ತಮಿಳುನಾಡು: ಒಳಚರಂಡಿ ಸ್ವಚ್ಛಗೊಳಿಸುವಾಗ ವಿಷಾನಿಲ ಸೇವಿಸಿ ಇಬ್ಬರು ದಲಿತ ಕಾರ್ಮಿಕರ ಸಾವು

Date:

ಜವಳಿ ಕಾರ್ಖಾನೆಯೊಂದರ ಸಿಬ್ಬಂದಿಯ ವಸತಿ ಸಮುಚ್ಚಯದ ಒಳಚರಂಡಿಯನ್ನು ಸ್ವಚ್ಛಗೊಳಿಸುವಾಗ ವಿಷಾನಿಲ ಸೇವಿಸಿ ಇಬ್ಬರು ದಲಿತ ಕಾರ್ಮಿಕರು ಮೃತಪಟ್ಟಿರುವ ಘಟನೆ ಗುರುವಾರ ತಮಿಳುನಾಡಿನ ಅವದಿ ಗ್ರಾಮದಲ್ಲಿ ನಡೆದಿದೆ.

- Advertisement -

ವಸತಿ ಸಮುಚ್ಚಯದ ಒಳಚರಂಡಿಯನ್ನು ಸ್ವಚ್ಛಗೊಳಿಸಲು ಖಾಸಗಿ ಗುತ್ತಿಗೆದಾರರೊಬ್ಬರು ಕೆ.ಮೋಸಸ್ (40) ಹಾಗೂ ಸಿ.ದೇವನ್ (50) ಎಂಬ ಸ್ವಚ್ಛತಾ ಕೆಲಸಗಾರರನ್ನು ನೇಮಿಸಿದ್ದರು. ಆದರೆ, ಆ ಕೆಲಸಗಾರರಿಗೆ ಸುರಕ್ಷತಾ ಸಲಕರಣೆಗಳನ್ನು ಒದಗಿಸಲಾಗಿರಲಿಲ್ಲ ಎಂದು ಪೊಲೀಸರು ತಿಳಿಸಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

137 ಜೀವ ರಕ್ಷಕ ಕ್ಯಾನ್ಸರ್ ಔಷಧಗಳ ದರ ಶೇ.70ರಷ್ಟು...

ಕ್ಯಾನ್ಸರ್ ಚಿಕಿತ್ಸೆಯ ದುಬಾರಿ ವೆಚ್ಚದಿಂದ ಕಂಗೆಟ್ಟಿರುವ ರೋಗಿಗಳಿಗೆ ಕೇಂದ್ರ ಸರ್ಕಾರದಿಂದ ಕೊಂಚ ನಿರಾಳತೆಯ ಸುದ್ದಿಯೊಂದಿದೆ! 137 ಜೀವರಕ್ಷಕ ಕ್ಯಾನ್ಸರ್ ಔಷಧಗಳ ಬೆಲೆ ಇಳಿಕೆಯಾಗುವ ಸಾಧ್ಯತೆಯಿದ್ದು, ಕೆಲವು ಔಷಧಗಳ ಗರಿಷ್ಠ ಚಿಲ್ಲರೆ ಬೆಲೆ ಶೇ.70ರವರೆಗೆ...

‘ದೇಶ್ ಕೋ ಬಿಕನೇ ನಹೀ ದೂಂಗಾ’ ಎಂದು ನವಮಂಗಳೂರು...

​ರೈಲ್ವೆ, ವಿಮಾನ ನಿಲ್ದಾಣ, ಟೆಲಿಕಾಂ ಸೇರಿದಂತೆ ದೇಶದ ಪ್ರಮುಖ ಜಯಶೀಲ ಸಾರ್ವಜನಿಕ ವಲಯಗಳನ್ನು ಈಗಾಗಲೇ ಆಯ್ದ ಕಾರ್ಪೊರೇಟ್ ಕುಳಗಳಿಗೆ ಒಪ್ಪಿಸಿರುವ ಮೋದಿ ಸರ್ಕಾರ, ಈಗ ತನ್ನ ದೃಷ್ಟಿಯನ್ನು ಕಡಲತೀರಗಳತ್ತ ಹರಿಸಿದೆ. ದೇಶದ ಆಮದು-ರಫ್ತು...

