ಕರ್ನಾಟಕದ ಲಾರಿ ಚಾಲಕನಿಗೆ ಅಮಾನುಷ ಹಲ್ಲೆಗೈದ ತಮಿಳುನಾಡು ಟ್ರಾಫಿಕ್ ಪೊಲೀಸ್: ವಿಡಿಯೋ ವೈರಲ್

Date:

ಕರ್ನಾಟಕದ ಬಡಪಾಯಿ ಲಾರಿ ಚಾಲಕನೋರ್ವನ ಮೇಲೆ ತಮಿಳುನಾಡು ಟ್ರಾಫಿಕ್ ಪೊಲೀಸ್ ಪೇದೆಯೋರ್ವ ಮನಸೋ ಇಚ್ಛೆ ಹಲ್ಲೆ ಮಾಡಿರುವ ಘಟನೆ ಕರ್ನಾಟಕ-ತಮಿಳನಾಡು ಗಡಿಭಾಗದ ಹೊಸೂರು ಭಾಗದಲ್ಲಿ ನಡೆದಿದೆ.

- Advertisement -

ಕರ್ನಾಟಕ- ತಮಿಳುನಾಡಿನ ಹೊಸೂರು ಗಡಿಭಾಗದಲ್ಲಿ ಭಾನುವಾರ ರಾತ್ರಿ 10 ಗಂಟೆಯ ಸುಮಾರಿಗೆ ಈ ಘಟನೆ ನಡೆದಿದ್ದು, ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಕತೆ | ಪೌರಶ್ರೀ – ಐಸಾಕ್‌ ಅಸಿಮೋವ್

ಪೌರಶ್ರೀ ಓದುವುದಕ್ಕೂ ಮುನ್ನ- ಒಂದು ಪುಟ್ಟ ಟಿಪ್ಪಣಿ ಈ ಸಹಸ್ರಮಾನದ ಅತ್ಯದ್ಭುತ ವೈಜ್ಞಾನಿಕ ಲೇಖಕ ರಲ್ಲಿ ಒಬ್ಬರು ಅಮೆರಿಕ ಬೋಸ್ಟನ್ ವಿಶ್ವ ವಿದ್ಯಾಲಯ ದಲ್ಲಿ ರಸಾಯನ ಶಾಸ್ತ್ರದ ಪ್ರಾಧ್ಯಾಪಕರಾಗಿದ್ದ ಐಸಾಕ್ ಅಸಿಮೋವ್. ವಿಶ್ವ...

ಶಿವಮೊಗ್ಗ | ದಾಖಲೆಗಳಲ್ಲಿ ಪೂರ್ಣ, ವಾಸ್ತವದಲ್ಲಿ ನೆನೆಗುದಿಗೆ...

ಶಿವಮೊಗ್ಗ ತಾಲೂಕಿನ ಕಾಚಿನಕಟ್ಟೆ ಗ್ರಾಮದಲ್ಲಿ ಸಮುದಾಯ ಭವನದ ಅಪೂರ್ಣ ಕಾಮಗಾರಿ ಆದರೆ ಶಿವಮೊಗ್ಗ ನಿರ್ಮಿತಿ ಕೇಂದ್ರ ದಾಖಲೆ ಪ್ರಕಾರ ಕಾಮಗಾರಿ ಸಂಪೂರ್ಣವಾಗಿದೆ ಎಂದು ದಾಖಲೆಗಳಲ್ಲಿ. ಈ ಸಂಬಂಧ ಲಂಚಮುಕ್ತ ಕರ್ನಾಟಕ ಮತ್ತು KRS ಪಕ್ಷದ...

ವಿಜಯಪುರ | ಹೆಚ್ಚುತ್ತಿರುವ ಬೀದಿ ನಾಯಿಗಳ ಹಾವಳಿ: 9...

ಬೀದಿ ನಾಯಿ ನಿಯಂತ್ರಣಕ್ಕೆ ನಗರಸಭೆ, ಪುರಸಭೆ, ಪಟ್ಟಣ ಪಂಚಾಯಿತಿ ಹಾಗೂ ಗ್ರಾಮ ಪಂಚಾಯಿತಿಗಳು ಪರಸ್ಪರ ಸಮನ್ವಯದಿಂದ ಕಾರ್ಯನಿರ್ವಹಿಸಿ, ಬೀದಿ ನಾಯಿಗಳ ಹಾವಳಿ ಹೆಚ್ಚಿರುವ ಪ್ರದೇಶಗಳನ್ನು ಗುರುತಿಸಿ ನಿಯಂತ್ರಣ ಕ್ರಮ ಕೈಗೊಳ್ಳಬೇಕು. ಶಾಲೆ, ಆಸ್ಪತ್ರೆ,...

