದ್ದವು. ಹೀಗಾಗಿ, ತಮಿಳುನಾಡಿನಲ್ಲಿ ಈ ಬಾರಿ ಖಾತೆ ತೆರೆಯುತ್ತದೆ ಎಂಬ ಚರ್ಚೆಗಳು ರಾಜಕೀಯ ವಲಯದಲ್ಲಿದ್ದವು. ಆದರೆ, ಬಿಜೆಪಿ ಖಾತೆ ತೆರೆಯುವಲ್ಲಿ ವಿಫಲವಾಗಿದ್ದು, ಮತ್ತೆ ಸೊನ್ನೆ ಸುತ್ತಿದೆ.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಇಸಿ ಗ್ಯಾನೇಶ್‌ ಕುಮಾರ್‌ ವಿರುದ್ಧ ದೇಶವ್ಯಾಪಿ ಪ್ರತಿಭಟನೆ; ಹೈದರಾಬಾದ್‌ನಲ್ಲಿ ‘ಸಿಜೆಪಿ’ ಮಹತ್ವದ ಸಭೆ

ಮುಖ್ಯ ಚುನಾವಣಾ ಆಯುಕ್ತ (ಸಿಇಸಿ) ಗ್ಯಾನೇಶ್ ಕುಮಾರ್ ಅವರ ರಾಜೀನಾಮೆಗೆ ಆಗ್ರಹಿಸಿ...

ಜಮ್ಮು-ಕಾಶ್ಮೀರಕ್ಕೆ ಪೂರ್ಣ ರಾಜ್ಯ ಸ್ಥಾನಮಾನದ ನಿರ್ಣಯ ಅಂಗೀಕಾರ; ಸದನದಲ್ಲಿ ಬಿಜೆಪಿ ಗದ್ದಲ

ಜಮ್ಮು-ಕಾಶ್ಮೀರಕ್ಕೆ ತುರ್ತಾಗಿ ಪೂರ್ಣ ರಾಜ್ಯದ ಸ್ಥಾನಮಾನವನ್ನು ಮರುಸ್ಥಾಪಿಸಬೇಕು ಎಂದು ಆಗ್ರಹಿಸುವ ನಿರ್ಣಯವನ್ನು...

ಅಕ್ಟೋಬರ್ 8ರೊಳಗೆ ಪಶ್ಚಿಮ ಬಂಗಾಳ ಶಾಸಕರ ಅನರ್ಹತೆ ಅರ್ಜಿಗಳ ವಿಲೇವಾರಿಗೆ ಸ್ಪೀಕರ್​ಗೆ ಸುಪ್ರೀಂ ಸೂಚನೆ

ಪಕ್ಷಾಂತರ ನಿಷೇಧ ಕಾಯ್ದೆ ಹಾಗೂ ಸಂವಿಧಾನದ ಹತ್ತನೇ ಶೆಡ್ಯೂಲ್‌ನ ಅಡಿಯಲ್ಲಿ, ರಿತಬ್ರತಾ...

ಮೋದಿ ಸರ್ಕಾರ ECಗೆ ಇಮ್ಯೂನಿಟಿ ನೀಡಿದ್ದರೂ ಹೊಣೆಗಾರಿಕೆಯಿಂದ ತಪ್ಪಿಸಿಕೊಳ್ಳಲಾಗಲ್ಲ: ಕಪಿಲ್ ಸಿಬಲ್

ಮುಖ್ಯ ಚುನಾವಣಾ ಆಯುಕ್ತರಿಗೆ (CEC) ಕ್ರಿಮಿನಲ್ ಪ್ರಕರಣಗಳಿಂದ ಕಾನೂನು ರಕ್ಷಣೆ ನೀಡಲಾಗಿದೆ...