SIRನ ಒಳನೋಟ: ಸೇರ್ಪಡೆಗಿಂತ ಹೊರಗಿಡುವುದಕ್ಕೆ ಆದ್ಯತೆ ನೀಡಿದಾಗ ಏನಾಗುತ್ತದೆ?

SIR ಕರಡು ಪಟ್ಟಿಯಲ್ಲಿರುವ ಮತದಾರರ ಸಂಖ್ಯೆಯು ನೈಜ ವಯಸ್ಕ ಜನಸಂಖ್ಯೆಯ ಅಂದಾಜಿಗಿಂತ ಅಷ್ಟೊಂದು ದೊಡ್ಡ ಪ್ರಮಾಣದಲ್ಲಿ ಕಡಿಮೆಯಾಗಿರುವುದಕ್ಕೆ ಕಾರಣವೇನು? ಈ ಕಾಣೆಯಾದ ಮತದಾರರೆಲ್ಲ ಯಾರು? ಅವರು ಮತದಾರರ ಪಟ್ಟಿಯಲ್ಲಿ ಬಿಟ್ಟು ಹೋಗಿದ್ದು ಹೇಗೆ?...

ಘಟನೆ ಸಂಬಂಧ ಗುತ್ತಿಗೆದಾರ ಹಾಗೂ ಮೇಲ್ವಿಚಾರಕನನ್ನು ಬಂಧಿಸಲಾಗಿದೆ.

ಒಳಚರಂಡಿಯನ್ನು ಪ್ರವೇಶಿಸಿದ ಕೂಡಲೇ ವಿಷಾನಿಲ ಸೇವಿಸಿರುವ ಮೋಸಸ್ ಪ್ರಜ್ಞಾಹೀನನಾಗಿದ್ದಾರೆ. ಅವರನ್ನು ರಕ್ಷಿಸಲು ಕೆಳಗಿಳಿದ ದೇವನ್ ಕೂಡಾ ವಿಷಾನಿಲವನ್ನು ಸೇವಿಸಿ ಒಳಚರಂಡಿಯಲ್ಲೇ ಪ್ರಜ್ಞಾಹೀನನಾಗಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.

“ಕೂಡಲೇ ಇತರ ಕೆಲಸಗಾರರು ಹಾಗೂ ದಾರಿಹೋಕರು ಈ ಕುರಿತು ಅಗ್ನಿಶಾಮಕ ದಳ ಹಾಗೂ ರಕ್ಷಣಾ ಸಿಬ್ಬಂದಿಗೆ ಮಾಹಿತಿ ರವಾನಿಸಿದ್ದು, ಪೊಲೀಸರು ಸ್ಥಳಕ್ಕೆ ಧಾವಿಸಿದ್ದಾರೆ” ಎಂದು ಪೊಲೀಸರು ಹೇಳಿದ್ದಾರೆ.

“ಅಗ್ನಿಶಾಮಕ ಸಿಬ್ಬಂದಿ ಆ ಇಬ್ಬರು ಕೆಲಸಗಾರರನ್ನು ಹೊರತೆಗೆದು, ಆಸ್ಪತ್ರೆಗೆ ಸಾಗಿಸಿದ್ದಾರೆ. ಈ ಸಂದರ್ಭದಲ್ಲಿ ದೇವನ್ ಪ್ರಜ್ಞಾಹೀನ ಸ್ಥಿತಿಯಲ್ಲಿದ್ದರೆ, ಒಳಚರಂಡಿಯಿಂದ ಹೊರತೆಗೆದಾಗಲೇ ಮೋಸಸ್ ಮೃತಪಟ್ಟಿದ್ದರು. ಆಸ್ಪತ್ರೆಯಲ್ಲಿ ಚಿಕಿತ್ಸೆಗೆ ಸ್ಪಂದಿಸದೆ ದೇವನ್ ಕೂಡಾ ಮೃತಪಟ್ಟಿದ್ದಾರೆ” ಎಂದು ಅವರು ತಿಳಿಸಿದ್ದಾರೆ.