‘ರ‍್ಯಾಶ್‌ ಡ್ರೈವಿಂಗ್‌ ಮಾಡುತ್ತಿದ್ದೀಯಾ’ ಎಂದು ಆರೋಪಿಸಿ ಲಾರಿ ಚಾಲಕನ ಅಡ್ಡಗಟ್ಟಿ ಕಪಾಳ, ಮುಖ ಅಂತ ನೋಡದೆ ಹಲ್ಲೆ ನಡೆಸಿದ್ದಾರೆ. ಬಿಟ್ಬಿಡಿ ಸರ್ ಎಂದು ಚಾಲಕ ಅಂಗಲಾಚಿದರೂ ಬಿಡದೆ ಟ್ರಾಫಿಕ್‌ ಪೊಲೀಸ್‌ ಪೇದೆ ಹಲ್ಲೆ ನಡೆಸಿದ್ದಾರೆ.

ಹೊಸೂರಿನಿಂದ ಬೆಂಗಳೂರು ಕಡೆ ಬರುತ್ತಿದ್ದ ಕಾರು ಚಾಲಕನೋರ್ವ ಹಲ್ಲೆ ಮಾಡುತ್ತಿರುವ ವಿಡಿಯೋವನ್ನು ರೆಕಾರ್ಡ್ ಮಾಡಿಕೊಂಡಿದ್ದಾರೆ. ವಿಡಿಯೋ ಮಾಡುತ್ತಿರುವುದನ್ನು ಗಮನಿಸಿದ ಟ್ರಾಫಿಕ್ ಪೊಲೀಸ್, ಬಳಿಕ ಕಾರು ಚಾಲಕನಿಗೂ ಬೆದರಿಕೆ ಹಾಕಿ ತಮಿಳುನಾಡು ಪೊಲೀಸ್ ವಿಡಿಯೊ ಡಿಲೀಟ್ ಮಾಡಿಸಿದ್ದಾರೆ. ಆದರೂ, ವಿಡಿಯೋ ಸದ್ಯ ಸೋಷಿಯಲ್ ಮೀಡಿಯಾಗಳಲ್ಲಿ ಹರಿದಾಡಿದೆ. ಸುಮಾರು 33 ಸೆಕೆಂಡ್‌ನ ವಿಡಿಯೋ ಹರಿದಾಡಿದ್ದು, ಅದರಲ್ಲಿ ಕನ್ನಡ ಹಾಗೂ ತಮಿಳು ಭಾಷೆಯಲ್ಲಿ ವಾಗ್ವಾದ ನಡೆದಿರುವುದು ಕೂಡ ದಾಖಲಾಗಿದೆ.

ಸದ್ಯ, ಈ ವಿಡಿಯೋ ಸೋಷಿಯಲ್ ಮೀಡಿಯಾದಲ್ಲಿ ವೈರಲ್ ಆಗಿದ್ದು, ಕನ್ನಡಿಗರ ಮೇಲೆ ತಮಿಳುನಾಡು ಪೊಲೀಸರ ದೌರ್ಜನ್ಯದ ವಿರುದ್ಧ ನೆಟ್ಟಿಗರು ಆಕ್ರೋಶ ವ್ಯಕ್ತಪಡಿಸಿದ್ದಾರೆ.

“ಲಾರಿ ಚಾಲಕ ರ‍್ಯಾಶ್‌ ಡ್ರೈವಿಂಗ್‌ ಮಾಡಿದ್ದಿದ್ದರೆ ಸೌಜನ್ಯದಿಂದ ವರ್ತಿಸಿ, ಕೇಸು ದಾಖಲಿಸಬಹುದಿತ್ತು. ಅದು ಬಿಟ್ಟು ಗೂಂಡಾ ರೀತಿಯಲ್ಲಿ ಲಾರಿ ಚಾಲಕನ ಮೇಲೆ ಹಲ್ಲೆ ನಡೆಸಿರುವುದು ಖಂಡನೀಯ” ಎಂದು ನೆಟ್ಟಿಗರು ಕಿಡಿಕಾರಿದ್ದಾರೆ. ಕೆಲವರು ಬೆಂಗಳೂರು ಟ್ರಾಫಿಕ್ ಪೊಲೀಸರಿಗೆ ಟ್ಯಾಗ್ ಮಾಡಿದ್ದರು. ಈ ಹಿನ್ನೆಲೆಯಲ್ಲಿ ಬೆಂಗಳೂರು ಸಂಚಾರಿ ಪೊಲೀಸರು, ತಮಿಳುನಾಡು ಪೊಲೀಸರಿಗೆ ಟ್ಯಾಗ್ ಮಾಡಿದ್ದಾರೆ.