ಈ ಸುದ್ದಿ ಓದಿದ್ದೀರಾ? ಪ್ರಜಾಪ್ರಭುತ್ವ ಇಲ್ಲದ ರಾಷ್ಟ್ರಗಳಲ್ಲಿ ಇವೆಲ್ಲ ನಡೆಯಲು ಸಾಧ್ಯ: ಖರ್ಗೆ ಆಹ್ವಾನಿಸದ್ದಕ್ಕೆ ಕಾಂಗ್ರೆಸ್ ವಾಗ್ದಾಳಿ

1993ರಿಂದ ಇಲ್ಲಿಯವರೆಗೆ ಭಾರತದಾದ್ಯಂತ ಒಳಚರಂಡಿ ಹಾಗೂ ಗಟಾರಗಳನ್ನು ಸ್ವಚ್ಛಗೊಳಿಸುವಾಗ ಒಟ್ಟು 1,035 ಮಂದಿ ಮೃತಪಟ್ಟಿದ್ದಾರೆ ಎಂದು ಈ ವರ್ಷದ ಮಾರ್ಚ್ ತಿಂಗಳಲ್ಲಿ ಕೇಂದ್ರ ಸರ್ಕಾರ ಮಾಹಿತಿ ನೀಡಿತ್ತು. ಈ ರೀತಿ ಮೃತಪಡುವವರಲ್ಲಿ ಬಹುತೇಕರು ದಲಿತ ಸಮುದಾಯದವರೆ ಆಗಿರುವುದು ಗಮನಾರ್ಹವಾಗಿದೆ.

ಇದಲ್ಲದೆ, ನೈರ್ಮಲ್ಯ ಕಾರ್ಮಿಕರಿಗೆ ಸುರಕ್ಷತಾ ಸಾಧನಗಳನ್ನು ಒದಗಿಸದ ಗುತ್ತಿಗೆದಾರರ ವಿರುದ್ಧ ಬರಿಗೈಲ್ಲಿ ಮಲ ಬಾಚುವ ಕಾಯ್ದೆಯಡಿಯಲ್ಲಿ ದಾಖಲಾಗಿರುವ 616 ಪ್ರಕರಣಗಳಲ್ಲಿ ಒಬ್ಬರಿಗೆ ಮಾತ್ರ ಶಿಕ್ಷೆ ವಿಧಿಸಲಾಗಿದೆ.

ಮ್ಯಾನುಯಲ್ ಸ್ಕ್ಯಾವೆಂಜಿಂಗ್ – ಅಥವಾ ಒಳಚರಂಡಿ ಮಾರ್ಗಗಳು ಅಥವಾ ಸೆಪ್ಟಿಕ್ ಟ್ಯಾಂಕ್‌ಗಳಿಂದ ಕೈಯಿಂದ ಮಾನವ ಮಲವನ್ನು ಬಾಚುವ ಅಭ್ಯಾಸವನ್ನು ಮಲ ಬಾಚುವ ಉದ್ಯೋಗ ನಿಷೇಧ ಮತ್ತು ಅವರ ಪುನರ್ವಸತಿ ಕಾಯ್ದೆ, 2013 ರ ಅಡಿಯಲ್ಲಿ ನಿಷೇಧಿಸಲಾಗಿದೆ. ಆದರೆ ಈ ಅಭ್ಯಾಸವು ದೇಶದ ಹಲವಾರು ಭಾಗಗಳಲ್ಲಿ ಇನ್ನೂ ಜಾರಿಯಲ್ಲಿದೆ.