ಈ ಬಗ್ಗೆ ಟ್ವೀಟ್ ಮಾಡಿರುವ ಕನ್ನಡಪರ ಹೋರಾಟಗಾರ ರೂಪೇಶ್ ರಾಜಣ್ಣ, “ಇದು ಅನ್ಯಾಯ. ಕರ್ನಾಟಕದ ಲಾರಿ ಡ್ರೈವರ್ ಮೇಲೆ ಮನಸೋ ಇಚ್ಚೆ ಹಲ್ಲೆ ಮಾಡಿದ ತಮಿಳುನಾಡು ಟ್ರಾಫಿಕ್ ಪೊಲಿಸ್ ಸಿಬ್ಬಂದಿ ವಿರುದ್ಧ ತಮಿಳುನಾಡು ಸಿಎಂ ಎಂ ಕೆ ಸ್ಟ್ಯಾಲಿನ್ ಈ ಬಗ್ಗೆ ಕ್ರಮ ತೆಗೆದುಕೊಳ್ಳಬೇಕು” ಎಂದು ಒತ್ತಾಯಿಸಿದ್ದಾರೆ.

WhatsApp Image 2025 11 17 at 3.21.38 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಮಣಿಪುರ | ಮತ್ತೆ ಭುಗಿಲೆದ್ದ ಹಿಂಸಾಚಾರ: ಗುಂಡಿನ ದಾಳಿಗೆ ಮೂವರ ಬಲಿ, 7 ಮನೆಗಳಿಗೆ ಬೆಂಕಿ

ದೀರ್ಘಕಾಲದಿಂದ ಜನಾಂಗೀಯ ಸಂಘರ್ಷಕ್ಕೆ ಈಡಾಗಿರುವ ಮಣಿಪುರದಲ್ಲಿ ಮತ್ತೆ ಹಿಂಸಾಚಾರ ಭುಗಿಲೆದ್ದಿದೆ. ಕಾಂಗ್‌ಪೋಕ್ಪಿ...

ದೆಹಲಿ ಪ್ರತಿಭಟನೆ | ವಶಕ್ಕೆ ಪಡೆದ ನೂರಾರು ಪ್ರತಿಭಟನಾಕಾರರನ್ನು ಸ್ಟೇಡಿಯಂಗೆ ದಬ್ಬಿದ ಪೊಲೀಸರು

ದೆಹಲಿಯ ವಿವಿಧ ಪ್ರದೇಶಗಳಿಂದ CJP ನೂರಾರು ಕಾರ್ಯಕರ್ತರು ಸೇರಿದಂತೆ ಹಲವು ನಾಗರಿಕರು...

ಸಿಜೆಪಿ ಪ್ರತಿಭಟನೆ – ಹೆದರಿದ ಮೋದಿ: ದೆಹಲಿಯಲ್ಲಿ ಮೂವರು ಮಾಜಿ ಸಿಎಂ – ಮಮತಾ, ಪಿಣರಾಯಿ, ಕೇಜ್ರಿವಾಲ್ – ಬಂಧನ

ಚುನಾವಣಾ ಆಯುಕ್ತ ಗ್ಯಾನೇಶ್‌ ಕುಮಾರ್ ರಾಜೀನಾಮೆ ಮತ್ತು ಎಸ್‌ಐಆರ್‌ ರದ್ದತಿಗೆ ಆಗ್ರಹಿಸಿ...

ಅ.12ರಂದು ದೆಹಲಿಯಲ್ಲಿ ಇಂಡಿಯಾ ಒಕ್ಕೂಟದ ಪ್ರತಿಭಟನೆ: ಕೆ.ಸಿ. ವೇಣುಗೋಪಾಲ್

ಜನರ ಮತದಾನದ ಹಕ್ಕನ್ನು ರಕ್ಷಿಸುವ ಉದ್ದೇಶದಿಂದ ಇಂಡಿಯಾ ಮೈತ್ರಿಕೂಟವು ಸೋಮವಾರ ನವದೆಹಲಿಯಲ್ಲಿ...