ದೇಶದ ಎಲ್ಲ ಬರಿಗೈಯಲ್ಲಿ ಮಲ ಬಾಚುವವರನ್ನು ಗುರುತಿಸುವ ಮೂಲಕ ಹಾಗೂ ಆ ಪದ್ಧತಿಯನ್ನು ನಿರ್ಮೂಲನೆಗೊಳಿಸಲು, ಅವರ ಪುನರ್ವಸತಿಗಾಗಿ ಪರ್ಯಾಯ ಜೀವನೋಪಾಯವನ್ನು ನೀಡಲು ಸರ್ಕಾರವು ಸ್ವಯಂ-ಉದ್ಯೋಗ ಯೋಜನೆಯಡಿ ಹಲವು ಯೋಜನೆಗಳನ್ನು ಜಾರಿಗೊಳಿಸಿದೆ. ಆದಾಗ್ಯೂ, 2019 ರಿಂದ ಈ ಯೋಜನೆಗೆ ಬಜೆಟ್ ಹಂಚಿಕೆ ನೀಡುತ್ತಿರುವ ಹಣ ಗಮನಾರ್ಹ ಕುಸಿತವನ್ನು ಕಂಡಿದೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಪಕ್ಷಾಂತರ ಪರ್ವ: ಮೋದಿ ಸರ್ಕಾರದ ಅಧಿಕಾರದ ಆಸೆಗೆ ಪ್ರಜಾಸತ್ತಾತ್ಮಕ ಮೌಲ್ಯಗಳ ಬಲಿ

ಭಾರತದಲ್ಲಿ 2022 ಮತ್ತು 2026ರ ನಡುವಿನ ಅವಧಿಯಲ್ಲಿ ರಾಜಕೀಯ ಕ್ಷೇತ್ರದಲ್ಲಿ ಬಹುದೊಡ್ಡ...

ಯುಪಿ | ಮತದಾರರ ಪಟ್ಟಿಯಲ್ಲಿ ಭಾರೀ ಅಕ್ರಮ ಆರೋಪ; 16 ಸಾವಿರಕ್ಕೂ ಹೆಚ್ಚು ಹೆಸರುಗಳ ಪರಿಶೀಲನೆಗೆ EC ಆದೇಶ

ಉತ್ತರ ಪ್ರದೇಶದ ಪಿಲಿಭಿತ್ ಸದರ್ ವಿಧಾನಸಭಾ ಕ್ಷೇತ್ರದಲ್ಲಿ ಮತದಾರರ ಪಟ್ಟಿಯ ಪರಿಷ್ಕರಣೆ...

ಅಭಿವೃದ್ಧಿ ಹೆಸರಲ್ಲಿ 23 ಲಕ್ಷ ಮರಗಳಿಗೆ ಕುತ್ತು; ಅರುಣಾಚಲದ ಜಲವಿದ್ಯುತ್‌ ಯೋಜನೆ ಅನುಮತಿ ಕೋರಿದ NHPC

ಅರುಣಾಚಲ ಪ್ರದೇಶದಲ್ಲಿ 1,720 ಮೆಗಾವ್ಯಾಟ್ ಸಾಮರ್ಥ್ಯದ ಕಮಲಾ ಜಲವಿದ್ಯುತ್ ಯೋಜನೆ ಅನುಷ್ಠಾನಗೊಳಿಸಲು...

ಸೋನಿಯಾ ಗಾಂಧಿ ಇನ್‌ಸ್ಟಾಗ್ರಾಮ್‌ಗೆ ಪದಾರ್ಪಣೆ: ‘ಬಿಲಾಂಗಿಂಗ್’ ಆತ್ಮಕಥೆಯ ಮೊದಲ ನೋಟ ಬಿಡುಗಡೆ

ಕಾಂಗ್ರೆಸ್ ಸಂಸದೀಯ ಮಂಡಳಿ ಅಧ್ಯಕ್ಷೆ ಸೋನಿಯಾ ಗಾಂಧಿ ಅವರು ಸಾಮಾಜಿಕ ಜಾಲತಾಣ...